ಬ್ರೆಜಿಲ್​ನಲ್ಲಿ ಮುಂದಿನ ಜಿ20 ಶೃಂಗಸಭೆ: ಬ್ರೆಜಿಲ್ ಅಧ್ಯಕ್ಷ ಲುಲಾಗೆ ಜವಾಬ್ದಾರಿ ಹಸ್ತಾಂತರಿಸಿದ ಪ್ರಧಾನಿ ಮೋದಿ

ಜಿ20 ಶೃಂಗಸಭೆಯ ಜವಾಬ್ದಾರಿಯನ್ನು ಪ್ರಧಾನಿ ನರೇಂದ್ರ ಮೋದಿ ಬ್ರೆಜಿಲ್ ಅಧ್ಯಕ್ಷ ಲುಲಾಗೆ ಹಸ್ತಾಂತರಿಸಿದ್ದು, ಮುಂದಿನ ಜಿ20 ಶೃಂಗಸಭೆ ಬ್ರೆಜಿಲ್​ನಲ್ಲಿ ನಡೆಯಲಿದೆ.

ಬ್ರೆಜಿಲ್​ನಲ್ಲಿ ಮುಂದಿನ ಜಿ20 ಶೃಂಗಸಭೆ: ಬ್ರೆಜಿಲ್ ಅಧ್ಯಕ್ಷ ಲುಲಾಗೆ ಜವಾಬ್ದಾರಿ ಹಸ್ತಾಂತರಿಸಿದ ಪ್ರಧಾನಿ ಮೋದಿ
ನರೇಂದ್ರ ಮೋದಿ
Follow us
ನಯನಾ ರಾಜೀವ್
|

Updated on:Sep 10, 2023 | 1:25 PM

ಜಿ20 ಶೃಂಗಸಭೆಯ ಜವಾಬ್ದಾರಿಯನ್ನು ಪ್ರಧಾನಿ ನರೇಂದ್ರ ಮೋದಿ(Narendra Modi) ಬ್ರೆಜಿಲ್ ಅಧ್ಯಕ್ಷ ಲುಲಾಗೆ ಹಸ್ತಾಂತರಿಸಿದ್ದು, ಮುಂದಿನ ಜಿ20 ಶೃಂಗಸಭೆ ಬ್ರೆಜಿಲ್​ನಲ್ಲಿ ನಡೆಯಲಿದೆ. ಜಿ20 ಅಧ್ಯಕ್ಷ ಸ್ಥಾನದ ಜವಾಬ್ದಾರಿಯನ್ನು ಪ್ರಧಾನಿ ಮೋದಿ ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡಾ ಸಿಲ್ವಾ ಅವರಿಗೆ ಹಸ್ತಾಂತರಿಸಿದರು. ಬ್ರೆಜಿಲ್ ಅಧಿಕೃತವಾಗಿ ಈ ವರ್ಷದ ಡಿಸೆಂಬರ್ 1 ರಂದು ಜಿ20ಯ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಲಿದೆ.

ಈ ಸಂದರ್ಭದಲ್ಲಿ ಲುಲಾ ಅವರು ಪ್ರಧಾನಿ ಮೋದಿಯನ್ನು ಅಭಿನಂದಿಸಿದರು. ಭಾರತವು ನವೆಂಬರ್​ವರೆಗೆ ಜಿ20 ಅಧ್ಯಕ್ಷ ಸ್ಥಾನದಲ್ಲಿಯೇ ಮುಂದುವರೆಯಲಿದೆ. 2022 ರಲ್ಲಿ ಇಂಡೋನೇಷ್ಯಾ G20 ಅಧ್ಯಕ್ಷ ಸ್ಥಾನವನ್ನು ಹೊಂದಿತ್ತು. ಪ್ರಸ್ತುತ ಭಾರತವು ಅದನ್ನು ಹೊಂದಿದೆ ಮತ್ತು ಬ್ರೆಜಿಲ್ ಮುಂದಿನ ವರ್ಷಕ್ಕೆ ಅಧಿಕಾರ ವಹಿಸಿಕೊಳ್ಳಲಿದೆ. 2025ರಲ್ಲಿ ದಕ್ಷಿಣ ಆಫ್ರಿಕಾ ಜಿ20 ಅಧ್ಯಕ್ಷ ರಾಷ್ಟ್ರವಾಗಲಿದೆ.

ನಾವು ಸಂಪತ್ತು ಹೆಚ್ಚು ಕೇಂದ್ರೀಕೃತವಾಗಿರುವ ಜಗತ್ತಿನಲ್ಲಿ ವಾಸಿಸುತ್ತಿದ್ದೇವೆ, ಅದರಲ್ಲಿ ಲಕ್ಷಾಂತರ ಮಾನವರು ಇನ್ನೂ ಹಸಿವಿನಿಂದ ಬಳಲುತ್ತಿದ್ದಾರೆ, ಅಸಮಾನತೆ ಎನ್ನುವ ಸಮಸ್ಯೆಯನ್ನು ಮೊದಲು ಪರಿಹರಿಸಬೇಕು ಎಂದು ಲುಲಾ ಹೇಳಿದ್ದಾರೆ.

ಮತ್ತಷ್ಟು ಓದಿ: ಜಿ20 ಶೃಂಗಸಭೆಯು ವಿಶ್ವದ ಪ್ರಮುಖ ಸಮಸ್ಯೆಗಳನ್ನು ಪರಿಹರಿಸಬಹುದೆಂದು ಸಾಬೀತುಪಡಿಸಿದೆ: ಜೋ ಬೈಡನ್

ಆದಾಯದ ಅಸಮಾನತೆ, ಆರೋಗ್ಯ ರಕ್ಷಣೆ, ಶಿಕ್ಷಣ, ಆಹಾರ, ಲಿಂಗ ಮತ್ತು ಜನಾಂಗದ ಪ್ರವೇಶ ಮತ್ತು ಪ್ರಾತಿನಿಧ್ಯವೂ ಈ ವೈಪರೀತ್ಯಗಳ ಮೂಲವಾಗಿದೆ ಎಂದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:15 pm, Sun, 10 September 23

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್