AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸತ್ ಕಲಾಪಕ್ಕೆ ಅಡ್ಡಿ; ಹಿರಿಯ ಸಚಿವರ ಜತೆ ಲೋಕಸಭಾ ಸ್ಪೀಕರ್​​​ನ್ನು ಭೇಟಿ ಮಾಡಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಮೇಲಿನ ಟೀಕೆಗಳನ್ನು ಒಳಗೊಂಡ ಮಾನನಷ್ಟ ಮೊಕದ್ದಮೆಯಲ್ಲಿ ಇಂದು ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ರಾಹುಲ್ ಗಾಂಧಿಯ ಅನರ್ಹತೆ ಕೂಡ ಚರ್ಚೆಯಾಗಿರುವ ಸಾಧ್ಯತೆ ಇದೆ

ಸಂಸತ್ ಕಲಾಪಕ್ಕೆ ಅಡ್ಡಿ; ಹಿರಿಯ ಸಚಿವರ ಜತೆ ಲೋಕಸಭಾ ಸ್ಪೀಕರ್​​​ನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
ಸಂಸತ್
ರಶ್ಮಿ ಕಲ್ಲಕಟ್ಟ
|

Updated on: Mar 23, 2023 | 7:57 PM

Share

ದೆಹಲಿ: ಬಜೆಟ್ ಅಧಿವೇಶನದ ದ್ವಿತೀಯಾರ್ಧದಲ್ಲಿ ಕಲಾಪವನ್ನು ಸ್ಥಗಿತಗೊಳಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಹಿರಿಯ ಸಚಿವರು ಇಂದು ಸಂಜೆ ಲೋಕಸಭಾ(Lok Sabha) ಸ್ಪೀಕರ್ ಓಂ ಬಿರ್ಲಾ (Om Birla)ಅವರೊಂದಿಗೆ ಸಮಾಲೋಚನೆ ನಡೆಸಿದ್ದಾರೆ ಎಂದು ಎನ್​​ಡಿಟಿವಿ ವರದಿ ಮಾಡಿದೆ. ಹಿರಿಯ ಸಚಿವರಾದ ರಾಜನಾಥ್ ಸಿಂಗ್, ಪ್ರಹ್ಲಾದ್ ಜೋಶಿ ಕಿರಣ್ ರಿಜಿಜು ಮುಂತಾದವರು ಜೊತೆಗಿದ್ದರು. ಅಜೆಂಡಾ ತಿಳಿದಿಲ್ಲ,  ಇದು ಕಲಾಪ ಸ್ಥಗಿತದ ಬಗ್ಗೆ ಆಗಿರಬಹುದು ಎಂದು ಹೇಳಲಾಗಿದೆ. ಬಜೆಟ್ ಮೇಲಿನ ಹಣಕಾಸು ಮಸೂದೆಯ ನಂತರ, ಎರಡನೇ ಮಸೂದೆಯನ್ನು ಇಂದು (ಗುರುವಾರ) ಅಂಗೀಕರಿಸಲಾಯಿತು. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಮೇಲಿನ ಟೀಕೆಗಳನ್ನು ಒಳಗೊಂಡ ಮಾನನಷ್ಟ ಮೊಕದ್ದಮೆಯಲ್ಲಿ ಇಂದು ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ರಾಹುಲ್ ಗಾಂಧಿಯ ಅನರ್ಹತೆ ಕೂಡ ಚರ್ಚೆಯಾಗಿರುವ ಸಾಧ್ಯತೆ ಇದೆ. ರಾಹುಲ್ ಗಾಂಧಿ ಅವರ ಅನರ್ಹತೆಗೆ ಬಿಜೆಪಿ ತೀವ್ರವಾಗಿ ಬ್ಯಾಟಿಂಗ್ ಮಾಡುತ್ತಿದ್ದು ನಿರ್ಧಾರವು ಪ್ರಸ್ತುತ ಸ್ಪೀಕರ್ ಕೈಯಲ್ಲಿದೆ.

ಕಳೆದ ವಾರದಿಂದ ಅದಾನಿ-ಹಿಂಡೆನ್‌ಬರ್ಗ್ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ಸಂಸತ್ತಿನಲ್ಲಿ ವಾಗ್ದಾಳಿ ನಡೆಸುತ್ತಿವೆ. ಇತ್ತ ಕೇಂಬ್ರಿಡ್ಜ್‌ ವಿಶ್ವವಿದ್ಯಾಲಯದಲ್ಲಿ ಭಾರತೀಯ ಪ್ರಜಾಪ್ರಭುತ್ವದ ಕುರಿತು ರಾಹುಲ್ ಗಾಂಧಿ ನೀಡಿದ ಹೇಳಿಕೆಗೆ ಅವರು ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಪಟ್ಟು ಹಿಡಿದಿದೆ.

ರಾಹುಲ್ ಗಾಂಧಿಯವರ ಅಪರಾಧ ನಿರ್ಣಯವು ವಿಷಯಗಳನ್ನು ಇನ್ನಷ್ಟು ಹದಗೆಡಿಸುತ್ತದೆ ಎಂದು ನಿರೀಕ್ಷಿಸಲಾಗಿದೆ.

ಇದನ್ನೂ ಓದಿ: ಬ್ರಿಟಿಷ್ ಆಳ್ವಿಕೆಯಲ್ಲಿ ಕೂಡಾ ಪೋಸ್ಟರ್‌ಗಳನ್ನು ಹಾಕಿದ್ದಕ್ಕಾಗಿ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ: ಕೇಜ್ರಿವಾಲ್

ಇಂದು ಬೆಳಿಗ್ಗೆ ಸದನದಲ್ಲಿ ಕಾಂಗ್ರೆಸ್ ಸದಸ್ಯರು ಘೋಷಣೆಗಳನ್ನು ಕೂಗಿ ಹಿಂಡೆನ್ಬರ್ಗ್-ಅದಾನಿ ಸಮಸ್ಯೆಯನ್ನು ತನಿಖೆ ಮಾಡಲು ಜಂಟಿ ಸಂಸದೀಯ ಸಮಿತಿಗೆ ಒತ್ತಾಯಿಸುವ ಫಲಕಗಳನ್ನು ಪ್ರದರ್ಶಿಸಿದರು. ಹೀಗಾಗಿ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಬೇಕಾಯಿತು. ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್ಖರ್ ಮತ್ತು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಸಮಸ್ಯೆಯನ್ನು ಪರಿಹರಿಸಲು ಪದೇ ಪದೇ ಸರ್ವಪಕ್ಷ ಸಭೆಗಳನ್ನು ನಡೆಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ