ಚಂಡೀಗಢದಲ್ಲಿ ಪ್ರಕಾಶ್ ಸಿಂಗ್ ಬಾದಲ್ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಪ್ರಕಾಶ್ ಸಿಂಗ್ ಬಾದಲ್ ಅವರ ನಿಧನ ನನಗೆ ವೈಯಕ್ತಿಕವಾಗಿ ತುಂಬಲಾರದ ನಷ್ಟ. ನಾನು ಹಲವು ದಶಕಗಳಿಂದ ಅವರೊಂದಿಗೆ ನಿಕಟವಾಗಿ ಸಂವಹನ ನಡೆಸಿದ್ದೇನೆ ಮತ್ತು ಅವರಿಂದ ತುಂಬಾ ಕಲಿತಿದ್ದೇನೆ ಎಂದು ಪ್ರಧಾನಿ ಮೋದಿ ಟ್ವೀಟ್‌ನಲ್ಲಿ ಸಂತಾಪ ವ್ಯಕ್ತಪಡಿಸಿದ್ದಾರೆ
ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ (Parkash Singh Badal) ಅವರಿಗೆ ಅಂತಿಮ ನಮನ ಸಲ್ಲಿಸಲು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಬುಧವಾರ ಚಂಡೀಗಢದಲ್ಲಿರುವ ಶಿರೋಮಣಿ ಅಕಾಲಿ ದಳ (SAD) ಪಕ್ಷದ ಕಚೇರಿಗೆ ಭೇಟಿ ನೀಡಿದ್ದಾರೆ. ಒಂದು ವಾರದ ಹಿಂದೆ ಮೊಹಾಲಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ 95 ವರ್ಷದ ರಾಜಕಾರಣಿ ಪ್ರಕಾಶ್ ಸಿಂಗ್ ಬಾದಲ್ ಮಂಗಳವಾರ ಸಂಜೆ ನಿಧನರಾದರು. ಪ್ರಕಾಶ್ ಸಿಂಗ್ ಬಾದಲ್ ಅವರ ನಿಧನ ನನಗೆ ವೈಯಕ್ತಿಕವಾಗಿ ತುಂಬಲಾರದ ನಷ್ಟ. ನಾನು ಹಲವು ದಶಕಗಳಿಂದ ಅವರೊಂದಿಗೆ ನಿಕಟವಾಗಿ ಸಂವಹನ ನಡೆಸಿದ್ದೇನೆ ಮತ್ತು ಅವರಿಂದ ತುಂಬಾ ಕಲಿತಿದ್ದೇನೆ ಎಂದು ಪ್ರಧಾನಿ ಮೋದಿ ಟ್ವೀಟ್‌ನಲ್ಲಿ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರ ಬುದ್ಧಿವಂತಿಕೆಯು ಯಾವಾಗಲೂ ಸ್ಪಷ್ಟವಾಗಿ ಕಂಡುಬರುತ್ತದೆ ಎಂದು ಹೇಳಿದ ಮೋದಿ, ಬಾದಲ್ ನಮ್ಮ ರಾಷ್ಟ್ರಕ್ಕೆ ಮಹತ್ತರವಾದ ಕೊಡುಗೆ ನೀಡಿದ, ಪಂಜಾಬ್‌ನ ಪ್ರಗತಿಗೆ ದಣಿವರಿಯಿಲ್ಲದೆ ಶ್ರಮಿಸಿದ ಗಮನಾರ್ಹ ರಾಜನೀತಿಜ್ಞ ಎಂದು ಬಣ್ಣಿಸಿದ್ದಾರೆ.
#WATCH| PM Narendra Modi pays last respects to Shiromani Akali Dal patron Parkash Singh Badal in Chandigarh pic.twitter.com/Cn02etMz5Z
— ANI (@ANI) April 26, 2023
ಹಿರಿಯ ರಾಜಕಾರಣಿಯ ಗೌರವಾರ್ಥವಾಗಿ ಕೇಂದ್ರವು ಭಾರತದಾದ್ಯಂತ ಎರಡು ದಿನಗಳ ಶೋಕಾಚರಣೆಯನ್ನು ಘೋಷಿಸಿದೆ. ಶೋಕಾಚರಣೆಯ ದಿನಗಳಲ್ಲಿ, ರಾಷ್ಟ್ರಧ್ವಜವನ್ನು ನಿಯಮಿತವಾಗಿ ಹಾರಿಸುವ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಲಾಗುತ್ತದೆ ಮತ್ತು ಈ ಎರಡು ದಿನಗಳಲ್ಲಿ ಯಾವುದೇ ಅಧಿಕೃತ ಕಾರ್ಯಕ್ರಮಗಳು ಇರುವುದಿಲ್ಲ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.
PM @narendramodi pays tributes to former Punjab CM and Shiromani Akali Dal patron #ParkashSinghBadal in Chandigarh. pic.twitter.com/2nguuQsUQH
— All India Radio News (@airnewsalerts) April 26, 2023
ಐದು ಬಾರಿ ಮುಖ್ಯಮಂತ್ರಿಯಾಗಿದ್ದ ಬಾದಲ್ ಗ್ರಾಮದ ಸರಪಂಚ್ ಆಗಿ ಸೇವೆ ಸಲ್ಲಿಸಿದ ನಂತರ ರಾಜಕೀಯ ಪ್ರವೇಶಿಸಿದ್ದು 1957 ರಲ್ಲಿ ಮೊದಲ ಬಾರಿಗೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದರು.
ಇತ್ತೀಚೆಗಷ್ಟೇ, 2020 ರಲ್ಲಿ ರೈತರ ಪ್ರತಿಭಟನೆಯ ಹಿನ್ನೆಲೆಯಲ್ಲಿ ಬಾದಲ್ ಅವರ ಪಕ್ಷ ಬಿಜೆಪಿಯೊಂದಿಗಿನ ಸಂಬಂಧವನ್ನು ಮುರಿದುಕೊಂಡಿತು ಪ್ರತಿಭಟನಾ ನಿರತ ರೈತರ ಮೇಲೆ ಸರ್ಕಾರದ ವರ್ತನೆಯ ವಿರುದ್ಧ ಪ್ರತಿಭಟನೆಯ ಸಂಕೇತವಾಗಿ ಅವರು ತಮ್ಮ ಪದ್ಮವಿಭೂಷಣ ಪ್ರಶಸ್ತಿಯನ್ನು ಹಿಂದಿರುಗಿಸಿದ್ದರು.
ಇದನ್ನೂ ಓದಿ: Operation Kaveri: 72 ಗಂಟೆಗಳ ಕದನ ವಿರಾಮದ ನಡುವೆ ಸುಡಾನ್‌ನಿಂದ 534 ನಾಗರಿಕರನ್ನು ಸ್ಥಳಾಂತರಿಸಿದ ಭಾರತ
ಸೂಕ್ತವಾದ ವೈದ್ಯಕೀಯ ನಿರ್ವಹಣೆಯ ಹೊರತಾಗಿಯೂ ಎಸ್ ಪ್ರಕಾಶ್ ಸಿಂಗ್ ಬಾದಲ್ ಕೊನೆಯುಸಿರೆಳೆದಿದ್ದಾರೆ. ಫೋರ್ಟಿಸ್ ಆಸ್ಪತ್ರೆ ಮೊಹಾಲಿ ಎಸ್ ಪ್ರಕಾಶ್ ಸಿಂಗ್ ಬಾದಲ್ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸುತ್ತದೆಎಂದು ಆಸ್ಪತ್ರೆ ಹೇಳಿಕೆಯಲ್ಲಿ ತಿಳಿಸಿದೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 1:13 pm, Wed, 26 April 23