AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳೆದ 3-4 ವರ್ಷಗಳಲ್ಲಿ 8 ಕೋಟಿ ಹೊಸ ಉದ್ಯೋಗ ಸೃಷ್ಟಿಯಾಗಿದೆ: ಪ್ರಧಾನಿ ಮೋದಿ

ಮುಂಬೈನಲ್ಲಿ ಕರಾವಳಿ ರಸ್ತೆ ಹಾಗೂ ಅಟಲ್ ಸೇತು ಕಾಮಗಾರಿ ಮುಗಿದಿದ್ದು, ಅಟಲ್ ಸೇತು ಬಗ್ಗೆ ಅಪಪ್ರಚಾರ ಮಾಡಿದ್ದು ನಿಮಗೆ ನೆನಪಿರಬಹುದು. ಅದನ್ನು ನಿಲ್ಲಿಸಲು ಎಲ್ಲ ಪ್ರಯತ್ನಗಳನ್ನು ಮಾಡಲಾಗಿತ್ತು, ಆದರೆ ಪ್ರತಿಯೊಬ್ಬರೂ ಅದರಿಂದ ಪ್ರಯೋಜನ ಪಡೆಯುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಕಳೆದ 3-4 ವರ್ಷಗಳಲ್ಲಿ 8 ಕೋಟಿ ಹೊಸ ಉದ್ಯೋಗ ಸೃಷ್ಟಿಯಾಗಿದೆ: ಪ್ರಧಾನಿ ಮೋದಿ
ಮುಂಬೈನಲ್ಲಿ ನರೇಂದ್ರ ಮೋದಿ
ರಶ್ಮಿ ಕಲ್ಲಕಟ್ಟ
|

Updated on: Jul 13, 2024 | 8:25 PM

Share

ದೆಹಲಿ ಜುಲೈ 13: ‘ಸುಳ್ಳು ನಿರೂಪಣೆಗಳನ್ನು ಹರಡುವವರು’ ಅಭಿವೃದ್ಧಿ, ಹೂಡಿಕೆ ಮತ್ತು ಉದ್ಯೋಗದ ಶತ್ರುಗಳು ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಶನಿವಾರ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇತ್ತೀಚೆಗೆ ಆರ್​​ಬಿಐ (RBI) ಉದ್ಯೋಗಗಳಿಗೆ ಸಂಬಂಧಿಸಿದಂತೆ ವರದಿಯನ್ನು ಬಿಡುಗಡೆ ಮಾಡಿದೆ. ವರದಿಯ ಪ್ರಕಾರ ಕಳೆದ 3-4 ವರ್ಷಗಳಲ್ಲಿ ದೇಶದಲ್ಲಿ ಸುಮಾರು 8 ಕೋಟಿ ಹೊಸ ಉದ್ಯೋಗಗಳು ಸೃಷ್ಟಿಯಾಗಿವೆ. ಈ ಅಂಕಿಅಂಶಗಳು ಸುಳ್ಳು ನಿರೂಪಣೆಗಳನ್ನು ಹರಡುವವರ ಬಾಯ್ಮಚ್ಚಿಸಿವೆ. ಈ ವ್ಯಕ್ತಿಗಳು ಹೂಡಿಕೆ, ಮೂಲಸೌಕರ್ಯ ಮತ್ತು ದೇಶದ ಅಭಿವೃದ್ಧಿಯನ್ನು ವಿರೋಧಿಸುತ್ತಾರೆ. ಈಗ ಅವರ ಬುದ್ಧಿ ಬಯಲಾಗಿದೆ. ದೇಶದ ನಾಗರಿಕರು ಅವರ ಪಿತೂರಿಗಳನ್ನು ತಿರಸ್ಕರಿಸುತ್ತಿದ್ದಾರೆ ಎಂದು ಮುಂಬೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪ್ರಧಾನಿ ಹೇಳಿದ್ದಾರೆ.

ಇಂದು (ಶನಿವಾರ ) ಮುಂಬೈಗೆ ಭೇಟಿ ನೀಡಿರುವ ಪ್ರಧಾವಿ ₹ 29,400 ಕೋಟಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದರು. ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ಮುಂದುವರಿಸಿದ ಪ್ರಧಾನಿ, ಅಟಲ್ ಸೇತು ಸೇತುವೆ ಬಿರುಕು ಬಿಟ್ಟಿದೆ ಎಂಬ ಕಾಂಗ್ರೆಸ್ ಆರೋಪಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

“ನಮ್ಮ ಉದ್ದೇಶ ಮುಂಬೈನಲ್ಲಿ ಜೀವನದ ಗುಣಮಟ್ಟವನ್ನು ಉತ್ತಮಗೊಳಿಸುವುದು. ಆದ್ದರಿಂದ, ಮುಂಬೈ ಸುತ್ತಮುತ್ತಲಿನ ಸಂಪರ್ಕವನ್ನು ಸುಧಾರಿಸಲಾಗುತ್ತಿದೆ. ಮುಂಬೈನಲ್ಲಿ ಕರಾವಳಿ ರಸ್ತೆ ಹಾಗೂ ಅಟಲ್ ಸೇತು ಕಾಮಗಾರಿ ಮುಗಿದಿದ್ದು, ಅಟಲ್ ಸೇತು ಬಗ್ಗೆ ಅಪಪ್ರಚಾರ ಮಾಡಿದ್ದು ನಿಮಗೆ ನೆನಪಿರಬಹುದು. ಅದನ್ನು ನಿಲ್ಲಿಸಲು ಎಲ್ಲ ಪ್ರಯತ್ನಗಳನ್ನು ಮಾಡಲಾಗಿತ್ತು, ಆದರೆ ಪ್ರತಿಯೊಬ್ಬರೂ ಅದರಿಂದ ಪ್ರಯೋಜನ ಪಡೆಯುತ್ತಿದ್ದಾರೆ ಎಂದು ಪ್ರಧಾನಿ ಹೇಳಿದ್ದಾರೆ. ಮೋದಿಯವರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವಿಸ್ ಮತ್ತು ಅಜಿತ್ ಪವಾರ್ ಉಪಸ್ಥಿತರಿದ್ದರು.

“ಪ್ರತಿದಿನ ಸುಮಾರು 20,000 ವಾಹನಗಳು ಇದನ್ನು ಬಳಸುತ್ತಿವೆ ಎಂದು ನನಗೆ ಹೇಳಲಾಗಿದೆ. ಅಲ್ಲದೆ, ದಿನಕ್ಕೆ ಸುಮಾರು ₹ 20,000-25000 ಲಕ್ಷ ಮೌಲ್ಯದ ಇಂಧನ ಉಳಿತಾಯವಾಗುತ್ತಿದೆ ಎಂದಿದ್ದಾರೆ ಮೋದಿ

ಮುಂಬೈಯನ್ನು ಜಾಗತಿಕ ಫಿನ್‌ಟೆಕ್ ರಾಜಧಾನಿಯನ್ನಾಗಿ ಮಾಡಲು ಬಯಸುತ್ತೇವೆ: ಪ್ರಧಾನಿ

ಮುಂಬೈ ನಗರವನ್ನು ಜಾಗತಿಕ ಫಿನ್‌ಟೆಕ್ ರಾಜಧಾನಿಯನ್ನಾಗಿ ಮಾಡಲು ಬಯಸುವುದಾಗಿ ಪ್ರಧಾನಿ ಮೋದಿ ಹೇಳಿದ್ದಾರೆ. “ಮಹಾರಾಷ್ಟ್ರವು ಭಾರತವನ್ನು ‘ವಿಕಸಿತ್’ (ಸ್ವಾವಲಂಬಿ) ಮಾಡುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುವ ರಾಜ್ಯವಾಗಿದೆ. ಮಹಾರಾಷ್ಟ್ರವು ಕೈಗಾರಿಕೆ, ಕೃಷಿ ಮತ್ತು ಹಣಕಾಸು ಕ್ಷೇತ್ರದ ಶಕ್ತಿಯನ್ನು ಹೊಂದಿದೆ ಮತ್ತು ಇದು ಮುಂಬೈ ಭಾರತದ ಆರ್ಥಿಕ ಕೇಂದ್ರ ಆಗಲು ಸಹಾಯ ಮಾಡಿದೆ. ಈಗ, ಮಹಾರಾಷ್ಟ್ರವನ್ನು ವಿಶ್ವದ ದೊಡ್ಡ ಆರ್ಥಿಕ ಶಕ್ತಿ ಕೇಂದ್ರವನ್ನಾಗಿ ಮಾಡುವುದು ನನ್ನ ಗುರಿಯಾಗಿದೆ ಎಂದು ಮೋದಿ ಹೇಳಿದ್ದಾರೆ.

ಇದನ್ನೂ ಓದಿ: ವಿಧಾನಸಭೆ ಉಪಚುನಾವಣೆಯಲ್ಲಿ ಇಂಡಿಯಾ ಬಣ ಮೇಲುಗೈ; ಮುಂಬರುವ ಚುನಾವಣೆಗಳಲ್ಲಿ ಬಿಜೆಪಿ ಸೋಲಲಿದೆ: ಕಾಂಗ್ರೆಸ್

ಸ್ಥಿರತೆ ಮತ್ತು ಬಾಳಿಕೆಯದ್ದು ಎನ್‌ಡಿಎ ಸರ್ಕಾರ ಎಂದು ಜನರಿಗೆ ತಿಳಿದಿದೆ. ಮೂರನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ ನಂತರ, ಎನ್‌ಡಿಎ ಸರ್ಕಾರವು ಮೂರು ಪಟ್ಟು ವೇಗದಲ್ಲಿ ಕೆಲಸ ಮಾಡುತ್ತದೆ ಎಂದು ನಾನು ಹೇಳಿದ್ದೆ, ”ಎಂದು ಮೋದಿ ಅವರು ಕಳೆದ ವಾರ ರಷ್ಯಾಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಸ್ಕೋದಲ್ಲಿ ಅನಿವಾಸಿ ಭಾರತೀಯರನ್ನುದ್ದೇಶಿಸಿ ಮಾಡಿದ ಭಾಷಣವನ್ನು ನೆನಪಿಸಿಕೊಂಡರು

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ