ಮಹಾರಾಷ್ಟ್ರದ ಕೊವಿಡ್ ಆಸ್ಪತ್ರೆಯ ಬೆಂಕಿ ದುರಂತದ ಸಾವಿನ ಸಂಖ್ಯೆ 11ಕ್ಕೆ ಏರಿಕೆ; ಪ್ರಧಾನಿ ಮೋದಿ ಸಂತಾಪ

ಮಹಾರಾಷ್ಟ್ರದ ಅಹಮದ್‍ನಗರದಲ್ಲಿರುವ ಜಿಲ್ಲಾ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಇಂದು ಬೆಳಗ್ಗೆ 11 ಗಂಟೆ ವೇಳೆಗೆ ದಿಢೀರನೆ ಬೆಂಕಿ ಕಾಣಿಸಿಕೊಂಡಿದ್ದು, ಕೊವಿಡ್-19 ಚಿಕಿತ್ಸೆ ಪಡೆಯುತ್ತಿದ್ದ 11 ಕೊವಿಡ್ ಸೋಂಕಿತರು ಸಾವನ್ನಪ್ಪಿದ್ದಾರೆ.

ಮಹಾರಾಷ್ಟ್ರದ ಕೊವಿಡ್ ಆಸ್ಪತ್ರೆಯ ಬೆಂಕಿ ದುರಂತದ ಸಾವಿನ ಸಂಖ್ಯೆ 11ಕ್ಕೆ ಏರಿಕೆ; ಪ್ರಧಾನಿ ಮೋದಿ ಸಂತಾಪ
ನರೇಂದ್ರ ಮೋದಿ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Nov 06, 2021 | 10:00 PM

ಮುಂಬೈ: ಮಹಾರಾಷ್ಟ್ರದ ಅಹಮದ್​ನಗರ ನಾಗರಿಕ ಆಸ್ಪತ್ರೆಯಲ್ಲಿ ಇಂದು ಭಾರೀ ಬೆಂಕಿ ದುರಂತ ಸಂಭವಿಸಿದ್ದು, ಸಾವಿನ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಈ ಅಗ್ನಿ ಅವಘಡದಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 11 ಕೊವಿಡ್ ರೋಗಿಗಳು ಸಜೀವ ದಹನವಾಗಿದ್ದಾರೆ. ಈ ಘಟನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಮಹಾರಾಷ್ಟ್ರದ ಅಹಮದ್‍ನಗರದಲ್ಲಿರುವ ಜಿಲ್ಲಾ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಇಂದು ಬೆಳಗ್ಗೆ 11 ಗಂಟೆ ವೇಳೆಗೆ ದಿಢೀರನೆ ಬೆಂಕಿ ಕಾಣಿಸಿಕೊಂಡಿದ್ದು, ಕೊವಿಡ್-19 ಚಿಕಿತ್ಸೆ ಪಡೆಯುತ್ತಿದ್ದ 11 ಕೊವಿಡ್ ಸೋಂಕಿತರು ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಅಹಮದ್​ನಗರದಲ್ಲಿನ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿ ರೋಗಿಗಳು ಸಾವನ್ನಪ್ಪಿದ ಘಟನೆ ಬಗ್ಗೆ ತಿಳಿದು ಬಹಳ ಬೇಸರವಾಯಿತು. ಮೃತ ಕುಟುಂಬಕ್ಕೆ ನನ್ನ ಸಂತಾಪಗಳನ್ನು ತಿಳಿಸುತ್ತಿದ್ದೇನೆ. ಹಾಗೇ ಗಾಯಗೊಂಡವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಟ್ವೀಟ್ ಮಾಡಿದ್ದಾರೆ.

ಇಂದು ಬೆಳಗ್ಗೆ ಈ ಬೆಂಕಿ ದುರಂತ ನಡೆದ ವಿಷಯ ತಿಳಿಯುತ್ತಿದ್ದಂತೆ ತಕ್ಷಣ ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ಆರಿಸುವ ಪ್ರಯತ್ನ ನಡೆಸಿದ್ದಾರೆ. ಆಸ್ಪತ್ರೆಯ ಕೆಳಭಾಗದಲ್ಲಿ ದಟ್ಟ ಹೊಗೆ ಆವರಿಸಿದ್ದರಿಂದ ರೋಗಿಗಳನ್ನು ಸ್ಥಳಾಂತರ ಮಾಡುವ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿದ್ದವು.

ಈ ಘಟನೆ ಕುರಿತು ಪ್ರತಿಕ್ರಿಯಿಸಿದ್ದ ಮಹಾರಾಷ್ಟ್ರದ ಸಚಿವ ನವಾಬ್​ ಮಲಿಕ್​, ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡುವ ಉದ್ದೇಶದಿಂದಾಗಿ ಹೊಸದಾಗಿ ಐಸಿಯು ನಿರ್ಮಾಣ ಮಾಡಲಾಗಿತ್ತು. ಈ ವಾರ್ಡ್​ನಲ್ಲಿ ಬೆಂಕಿ ಕಾಣಿಸಿಕೊಂಡಿರುವುದು ಗಂಭೀರ ಸಮಸ್ಯೆ ಸೃಷ್ಟಿಸಿದೆ. ಎಲ್ಲಾ ಆಸ್ಪತ್ರೆಗಳಲ್ಲಿ ಫೈರ್​ ಆಡಿಟ್​ ಕೈಗೊಳ್ಳಲು ಸೂಚಿಸಲಾಗಿದೆ. ಈ ಸಂಬಂಧ ಅಹಮದ್‌ನಗರ ನಾಗರಿಕ ಆಸ್ಪತ್ರೆಯ ವರದಿಯನ್ನು ಪರಿಶೀಲಿಸಿ, ಸಂಪೂರ್ಣ ತನಿಖೆ ನಡೆಸುತ್ತೇವೆ ಎಂದು ಹೇಳಿದ್ದರು.

ಇದನ್ನೂ ಓದಿ: ಮಹಾರಾಷ್ಟ್ರ ಸಿವಿಲ್​ ಆಸ್ಪತ್ರೆಯ ಕೊವಿಡ್​ ವಾರ್ಡ್​​ನಲ್ಲಿ ಬೆಂಕಿ; 10 ರೋಗಿಗಳ ದುರ್ಮರಣ

ಕೈಯಲ್ಲಿ ಬೆಂಕಿ ಹಿಡಿದು ಬಂದ ಮೈಕ್​ ಟೈಸನ್​; ‘ಲೈಗರ್​’ನಲ್ಲಿ ಬಾಕ್ಸಿಂಗ್​ ಲೆಜೆಂಡ್ ಫಸ್ಟ್​ ಲುಕ್​ ನೋಡಿ ಫ್ಯಾನ್ಸ್​ ಫಿದಾ  

ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್