AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನರೇಂದ್ರ ಮೋದಿಗೆ ನಾರ್ವೆಯ ಅತ್ಯುನ್ನತ ಪ್ರಶಸ್ತಿ ಪ್ರದಾನ; ಭಾರತದ ಪ್ರಧಾನಿಗೆ 32ನೇ ಜಾಗತಿಕ ಗೌರವ

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಂದು ನಾರ್ವೆಯ ಅತ್ಯುನ್ನತ ನಾಗರಿಕ ಗೌರವವಾದ ಗ್ರ್ಯಾಂಡ್ ಕ್ರಾಸ್ ಆಫ್ ದಿ ರಾಯಲ್ ನಾರ್ವೇಜಿಯನ್ ಆರ್ಡರ್ ಆಫ್ ಮೆರಿಟ್ ಪ್ರಶಸ್ತಿಯನ್ನು ನೀಡಲಾಯಿತು. ಇದು ಪ್ರಧಾನಿ ಪಡೆದ 32ನೇ ಅಂತಾರಾಷ್ಟ್ರೀಯ ಗೌರವವಾಗಿದೆ. ಗ್ರ್ಯಾಂಡ್ ಕ್ರಾಸ್ ಆಫ್ ದಿ ರಾಯಲ್ ನಾರ್ವೇಜಿಯನ್ ಆರ್ಡರ್ ಆಫ್ ಮೆರಿಟ್ ನಾರ್ವೆಯ ಅತ್ಯುನ್ನತ ನಾಗರಿಕ ಪ್ರಶಸ್ತಿಯಾಗಿದ್ದು, ಇದನ್ನು 1985ರಲ್ಲಿ ರಾಜ ಓಲಾವ್ V ಸ್ಥಾಪಿಸಿದರು.

ನರೇಂದ್ರ ಮೋದಿಗೆ ನಾರ್ವೆಯ ಅತ್ಯುನ್ನತ ಪ್ರಶಸ್ತಿ ಪ್ರದಾನ; ಭಾರತದ ಪ್ರಧಾನಿಗೆ 32ನೇ ಜಾಗತಿಕ ಗೌರವ
Pm Modi In Norway
ಸುಷ್ಮಾ ಚಕ್ರೆ
|

Updated on: May 18, 2026 | 7:29 PM

Share

ನವದೆಹಲಿ, ಮೇ 18: ಭಾರತದ ಪ್ರಧಾನಿ ನರೇಂದ್ರ ಮೋದಿ (PM Modi) ಅವರಿಗೆ ನಾರ್ವೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಗ್ರಾಂಡ್ ಕ್ರಾಸ್ ಆಫ್ ದಿ ರಾಯಲ್ ನಾರ್ವೇಜಿಯನ್ ಆರ್ಡರ್’ (Grand Cross of the Royal Norwegian Order) ಗೌರವವನ್ನು ನೀಡಿ ಗೌರವಿಸಲಾಗಿದೆ. ಇದು ಪ್ರಧಾನಿ ಮೋದಿಯವರು ಅಂತರರಾಷ್ಟ್ರೀಯ ಮಟ್ಟದಲ್ಲಿ ಪಡೆದ 32ನೇ ಜಾಗತಿಕ ಗೌರವವಾಗಿದೆ.

ಗ್ರಾಂಡ್ ಕ್ರಾಸ್ ಆಫ್ ದಿ ರಾಯಲ್ ನಾರ್ವೇಜಿಯನ್ ಆರ್ಡರ್’ ನಾರ್ವೆ ದೇಶವು ವಿದೇಶಿ ರಾಷ್ಟ್ರಗಳ ಮುಖ್ಯಸ್ಥರಿಗೆ ಮತ್ತು ಜಾಗತಿಕ ನಾಯಕರಿಗೆ ನೀಡುವ ಅತ್ಯಂತ ಪ್ರತಿಷ್ಠಿತ ಮತ್ತು ಅತ್ಯುನ್ನತ ನಾಗರಿಕ ಪ್ರಶಸ್ತಿಯಾಗಿದೆ. ಭಾರತ ಮತ್ತು ನಾರ್ವೆ ನಡುವಿನ ರಾಜತಾಂತ್ರಿಕ ಸಂಬಂಧಗಳನ್ನು ಬಲಪಡಿಸಲು, ಹಸಿರು ಇಂಧನ (Green Energy), ಕಡಲ ಆರ್ಥಿಕತೆ (Maritime Economy) ಮತ್ತು ಜಾಗತಿಕ ಶಾಂತಿಗಾಗಿ ಪ್ರಧಾನಿ ಮೋದಿ ನೀಡಿದ ಕೊಡುಗೆಯನ್ನು ಶ್ಲಾಘಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ.

ಇದನ್ನೂ ಓದಿ: ಭಾರತ-ಸ್ವೀಡನ್ ಬಾಂಧವ್ಯಕ್ಕೆ ಹೊಸ ವೇಗ: ಪ್ರಧಾನಿ ಮೋದಿ ಪ್ರವಾಸದ ಪ್ರಮುಖ ಒಪ್ಪಂದಗಳ ಬಗ್ಗೆ ಮಾಹಿತಿ ಇಲ್ಲಿದೆ

32ನೇ ಜಾಗತಿಕ ಗೌರವ:

ವಿಶ್ವದ ವಿವಿಧ ದೇಶಗಳು ಮತ್ತು ಅಂತಾರಾಷ್ಟ್ರೀಯ ಸಂಸ್ಥೆಗಳು ಪ್ರಧಾನಿ ಮೋದಿಯವರಿಗೆ ನೀಡಿದ ಒಟ್ಟಾರೆ ಜಾಗತಿಕ ಪ್ರಶಸ್ತಿಗಳ ಸಂಖ್ಯೆ ಈಗ 32ಕ್ಕೆ ತಲುಪಿದೆ. ಇವುಗಳಲ್ಲಿ ಹಲವು ಪ್ರಶಸ್ತಿಗಳು ಮುಸ್ಲಿಂ ರಾಷ್ಟ್ರಗಳು ಸೇರಿದಂತೆ ಪ್ರಪಂಚದ ವಿವಿಧ ಶಕ್ತಿಶಾಲಿ ದೇಶಗಳ ಅತ್ಯುನ್ನತ ನಾಗರಿಕ ಗೌರವಗಳಾಗಿವೆ.

ಇದು ಜಾಗತಿಕ ವೇದಿಕೆಯಲ್ಲಿ ಭಾರತದ ಪ್ರಭಾವ ಮತ್ತು ಪ್ರಧಾನಿ ಮೋದಿಯವರ ನಾಯಕತ್ವಕ್ಕೆ ಸಿಕ್ಕ ದೊಡ್ಡ ಮನ್ನಣೆ ಇದಾಗಿದೆ. ನಾರ್ವೆ ಸೇರಿದಂತೆ ಉತ್ತರದ ದೇಶಗಳೊಂದಿಗೆ (Nordic Countries) ಭಾರತದ ವ್ಯಾಪಾರ, ಹೂಡಿಕೆ ಮತ್ತು ತಂತ್ರಜ್ಞಾನ ವಿನಿಮಯಕ್ಕೆ ಇದು ಮತ್ತಷ್ಟು ಉತ್ತೇಜನ ನೀಡುತ್ತದೆ. ಇದಕ್ಕೂ ಮುನ್ನ ಭೂತಾನ್, ಗ್ರೀಸ್, ಪಪುವಾ ನ್ಯೂಗಿನಿಯಾ ಮತ್ತು ಫಿಜಿ ದೇಶಗಳು ಕೂಡ ತಮ್ಮ ಅತ್ಯುನ್ನತ ಪ್ರಶಸ್ತಿಗಳನ್ನು ಪ್ರಧಾನಿ ಮೋದಿಯವರಿಗೆ ನೀಡಿ ಗೌರವಿಸಿದ್ದವು.

ಇದನ್ನೂ ಓದಿ: ಸ್ವೀಡನ್​​​​​ನಲ್ಲಿ ಮೋದಿಗೆ ‘ರಾಯಲ್ ಆರ್ಡರ್ ಆಫ್ ಪೋಲಾರ್ ಸ್ಟಾರ್, ಕಮಾಂಡರ್ ಗ್ರಾಂಡ್ ಕ್ರಾಸ್’ ಪ್ರಶಸ್ತಿ

ಪ್ರಧಾನಿ ಮೋದಿಗೆ ನೀಡಲಾಗಿರುವ ಪ್ರಮುಖ ಪ್ರಶಸ್ತಿಗಳು:

ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ (ರಷ್ಯಾ) – ರಷ್ಯಾದ ಅತ್ಯುನ್ನತ ಗೌರವ.

ಆರ್ಡರ್ ಆಫ್ ದಿ ನೈಲ್ (ಈಜಿಪ್ಟ್) – ಈಜಿಪ್ಟ್‌ನ ಅತ್ಯುನ್ನತ ನಾಗರಿಕ ಪ್ರಶಸ್ತಿ.

ಗ್ರಾಂಡ್ ಕ್ರಾಸ್ ಆಫ್ ದಿ ಲೀಜನ್ ಆಫ್ ಆನರ್ (ಫ್ರಾನ್ಸ್) – ಫ್ರಾನ್ಸ್‌ನ ಅತ್ಯುನ್ನತ ಗೌರವ.

ಲೀಜನ್ ಆಫ್ ಮೆರಿಟ್ (ಅಮೆರಿಕ) – ಅಮೆರಿಕ ಸಶಸ್ತ್ರ ಪಡೆಗಳ ಪ್ರಮುಖ ಗೌರವ.

ಕಿಂಗ್ ಅಬ್ದುಲಜೀಸ್ ಸ್ಯಾಶ್ (ಸೌದಿ ಅರೇಬಿಯಾ) – ಸೌದಿ ಅರೇಬಿಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ.

ಆರ್ಡರ್ ಆಫ್ ಜಾಯೆದ್ (ಯುಎಇ) – ಯುನೈಟೆಡ್ ಅರಬ್ ಎಮಿರೇಟ್ಸ್‌ನ ಅತ್ಯುನ್ನತ ನಾಗರಿಕ ಗೌರವ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More