ಆಗಸ್ಟ್ 1ರಂದು ಪ್ರಧಾನಿ ಮೋದಿಗೆ ಪ್ರಶಸ್ತಿ ಪ್ರದಾನ; ಸಮಾರಂಭದಲ್ಲಿ ವೇದಿಕೆ ಹಂಚಿಕೊಳ್ಳಲಿದ್ದಾರೆ ಅಜಿತ್ ಪವಾರ್, ಶರದ್ ಪವಾರ್

ಲೋಕಮಾನ್ಯ ತಿಲಕರ 103ನೇ ಪುಣ್ಯತಿಥಿಯಾದ ಆಗಸ್ಟ್ 1 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಿಲಕ್ ಸ್ಮಾರಕ ಮಂದಿರ ಟ್ರಸ್ಟ್ (ಹಿಂದ್ ಸ್ವರಾಜ್ ಸಂಘ) ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿಯನ್ನು ಪ್ರದಾನ ಮಾಡಲಿದೆ ಎಂದು ಟ್ರಸ್ಟ್ ಅಧ್ಯಕ್ಷ ದೀಪಕ್ ತಿಲಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಗಸ್ಟ್ 1ರಂದು ಪ್ರಧಾನಿ ಮೋದಿಗೆ ಪ್ರಶಸ್ತಿ ಪ್ರದಾನ; ಸಮಾರಂಭದಲ್ಲಿ ವೇದಿಕೆ ಹಂಚಿಕೊಳ್ಳಲಿದ್ದಾರೆ ಅಜಿತ್ ಪವಾರ್, ಶರದ್ ಪವಾರ್
ಶರದ್ ಪವಾರ್- ಮೋದಿ
Follow us
ರಶ್ಮಿ ಕಲ್ಲಕಟ್ಟ
|

Updated on:Jul 11, 2023 | 4:27 PM

ಪುಣೆ: ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ (Sharad Pawar) ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿರುವ ಸಮಾರಂಭದಲ್ಲಿ ಆಗಸ್ಟ್ 1 ರಂದು ಪುಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿಯನ್ನು (Lokmanya Tilak National Award) ಪ್ರದಾನ ಮಾಡಲಾಗುವುದು ಎಂದು ಸಂಘಟಕರು ಸೋಮವಾರ ತಿಳಿಸಿದ್ದಾರೆ. ಪ್ರಧಾನಿ ಮೋದಿ ಅವರ ಸರ್ವೋಚ್ಚ ನಾಯಕತ್ವವನ್ನು ಗುರುತಿಸಿ ಮತ್ತು ನಾಗರಿಕರಲ್ಲಿ ದೇಶಭಕ್ತಿಯ ಭಾವನೆಯನ್ನು ಜಾಗೃತಗೊಳಿಸುವುದಕ್ಕಾಗಿ ಈ ಪ್ರಶಸ್ತಿ ನೀಡಲಾಗುತ್ತಿದೆ. ಈ ಪ್ರಶಸ್ತಿ ಸ್ಮರಣಿಕೆ ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆ. ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಶರದ್ ಪವಾರ್ ಅವರನ್ನು ಆಹ್ವಾನಿಸಲಾಗಿದೆ. ಅದೇ ವೇಳೆ ಅವರ ಸೋದರಳಿಯ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಆಹ್ವಾನಿತರಲ್ಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.

ಲೋಕಮಾನ್ಯ ತಿಲಕರ 103ನೇ ಪುಣ್ಯತಿಥಿಯಾದ ಆಗಸ್ಟ್ 1 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಿಲಕ್ ಸ್ಮಾರಕ ಮಂದಿರ ಟ್ರಸ್ಟ್ (ಹಿಂದ್ ಸ್ವರಾಜ್ ಸಂಘ) ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿಯನ್ನು ಪ್ರದಾನ ಮಾಡಲಿದೆ ಎಂದು ಟ್ರಸ್ಟ್ ಅಧ್ಯಕ್ಷ ದೀಪಕ್ ತಿಲಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆತ್ಮನಿರ್ಭರ್ ಭಾರತ್ ಪರಿಕಲ್ಪನೆಯಡಿಯಲ್ಲಿ ಪ್ರಧಾನ ಮಂತ್ರಿಯವರ ಸರ್ವೋಚ್ಚ ನಾಯಕತ್ವದಲ್ಲಿ ಭಾರತವು ಪ್ರಗತಿಯನ್ನು ಸಾಧಿಸಿದೆ ಎಂದು ಅವರು ಹೇಳಿದ್ದಾರೆ. ಪ್ರಧಾನಿ ಮೋದಿಯವರು ನಾಗರಿಕರಲ್ಲಿ ದೇಶಭಕ್ತಿಯ ಭಾವನೆಯನ್ನು ಜಾಗೃತಗೊಳಿಸಿದ್ದು,ಅವರು ಭಾರತವನ್ನು ಜಾಗತಿಕ ಭೂಪಟದಲ್ಲಿ ಇರಿಸಿದರು. ಅವರ ಪರಿಶ್ರಮ ಮತ್ತು ಪ್ರಯತ್ನಗಳನ್ನು ಪರಿಗಣಿಸಿ ತಿಲಕ್ ಸ್ಮಾರಕ ಮಂದಿರ ಟ್ರಸ್ಟ್‌ನ ಟ್ರಸ್ಟಿಗಳು ಅವರನ್ನು ಈ ಪ್ರಶಸ್ತಿಗೆ ಸರ್ವಾನುಮತದಿಂದ ಆಯ್ಕೆ ಮಾಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಇತರ ಆಹ್ವಾನಿತರಲ್ಲಿ ಮಹಾರಾಷ್ಟ್ರ ರಾಜ್ಯಪಾಲ ರಮೇಶ್ ಬೈಸ್, ಮುಖ್ಯಮಂತ್ರಿ ಏಕನಾಥ್ ಶಿಂಧೆ, ಉಪ ಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವಿಸ್ ಮತ್ತು ಅಜಿತ್ ಪವಾರ್ ಸೇರಿದ್ದಾರೆ.

ಇದನ್ನೂ ಓದಿ: Flood Crisis: ಪ್ರವಾಹ ಬಿಕ್ಕಟ್ಟು ಎದುರಿಸಲು ಹಿಮಾಚಲ, ಉತ್ತರಾಖಂಡ ಸರ್ಕಾರಕ್ಕೆ ಸೂಕ್ತ ಸಹಾಯದ ಭರವಸೆ ನೀಡಿದ ಪ್ರಧಾನಿ ಮೋದಿ

ಜುಲೈ 2 ರಂದು ಅಜಿತ್ ಪವಾರ್ ಮತ್ತು ಎನ್‌ಸಿಪಿಯ ಎಂಟು ಶಾಸಕರು ಶಿವಸೇನೆ-ಬಿಜೆಪಿ ಸರ್ಕಾರ ಸೇರಿದ್ದರು. ಅಜಿತ್ ಪವಾರ್ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ, ಶರದ್ ಪವಾರ್ ಅವರು ಎನ್‌ಸಿಪಿ ನಾಯಕರ “ಭ್ರಷ್ಟಾಚಾರ” ದ ಬಗ್ಗೆ ಇತ್ತೀಚಿನ ಹೇಳಿಕೆಗಳನ್ನು ಪ್ರಧಾನಿ ಮೋದಿಯವರಿಗೆ ನೆನಪಿಸಿದ್ದು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೇಳಿಕೊಂಡಿದ್ದಾರೆ.

ಜೂನ್ 27 ರಂದು ಭೋಪಾಲ್‌ನಲ್ಲಿ ಬಿಜೆಪಿ ಬೂತ್ ಕಾರ್ಯಕರ್ತರೊಂದಿಗೆ ಸಂವಾದದ ಸಂದರ್ಭದಲ್ಲಿ, ಮಹಾರಾಷ್ಟ್ರ ಸಹಕಾರಿ ಬ್ಯಾಂಕ್ ಹಗರಣ, ನೀರಾವರಿ ಹಗರಣ ಮತ್ತು ಅಕ್ರಮ ಗಣಿಗಾರಿಕೆ ಹಗರಣ ಸೇರಿದಂತೆ ಎನ್‌ಸಿಪಿ ವಿರುದ್ಧ ಸುಮಾರು ₹ 70,000 ಕೋಟಿ ಹಗರಣಗಳ ಆರೋಪಗಳಿವೆ ಎಂದು ಮೋದಿ ಹೇಳಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:23 pm, Tue, 11 July 23

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ