ದೇಶದ ಜನರಿಗೆ ಹೋಳಿ ಹಬ್ಬದ ಶುಭಾಶಯ ಕೋರಿದ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್

Happy Holi: ಖುಷಿ, ಸಂತಸ, ನಗು ಮತ್ತು ಉತ್ಸಾಹದ ಈ ಹಬ್ಬ ಪ್ರತಿಯೊಬ್ಬರ ಬದುಕಿನಲ್ಲಿ ಹುರುಪು ಮತ್ತು ನವ ಚೈತನ್ಯವನ್ನು ತುಂಬಲಿ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

ದೇಶದ ಜನರಿಗೆ ಹೋಳಿ ಹಬ್ಬದ ಶುಭಾಶಯ ಕೋರಿದ  ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್
ಹೋಳಿ ಹಬ್ಬದ ಪ್ರಯುಕ್ತ ಮರಳು ಶಿಲ್ಪಿ ಸುದರ್ಶನ್ ಪಟ್ನಾಯಿಕ್ ರಚಿಸಿದ ಮರಳು ಶಿಲ್ಪ ( ಕೃಪೆ: ಸುದರ್ಶನ್ ಪಟ್ನಾಯಿಕ್ ಟ್ವೀಟ್)
ರಶ್ಮಿ ಕಲ್ಲಕಟ್ಟ

Updated on: Mar 29, 2021 | 2:40 PM

ದೆಹಲಿ: ದೇಶದ ಜನರಿಗೆ ಹೋಳಿ ಹಬ್ಬದ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ ಈ ಹಬ್ಬ ಜನರ ಬದುಕಿನಲ್ಲಿ ಹೊಸ ಹುರುಪು ಮತ್ತು ಚೈತನ್ಯವನ್ನು ತುಂಬಲಿ ಎಂದು ಆಶಿಸಿದ್ದಾರೆ. ಎಲ್ಲರಿಗೂ ಹೋಳಿ ಹಬ್ಬದ ಶುಭಾಶಯಗಳು, ಖುಷಿ, ಸಂತಸ, ನಗು ಮತ್ತು ಉತ್ಸಾಹದ ಈ ಹಬ್ಬ ಪ್ರತಿಯೊಬ್ಬರ ಬದುಕಿನಲ್ಲಿ ಹುರುಪು ಮತ್ತು ನವ ಚೈತನ್ಯವನ್ನು ತುಂಬಲಿ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.


ದೇಶದ ಎಲ್ಲ ನಾಗರಿಕರಿಗೆ ಹೋಳಿ ಹಬ್ಬದ ಶುಭಾಶಯಗಳ. ಬಣ್ಣಗಳ ಈ ಹಬ್ಬವು ಸಾಮಾಜಿಕ ಸಾಮರಸ್ಯದ ಹಬ್ಬ. ಈ ಹಬ್ಬ ಜನರ ಬದುಕಿನಲ್ಲಿ ಖುಷಿ ಮತ್ತು ನಿರೀಕ್ಷೆಯನ್ನು ತರಲಿ. ನಮ್ಮ ದೇಶದ ಸಾಂಸ್ಕೃತಿಕ ವೈವಿಧ್ಯತೆಯಲ್ಲಿ ಪ್ರಧಾನ ಪಾತ್ರವಹಿಸುವ ದೇಶಭಕ್ತಿಯ ಭಾವನೆಯನ್ನು ಮತ್ತಷ್ಟು ಗಟ್ಟಿಗೊಳಿಸಲಿ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ.


ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಿದೇಶಾಂಗ ಸಚಿವ ಡಾ.ಎಸ್. ಜೈಶಂಕರ್ ಮೊದಲಾದ ಗಣ್ಯರು ಟ್ವಿಟರ್ ನಲ್ಲಿ ಹೋಳಿ ಹಬ್ಬದ ಶುಭಾಶಯ ಕೋರಿದ್ದಾರೆ.

ದೇಶದ ಸಮಸ್ತ ಜನರಿಗೆ ಹೋಳಿ ಹಬ್ಬದ ಹಾರ್ದಿಕ ಶುಭಾಶಯಗಳು. ಬಣ್ಣಗಳ ಈ ಹಬ್ಬ ಏಕತೆ, ಸಂತೋಷ, ಶಾಂತಿ ಮತ್ತು ಎಲ್ಲರಿಗೂ ಒಳಿತು ಉಂಟುಮಾಡಲಿ ಎಂದು ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.


ಹೋಳಿ ಹಬ್ಬದ ಸಂದರ್ಭದಲ್ಲಿ ಎಲ್ಲರಿಗೂ ಶುಭಾಶಯಗಳು. ಬಣ್ಣಗಳು ಈ ಹಬ್ಬವು ಎಲ್ಲರಿಗೂ ಸಂತೋಷ, ಆರೋಗ್ಯ ಮತ್ತು ಸಮೃದ್ದಿಯನ್ನು ತರಲಿ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಹೋಳಿ ಹಬ್ಬವು ಎಲ್ಲರಿಗೂ ಉತ್ತಮ ಆರೋಗ್ಯ ಮತ್ತು ಸಮೃದ್ದಿಯನ್ನು ನೀಡಲಿ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಡಾ.ಎಸ್.ಜೈಶಂಕರ್ ಟ್ವೀಟ್ ಮಾಡಿದ್ದಾರೆ.


ಎಲ್ಲರಿಗೂ ಹೋಳಿ ಹಬ್ಬದ ಶುಭಾಶಯ ಕೋರಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೋಳಿ ಹಬ್ಬದ ಆಚರಣೆ ವೇಳೆ ಕೊರೊನಾ ಮಾರ್ಗಸೂಚಿಯನ್ನು ಪಾಲಿಸಿ ಎಂದು ಹೇಳಿದ್ದಾರೆ.

ಇದನ್ನೂ ಓದಿ: Holi Celebration 2021: ಅಮಿತಾಬ್ ಬಚ್ಚನ್ ಸೇರಿದಂತೆ ಬಾಲಿವುಡ್​ ಮಂದಿಯ ಹೋಳಿ ನೆನಪು; ಕೊರೊನಾ ಇಲ್ಲದಿದ್ದರೆ ಹೀಗಿರುತ್ತಿತ್ತು ಸಂಭ್ರಮ

Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Follow Us