PM Narendra Modi: ಲೋಕಸಭೆಯಲ್ಲಿ ತುರ್ತು ಪರಿಸ್ಥಿತಿ ವಿರುದ್ಧ ಧ್ವನಿಯೆತ್ತಿದ ಸ್ಪೀಕರ್​ಗೆ ಪ್ರಧಾನಿ ಮೋದಿ ಮೆಚ್ಚುಗೆ

ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು 1975ರ ಜೂನ್ 25ರಲ್ಲಿ ಜಾರಿಗೊಳಿಸಲಾದ ತುರ್ತು ಪರಿಸ್ಥಿತಿಯನ್ನು ಭಾರತೀಯ ಇತಿಹಾಸದಲ್ಲಿ "ಕಪ್ಪು ಅಧ್ಯಾಯ" ಎಂದು ಕರೆದಿದ್ದಾರೆ. ಇಂದಿರಾ ಗಾಂಧಿಯವರು ತುರ್ತು ಪರಿಸ್ಥಿತಿಯನ್ನು ಹೇರುವ ಮೂಲಕ ಸಂವಿಧಾನದ ಮೇಲೆ ದಾಳಿ ನಡೆಸಿದ್ದಾರೆ ಎಂದು ಟೀಕಿಸಿದ್ದಾರೆ. ಅವರ ಈ ನಿಲುವಿಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

PM Narendra Modi: ಲೋಕಸಭೆಯಲ್ಲಿ ತುರ್ತು ಪರಿಸ್ಥಿತಿ ವಿರುದ್ಧ ಧ್ವನಿಯೆತ್ತಿದ ಸ್ಪೀಕರ್​ಗೆ ಪ್ರಧಾನಿ ಮೋದಿ ಮೆಚ್ಚುಗೆ
ಓಂ ಬಿರ್ಲಾ - ಪ್ರಧಾನಿ ನರೇಂದ್ರ ಮೋದಿ Image Credit source: PTI
Follow us
ಸುಷ್ಮಾ ಚಕ್ರೆ
| Updated By: Digi Tech Desk

Updated on:Jun 26, 2024 | 4:37 PM

ನವದೆಹಲಿ: ಸ್ವಾತಂತ್ರ್ಯ ಸಿಕ್ಕ ನಂತರ ಮೊದಲ ಬಾರಿಗೆ ಲೋಕಸಭಾ ಸ್ಪೀಕರ್ ಹುದ್ದೆಗೆ ಇಂದು ಚುನಾವಣೆ ನಡೆದಿದೆ. ಇಂದು ಇಂಡಿಯಾ ಅಭ್ಯರ್ಥಿ ಕೆ. ಸುರೇಶ್ ಅವರನ್ನು ಹಿಂದಿಕ್ಕಿ ಎನ್​ಡಿಎ ಅಭ್ಯರ್ಥಿ ಓಂ ಬಿರ್ಲಾ 2ನೇ ಬಾರಿಗೆ ಲೋಕಸಭೆ ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ. ಅವರು ಸದನದಲ್ಲಿ ಇಂದು ತುರ್ತು ಪರಿಸ್ಥಿತಿಯನ್ನು  ಖಂಡಿಸಿ ಮಾಡಿದ ಭಾಷಣಕ್ಕೆ ವಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿ, ಘೋಷಣೆಗಳನ್ನು ಕೂಗಿದ್ದಾರೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಸ್ಪೀಕರ್ ಓಂ ಬಿರ್ಲಾ ಅವರಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

1975ರಲ್ಲಿ ಅಂದಿನ ಪ್ರಧಾನಿಯಾಗಿದ್ದ ಇಂದಿರಾ ಗಾಂಧಿ ನೇತೃತ್ವದ ಸರ್ಕಾರ ಹೇರಿದ್ದ ತುರ್ತು ಪರಿಸ್ಥಿತಿಯನ್ನು ಖಂಡಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರಿಗೆ ಇಂದು (ಬುಧವಾರ) ಧನ್ಯವಾದ ಅರ್ಪಿಸಿದ್ದಾರೆ.

“ಗೌರವಾನ್ವಿತ ಸ್ಪೀಕರ್ ಅವರು ತುರ್ತು ಪರಿಸ್ಥಿತಿಯನ್ನು ಬಲವಾಗಿ ಖಂಡಿಸಿದ್ದಾರೆ. ಆ ಸಮಯದಲ್ಲಿ ಮಾಡಿದ ಅತಿರೇಕಗಳನ್ನು ಎತ್ತಿ ತೋರಿಸಿದ್ದಾರೆ ಮತ್ತು ಪ್ರಜಾಪ್ರಭುತ್ವವನ್ನು ಕತ್ತು ಹಿಸುಕಿದ ವಿಧಾನವನ್ನು ಉಲ್ಲೇಖಿಸಿದ್ದಾರೆ. ಇದು ನನಗೆ ಸಂತೋಷ ತಂದಿದೆ” ಎಂದು ಪ್ರಧಾನಿ ಮೋದಿ ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ತುರ್ತು ಪರಿಸ್ಥಿತಿಯನ್ನು ಕರಾಳ ಅವಧಿ ಎಂದ ಸ್ಪೀಕರ್ ಓಂ ಬಿರ್ಲಾ; ಸದನದಲ್ಲಿ 2 ನಿಮಿಷ ಮೌನಾಚರಣೆ

ಪ್ರಧಾನಿ ನರೇಂದ್ರ ಮೋದಿ ಮಂಡಿಸಿದ ನಿರ್ಣಯವನ್ನು ಧ್ವನಿ ಮತದ ಮೂಲಕ ಅಂಗೀಕರಿಸಿದ ನಂತರ ಸ್ಪೀಕರ್ ಓಂ ಬಿರ್ಲಾ ಅವರನ್ನು ಲೋಕಸಭೆಯ ಸ್ಪೀಕರ್ ಆಗಿ ಆಯ್ಕೆ ಮಾಡಲಾಯಿತು. ಓಂ ಬಿರ್ಲಾ ಅವರು ಆಯ್ಕೆಯಾದ ಸ್ವಲ್ಪ ಸಮಯದ ನಂತರ “ಈ ಸದನವು 1975ರಲ್ಲಿ ತುರ್ತು ಪರಿಸ್ಥಿತಿ ಹೇರಿದ ನಿರ್ಧಾರವನ್ನು ಬಲವಾಗಿ ಖಂಡಿಸುತ್ತದೆ. ತುರ್ತು ಪರಿಸ್ಥಿತಿಯನ್ನು ವಿರೋಧಿಸಿದ, ಹೋರಾಡಿದ ಮತ್ತು ಭಾರತದ ಪ್ರಜಾಪ್ರಭುತ್ವವನ್ನು ರಕ್ಷಿಸುವ ಜವಾಬ್ದಾರಿಯನ್ನು ಪೂರೈಸಿದ ಎಲ್ಲ ಜನರ ಸಂಕಲ್ಪವನ್ನು ನಾವು ಪ್ರಶಂಸಿಸುತ್ತೇವೆ. ಅವರಿಗಾಗಿ 2 ನಿಮಿಷ ಮೌನಾಚರಣೆ ಮಾಡೋಣ” ಎಂದು ಓಂ ಬಿರ್ಲಾ ಹೇಳಿದ್ದರು. ಇದು ಸದನದಲ್ಲಿ ವಿರೋಧ ಪಕ್ಷದ ಸದಸ್ಯರ ಪ್ರತಿಭಟನೆಗೆ ಕಾರಣವಾಯಿತು.

ತುರ್ತು ಪರಿಸ್ಥಿತಿಯ “ಕರಾಳ ಅವಧಿಯಲ್ಲಿ” ಭಾರತದ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಹತ್ತಿಕ್ಕಲಾಯಿತು ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಕತ್ತು ಹಿಸುಕಲಾಯಿತು. ತುರ್ತು ಪರಿಸ್ಥಿತಿಯು ಭಾರತದ ಹಲವಾರು ನಾಗರಿಕರ ಜೀವನವನ್ನು ನಾಶ ಮಾಡಿದೆ. ಹಲವಾರು ಜನರು ಸಾವನ್ನಪ್ಪಿದ್ದಾರೆ. ಈ ಸದನವು 1975ರಲ್ಲಿ ತುರ್ತು ಪರಿಸ್ಥಿತಿ ಹೇರುವ ನಿರ್ಧಾರವನ್ನು ಬಲವಾಗಿ ಖಂಡಿಸುತ್ತದೆ. ತುರ್ತು ಪರಿಸ್ಥಿತಿಯನ್ನು ವಿರೋಧಿಸಿ, ಹೋರಾಡಿದ ಮತ್ತು ಭಾರತದ ಪ್ರಜಾಪ್ರಭುತ್ವವನ್ನು ರಕ್ಷಿಸುವ ಜವಾಬ್ದಾರಿಯನ್ನು ಹೊತ್ತಿದ್ದ ಎಲ್ಲ ಜನರ ಸಂಕಲ್ಪವನ್ನು ನಾವು ಪ್ರಶಂಸಿಸುತ್ತೇವೆ ಎಂದು ಓಂ ಬಿರ್ಲಾ ಹೇಳಿದ್ದಾರೆ.

ಇದನ್ನೂ ಓದಿ: ಲೋಕಸಭೆ ಸ್ಪೀಕರ್ ಚುನಾವಣೆ; ನಾಳೆ ಸದನಕ್ಕೆ ಹಾಜರಾಗುವಂತೆ ಬಿಜೆಪಿ, ಕಾಂಗ್ರೆಸ್ ಸಂಸದರಿಗೆ ವಿಪ್ ಜಾರಿ

50 ವರ್ಷಗಳ ಹಿಂದೆ ತುರ್ತು ಪರಿಸ್ಥಿತಿ ಹೇರಲಾಗಿದ್ದರೂ ಇಂದಿನ ಯುವಕರು ಅದನ್ನು ಅರ್ಥ ಮಾಡಿಕೊಳ್ಳುವುದು ಬಹಳ ಮುಖ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ತುರ್ತು ಪರಿಸ್ಥಿತಿಯು ಸಂವಿಧಾನವನ್ನು ಕಡೆಗಣಿಸಿದಾಗ ಸಾರ್ವಜನಿಕರ ಅಭಿಪ್ರಾಯವನ್ನು ಹತ್ತಿಕ್ಕಿದಾಗ ಮತ್ತು ಸಂಸ್ಥೆಗಳನ್ನು ದುರ್ಬಲಗೊಳಿಸಿದಾಗ ಉಂಟಾಗುವ ಪರಿಣಾಮಗಳ ಸಂಪೂರ್ಣ ಜ್ಞಾಪನೆಯಾಗಿ ಕಾರ್ಯ ನಿರ್ವಹಿಸುತ್ತದೆ ಎಂದು ಅವರು ಹೇಳಿದರು.

ತುರ್ತುಪರಿಸ್ಥಿತಿಯ ಅವಧಿ:

ಸುಮಾರು 2 ವರ್ಷಗಳ ಕಾಲ ಅಂದರೆ ಜೂನ್ 1975ರಿಂದ ಮಾರ್ಚ್ 1977ರವರೆಗೆ ಅಂದಿನ ಪ್ರಧಾನಿಯಾಗಿದ್ದ ಇಂದಿರಾ ಗಾಂಧಿ ತುರ್ತು ಪರಿಸ್ಥಿತಿಯನ್ನು ಹೇರಿದರು. ಸಂವಿಧಾನದ 352ನೇ ವಿಧಿಯ ಅಡಿಯಲ್ಲಿ ಅಂದಿನ ಭಾರತದ ರಾಷ್ಟ್ರಪತಿ ಫಕ್ರುದ್ದೀನ್ ಅಲಿ ಅಹ್ಮದ್ ಅವರು ಅದಕ್ಕೆ ಒಪ್ಪಿಗೆ ನೀಡಿದರು. ದೇಶಕ್ಕೆ ಸನ್ನಿಹಿತವಾದ ಆಂತರಿಕ ಮತ್ತು ಬಾಹ್ಯ ಬೆದರಿಕೆಗಳಿವೆ ಎಂಬ ಕಾರಣಕ್ಕೆ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:24 pm, Wed, 26 June 24

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ