ಸಂಸತ್ ಕಲಾಪಕ್ಕೆ ಅಡ್ಡಿ; ಹಿರಿಯ ಸಚಿವರ ಜತೆ ಲೋಕಸಭಾ ಸ್ಪೀಕರ್​​​ನ್ನು ಭೇಟಿ ಮಾಡಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಮೇಲಿನ ಟೀಕೆಗಳನ್ನು ಒಳಗೊಂಡ ಮಾನನಷ್ಟ ಮೊಕದ್ದಮೆಯಲ್ಲಿ ಇಂದು ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ರಾಹುಲ್ ಗಾಂಧಿಯ ಅನರ್ಹತೆ ಕೂಡ ಚರ್ಚೆಯಾಗಿರುವ ಸಾಧ್ಯತೆ ಇದೆ

ಸಂಸತ್ ಕಲಾಪಕ್ಕೆ ಅಡ್ಡಿ; ಹಿರಿಯ ಸಚಿವರ ಜತೆ ಲೋಕಸಭಾ ಸ್ಪೀಕರ್​​​ನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
ಸಂಸತ್
ರಶ್ಮಿ ಕಲ್ಲಕಟ್ಟ

Updated on: Mar 23, 2023 | 7:57 PM

ಮುಖ್ಯಾಂಶಗಳು

  • ಬಜೆಟ್ ಮೇಲಿನ ಹಣಕಾಸು ಮಸೂದೆಯ ನಂತರ, ಎರಡನೇ ಮಸೂದೆಯನ್ನು ಗುರುವಾರ ಅಂಗೀಕರಿಸಲಾಯಿತು
  • ರಾಹುಲ್ ಗಾಂಧಿ ಅವರ ಅನರ್ಹತೆಗೆ ಬಿಜೆಪಿ ತೀವ್ರವಾಗಿ ಬ್ಯಾಟಿಂಗ್ ಮಾಡುತ್ತಿದ್ದು ನಿರ್ಧಾರವು ಪ್ರಸ್ತುತ ಸ್ಪೀಕರ್ ಕೈಯಲ್ಲಿದೆ.
  • ಕಳೆದ ವಾರದಿಂದ ಅದಾನಿ-ಹಿಂಡೆನ್‌ಬರ್ಗ್ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ಸಂಸತ್ತಿನಲ್ಲಿ ವಾಗ್ದಾಳಿ ನಡೆಸುತ್ತಿ

ದೆಹಲಿ: ಬಜೆಟ್ ಅಧಿವೇಶನದ ದ್ವಿತೀಯಾರ್ಧದಲ್ಲಿ ಕಲಾಪವನ್ನು ಸ್ಥಗಿತಗೊಳಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಹಿರಿಯ ಸಚಿವರು ಇಂದು ಸಂಜೆ ಲೋಕಸಭಾ(Lok Sabha) ಸ್ಪೀಕರ್ ಓಂ ಬಿರ್ಲಾ (Om Birla)ಅವರೊಂದಿಗೆ ಸಮಾಲೋಚನೆ ನಡೆಸಿದ್ದಾರೆ ಎಂದು ಎನ್​​ಡಿಟಿವಿ ವರದಿ ಮಾಡಿದೆ. ಹಿರಿಯ ಸಚಿವರಾದ ರಾಜನಾಥ್ ಸಿಂಗ್, ಪ್ರಹ್ಲಾದ್ ಜೋಶಿ ಕಿರಣ್ ರಿಜಿಜು ಮುಂತಾದವರು ಜೊತೆಗಿದ್ದರು. ಅಜೆಂಡಾ ತಿಳಿದಿಲ್ಲ,  ಇದು ಕಲಾಪ ಸ್ಥಗಿತದ ಬಗ್ಗೆ ಆಗಿರಬಹುದು ಎಂದು ಹೇಳಲಾಗಿದೆ. ಬಜೆಟ್ ಮೇಲಿನ ಹಣಕಾಸು ಮಸೂದೆಯ ನಂತರ, ಎರಡನೇ ಮಸೂದೆಯನ್ನು ಇಂದು (ಗುರುವಾರ) ಅಂಗೀಕರಿಸಲಾಯಿತು. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಮೇಲಿನ ಟೀಕೆಗಳನ್ನು ಒಳಗೊಂಡ ಮಾನನಷ್ಟ ಮೊಕದ್ದಮೆಯಲ್ಲಿ ಇಂದು ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ರಾಹುಲ್ ಗಾಂಧಿಯ ಅನರ್ಹತೆ ಕೂಡ ಚರ್ಚೆಯಾಗಿರುವ ಸಾಧ್ಯತೆ ಇದೆ. ರಾಹುಲ್ ಗಾಂಧಿ ಅವರ ಅನರ್ಹತೆಗೆ ಬಿಜೆಪಿ ತೀವ್ರವಾಗಿ ಬ್ಯಾಟಿಂಗ್ ಮಾಡುತ್ತಿದ್ದು ನಿರ್ಧಾರವು ಪ್ರಸ್ತುತ ಸ್ಪೀಕರ್ ಕೈಯಲ್ಲಿದೆ.

ಕಳೆದ ವಾರದಿಂದ ಅದಾನಿ-ಹಿಂಡೆನ್‌ಬರ್ಗ್ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ಸಂಸತ್ತಿನಲ್ಲಿ ವಾಗ್ದಾಳಿ ನಡೆಸುತ್ತಿವೆ. ಇತ್ತ ಕೇಂಬ್ರಿಡ್ಜ್‌ ವಿಶ್ವವಿದ್ಯಾಲಯದಲ್ಲಿ ಭಾರತೀಯ ಪ್ರಜಾಪ್ರಭುತ್ವದ ಕುರಿತು ರಾಹುಲ್ ಗಾಂಧಿ ನೀಡಿದ ಹೇಳಿಕೆಗೆ ಅವರು ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಪಟ್ಟು ಹಿಡಿದಿದೆ.

ರಾಹುಲ್ ಗಾಂಧಿಯವರ ಅಪರಾಧ ನಿರ್ಣಯವು ವಿಷಯಗಳನ್ನು ಇನ್ನಷ್ಟು ಹದಗೆಡಿಸುತ್ತದೆ ಎಂದು ನಿರೀಕ್ಷಿಸಲಾಗಿದೆ.

ಇದನ್ನೂ ಓದಿ: ಬ್ರಿಟಿಷ್ ಆಳ್ವಿಕೆಯಲ್ಲಿ ಕೂಡಾ ಪೋಸ್ಟರ್‌ಗಳನ್ನು ಹಾಕಿದ್ದಕ್ಕಾಗಿ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ: ಕೇಜ್ರಿವಾಲ್

ಇಂದು ಬೆಳಿಗ್ಗೆ ಸದನದಲ್ಲಿ ಕಾಂಗ್ರೆಸ್ ಸದಸ್ಯರು ಘೋಷಣೆಗಳನ್ನು ಕೂಗಿ ಹಿಂಡೆನ್ಬರ್ಗ್-ಅದಾನಿ ಸಮಸ್ಯೆಯನ್ನು ತನಿಖೆ ಮಾಡಲು ಜಂಟಿ ಸಂಸದೀಯ ಸಮಿತಿಗೆ ಒತ್ತಾಯಿಸುವ ಫಲಕಗಳನ್ನು ಪ್ರದರ್ಶಿಸಿದರು. ಹೀಗಾಗಿ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಬೇಕಾಯಿತು.
ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್ಖರ್ ಮತ್ತು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಸಮಸ್ಯೆಯನ್ನು ಪರಿಹರಿಸಲು ಪದೇ ಪದೇ ಸರ್ವಪಕ್ಷ ಸಭೆಗಳನ್ನು ನಡೆಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಶ್ಮಿ ಕಲ್ಲಕಟ್ಟ

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Loading...
Unable to load recommendations.
Follow Us