ಉಪ ರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನ್ಖರ್ ರಾಜೀನಾಮೆ, ಪ್ರಧಾನಿ ಮೋದಿ ಹೇಳಿದ್ದೇನು?

ಜಗದೀಪ್ ಧನ್ಖರ್ ಉಪ ರಾಷ್ಟ್ರಪತಿ ಸ್ಥಾನಕ್ಕೆ ಈಗಾಗಲೇ ರಾಜೀನಾಮೆ ನೀಡಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿ ಜಗದೀಪ್ ಧನ್ಖರ್​ ಕುರಿತು ಪೋಸ್ಟ್​ ಮಾಡಿದ್ದಾರೆ. ಅದರಲ್ಲಿ ಜಗದೀಪ್ ಧನ್ಖರ್​ ಅವರಿಗೆ ಭಾರತದ ಉಪ ರಾಷ್ಟ್ರಪತಿ ಹುದ್ದೆ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಕೆಲಸ ಮಾಡಲು ದೇಶಕ್ಕೆ ಸೇವೆ ಸಲ್ಲಿಸಲು ಸಾಕಷ್ಟು ಅವಕಾಶಗಳು ಸಿಕ್ಕಿವೆ. ಉತ್ತಮ ಆರೋಗ್ಯ ಅವರದ್ದಾಗಲಿ ಎಂದು ಹಾರೈಸುತ್ತೇನೆ ಎಂದು ಎಕ್ಸ್​​ನಲ್ಲಿ ಪೋಸ್ಟ್​ ಮಾಡಿದ್ದಾರೆ.

ಉಪ ರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನ್ಖರ್ ರಾಜೀನಾಮೆ, ಪ್ರಧಾನಿ ಮೋದಿ ಹೇಳಿದ್ದೇನು?
ಜಗದೀಪ್ ಧನ್ಖರ್
Image Credit source: IndiaToday

Updated on: Jul 22, 2025 | 2:21 PM

ನವದೆಹಲಿ, ಜುಲೈ 22: ಜಗದೀಪ್ ಧನ್ಖರ್(Jagdeep Dhankhar) ಉಪ ರಾಷ್ಟ್ರಪತಿ ಸ್ಥಾನಕ್ಕೆ ಈಗಾಗಲೇ ರಾಜೀನಾಮೆ ನೀಡಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿ ಜಗದೀಪ್ ಧನ್ಖರ್​ ಕುರಿತು ಪೋಸ್ಟ್​ ಮಾಡಿದ್ದಾರೆ. ಅದರಲ್ಲಿ ಜಗದೀಪ್ ಧನ್ಖರ್​ ಅವರಿಗೆ ಭಾರತದ ಉಪ ರಾಷ್ಟ್ರಪತಿ ಹುದ್ದೆ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಕೆಲಸ ಮಾಡಲು ದೇಶಕ್ಕೆ ಸೇವೆ ಸಲ್ಲಿಸಲು ಸಾಕಷ್ಟು ಅವಕಾಶಗಳು ಸಿಕ್ಕಿವೆ. ಉತ್ತಮ ಆರೋಗ್ಯ ಅವರದ್ದಾಗಲಿ ಎಂದು ಹಾರೈಸುತ್ತೇನೆ ಎಂದು ಎಕ್ಸ್​​ನಲ್ಲಿ ಪೋಸ್ಟ್​ ಮಾಡಿದ್ದಾರೆ.

ಈಗ ಆರು ತಿಂಗಳೊಳಗೆ ಮುಂದಿನ ಉಪರಾಷ್ಟ್ರಪತಿಗೆ ಚುನಾವಣೆ ನಡೆಯಲಿದೆ. ಧನ್ಖರ್ ಅವರ ಹಠಾತ್ ರಾಜೀನಾಮೆ ಬಗ್ಗೆ ವಿರೋಧ ಪಕ್ಷಗಳು ಪ್ರಶ್ನೆಗಳನ್ನು ಎತ್ತುತ್ತಿವೆ. ಧನ್ಖರ್ ಅವರ ಆರೋಗ್ಯ ಸಂಪೂರ್ಣವಾಗಿ ಚೆನ್ನಾಗಿದೆ ಎಂದು ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳು ಹೇಳಿವೆ. ಅವರು ಕೆಲವು ಒತ್ತಡದಲ್ಲಿ ರಾಜೀನಾಮೆ ನೀಡಿರುವ ಸಾಧ್ಯತೆಯಿದೆ ಎಂದು ಹೇಳುತ್ತಿದೆ.

ತಮ್ಮ ಐದು ವರ್ಷಗಳ ಅಧಿಕಾರಾವಧಿ ಮುಗಿಯಲು ಎರಡು ವರ್ಷಗಳು ಬಾಕಿ ಇರುವಾಗ, ಆರೋಗ್ಯದ ಕಾರಣ ನೀಡಿ ಧಂಖರ್ ತಮ್ಮ ಹುದ್ದೆಯಿಂದ ಕೆಳಗಿಳಿಯುತ್ತಿರುವುದಾಗಿ ಘೋಷಿಸಿದರು.

ಮತ್ತಷ್ಟು ಓದಿ: Explainer: ಜಗದೀಪ್ ಧನ್ಖರ್ ರಾಜೀನಾಮೆ, ಭಾರತದಲ್ಲಿ ಉಪ ರಾಷ್ಟ್ರಪತಿ ಆಯ್ಕೆ ಹೇಗೆ? ಪ್ರಕ್ರಿಯೆ ಏನು?

1992ರಲ್ಲಿ ಉಪ ರಾಷ್ಟ್ರಪತಿ ಕೃಷ್ಣಕಾಂತ್ ಮಧ್ಯಂತರ ಅವಧಿಯಲ್ಲಿ ನಿಧನರಾದರು. ಅವರು ಆಗಸ್ಟ್​ 21, 1992ರಂದು ಉಪ ರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು ಮತ್ತು ಜುಲೈ 27, 2002ರಂದು ತಮ್ಮ ಅಧಿಕಾರಾವಧಿಯಲ್ಲಿ ನಿಧನರಾದರು. ಇದಲ್ಲದೆ, 1974ರಲ್ಲಿ ಉಪ ರಾಷ್ಟ್ರಪತಿ ಬಿಡಿ ಜತ್ತಿ ತಮ್ಮ ಅವಧಿ ಮುಗಿಯುವ ಮುನ್ನವೇ ರಾಜೀನಾಮೆ ನೀಡಿದ್ದರು. ಜಗದೀಪ್ ಧನ್ಖರ್ ಆಗಸ್ಟ್ 11, 2022ರಂದು 14ನೇ ಉಪರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಮೋದಿ ಪೋಸ್ಟ್​

ಇದಕ್ಕೂ ಮೊದಲು, ವರಾಹಗಿರಿ ವೆಂಕಟ ಗಿರಿ( ವಿವಿ ಗಿರಿ) ಅವರು ಭಾರತದ ರಾಷ್ಟ್ರಪತಿ ಚುನಾವಣೆಯಲ್ಲಿ ಸ್ಪರ್ಧಿಸಲು ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆ ಸಮಯದಲ್ಲಿ ಗಿರಿಯವರ ಈ ನಿರ್ಧಾರ ಚರ್ಚೆಯಲ್ಲಿತ್ತು.

ಜಗದೀಪ್ ದನ್ಖರ್ ರಾಜೀನಾಮೆ ಬಳಿಕ ಉಪ ರಾಷ್ಟ್ರಪತಿ ಹುದ್ದೆಯನ್ನು ತುಂಬಲು ಚುನಾವಣಾ ಪ್ರಕ್ರಿಯೆಯನ್ನು ಮತ್ತೆ ಪೂರ್ಣಗೊಳಿಸಬೇಕಾಗುತ್ತದೆ. ಅದರ ನಂತರ ದೇಶವು ಹೊಸ ಉಪರಾಷ್ಟ್ರಪತಿಯನ್ನು ಪಡೆಯುತ್ತದೆ. ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯ ಸಂಸದರು ಮಾತ್ರ ಮತದಾನದ ಹಕ್ಕು ಹೊಂದಿರುತ್ತಾರೆ ರಾಜ್ಯಸಭೆಯ ನಾಮನಿರ್ದೇಶಿತ ಸದಸ್ಯರಿಗೂ ಈ ಚುನಾವಣೆಯಲ್ಲಿ ಮತ ಚಲಾಯಿಸುವ ಹಕ್ಕಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published On - 12:48 pm, Tue, 22 July 25