ಡಾ. ಶಿವಕುಮಾರ ಸ್ವಾಮೀಜಿ 115ನೇ ಜಯಂತ್ಯುತ್ಸವ: ಟ್ವೀಟ್ ಮಾಡಿ ಗೌರವ ಅರ್ಪಿಸಿದ ಪ್ರಧಾನಿ ಮೋದಿ

ಲಿಂಗೈಕ್ಯ  ಡಾ. ಶಿವಕುಮಾರ ಸ್ವಾಮೀಜಿಗಳ 115ನೇ ಜಯಂತ್ಯುತ್ಸವವನ್ನು ಸಿದ್ಧಗಂಗಾ ಮಠದ ಆವರಣದಲ್ಲಿ ಅದ್ದೂರಿಯಿಂದ ಆಚರಿಸಲಾಗುತ್ತಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಿದ್ದಾರೆ.

ಡಾ. ಶಿವಕುಮಾರ ಸ್ವಾಮೀಜಿ 115ನೇ ಜಯಂತ್ಯುತ್ಸವ: ಟ್ವೀಟ್ ಮಾಡಿ ಗೌರವ ಅರ್ಪಿಸಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿಯವರು ಡಾ. ಶಿವಕುಮಾರ ಸ್ವಾಮೀಜಿಯವರಿಗೆ ನಮಿಸುತ್ತಿರುವುದು
Updated By: Lakshmi Hegde

Updated on: Apr 01, 2022 | 12:19 PM

ತುಮಕೂರು ಸಿದ್ಧಗಂಗಾ ಮಠದ ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿ 115ನೇ ಜಯಂತ್ಯುತ್ಸವ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್ ಮಾಡಿ ಸ್ವಾಮೀಜಿಗಳಿಗೆ ಗೌರವ ಅರ್ಪಿಸಿದ್ದಾರೆ. ತಾವು ಶಿವಕುಮಾರ ಸ್ವಾಮೀಜಿಯವರಿಗೆ ನಮಿಸುತ್ತಿರುವ ಫೋಟೋ ಹಂಚಿಕೊಂಡ ಪ್ರಧಾನಿ ಮೋದಿ, ಪರಮಪೂಜ್ಯರಾದ ಡಾ. ಶ್ರೀ ಶಿವಕುಮಾರ ಸ್ವಾಮೀಜಿಗಳ ಜನ್ಮಜಯಂತಿಯಂದು ನಾನವರಿಗೆ ಗೌರವ ಅರ್ಪಿಸುತ್ತಿದ್ದೇನೆ. ಅಸಂಖ್ಯಾತ ಜನರ ಹೃದಯದಲ್ಲಿ ಅವರಿಂದಿಗೂ ನೆಲೆಸಿದ್ದಾರೆ. ಅಪ್ರತಿಮ ಸಮಾಜ ಸೇವಕರಾಗಿದ್ದರು, ಆರೋಗ್ಯ ಕ್ಷೇತ್ರ ಮತ್ತು ಶಿಕ್ಷಣಕ್ಕೆ ಅವರು ನೀಡಿದ ಕೊಡುಗೆಗೆ ಸಾಟಿಯಿಲ್ಲ. ಸ್ವಾಮೀಜಿಗಳ ಕನಸು ನನಸು ಮಾಡಲು ನಾವು ಶ್ರಮಿಸುತ್ತೇವೆ ಎಂದು ಹೇಳಿದ್ದಾರೆ.

ಲಿಂಗೈಕ್ಯ  ಡಾ. ಶಿವಕುಮಾರ ಸ್ವಾಮೀಜಿಗಳ 115ನೇ ಜಯಂತ್ಯುತ್ಸವವನ್ನು ಸಿದ್ಧಗಂಗಾ ಮಠದ ಆವರಣದಲ್ಲಿ ಅದ್ದೂರಿಯಿಂದ ಆಚರಿಸಲಾಗುತ್ತಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಿದ್ದಾರೆ. ಇಂದು ತುಮಕೂರು ವಿವಿ ಹೆಲಿಪ್ಯಾಡ್​ಗೆ ಬಂದಿಳಿದ ಅಮಿತ್ ಶಾ ಅವರನ್ನು ರಾಜ್ಯ ಬಿಜೆಪಿ ನಾಯಕರು ಸ್ವಾಗತಿಸಿದರು. ಅಲ್ಲಿಂದ ಮಠದವರೆಗೆ ಕಾರಿನಲ್ಲಿ ಬಂದಿದ್ದಾರೆ. ಇಂದು ಮಠದಲ್ಲಿ ವಿವಿಧ ಕಾರ್ಯಕ್ರಮಗಳು ಅದ್ದೂರಿಯಾಗಿ ನಡೆಯಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ಸೇರಿ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ.

ಇದನ್ನೂ ಓದಿ: ಡಾ. ಶಿವಕುಮಾರ ಸ್ವಾಮೀಜಿ ಜಯಂತೋತ್ಸವ: ಮಠಕ್ಕೆ ಆಗಮಿಸಿ, ಸ್ವಾಮೀಜಿ ಗದ್ದುಗೆಗೆ ಪೂಜೆ ಸಲ್ಲಿಸಿದ ಅಮಿತ್ ಶಾ

Published On - 12:17 pm, Fri, 1 April 22