ದೆಹಲಿ: ರಾಮಲೀಲಾ ಮೈದಾನದ ದಸರಾ, ರಾವಣ ದಹನ ಕಾರ್ಯಕ್ರಮದಲ್ಲಿ ಭಾಗಿಯಾದ ಪ್ರಧಾನಿ ಮೋದಿ

|

Updated on: Oct 24, 2023 | 6:40 PM

ಪ್ರಧಾನಿ ಮೋದಿ ಇಲ್ಲಿಗೆ ಬಂದಿರುವುದಕ್ಕೆ ನಮಗೆ ತುಂಬಾ ಸಂತೋಷವಾಗಿದೆ. ಈ ಹಿಂದೆ ಅವರು 2019 ರಲ್ಲಿ ಬಂದಿದ್ದರು ಮತ್ತು ಈ ಬಾರಿ ಅವರು ನಮ್ಮ ಆಹ್ವಾನವನ್ನು ಸ್ವೀಕರಿಸಿದರು. ಇದಕ್ಕಾಗಿ ನಾವು ಅವರಿಗೆ ನಮ್ಮ ಕೃತಜ್ಞತೆಯನ್ನು ಸಲ್ಲಿಸುತ್ತೇವೆ ಎಂದು ಭಾರತೀಯ ಜನತಾ ಪಕ್ಷದ ನಾಯಕ ಪರ್ವೇಶ್ ಸಾಹಿಬ್ ಸಿಂಗ್ ಹೇಳಿದರು.

ದೆಹಲಿ: ರಾಮಲೀಲಾ ಮೈದಾನದ ದಸರಾ, ರಾವಣ ದಹನ ಕಾರ್ಯಕ್ರಮದಲ್ಲಿ ಭಾಗಿಯಾದ ಪ್ರಧಾನಿ ಮೋದಿ
ವಿಜಯ ದಶಮಿ ಉತ್ಸವದಲ್ಲಿ ರಾವಣ ಪ್ರತಿಕೃತಿ ದಹನ ಕಾರ್ಯಕ್ರಮಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು.
Follow us on

ನವದೆಹಲಿ, ಅಕ್ಟೋಬರ್ 24: ನವದೆಹಲಿಯ ದ್ವಾರಕಾ ಸೆಕ್ಟರ್ 10 ರ ರಾಮ್ ಲೀಲಾ ಮೈದಾನದಲ್ಲಿ ನಡೆದ ‘ವಿಜಯ ದಶಮಿ (Vijaya Dashami)‘ ಉತ್ಸವದಲ್ಲಿ ರಾವಣ ಪ್ರತಿಕೃತಿ ದಹನ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಭಾಗವಹಿಸಿದರು. ಸಂಜೆ 5.30ರ ಸುಮಾರಿಗೆ ಪ್ರಧಾನಿ ಸ್ಥಳಕ್ಕೆ ಆಗಮಿಸಿದ ಅವರು ಮೊದಲು ಪೂಜೆಯಲ್ಲಿ ಪಾಲ್ಗೊಂಡರು. ಇದೇ ವೇಳೆ, ಅವರನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು. ನಂತರ ರಾವಣ ಪ್ರತಿಕೃತಿ ದಹನ (Ravan Dahan) ಕಾರ್ಯಕ್ರಮದಲ್ಲಿ ಭಾಗಿಯಾದರು.

ಭಾರತೀಯ ಜನತಾ ಪಕ್ಷದ ನಾಯಕ ಪರ್ವೇಶ್ ಸಾಹಿಬ್ ಸಿಂಗ್ ಮಾತನಾಡಿ, ಪ್ರಧಾನಿ ಮೋದಿ ಇಲ್ಲಿಗೆ ಬಂದಿರುವುದಕ್ಕೆ ನಮಗೆ ತುಂಬಾ ಸಂತೋಷವಾಗಿದೆ. ಈ ಹಿಂದೆ ಅವರು 2019 ರಲ್ಲಿ ಬಂದಿದ್ದರು ಮತ್ತು ಈ ಬಾರಿ ಅವರು ನಮ್ಮ ಆಹ್ವಾನವನ್ನು ಸ್ವೀಕರಿಸಿದರು. ಇದಕ್ಕಾಗಿ ನಾವು ಅವರಿಗೆ ನಮ್ಮ ಕೃತಜ್ಞತೆಯನ್ನು ಸಲ್ಲಿಸುತ್ತೇವೆ. ಅನೇಕ ಜನರು ದೂರದಿಂದ ಇಲ್ಲಿಗೆ ಬಂದಿದ್ದಾರೆ ಎಂದು ಹೇಳಿದರು.


ವಿಜಯ ದಶಮಿಯ ಅಂಗವಾಗಿ ಮಂಗಳವಾರ ಬೆಳಗ್ಗೆ ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದ ಪ್ರಧಾನಿ ಮೋದಿ, ಈ ಧಾರ್ಮಿಕ ಹಬ್ಬವು ನಕಾರಾತ್ಮಕ ಶಕ್ತಿಗಳ ಅಂತ್ಯವನ್ನು ಸೂಚಿಸುತ್ತದೆ ಮತ್ತು ಜೀವನದಲ್ಲಿ ಒಳ್ಳೆಯದನ್ನು ಅಳವಡಿಸಿಕೊಳ್ಳುವ ಸಂದೇಶವನ್ನು ತರುತ್ತದೆ ಎಂದು ಹೇಳಿದ್ದರು.


ಇದನ್ನೂ ಓದಿ: ವಿಜಯದಶಮಿಯಂದು ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಿದ ಕೇರಳ ರಾಜ್ಯಪಾಲ ಆರಿಫ್ ಮಹಮ್ಮದ್ ಖಾನ್

ದೇಶಾದ್ಯಂತ ಇರುವ ನನ್ನ ಕುಟುಂಬ ಸದಸ್ಯರಿಗೆ ವಿಜಯದಶಮಿಯ ಶುಭಾಶಯಗಳು. ಈ ಪವಿತ್ರ ಹಬ್ಬವು ನಕಾರಾತ್ಮಕ ಶಕ್ತಿಗಳನ್ನು ಕೊನೆಗೊಳಿಸುವ ಜೊತೆಗೆ ಜೀವನದಲ್ಲಿ ಒಳ್ಳೆಯತನವನ್ನು ಅಳವಡಿಸಿಕೊಳ್ಳುವ ಸಂದೇಶವನ್ನು ತರುತ್ತದೆ. ನಿಮ್ಮೆಲ್ಲರಿಗೂ ವಿಜಯ ದಶಮಿಯ ಶುಭಾಶಯಗಳು ಎಂದು ಪ್ರಧಾನಿ ಮೋದಿ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಸಂದೇಶ ಪ್ರಕಟಿಸಿದ್ದರು.

ಕೆಂಪುಕೋಟೆ ದಸರಾ ಉತ್ಸವದಲ್ಲಿ ರಾಷ್ಟ್ರಪತಿ ಮುರ್ಮು ಭಾಗಿ

ದೆಹಲಿಯ ಕೆಂಪುಕೋಟೆಯಲ್ಲಿ ಧಾರ್ವಿುಕ ಲೀಲಾ ಸಮಿತಿ ಆಯೋಜಿಸಿದ್ದ ದಸರಾ ಆಚರಣೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗವಹಿಸಿದರು.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ : ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 6:22 pm, Tue, 24 October 23