Lokmanya Tilak Award: ಪ್ರಧಾನಿ ನರೇಂದ್ರ ಮೋದಿಗೆ ಲೋಕಮಾನ್ಯ ತಿಲಕ್ ಪ್ರಶಸ್ತಿ, ವೇದಿಕೆ ಹಂಚಿಕೊಂಡ ಶರದ್ ಪವಾರ್

|

Updated on: Aug 01, 2023 | 1:29 PM

ಪ್ರಧಾನಿ ನರೇಂದ್ರ ಮೋದಿಗೆ ಲೋಕಮಾನ್ಯ ತಿಲಕ್ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಎನ್​ಸಿಪಿ ನಾಯಕ ಶರದ್ ಪವಾರ್ ಮೋದಿಯವರೊಂದಿಗೆ ವೇದಿಕೆ ಹಂಚಿಕೊಂಡಿರುವುದು ವಿಶೇಷವಾಗಿತ್ತು.

Lokmanya Tilak Award: ಪ್ರಧಾನಿ ನರೇಂದ್ರ ಮೋದಿಗೆ ಲೋಕಮಾನ್ಯ ತಿಲಕ್ ಪ್ರಶಸ್ತಿ, ವೇದಿಕೆ ಹಂಚಿಕೊಂಡ ಶರದ್ ಪವಾರ್
ನರೇಂದ್ರ ಮೋದಿ
Follow us on

ಪುಣೆ, ಆಗಸ್ಟ್​ 1: ಪ್ರಧಾನಿ ನರೇಂದ್ರ ಮೋದಿಗೆ ಲೋಕಮಾನ್ಯ ತಿಲಕ್ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಎನ್​ಸಿಪಿ ನಾಯಕ ಶರದ್ ಪವಾರ್ ಮೋದಿಯವರೊಂದಿಗೆ ವೇದಿಕೆ ಹಂಚಿಕೊಂಡಿರುವುದು ವಿಶೇಷವಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಪುಣೆಗೆ ಭೇಟಿ ನೀಡಿದ್ದು, ಅವರಿಗೆ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಯಿತು, ಈ ಕಾರ್ಯಕ್ರಮವು ವಿಶೇಷವಾಗಿದೆ ಏಕೆಂದರೆ ಎನ್‌ಸಿಪಿ ಮುಖ್ಯಸ್ಥ ಮತ್ತು ವಿರೋಧ ಪಕ್ಷದ ಹಿರಿಯ ನಾಯಕ ಶರದ್ ಪವಾರ್ ಕೂಡ ಪಿಎಂ ಮೋದಿ ಅವರೊಂದಿಗೆ ವೇದಿಕೆಯನ್ನು ಹಂಚಿಕೊಂಡಿದ್ದಾರೆ.

ಪ್ರಶಸ್ತಿ ಜತೆಗೆ ಜವಾಬ್ದಾರಿ ಕೂಡ ಹೆಚ್ಚಾಗುತ್ತದೆ, ಈ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿಯನ್ನು 140 ಕೋಟಿ ಜನರಿಗೆ ಅರ್ಪಿಸುತ್ತೇನೆ, ಇ ದರೊಂದಿಗೆ ಪ್ರಶಸ್ತಿಯೊಂದಿಗೆ ಪಡೆದ ಮೊತ್ತವನ್ನು ನಮಾಮಿ ಗಂಗೆ ಯೋಜನೆಗೆ ನೀಡುವುದಾಗಿ ಪ್ರಧಾನಿ ಮೋದಿ ಘೋಷಿಸಿದರು.

ಸ್ವಾತಂತ್ರ್ಯ ಭಾರತದ ಇತಿಹಾಸದಲ್ಲಿ ಬಾಲಗಂಗಾಧರ್ ತಿಲಕ್ ಅವರ ಕೊಡುಗೆ ಅಪಾರವಾದದ್ದು, ದೊಡ್ಡ ಲಕ್ಷ್ಯವನ್ನು ಸಾಧಿಸಬೇಕಾದರೆ ಅವರು ತಮ್ಮನ್ನು ದೇಶಕ್ಕೆ ತಮ್ಮನ್ನು ಸಮರ್ಪಿಸಲು ಕೂಡ ಸಿದ್ಧರಿದ್ದರು, ಅಷ್ಟೇ ಅಲ್ಲದೆ ವಿರೋಧಿಗಳ ವಿರುದ್ಧ ಹೋರಾಡಲು ವ್ಯವಸ್ಥೆಯನ್ನು ಸಿದ್ಧಪಡಿಸಿದ್ದರು, ಜತೆಗೆ ವಿಶ್ವಾಸದೊಂದಿಗೆ ಎಲ್ಲರನ್ನೂ ಜತೆಗೆ ಕೊಂಡೊಯ್ಯುವಂಥವರಾಗಿದ್ದರು ಎಂದು ಪ್ರಧಾನಿ ಮೋದಿ ಹೇಳಿದರು.

ಲೋಕಮಾನ್ಯ ಗಂಗಾಧರ ತಿಲಕ್ ಅವರಿಗೆ ಯುವಕರನ್ನು ಗುರುತಿಸುವ ಕಲೆ ಇತ್ತು, ವೀರ ಸಾವರ್ಕರ್ ಅವರು ವಿದೇಶದಲ್ಲಿ ವ್ಯಾಸಂಗ ಮಾಡಬೇಕೆಂದು ತಿಲಕರು ಬಯಸಿದ್ದರು ಮತ್ತು ಮರಳಿ ಬಂದ ನಂತರ ದೇಶಕ್ಕೆ ಸೇವೆ ಸಲ್ಲಿಸಬೇಕು ಎಂದು ಕೂಡ ಹೇಳಿದ್ದರು.
ಇಂದು ವಿದೇಶಿ ದಾಳಿಕೋರರ ಹೆಸರಲ್ಲಿ ನಿರ್ಮಿಸಿರುವ ರಸ್ತೆಯ ಹೆಸರನ್ನು ಬದಲಾಯಿಸಿದರೆ ಕೆಲವರಿಗೆ ಕೋಪ ಕೆರಳುತ್ತದೆ, ಆದರೆ ಸ್ವಾತಂತ್ರ್ಯ ಪೂರ್ವದಲ್ಲಿ ಸರ್ದಾರ್ ಪಟೇಲರು ಲೋಕಮಾನ್ಯ ಗಂಗಾಧರ ತಿಲಕರ ಪ್ರತಿಮೆ ಸ್ಥಾಪಿಸುವಂತೆ ಬ್ರಿಟಿಷರಿಗೆ ಸವಾಲು ಹಾಕಿದ್ದರು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ವ್ಯವಸ್ಥೆ ನಿರ್ಮಾಣದಿಂದ ಸಂಸ್ಥೆ ನಿರ್ಮಾಣ, ಸಂಸ್ಥೆ ನಿರ್ಮಾಣದಿಂದ ವ್ಯಕ್ತಿ ನಿರ್ಮಾಣ, ವ್ಯಕ್ತಿ ನಿರ್ಮಾಣದಿಂದ ರಾಷ್ಟ್ರ ನಿರ್ಮಾಣ, ಸಾಕಷ್ಟು ಯೋಜನೆಗಳು ರಾಷ್ಟ್ರ ನಿರ್ಮಾಣದ ಮಾರ್ಗಸೂಚಿಯಂತೆ ಕಾರ್ಯನಿರ್ವಹಿಸುತ್ತಿವೆ ಎಂದರು.

ಕಾರ್ಯಕ್ರಮದಲ್ಲಿ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಮಾತನಾಡಿ, ಪುಣೆಗೆ ದೇಶದಲ್ಲಿ ಮಹತ್ವದ ಸ್ಥಾನವಿದೆ, ಇಂದು ಈ ಗೌರವವನ್ನು ಇಲ್ಲಿಂದ ಮಾತ್ರ ನೀಡಲಾಗುತ್ತಿದೆ. ದೇಶದ ಮೊದಲ ಸರ್ಜಿಕಲ್ ಸ್ಟ್ರೈಕ್ ಮಾಡಿದವರು ಛತ್ರಪತಿ ಶಿವಾಜಿ ಎಂದರು.

ದೇಶಕ್ಕಾಗಿ ತಿಲಕರು ಮತ್ತು ಮಹಾತ್ಮ ಗಾಂಧಿಯವರ ಕೊಡುಗೆ ಬಹಳ ದೊಡ್ಡದಾಗಿದೆ ಮತ್ತು ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ ಎಂದು ಅವರು ಹೇಳಿದರು.

ಲೋಕಮಾನ್ಯ ತಿಲಕರ ಪರಂಪರೆಯನ್ನು ಗೌರವಿಸಲು 1983ರಲ್ಲಿ ಸ್ಥಾಪಿಸಲಾದ ಲೋಕಮಾನ್ಯ ತಿಲಕ್ ಪ್ರಶಸ್ತಿಯನ್ನು ಪ್ರತಿ ವರ್ಷ ಆಗಸ್ಟ್ 1 ರಂದು ತಿಲಕರ ಪುಣ್ಯ ತಿಥಿಯಂದು ನೀಡಲಾಗುತ್ತದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:43 pm, Tue, 1 August 23