AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಪುಣ್ಯತಿಥಿ; ಸದೈವ್ ಅಟಲ್ ಸ್ಮಾರಕದಲ್ಲಿ ಪ್ರಧಾನಿ ಮೋದಿ ಪುಷ್ಪ ನಮನ

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯತಿಥಿಯಾದ ಇಂದು ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಕೇಂದ್ರ ಸಚಿವರು ಮತ್ತು ಎನ್‌ಡಿಎ ವಲಯದ ಮುಖಂಡರು, ನವದೆಹಲಿಯ ಸದೈವ್ ಅಟಲ್ ಸ್ಮಾರಕದಲ್ಲಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಪುಣ್ಯತಿಥಿ; ಸದೈವ್ ಅಟಲ್ ಸ್ಮಾರಕದಲ್ಲಿ ಪ್ರಧಾನಿ ಮೋದಿ ಪುಷ್ಪ ನಮನ
ವಾಜಪೇಯಿ ಸಮಾಧಿಗೆ ಪ್ರಧಾನಿ ಮೋದಿ ಪುಷ್ಪ ನಮನ
ಸುಷ್ಮಾ ಚಕ್ರೆ
|

Updated on: Aug 16, 2024 | 4:12 PM

Share

ನವದೆಹಲಿ: ಇಂದು (ಶುಕ್ರವಾರ) ನವದೆಹಲಿಯ ಸದೈವ್ ಅಟಲ್ ಸ್ಮಾರಕದಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಆರನೇ ಪುಣ್ಯತಿಥಿಯಂದು ಎನ್​ಡಿಎ ಸರ್ಕಾರದ ಕೇಂದ್ರ ಸಚಿವರು ಮತ್ತು ನಾಯಕರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಪ್ರಾರ್ಥನಾ ಸಭೆಯಲ್ಲಿ ಭಾಗವಹಿಸಿದ್ದರು.

ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧಂಖರ್ ಮತ್ತು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪ್ರಮುಖ ನಾಯಕರು ಪ್ರಾರ್ಥನಾ ಸಭೆಯಲ್ಲಿ ಪಾಲ್ಗೊಂಡು ಬಿಜೆಪಿಯ ಹಿರಿಯ ನಾಯಕ ಅಟಲ್ ಬಿಹಾರಿ ವಾಜಪೇಯಿಗೆ ಪುಷ್ಪ ನಮನ ಸಲ್ಲಿಸಿದ್ದಾರೆ. ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ವಿವಿಧ ರಾಜಕೀಯ ಪಕ್ಷಗಳ ನಾಯಕರು ಸೇರಿದಂತೆ ಇತರ ಗಣ್ಯರು ವಾಜಪೇಯಿ ಅವರ ಸ್ಮಾರಕವಾದ ‘ಸದೈವ್ ಅಟಲ್’ನಲ್ಲಿ ಅವರ ಸ್ಮರಣೆಯನ್ನು ಗೌರವಿಸಿದರು.

ಅಟಲ್ ಬಿಹಾರಿ ವಾಜಪೇಯಿ ಗೌರವಾನ್ವಿತ ರಾಜಕಾರಣಿಯಾಗಿದ್ದು, ಅವರ ಕಾಲದ ಅತ್ಯುತ್ತಮ ವಾಗ್ಮಿಗಳಲ್ಲಿ ಒಬ್ಬರಾಗಿದ್ದರು. 1990ರ ಸಮ್ಮಿಶ್ರ ಯುಗದಲ್ಲಿ ಮೈತ್ರಿಗಳನ್ನು ನಿರ್ಮಿಸುವ ಮೂಲಕ ಬಿಜೆಪಿಯ ವ್ಯಾಪ್ತಿಯನ್ನು ವಿಸ್ತರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಅವರು 1998ರಿಂದ 2004ರವರೆಗೆ ತಮ್ಮ ಅಧಿಕಾರಾವಧಿಯನ್ನು ಪೂರ್ಣಗೊಳಿಸಿದ ಬಿಜೆಪಿಯಿಂದ ಮೊದಲ ಪ್ರಧಾನಿಯಾದರು. ಈ ಅವಧಿಯು ಗಮನಾರ್ಹ ಸುಧಾರಣೆಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿಯಿಂದ ಗುರುತಿಸಲ್ಪಟ್ಟಿದೆ. ವಾಜಪೇಯಿ ಅವರು 2018ರಲ್ಲಿ ತಮ್ಮ 93ನೇ ವಯಸ್ಸಿನಲ್ಲಿ ನಿಧನರಾದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ