ಸರ್ಕಾರದ ಅತ್ಯುತ್ತಮ ಯೋಜನೆಗಳಿಗೆ ರಾಜಕೀಯ ಬಣ್ಣ: ಅಗ್ನಿಪಥ್ ವಿರೋಧಕ್ಕೆ ಪ್ರಧಾನಿ ಮೋದಿ ಬೇಸರ

ಉತ್ತಮ ಕೆಲಸಗಳು ಮತ್ತು ಉತ್ತಮ ಉದ್ದೇಶದಿಂದ ತೆಗೆದುಕೊಂಡ ಸಾಕಷ್ಟು ನಿರ್ಧಾರಗಳಿಗೆ ರಾಜಕೀಯ ಬಣ್ಣ ಬಳಿಯಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಷಾದಿಸಿದರು.

ಸರ್ಕಾರದ ಅತ್ಯುತ್ತಮ ಯೋಜನೆಗಳಿಗೆ ರಾಜಕೀಯ ಬಣ್ಣ: ಅಗ್ನಿಪಥ್ ವಿರೋಧಕ್ಕೆ ಪ್ರಧಾನಿ ಮೋದಿ ಬೇಸರ
ಪ್ರಧಾನಿ ನರೇಂದ್ರ ಮೋದಿ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jun 19, 2022 | 2:55 PM

ದೆಹಲಿ: ಕೇಂದ್ರ ಸರ್ಕಾರವು ಜಾರಿಗೊಳಿಸಿರುವ ಹಲವು ಅತ್ಯುತ್ತಮ ನಾಗರಿಕ ಕಲ್ಯಾಣ ಯೋಜನೆಗಳಿಗೆ ರಾಜಕೀಯ ಬಣ್ಣ ಬಳಿಯಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ವಿಷಾದಿಸಿದರು. ಪ್ರಗತಿ ಮೈದಾನ್ ಸಮಗ್ರ ಸಂಚಾರ ಯೋಜನೆಯ (Pragati Maidan Integrated Transit Corridor Project) ಮುಖ್ಯ ಸುರಂಗ ಉದ್ಘಾಟಿಸಿ ಅವರು ಮಾತನಾಡಿದರು. ಕಳೆದ ವರ್ಷ ರಕ್ಷಣಾ ಇಲಾಖೆಯ ಕಟ್ಟಡ ಸಮುಚ್ಚಯ (Defense Complex) ಉದ್ಘಾಟಿಸುವ ಅವಕಾಶ ನನಗೆ ಸಿಕ್ಕಿತ್ತು. ಈ ದೇಶದ ದುರಾದೃಷ್ಟ ನೋಡಿ, ಹಲವು ಉತ್ತಮ ಕೆಲಸಗಳು ಮತ್ತು ಉತ್ತಮ ಉದ್ದೇಶದಿಂದ ತೆಗೆದುಕೊಂಡ ಸಾಕಷ್ಟು ನಿರ್ಧಾರಗಳಿಗೆ ರಾಜಕೀಯ ಬಣ್ಣ ಬಳಿಯಲಾಗಿದೆ ಎಂದು ವಿಷಾದಿಸಿದರು.

ಯೋಜನೆಯು ಬಹು ಸಂಕೀರ್ಣವಾದ ಹಲವು ಘಟ್ಟಗಳನ್ನು ಒಳಗೊಂಡಿದ್ದ ಕಾರಣ ಹತ್ತಾರು ಸವಾಲುಗಳು ಎದುರಾಗಿದ್ದವು. ರಾಷ್ಟ್ರ ರಾಜಧಾನಿಯ ಅತ್ಯಂತ ಜನನಿಬಿಡ ಮತ್ತು ಸಂಚಾರ ದಟ್ಟಣೆಯಿರುವ ಪ್ರದೇಶದಲ್ಲಿ ಈ ಯೋಜನೆಯ ಕಾಮಗಾರಿ ನಡೆಯಿತು. ಕಾಮಗಾರಿ ತಡವಾಗಲು ಇದೂ ಒಂದು ಮುಖ್ಯಕಾರಣ ಎಂದು ಪ್ರಧಾನಿ ಅಭಿಪ್ರಾಯಪಟ್ಟರು. ಆದರೆ ಇದು ನಮ್ಮ ಹೊಸ ಭಾರತ, ಈಗ ಭಾರತವು ಹೊಸ ಪ್ರತಿಜ್ಞೆಗಳನ್ನು ಮಾಡಬಲ್ಲದು. ಅಂಥ ಪ್ರತಿಜ್ಞೆಗಳನ್ನು ಈಡೇರಿಸಲು ಎಲ್ಲ ಪ್ರಯತ್ನಗಳನ್ನು ಹಾಕಬಲ್ಲದು ಎಂದು ಅವರು ಉದ್ಘಾಟನಾ ಭಾಷಣದಲ್ಲಿ ಹೇಳಿದರು.

ಪ್ರಗತಿ ಮೈದಾನ್ ಇಂಟಿಗ್ರೇಟೆಡ್ ಟ್ರಾನ್ಸಿಟ್ ಕಾರಿಡಾರ್ ಯೋಜನೆಯು ಕನಿಷ್ಠ ಆರು ಬಾರಿ ಗಡುವುಗಳನ್ನು ಮೀರಿದೆ. ಯೋಜನೆಯ ಮುಖ್ಯ ಮಾರ್ಗಕ್ಕೆ ಸಂಪರ್ಕ ಕಲ್ಪಿಸುವ ಸುರಂಗ ಮಾರ್ಗದ ಕಾಮಗಾರಿಯು ಮುಕ್ತಾಯಗೊಳ್ಳುವುದು ತಡವಾದ ಕಾರಣ ಜನರು ಸುದೀರ್ಘ ಅವಧಿಗೆ ನಿರೀಕ್ಷಿಸುತ್ತಿರಬೇಕಾಯಿತು.

ವಿಶ್ಲೇಷಣೆ: ಅಗ್ನಿಪಥ್ ಪ್ರತಿಭಟನೆಗೆ ಮೋದಿ ವಿಷಾದ

ಸರ್ಕಾರದ ನಿರ್ಣಯಗಳಿಗೆ ರಾಜಕೀಯ ಬಣ್ಣ ಬಳಿಯುವ ಕುರಿತು ಪ್ರಧಾನಿ ನರೇಂದ್ರ ಮೋದಿ ಹೇಳಿದ ಮಾತುಗಳನ್ನು ಹಲವು ರೀತಿಯಲ್ಲಿ ವಿಶ್ಲೇಷಿಸಲಾಗುತ್ತಿದೆ. ಅಗ್ನಿಪಥ ಯೋಜನೆಯ ವಿರುದ್ಧ ದೇಶದ ಹಲವು ರಾಜ್ಯಗಳಲ್ಲಿ ವಿವಿಧೆಡೆ ಬೃಹತ್ ಪ್ರತಿಭಟನೆಗಳು ನಡೆದಿವೆ. ಹಲವೆಡೆ ಪ್ರತಿಭಟನೆಗಳು ಹಿಂಸಾತ್ಮಕ ಮಾರ್ಗಕ್ಕೆ ತಿರುಗಿವೆ. ರೈಲುಗಳಿಗೆ ಬೆಂಕಿ ಹಚ್ಚುವುದು, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡುವುದು, ರೈಲು ಮತ್ತು ರಸ್ತೆ ಮಾರ್ಗಗಳನ್ನು ಬಂದ್ ಮಾಡಲಾಗಿದೆ. ಈ ಯೋಜನೆಯ ನಿಜವಾದ ಆಶಯಗಳನ್ನು ಅರ್ಥ ಮಾಡಿಕೊಳ್ಳದೆ ಪ್ರತಿಭಟನೆ ನಡೆಸಲಾಗುತ್ತಿದೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗಿರುವ ಬಗ್ಗೆ ಮೋದಿ ಪರೋಕ್ಷವಾಗಿ ಬೇಸರ ವ್ಯಕ್ತಪಡಿಸಿದರು ಎಂದು ಹೇಳಲಾಗುತ್ತಿದೆ.

ಕಳೆದ ಕೆಲವು ವರ್ಷಗಳಲ್ಲಿ ಸರ್ಕಾರ ತೆಗೆದುಕೊಂಡ ಹಲವು ಪ್ರಮುಖ ನಿರ್ಣಯಗಳನ್ನು ಹೀಗೆಯೇ ವಿರೋಧಿಸಲಾಗಿದೆ. ಆದರೆ ಇದೀಗ ಕೇಂದ್ರ ಸರ್ಕಾರವು ಜಾರಿಗೆ ತರಲು ಉದ್ದೇಶಿಸಿರುವ ಅಗ್ನಿಪಥ ಯೋಜನೆಗೂ ಇದೇ ರೀತಿ ತಮಗೆ ಬೇಕಾದ ಬಣ್ಣ ಬಳಿಯಲಾಗಿದೆ ಎಂಬ ಮಾತುಗಳು ಬಿಜೆಪಿ ಆಂತರಿಕ ವಲಯದಲ್ಲಿ ಕೇಳಿಬರುತ್ತಿದೆ.

ಪೌರತ್ವ (ತಿದ್ದುಪಡಿ) ಕಾಯ್ದೆ 2019ಕ್ಕೂ ದೇಶಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ದೊಡ್ಡ ಮಟ್ಟದ ಹಿಂಸಾಚಾರ ನಡೆದಿತ್ತು. ಕೃಷಿ ತಿದ್ದುಪಡಿ ಕಾಯ್ದೆಗಳನ್ನು ನಿರಂತರ ಸತ್ಯಾಗ್ರಹಗಳ ಮೂಲಕ ರೈತರು ವಿರೋಧಿಸಿದ್ದರು. ಪಂಜಾಬ್, ಹರಿಯಾಣ ಮತ್ತು ಪಶ್ಚಿಮ ಉತ್ತರ ಪ್ರದೇಶಗಳಲ್ಲಿ ಪ್ರತಿಭಟನೆ ಹೆಚ್ಚಾದ ಕಾರಣ ಬೇರೆ ಮಾರ್ಗ ಕಾಣದೆ ಕೇಂದ್ರ ಸರ್ಕಾರವು ಈ ಕಾಯ್ದೆಗಳನ್ನು ಹಿಂಪಡೆಯಬೇಕಾಯಿತು ಮೋದಿ ಅವರು ಭಾಷಣದಲ್ಲಿದ್ದ ವಿಷಾದಕ್ಕೆ ಈ ಅಂಶಗಳು ಕಾರಣ ಎಂದು ಹೇಳಲಾಗಿದೆ.

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:54 pm, Sun, 19 June 22

ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ