Narendra Modi: ಎಲ್ಲಾ ಚುನಾವಣೆಗಳಲ್ಲೂ ಗೆಲ್ಲುತ್ತಾ ಹೋಗಲು ಬಿಜೆಪಿ ಯಂತ್ರವಲ್ಲ – ಪ್ರಧಾನಿ ನರೇಂದ್ರ ಮೋದಿ

BJP 41th Samsthapana Divas: ನಮ್ಮ ಪಕ್ಷ ಸಣ್ಣ ರೈತರ ಪರ ಸಂಪೂರ್ಣ ಒಲವನ್ನು ಹೊಂದಿದೆ. ರೈತರ ಆದಾಯ ದ್ವಿಗುಣಗೊಳಿಸುವ ಯೋಜನೆಯನ್ನು ಕೇಂದ್ರ ಸರ್ಕಾರ ಹಮ್ಮಿಕೊಂಡಿದೆ. ದೇಶದ ಪ್ರತಿಯೊಬ್ಬ ನಾಗರೀಕರ ಅಭಿವೃದ್ಧಿಗೂ ಸರ್ಕಾರ ಮತ್ತು ಬಿಜೆಪಿ ಬದ್ಧವಾಗಿದೆ ಎಂದರು. 

Narendra Modi: ಎಲ್ಲಾ ಚುನಾವಣೆಗಳಲ್ಲೂ ಗೆಲ್ಲುತ್ತಾ ಹೋಗಲು ಬಿಜೆಪಿ ಯಂತ್ರವಲ್ಲ - ಪ್ರಧಾನಿ ನರೇಂದ್ರ ಮೋದಿ
ಪರೀಕ್ಷೆ ಬರೆಯುವ ವಿದ್ಯಾರ್ಥಿಗಳನ್ನು ಎಕ್ಸಾಮ್ ವಾರಿಯರ್​ಗಳೆಂದು ವ್ಯಾಖ್ಯಾನಿಸಿದ ಪ್ರಧಾನಿ ಮೋದಿ ಎಲ್ಲಾ ಪರೀಕ್ಷಾರ್ಥಿಗಳಿಗೂ ಶುಭಕೋರಿದರು
Follow us
guruganesh bhat
| Updated By: Skanda

Updated on: Apr 06, 2021 | 12:34 PM

ದೆಹಲಿ: ಎಲ್ಲಾ ಚುನಾವಣೆಗಳಲ್ಲೂ ಗೆಲ್ಲುತ್ತಾ ಹೋಗಲು ಬಿಜೆಪಿ ಯಂತ್ರವಲ್ಲ. ದೇಶದ ಜನರು ನಮ್ಮನ್ನು ಆಯ್ಕೆ ಮಾಡಿದ್ದಕ್ಕೆ ಹೆಮ್ಮೆಯಿದೆ. ಭಾರತೀಯ ಜನ ಸಂಘ ಮತ್ತು ಭಾರತೀಯ ಜನತಾ ಪಕ್ಷವನ್ನು ಕಟ್ಟಲು ಹಗಲಿರುಳು ದುಡಿದ ಪ್ರತಿಯೊಬ್ಬ ಕಾರ್ಯಕರ್ತರಿಗೂ ಗೌರವ ಸಮರ್ಪಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು. ಪಕ್ಷದ ಕಾರ್ಯಕರ್ತರ ಶ್ರಮದಿಂದಲೇ ಬಿಜೆಪಿ ಇಂದು ವಿಶ್ವದ ಅತಿ ದೊಡ್ಡ ರಾಜಕೀಯ ಪಕ್ಷವಾಗಿ ಹೊರಹೊಮ್ಮಿದೆ. ಪಕ್ಷದ ಬಲವನ್ನು ದೇಶದ ಉನ್ನತಿಗೆ ಬಳಸಿಕೊಳ್ಳುತ್ತೇವೆ ಎಂದು ನರೇಂದ್ರ ಮೋದಿ ತಿಳಿಸಿದರು. ಅವರು ಭಾರತೀಯ ಜನ ಸಂಘದ 41ನೇ ಸಂಸ್ಥಾಪನಾ ದಿನದ ನಿಮಿತ್ತ ವರ್ಚುವಲ್ ಕಾನ್ಫರೆನ್ಸ್​ನಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

ವ್ಯಕ್ತಿಗಿಂತ ಪಕ್ಷ, ಪಕ್ಷಕ್ಕಿಂತ ದೇಶ ದೊಡ್ಡದು ಎಂದ ಸಂಪ್ರದಾಯವನ್ನು ಬಿಜೆಪಿ ಅನೂಚಾನವಾಗಿ ಪಾಲಿಸುತ್ತಾ ಬಂದಿದೆ. ಸೇವೆಯ ಮೂಲಕ ಸಂಘಟನೆ ಎಂಬ ತತ್ವವನ್ನು ಪಕ್ಷ ನಂಬಿ ನಡೆಯುತ್ತಿದೆ. ಪ್ರತಿ ಗ್ರಾಮ ಗ್ರಾಮಗಳಲ್ಲೂ ಪಕ್ಷದ ಕಾರ್ಯಕರ್ತರು ಮಾಡಿದ ಸೇವೆಯ ಪ್ರತಿಫಲದಿಂದಲೇ ಇಂದು ಅಧಿಕಾರಕ್ಕೆ ಏರಲು ಸಾಧ್ಯವಾಗಿದೆ. ಈ ಸಂಕಟದ ಕಾಲದಲ್ಲಿ ಹೊಸ ಭಾರತದ ನಿರ್ಮಾಣ ಮಾಡಲು ಪಕ್ಷದ ಕಾರ್ಯಕರ್ತರು ಶ್ರಮಿಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ವಿವರಿಸಿದರು.  ಪಕ್ಷದ ಕಾರ್ಯಕರ್ತರ ಶ್ರಮದಿಂದಲೇ ಬಿಜೆಪಿ ಇಂದು ವಿಶ್ವದ ಅತಿ ದೊಡ್ಡ ರಾಜಕೀಯ ಪಕ್ಷವಾಗಿ ಹೊರಹೊಮ್ಮಿದೆ ಎಂದು ಹೆಮ್ಮೆ ವ್ಯಕ್ತಪಡಿಸಿದರು.

ಕೊವಿಡ್​ನಂತಹ ಸಂದಿಗ್ಧ ಪರಿಸ್ಥಿತಿಯೇ ದೇಶವನ್ನು ಇನ್ನಷ್ಟು ಉನ್ನತಿಗೆ ಏರಿಸಲು ಸಿಕ್ಕಿರುವ ಅವಕಾಶವೆಂದೇ ಅರಿತುಕೊಳ್ಳಬೇಕು. ಪಕ್ಷದ ಕಾರ್ಯಕರ್ತರು ದೇಶದ ಮೂಲೆಮೂಲೆಯನ್ನು ದಲಿತರು, ಹಿಂದುಳಿದ ವರ್ಗದವರ ಕಲ್ಯಾಣಕ್ಕಾಗಿ  ದುಡಿಯುತ್ತಿದ್ದಾರೆ. ನಮ್ಮ ಪಕ್ಷ ಸಣ್ಣ ರೈತರ ಪರ ಸಂಪೂರ್ಣ ಒಲವನ್ನು ಹೊಂದಿದೆ. ರೈತರ ಆದಾಯ ದ್ವಿಗುಣಗೊಳಿಸುವ ಯೋಜನೆಯನ್ನು ಕೇಂದ್ರ ಸರ್ಕಾರ ಹಮ್ಮಿಕೊಂಡಿದೆ. ದೇಶದ ಪ್ರತಿಯೊಬ್ಬ ನಾಗರೀಕರ ಅಭಿವೃದ್ಧಿಗೂ ಸರ್ಕಾರ ಮತ್ತು ಬಿಜೆಪಿ ಬದ್ಧವಾಗಿದೆ. ನಾವು ಯಾವಾಗಲೂ ಜನರೊಂದಿಗೆ ಇರುತ್ತೇವೆ, ಜನರಿಗಾಗಿ ಗೆಲ್ಲುತ್ತಲೇ ಇರುತ್ತೇವೆ. ಜನರು ನಮ್ಮನ್ನು ಗೆಲ್ಲಿಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ವಿವರಿಸಿದರು.

ನಮ್ಮ ದೇಶದಲ್ಲಿ ಶೇ 80ರಷ್ಟು ಸಣ್ಣ ರೈತರಿದ್ದು, ಹಿಂದಿನ ಸರ್ಕಾರಗಳು ಅವರ ಸಮಸ್ಯೆಗೆ ಸ್ಪಂದಿಸುವ ಕೆಲಸ ಮಾಡಲಿಲ್ಲ. ನೂತನ ಕೃಷಿ ಕಾಯ್ದೆ, ಕಿಸಾನ್ ಸಮ್ಮಾನ್​ನಂತಹ ಯೋಜನೆಗಳ ಮೂಲಕ ರೈತ ಸಮುದಾಯದ ಅಭಿವೃದ್ಧಿ ಮಾಡಲಾಗುತ್ತಿದೆ. ಪ್ರತಿ ರೈತರ ಹೊಲಗಳಿಗೆ ನೀರಾವರಿ, ಕೃಷಿಕರ ಕಂಪನಿಗಳ ಸ್ಥಾಪನೆ ಮಾಡುವ ಮೂಲಕ ಸಣ್ಣ ರೈತರ ಉನ್ನತಿಗೆ ಯೋಜನೆ ರೂಪಿಸಲಾಗುತ್ತಿದೆ. ಮಹಿಳೆಯರಿಗೆ ಮನೆ ಮತ್ತು ಸಮಾಜದಲ್ಲಿ ಎಲ್ಲಾ ರೀತಿಯ ಗೌರವ ದೊರೆಯುವಂತೆ ಮಾಡಲಾಗಿದೆ. ನಮ್ಮ ಸರ್ಕಾರದ ಕಾರ್ಯಕ್ರಮಗಳು ಕಟ್ಟಕಡೆಯ ವ್ಯಕ್ತಿಗೂ ತಲುಪುತ್ತಿವೆ. ದೇಶದಲ್ಲಿ ಬಿಜೆಪಿ ಚುನಾವಣೆಯಲ್ಲಿ ಗೆದ್ದರೆ ವೋಟಿಂಗ್ ಮೆಷಿನ್ ಮೇಲೆ ಆರೋಪ ಮಾಡಲಾಗುತ್ತದೆ. ಬೇರೆಯವರು ಚುನಾವಣೆ ಗೆದ್ದರೆ ಆ ಪಕ್ಷಗಳ ನಾಯಕರ ಸಾಧನೆ ಹೊಗಳಲಾಗುತ್ತದೆ. ಈ ರೀತಿಯ ಮನಸ್ಥಿತಿ ದೇಶದಲ್ಲಿ ಬೆಳೆಯುತ್ತಿದೆ ಎಂದು ಅವರು ವಿವರಿಸಿದರು.

ಇದನ್ನೂ ಓದಿ: Covid-19 India Update: ಭಾರತದಲ್ಲಿ ನಿಯಂತ್ರಣಕ್ಕೆ ಬಾರದ ಕೊರೊನಾ ಸೋಂಕು, ಗುರುವಾರ ಮುಖ್ಯಮಂತ್ರಿಗಳೊಂದಿಗೆ ನರೇಂದ್ರ ಮೋದಿ ಸಭೆ

ಕೊರೊನಾ ವಿರುದ್ಧ ಸೂಕ್ತ ನಡವಳಿಕೆಯ ಬಗ್ಗೆ ಏಪ್ರಿಲ್ 6ರಿಂದ 21ರವರೆಗೆ ಜಾಗೃತಿ ಅಭಿಯಾನ: ಪ್ರಧಾನಿ ನರೇಂದ್ರ ಮೋದಿ

(PM Narendra Modi says will use the power of BJP to Indias development at 41th Sansthapana Diwas)

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ