AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿ ಮನೆಯಲ್ಲೂ’ಹರ್ ಘರ್ ತಿರಂಗಾ’ ಅಭಿಯಾನವನ್ನು ಸಂಭ್ರಮಿಸಿ; ಪ್ರಧಾನಿ ಮೋದಿ ವಿಡಿಯೋ ಸಂದೇಶ

ಸ್ವಾತಂತ್ರ್ಯ ದಿನಾಚರಣೆಗೆ ಮೂರೇ ದಿನಗಳು ಬಾಕಿ ಇವೆ. ಈ ಹಿನ್ನೆಲೆಯಲ್ಲಿ ತಮ್ಮ ವಿಶೇಷ ವಿಡಿಯೋ ಸಂದೇಶದ ಮೂಲಕ ಪ್ರಧಾನಿ ನರೇಂದ್ರ ಮೋದಿ ದೇಶದ ಜನರು 2026ರ 'ಹರ್ ಘರ್ ತಿರಂಗಾ' ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕೆಂದು ಕರೆ ನೀಡಿದ್ದಾರೆ. ಈ ದೇಶವ್ಯಾಪಿ ಅಭಿಯಾನಕ್ಕೆ ಕೈಜೋಡಿಸಿ, ಪ್ರತಿಯೊಂದು ಕುಟುಂಬವೂ ತಮ್ಮ ಮನೆಗಳಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಬೇಕೆಂದು ಮೋದಿ ಮನವಿ ಮಾಡಿದ್ದಾರೆ. "ಬನ್ನಿ, ನಾವೆಲ್ಲರೂ ಸೇರಿ 'ಹರ್ ಘರ್ ತಿರಂಗಾ'ವನ್ನು ಪ್ರತಿಯೊಂದು ಮನೆಯಲ್ಲೂ ಹಬ್ಬದಂತೆ ಸಂಭ್ರಮಿಸೋಣ" ಎಂದು ಆಗಸ್ಟ್ 15ರ 80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಪ್ರಧಾನಿ ಮೋದಿ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದಾರೆ.

ಪ್ರತಿ ಮನೆಯಲ್ಲೂ'ಹರ್ ಘರ್ ತಿರಂಗಾ' ಅಭಿಯಾನವನ್ನು ಸಂಭ್ರಮಿಸಿ; ಪ್ರಧಾನಿ ಮೋದಿ ವಿಡಿಯೋ ಸಂದೇಶ
Pm Modi With Tiranga Image Credit source: PTI
ಸುಷ್ಮಾ ಚಕ್ರೆ
|

Updated on:Aug 11, 2026 | 5:51 PM

Share

ಮುಖ್ಯಾಂಶಗಳು

  • ಭಾರತೀಯರನ್ನು ಉದ್ದೇಶಿಸಿ ಪ್ರಧಾನಿ ಮೋದಿ ವಿಡಿಯೋ ಸಂದೇಶ
  • ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯಂದು ಪ್ರತಿ ಮನೆಯಲ್ಲೂ ತ್ರಿವರ್ಣ ಧ್ವ ಹಾರಿಸಲು ಕರೆ
  • ಹರ್ ಘರ್ ತಿರಂಗಾ ಅಭಿಯಾನಕ್ಕೆ ಕೈಜೋಡಿಸಲು ಮೋದಿ ಮನವಿ

ನವದೆಹಲಿ, ಆಗಸ್ಟ್ 11: ಸ್ವಾತಂತ್ರ್ಯ ದಿನಾಚರಣೆಯ ಶುಭ ಸಂದರ್ಭದಲ್ಲಿ ದೇಶದ ಎಲ್ಲಾ ಪ್ರಜೆಗಳು ‘ಹರ್ ಘರ್ ತಿರಂಗಾ’ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಮತ್ತು ಪ್ರತಿಯೊಂದು ಮನೆಯಲ್ಲೂ ಇದನ್ನು ಹಬ್ಬದಂತೆ ಸಂಭ್ರಮಿಸಬೇಕೆಂದು ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಇಂದು ಕರೆ ನೀಡಿದ್ದಾರೆ. ಆಗಸ್ಟ್ 15ರ 80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಪ್ರಧಾನಿ ಮೋದಿ ಅವರು ಇನ್‌ಸ್ಟಾಗ್ರಾಮ್‌ನಲ್ಲಿ (Instagram) ವಿಶೇಷ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. “ಬನ್ನಿ, ನಾವೆಲ್ಲರೂ ಸೇರಿ ಹರ್ ಘರ್ ತಿರಂಗಾ ಅಭಿಯಾನವನ್ನು ಪ್ರತಿಯೊಂದು ಮನೆಯಲ್ಲೂ ಸಂಭ್ರಮಿಸೋಣ ಎಂದು ಮೋದಿ ವಿಶೇಷ ವಿಡಿಯೋ ಸಂದೇಶ ನೀಡಿದ್ದಾರೆ.

“ಆಗಸ್ಟ್ 15ರಂದು ಹೆಮ್ಮೆ ಮತ್ತು ಗೌರವದಿಂದ ಸಂಭ್ರಮಿಸೋಣ, ಸ್ವಾತಂತ್ರ್ಯ ಹೋರಾಟಗಾರರಿಗೆ ನಮನ ಸಲ್ಲಿಸೋಣ. ವಿಕಸಿತ ಭಾರತ ನಿರ್ಮಾಣಕ್ಕೆ ಪ್ರತಿಜ್ಞೆ ಮಾಡೋಣ. ಹರ್ ಘರ್ ತಿರಂಗಾ, ಘರ್ ಘರ್ ತಿರಂಗಾ, ಹರ್ ಮನ್ ತಿರಂಗಾ (ಪ್ರತಿ ಮನೆಯಲ್ಲೂ ಬಾವುಟ, ಪ್ರತಿ ಮನದಲ್ಲೂ ಬಾವುಟ). ಬನ್ನಿ, ಪ್ರತಿಯೊಂದು ಮನೆಯಲ್ಲೂ ತ್ರಿವರ್ಣ ಧ್ವಜವನ್ನು ಹಾರಿಸೋಣ” ಎಂದು ಪ್ರಧಾನಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: Independence Day: ಈ ಬಾರಿ ಕೆಂಪುಕೋಟೆಯಲ್ಲಿ ರಾಷ್ಟ್ರಗೀತೆಗೂ ಮುನ್ನ ಮೊಳಗಲಿದೆ ವಂದೇ ಮಾತರಂ ಗೀತೆ

2026ರ ‘ಹರ್ ಘರ್ ತಿರಂಗಾ’ ಅಭಿಯಾನವನ್ನು ಆಗಸ್ಟ್ ತಿಂಗಳಲ್ಲಿ ದೇಶಾದ್ಯಂತ ಆಚರಿಸಲಾಗುತ್ತಿದ್ದು, ಪ್ರಜೆಗಳು ತಮ್ಮ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸುವ ಮೂಲಕ ರಾಷ್ಟ್ರೀಯ ಸಂಭ್ರಮದಲ್ಲಿ ಭಾಗಿಯಾಗಲು ಪ್ರೋತ್ಸಾಹಿಸಲಾಗುತ್ತಿದೆ.

ಏನಿದು ಹರ್ ಘರ್ ತಿರಂಗಾ ಅಭಿಯಾನ?:

ಪ್ರಜೆಗಳು ರಾಷ್ಟ್ರಧ್ವಜದೊಂದಿಗೆ ಹೊಂದಿರುವ ವೈಯಕ್ತಿಕ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವುದು ಈ ‘ಹರ್ ಘರ್ ತಿರಂಗಾ’ ಅಭಿಯಾನದ ಮುಖ್ಯ ಉದ್ದೇಶವಾಗಿದೆ. ಆಗಸ್ಟ್ ತಿಂಗಳಿಡೀ ಮನೆಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸುವ ಮೂಲಕ, ದೇಶದ ಪಯಣವನ್ನು ಸ್ಮರಿಸಲು ಜನರನ್ನು ಪ್ರೇರೇಪಿಸಲಾಗುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:36 pm, Tue, 11 August 26

Follow Us