
2024ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆ(Lok Sabha Election)ಯ ಸಿದ್ಧತೆಯ ಭಾಗವಾಗಿ ಸೋಮವಾರ ಪಶ್ಚಿಮ ಉತ್ತರ ಪ್ರದೇಶ, ಬುಂದೇಲ್ಖಂಡ್ ಹಾಗೂ ಬ್ರಜ್ ಪ್ರದೇಶದ ಎನ್ಡಿಎ ಸಂಸದರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಭೆ ನಡೆಸಿದರು. 2024ರ ಸಾರ್ವತ್ರಿಕ ಚುನಾವಣೆಗೆ ಮುನ್ನ ರಾಮಮಂದಿರದ ಹೊರತಾಗಿ ಸಮಸ್ಯೆಗಳತ್ತ ಗಮನ ಹರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ, ಜನರೊಂದಿಗೆ ಹೆಚ್ಚು ಸಮಯ ಕಳೆಯಲು ಸಂಸದರಿಗೆ ಪ್ರಧಾನಿ ಸಲಹೆ ನೀಡಿದರು ಎಂದು ಮೂಲಗಳು ತಿಳಿಸಿವೆ.
ಆಯಾ ಕ್ಷೇತ್ರಗಳಲ್ಲಿನ ಸ್ಥಳೀಯ ಸಮಸ್ಯೆಗಳ ಬಗ್ಗೆ ಮಾತನಾಡಲು, ಮದುವೆ ಸೇರಿದಂತೆ ಜನರು ಭಾಗವಹಿಸುವ ಕಾರ್ಯಕ್ರಮಗಳಿಗೆ ಹೋಗುವಂತೆ ಪ್ರಧಾನಿ ಸಂಸದರಿಗೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮತ್ತಷ್ಟು ಓದಿ: Congress Vs BJP: ಇವತ್ತೇ ಲೋಕಸಭಾ ಚುನಾವಣೆಯಾದರೆ ಯಾರು ಗೆಲ್ತಾರೆ? ಚರ್ಚೆಯಾಗ್ತಿದೆ ರಾಜಕೀಯ ಸಮೀಕ್ಷೆಯ ವಿವರ
ಎನ್‌ಡಿಎಯ 430 ಸಂಸದರನ್ನು ಬಿಜೆಪಿ 11 ಗುಂಪುಗಳಾಗಿ ವಿಂಗಡಿಸಿದೆ, ಇದು ಆಗಸ್ಟ್ 10 ರವರೆಗೆ ಪ್ರಧಾನಿ ಮೋದಿಯನ್ನು ಭೇಟಿಯಾಗಲಿದೆ.
ಮುಂದಿನ ಸುತ್ತಿನ ಸಭೆ ಬುಧವಾರ ನಡೆಯಲಿದ್ದು, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು, ಕರ್ನಾಟಕ, ಕೇರಳ, ಪುದುಚೇರಿ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ಲಕ್ಷದ್ವೀಪಗಳ 96 ಸಂಸದರು ಭಾಗವಹಿಸಲಿದ್ದಾರೆ.
ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಮತ್ತು ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಸೇರಿದಂತೆ ಪಕ್ಷದ ಹಿರಿಯ ನಾಯಕರು ಸಭೆಗಳಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.
2024ರ ಲೋಕಸಭೆ ಚುನಾವಣೆಗೆ 10 ತಿಂಗಳು ಬಾಕಿ ಇದೆ . ಅದಕ್ಕೂ ಮುನ್ನ ಐದು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆಯೂ ನಡೆಯಲಿದೆ. ಅದಕ್ಕಾಗಿಯೇ ಈ ಸಭೆಗಳನ್ನು ಪ್ರಮುಖವೆಂದು ಪರಿಗಣಿಸಲಾಗಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:38 am, Tue, 1 August 23