ಇಂಡಿಯನ್ ಮುಜಾಹಿದ್ದೀನ್, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಇದೆಲ್ಲದರಲ್ಲೂ ಇಂಡಿಯಾ ಇದೆ; ಪ್ರತಿಪಕ್ಷಗಳ ‘ಇಂಡಿಯಾ’ ಒಕ್ಕೂಟ ಬಗ್ಗೆ ಮೋದಿ ವಾಗ್ದಾಳಿ
ಇಂಡಿಯನ್ ನ್ಯಾಷನಲ್ ಕಾಂಗ್ರೆಸ್, ಈಸ್ಟ್ ಇಂಡಿಯಾ ಕಂಪನಿ, ಇಂಡಿಯನ್ ಮುಜಾಹಿದೀನ್., ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಇದೆಲ್ಲದರಲ್ಲೂ ಇಂಡಿಯಾ ಇದೆ. ಇಂಡಿಯಾ ಎಂಬ ಹೆಸರನ್ನು ಬಳಸುವುದರಲ್ಲಿ ಯಾವ ಅರ್ಥವೂ ಇಲ್ಲ ಎಂದು ಪ್ರಧಾನಿ ಹೇಳಿಕೆಯನ್ನು ರವಿಶಂಕರ್ ಪ್ರಸಾದ್ ಉಲ್ಲೇಖಿಸಿದ್ದಾರೆ.
ದೆಹಲಿ ಜುಲೈ 25: ಪ್ರತಿಪಕ್ಷಗಳಿಗೆ ದಿಶೆಯೇ ಇಲ್ಲ ಎಂದು ಹೇಳಿದ ಪ್ರಧಾನಿ ನರೇಂದ್ರ ಮೋದಿ (Narendra Modi), ಪ್ರತಿಪಕ್ಷಗಳ ಮೈತ್ರಿಕೂಟದ ಇಂಡಿಯಾ(INDIA) ಎಂಬ ಹೆಸರನ್ನೂ ಟೀಕಿಸಿದ್ದಾರೆ. ಬಿಜೆಪಿ ಸಂಸದೀಯ ಪಕ್ಷದ ಸಾಪ್ತಾಹಿಕ ಸಭೆಯಲ್ಲಿ ಪ್ರಧಾನಿಯವರ ಹೇಳಿಕೆಯನ್ನು ಉಲ್ಲೇಖಿಸಿ ಬಿಜೆಪಿ(BJP) ನಾಯಕ ರವಿಶಂಕರ್ ಪ್ರಸಾದ್, ಇಂತಹ ದಿಕ್ಕಿಲ್ಲದ ಪ್ರತಿಪಕ್ಷವನ್ನು ನಾನು ಹಿಂದೆಂದೂ ನೋಡಿಲ್ಲ ಎಂದಿದ್ದಾರೆ. 2024ರ ಲೋಕಸಭಾ ಚುನಾವಣೆಯ ಕಾರ್ಯತಂತ್ರವನ್ನು ಚರ್ಚಿಸಲು ಕಳೆದ ವಾರ ಬೆಂಗಳೂರಿನಲ್ಲಿ ನಡೆದ 26 ಪಕ್ಷಗಳ ಸಭೆಯಲ್ಲಿ ಪ್ರತಿಪಕ್ಷಗಳು ತಮ್ಮ ಮೈತ್ರಿಕೂಟಕ್ಕೆ ಇಂಡಿಯಾ ಎಂದು ಹೆಸರಿಟ್ಟಿತ್ತು. ಈ ಬಗ್ಗೆ ಟೀಕಿಸಿದ ಮೋದಿ, ಅವರು ಇಂಡಿಯಾ ಎಂಬ ಹೆಸರಿಗಾಗಿ ತಮ್ಮನ್ನು ತಾವು ಹೊಗಳಿಕೊಳ್ಳುತ್ತಲೇ ಇರುತ್ತಾರೆ.
ಇಂಡಿಯನ್ ನ್ಯಾಷನಲ್ ಕಾಂಗ್ರೆಸ್, ಈಸ್ಟ್ ಇಂಡಿಯಾ ಕಂಪನಿ, ಇಂಡಿಯನ್ ಮುಜಾಹಿದ್ದೀನ್, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಇದೆಲ್ಲದರಲ್ಲೂ ಇಂಡಿಯಾ ಇದೆ. ಇಂಡಿಯಾ ಎಂಬ ಹೆಸರನ್ನು ಬಳಸುವುದರಲ್ಲಿ ಯಾವ ಅರ್ಥವೂ ಇಲ್ಲ ಎಂದು ಪ್ರಧಾನಿ ಹೇಳಿಕೆಯನ್ನು ರವಿಶಂಕರ್ ಪ್ರಸಾದ್ ಉಲ್ಲೇಖಿಸಿದ್ದಾರೆ.
ಕೇವಲ ದೇಶದ ಹೆಸರಿನ ಬಳಕೆಯಿಂದ ಜನರನ್ನು ದಾರಿತಪ್ಪಿಸಲು ಸಾಧ್ಯವಿಲ್ಲ ಎಂದಿದ್ದಾರೆ ಅವರು. ಮಣಿಪುರದ ಬಿಕ್ಕಟ್ಟಿನ ಬಗ್ಗೆ ಸಂಸತ್ತಿನಲ್ಲಿ ಗದ್ದಲಗಳ ನಡುವೆಯೇ ಈ ಹೇಳಿಕೆಗಳು ಬಂದಿವೆ. ಮೇ ತಿಂಗಳಲ್ಲಿ ಇಬ್ಬರು ಮಹಿಳೆಯರನ್ನು ಜನರ ಗುಂಪು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ಮತ್ತು ಹಲ್ಲೆ ಮಾಡಿದ ವೈರಲ್ ವಿಡಿಯೊಗೆ ಸಂಬಂಧಿಸಿದ ವಿಷಯಗಳ ಕುರಿತು ಪಿಎಂ ಮೋದಿಯವರ ಹೇಳಿಕೆಗಾಗಿ ಪ್ರತಿಪಕ್ಷಗಳ ಬೇಡಿಕೆಯೊಡ್ಡುತ್ತಲೇ ಇವೆ.
ಇಂತಿರುವಾಗ ಪ್ರಧಾನಿಯವರು, ಪ್ರತಿಪಕ್ಷಗಳು ಸೋಲು, ದಣಿವು, ಹತಾಶರಾಗಿ ಮೋದಿಯನ್ನು ವಿರೋಧಿಸಬೇಕು ಎಂಬ ಒಂದೇ ಒಂದು ಅಜೆಂಡಾ ಇಟ್ಟುಕೊಂಡಿದ್ದಾರೆ ಎಂದು ಹೇಳಿದ್ದಾರೆ. ಅವರು ವಿರೋಧಪಕ್ಷಗಳಾಗಿಯೇ ಉಳಿಯಲು ನಿರ್ಧರಿಸಿದಂತಿದೆ.2024ರ ಚುನಾವಣೆಯಲ್ಲಿ ಜನಬೆಂಬಲದಿಂದ ಬಿಜೆಪಿ ಸುಲಭವಾಗಿ ಗೆಲುವು ಸಾಧಿಸಲಿದೆ ಎಂದಿದ್ದಾರೆ ಮೋದಿ.
ಮಣಿಪುರದ ವಿಷಯದಲ್ಲಿ ಸಂಸತ್ತಿನಲ್ಲಿನ ಗದ್ದಲ ಪ್ರಮುಖ ಶಾಸನವನ್ನು ಮಂಡಿಸುವ ಸರ್ಕಾರದ ಯೋಜನೆಗಳನ್ನು ಸ್ಥಗಿತಗೊಳಿಸಿದೆ. ಮಣಿಪುರದಲ್ಲಿ ಬೆಚ್ಚಿ ಬೀಳಿಸುವ ವಿಡಿಯೊ ಬಹಿರಂಗಗೊಂಡ ನಂತರ ಕಳೆದ ಗುರುವಾರ ಮುಂಗಾರು ಅಧಿವೇಶನ ಆರಂಭವಾಗಿದೆ. ವಿಪಕ್ಷಗಳು ಮೋದಿ ಹೇಳಿಕೆಗಾಗಿ ಪಟ್ಟು ಹಿಡಿದಿದ್ದರಿಂದ ಸಂಸತ್ತಿನ ಎರಡೂ ಸದನಗಳು ಹೆಚ್ಚಿನ ಕಲಾಪವಿಲ್ಲದೆ ಪದೇ ಪದೇ ಮುಂದೂಡಲ್ಪಟ್ಟಿವೆ.
ಅಧಿವೇಶನಕ್ಕೂ ಮುನ್ನ ಮಣಿಪುರ ಬಗ್ಗೆ ಮಾತನಾಡಿದ್ದ ಮೋದಿ ತಮ್ಮ ಹೃದಯವು ದುಃಖ ಮತ್ತು ಕೋಪದಿಂದ ತುಂಬಿದೆ.ಯಾವುದೇ ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ ಎಂದುನಾನು ರಾಷ್ಟ್ರಕ್ಕೆ ಭರವಸೆ ನೀಡಲು ಬಯಸುತ್ತೇನೆ. ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ಳಲಾಗುತ್ತದೆ. ಮಣಿಪುರದ ಹೆಣ್ಣುಮಕ್ಕಳಿಗೆ ಏನಾಯಿತು ಎಂಬುದನ್ನು ಎಂದಿಗೂ ಕ್ಷಮಿಸಲು ಸಾಧ್ಯವಿಲ್ಲ ಎಂದಿದ್ದಾರೆ.
ಪ್ರತಿಪಕ್ಷಗಳು, ಈ ಅಧಿವೇಶನದಲ್ಲಿ ‘ಇಂಡಿಯಾ’ ಒಕ್ಕೂಟವಾಗಿ ನಿಂತಿದ್ದು, ಪ್ರಧಾನಿ ಸಂಸತ್ತಿನ ಉಭಯ ಸದನಗಳಲ್ಲಿ ಸಮಗ್ರ ಹೇಳಿಕೆಯನ್ನು ನೀಡಬೇಕು ಎಂದು ಹೇಳಿದರು. ಉಭಯ ಸದನಗಳಲ್ಲಿ ಮಣಿಪುರದ ಕುರಿತು ಚರ್ಚೆಗೆ ಮುಂದಾಗಿರುವ ಸರ್ಕಾರ, ವಿರೋಧ ಪಕ್ಷದವರು ಉದ್ದೇಶಪೂರ್ವಕವಾಗಿ ತನ್ನ ಪ್ರತಿಭಟನೆಗಳ ಮೂಲಕ ಅದಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂದು ಆರೋಪಿಸಿದೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 2:06 pm, Tue, 25 July 23