ಮುಂಬೈ: ಮಹಾರಾಷ್ಟ್ರದ ಅಹಮದ್‌ನಗರ ನಾಗರಿಕ ಆಸ್ಪತ್ರೆಯಲ್ಲಿ ಇಂದು ಭಾರೀ ಬೆಂಕಿ ದುರಂತ ಸಂಭವಿಸಿದ್ದು, ಸಾವಿನ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಈ ಅಗ್ನಿ ಅವಘಡದಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 11 ಕೊವಿಡ್ ರೋಗಿಗಳು ಸಜೀವ ದಹನವಾಗಿದ್ದಾರೆ. ಈ ಘಟನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ಮಹಾರಾಷ್ಟ್ರದ ಅಹಮದ್‍ನಗರದಲ್ಲಿರುವ ಜಿಲ್ಲಾ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಇಂದು ಬೆಳಗ್ಗೆ 11 ಗಂಟೆ ವೇಳೆಗೆ ದಿಢೀರನೆ ಬೆಂಕಿ ಕಾಣಿಸಿಕೊಂಡಿದ್ದು, ಕೊವಿಡ್-19 ಚಿಕಿತ್ಸೆ ಪಡೆಯುತ್ತಿದ್ದ 11 ಕೊವಿಡ್ ಸೋಂಕಿತರು ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಅಹಮದ್ನಗರದಲ್ಲಿನ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿ ರೋಗಿಗಳು ಸಾವನ್ನಪ್ಪಿದ ಘಟನೆ ಬಗ್ಗೆ ತಿಳಿದು ಬಹಳ ಬೇಸರವಾಯಿತು. ಮೃತ ಕುಟುಂಬಕ್ಕೆ ನನ್ನ ಸಂತಾಪಗಳನ್ನು ತಿಳಿಸುತ್ತಿದ್ದೇನೆ. ಹಾಗೇ ಗಾಯಗೊಂಡವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಟ್ವೀಟ್ ಮಾಡಿದ್ದಾರೆ.
Anguished by the loss of lives due to a fire in a hospital in Ahmednagar, Maharashtra. Condolences to the bereaved families. May the injured recover at the earliest.
— Narendra Modi (@narendramodi) November 6, 2021
ಇಂದು ಬೆಳಗ್ಗೆ ಈ ಬೆಂಕಿ ದುರಂತ ನಡೆದ ವಿಷಯ ತಿಳಿಯುತ್ತಿದ್ದಂತೆ ತಕ್ಷಣ ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ಆರಿಸುವ ಪ್ರಯತ್ನ ನಡೆಸಿದ್ದಾರೆ. ಆಸ್ಪತ್ರೆಯ ಕೆಳಭಾಗದಲ್ಲಿ ದಟ್ಟ ಹೊಗೆ ಆವರಿಸಿದ್ದರಿಂದ ರೋಗಿಗಳನ್ನು ಸ್ಥಳಾಂತರ ಮಾಡುವ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿದ್ದವು.
अहमदनगर, महाराष्ट्र के सिविल अस्पताल में आग लगने से लोगों की मृत्यु का समाचार अत्यंत दुखद है। मैं शोकसंतप्त परिवारों के प्रति हार्दिक संवेदना व्यक्त करता हूं और दुर्घटना में घायल हुए लोगों के शीघ्र अति शीघ्र स्वस्थ होने की कामना करता हूं।
— President of India (@rashtrapatibhvn) November 6, 2021
ಈ ಘಟನೆ ಕುರಿತು ಪ್ರತಿಕ್ರಿಯಿಸಿದ್ದ ಮಹಾರಾಷ್ಟ್ರದ ಸಚಿವ ನವಾಬ್ ಮಲಿಕ್, ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡುವ ಉದ್ದೇಶದಿಂದಾಗಿ ಹೊಸದಾಗಿ ಐಸಿಯು ನಿರ್ಮಾಣ ಮಾಡಲಾಗಿತ್ತು. ಈ ವಾರ್ಡ್ನಲ್ಲಿ ಬೆಂಕಿ ಕಾಣಿಸಿಕೊಂಡಿರುವುದು ಗಂಭೀರ ಸಮಸ್ಯೆ ಸೃಷ್ಟಿಸಿದೆ. ಎಲ್ಲಾ ಆಸ್ಪತ್ರೆಗಳಲ್ಲಿ ಫೈರ್ ಆಡಿಟ್ ಕೈಗೊಳ್ಳಲು ಸೂಚಿಸಲಾಗಿದೆ. ಈ ಸಂಬಂಧ ಅಹಮದ್‌ನಗರ ನಾಗರಿಕ ಆಸ್ಪತ್ರೆಯ ವರದಿಯನ್ನು ಪರಿಶೀಲಿಸಿ, ಸಂಪೂರ್ಣ ತನಿಖೆ ನಡೆಸುತ್ತೇವೆ ಎಂದು ಹೇಳಿದ್ದರು.
ಇದನ್ನೂ ಓದಿ: ಮಹಾರಾಷ್ಟ್ರ ಸಿವಿಲ್ ಆಸ್ಪತ್ರೆಯ ಕೊವಿಡ್ ವಾರ್ಡ್ನಲ್ಲಿ ಬೆಂಕಿ; 10 ರೋಗಿಗಳ ದುರ್ಮರಣ