ಈ ಉದ್ಯೋಗ ಮೇಳವು ಎನ್‌ಡಿಎ ಹಾಗೂ ಬಿಜೆಪಿ ಸರ್ಕಾರದ ಹೊಸ ಗುರುತು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರೋಜ್ಗಾರ್ ಮೇಳದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 70 ಸಾವಿರ ಯುವಕರಿಗೆ ಉದ್ಯೋಗ ನೇಮಕಾತಿ ಪತ್ರ ನೀಡಿದ್ದಾರೆ. ಈ ಯುವಕರಿಗೆ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಉದ್ಯೋಗ ನೀಡಲಾಗಿದೆ. ಈ ಸಂದರ್ಭದಲ್ಲಿ, ಈ ಉದ್ಯೋಗ ಮೇಳಗಳು ಎನ್‌ಡಿಎ ಮತ್ತು ಬಿಜೆಪಿ ಸರ್ಕಾರದ ಹೊಸ ಗುರುತಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಮುಂದಿನ 25 ವರ್ಷಗಳಲ್ಲಿ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಗುರಿಯನ್ನು ಹೊಂದಿದ್ದೇವೆ ಎಂದರು.
ಮುದ್ರಾ ಯೋಜನೆಯು ಕೋಟ್ಯಂತರ ಯುವಕರಿಗೆ ಸಹಾಯ ಮಾಡಿದೆ, ಸ್ಟಾರ್ಟ್ ಅಪ್ ಇಂಡಿಯಾ ಮತ್ತು ಸ್ಟ್ಯಾಂಡ್ ಅಪ್ ಇಂಡಿಯಾದಂತಹ ಅಭಿಯಾನಗಳು ಯುವಕರ ಸಾಮರ್ಥ್ಯವನ್ನು ಮತ್ತಷ್ಟು ಹೆಚ್ಚಿಸಿವೆ. ಸರ್ಕಾರದಿಂದ ನೆರವು ಪಡೆದ ಈ ಯುವಕರು ಈಗ ತಾವೇ ಅನೇಕ ಯುವಕರಿಗೆ ಉದ್ಯೋಗ ನೀಡುತ್ತಿದ್ದಾರೆ.
ಮತ್ತಷ್ಟು ಓದಿ:Rozgar Mela: ಉದ್ಯೋಗ ಮೇಳದಲ್ಲಿ 70 ಸಾವಿರ ಯುವಕರಿಗೆ ನೇಮಕಾತಿ ಪತ್ರ ವಿತರಿಸಲಿರುವ ಪ್ರಧಾನಿ ಮೋದಿ
ರಾಜಕೀಯ ಭ್ರಷ್ಟಾಚಾರವು ಹಳೆಯ ಸರ್ಕಾರಗಳ ಗುರುತಾಗಿತ್ತು. ಮುಂದಿನ 25 ವರ್ಷಗಳಲ್ಲಿ ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಬೇಕಿದೆ. ಇಡೀ ಜಗತ್ತು ಭಾರತವನ್ನು ನಂಬುತ್ತಿದೆ. ಭಾರತವು ತನ್ನ ಆರ್ಥಿಕತೆಯನ್ನು ಎಲ್ಲಾ ಪ್ರತಿಕೂಲ ಪರಿಸ್ಥಿತಿಗಳಲ್ಲಿಯೂ ಮುಂದಕ್ಕೆ ಕೊಂಡೊಯ್ಯುತ್ತಿದೆ.
ವಿರೋಧ ಪಕ್ಷಗಳನ್ನು ಗುರಿಯಾಗಿಸಿದ ಪ್ರಧಾನಿ, ದೇಶದಲ್ಲಿ ನಡೆಯುತ್ತಿರುವ ಈ ಉದ್ಯೋಗ ಅಭಿಯಾನವು ಪಾರದರ್ಶಕತೆ ಮತ್ತು ಉತ್ತಮ ಆಡಳಿತದ ಪುರಾವೆಯಾಗಿದೆ ಎಂದು ಹೇಳಿದರು. ನಮ್ಮ ದೇಶದಲ್ಲಿ ಕುಟುಂಬ ಆಧಾರಿತ ರಾಜಕೀಯ ಪಕ್ಷಗಳು ಪ್ರತಿಯೊಂದು ವ್ಯವಸ್ಥೆಯಲ್ಲಿ ಸ್ವಜನಪಕ್ಷಪಾತವನ್ನು ಹೇಗೆ ಉತ್ತೇಜಿಸಿವೆ ಎಂಬುದನ್ನು ನಾವು ನೋಡಿದ್ದೇವೆ.
ಸರ್ಕಾರಿ ನೌಕರಿ ವಿಷಯ ಬಂದಾಗ ಸ್ವಜನಪಕ್ಷಪಾತ, ಭ್ರಷ್ಟಾಚಾರದಲ್ಲಿ ತೊಡಗುತ್ತಿದ್ದರು. ಈ ಪಕ್ಷಗಳು ದೇಶದ ಕೋಟಿ ಕೋಟಿ ಜನರಿಗೆ ದ್ರೋಹ ಬಗೆದಿವೆ. ನಮ್ಮ ಸರ್ಕಾರವು ಪಾರದರ್ಶಕತೆಯನ್ನು ತಂದಿದೆ ಮತ್ತು ನಾವು ಸ್ವಜನಪಕ್ಷಪಾತವನ್ನು ಕೊನೆಗೊಳಿಸಿದ್ದೇವೆ ಎಂದಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ