ಗ್ಯಾರಂಟಿ ಬಗ್ಗೆ ಖರ್ಗೆ ನೀಡಿದ ಎಚ್ಚರಿಕೆಯಿಂದ ಕಾಂಗ್ರೆಸ್ ಬಣ್ಣ ಬಯಲು: ಮೋದಿ ವಾಗ್ದಾಳಿ

ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಅಭಿವೃದ್ಧಿ ಬಗ್ಗೆ ಕಿಂಚಿತ್ತೂ ಯೋಚಿಸದೆ, ಲೂಟಿ ಹೊಡೆಯುತ್ತಾ ಆಂತರಿಕ ಕಿತ್ತಾಟದಲ್ಲಿ ನಿರತವಾಗಿದೆ. ಅಷ್ಟೇ ಅಲ್ಲ, ಈಗಿರುವ ಯೋಜನೆಗಳನ್ನೂ ಹಿಂಪಡೆಯೋದಕ್ಕೆ ಹೊರಟಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್​ ನಾಯಕರ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

ಗ್ಯಾರಂಟಿ ಬಗ್ಗೆ ಖರ್ಗೆ ನೀಡಿದ ಎಚ್ಚರಿಕೆಯಿಂದ ಕಾಂಗ್ರೆಸ್ ಬಣ್ಣ ಬಯಲು: ಮೋದಿ ವಾಗ್ದಾಳಿ
ಕರ್ನಾಟಕ ಕಾಂಗ್ರೆಸ್​ ಸರ್ಕಾರದ ಗ್ಯಾರಂಟಿಗಳನ್ನು ಉಲ್ಲೇಖಿಸಿ ಪ್ರಧಾನಿ ಮೋದಿ ವಾಗ್ದಾಳಿ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Nov 01, 2024 | 7:27 PM

ದೆಹಲಿ, ನವೆಂಬರ್​ 01: ಕಾಂಗ್ರೆಸ್ ನೀಡುವ ಭರವಸೆಗಳನ್ನು ಎಂದೂ ಈಡೇರಿಸಿಲ್ಲ. ಕಾಂಗ್ರೆಸ್ ಪಕ್ಷವು ಅವಾಸ್ತವಿಕ ಭರವಸೆಗಳನ್ನು ನೀಡುವುದು ಸುಲಭ ಆದರೆ ಅವುಗಳನ್ನು ಸರಿಯಾಗಿ ಜಾರಿಗೊಳಿಸುವುದು ಕಠಿಣ ಅಥವಾ ಅಸಾಧ್ಯ ಎಂಬುವುದನ್ನು ಅರಿತುಕೊಂಡಿದೆ ಎಂದು ಪ್ರಧಾನಿ ನರೆಂದ್ರ ಮೋದಿ (Narendra Modi) ವಾಗ್ದಾಳಿ ಮಾಡಿದ್ದಾರೆ. ಗ್ಯಾರಂಟಿ ಯೋಜನೆ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್​ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಲಹೆ ವಿಚಾರವಾಗಿ ಅವರು ಕಿಡಿಕಾರಿದ್ದಾರೆ.

ಕಾಂಗ್ರೆಸ್​ ಜನರ ಮುಂದೆ ಬೆತ್ತಲಾಗಿದೆ: ಪ್ರಧಾನಿ ಮೋದಿ

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ವಾಸ್ತವಕ್ಕೆ ದೂರವಾದ ಭರವಸೆಗಳನ್ನು ನೀಡುವುದು ಸುಲಭ. ಆದರೆ ಅವುಗಳನ್ನು ಜಾರಿಗೊಳಿಸುವುದು ಕಷ್ಟ ಅಥವಾ ಅಸಾಧ್ಯ ಎಂಬ ಸತ್ಯ ಕಾಂಗ್ರೆಸ್​ಗೆ ಅರ್ಥವಾಗುತ್ತಿದೆ. ಪ್ರಚಾರದ ಮೇಲೆ ಪ್ರಚಾರ ಮಾಡಿಯೂ ನಕಲಿ ಭರವಸೆಗಳನ್ನು ಈಡೇರಿಸಲು ಎಂದಿಗೂ ಸಾಧ್ಯವಿಲ್ಲ ಎಬುದು ಅವರಿಗೆ ಗೊತ್ತಿದೆ. ಹಾಗಾಗೇ ಈಗ, ಜನರ ಮುಂದೆ ಬೆತ್ತಲಾಗುತ್ತಿದ್ದಾರೆ ಎಂದು ವಾಗ್ದಾಳಿ ಮಾಡಿದ್ದಾರೆ.

ಪ್ರಧಾನಿ ಮೋದಿ ಟ್ವೀಟ್

ಕಾಂಗ್ರೆಸ್‌ ಭರವಸೆಗಳು ಈಡೇರಿಲ್ಲ, ಇದು ಜನರಿಗೆ ಮಾಡಿದ ಮಹಾ ಮೋಸ ಮಾಡಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಆಂತರಿಕ ರಾಜಕಾರಣದಲ್ಲಿ ನಿರತವಾಗಿದೆ. ಜೊತೆಗೆ ಅಭಿವೃದ್ಧಿಗೆ ಕಾಳಜಿ ತೋರಿಸುವ ಬದಲು ಲೂಟಿ ಮಾಡುತ್ತಿದೆ. ಅಷ್ಟೇ ಅಲ್ಲ, ಈಗಿರುವ ಯೋಜನೆಗಳನ್ನು ಹಿಂಪಡೆಯಲು ಹೊರಟಿದ್ದಾರೆ ಎಂದು ಹೇಳಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ಸರ್ಕಾರಿ ನೌಕರರಿಗೆ ಸರಿಯಾದ ಸಮಯಕ್ಕೆ ಸಂಬಳ ಸಿಗುತ್ತಿಲ್ಲ. ತೆಲಂಗಾಣದಲ್ಲಿ ರೈತರು ಸಾಲ ಮನ್ನಾಕ್ಕಾಗಿ ಕಾಯುತ್ತಿದ್ದಾರೆ. ಈ ಹಿಂದೆ, ಛತ್ತೀಸ್‌ಗಢ ಮತ್ತು ರಾಜಸ್ಥಾನದಲ್ಲಿ ಕೆಲವು ಕಾಂಗ್ರೆಸ್​ ಭತ್ಯೆ ನೀಡಿವುದಾಗಿ ಭರವಸೆ ನೀಡಿತ್ತು. ಆದರೆ ಅದು ಐದು ವರ್ಷವಾದರೂ ಜಾರಿಯಾಗಿರಲಿಲ್ಲ. ಕಾಂಗ್ರೆಸ್ ಹೇಗೆ ಕೆಲಸ ಮಾಡುತ್ತದೆ ಎಂಬುದಕ್ಕೆ ಇಂತಹ ಹಲವಾರು ಉದಾಹರಣೆಗಳಿವೆ ಎಂದಿದ್ದಾರೆ.

ಇದನ್ನೂ ಓದಿ: ಒಂದು ರಾಷ್ಟ್ರ ಒಂದು ಚುನಾವಣೆ, ಶೀಘ್ರದಲ್ಲೇ ಏಕರೂಪ ನಾಗರಿಕ ಸಂಹಿತೆ; ಪ್ರಧಾನಿ ಮೋದಿ

ಕಾಂಗ್ರೆಸ್ ಪ್ರಾಯೋಜಿತ ನಕಲಿ ಭರವಸೆಗಳ ಸಂಸ್ಕೃತಿಯ ಕುರಿತು ದೇಶದ ಜನತೆ ಎಚ್ಚೆತ್ತುಕೊಳ್ಳಬೇಕಾಗಿದೆ! ಹರಿಯಾಣದ ಜನರು ಹೇಗೆ ಅವರ ಸುಳ್ಳುಗಳನ್ನು ತಿರಸ್ಕರಿಸಿ ಅಭಿವೃದ್ಧಿ ಆಧಾರಿತ, ಸ್ಥಿರ ಸರ್ಕಾರಕ್ಕೆ ಹೇಗೆ ಪ್ರಾತಿನಿಧ್ಯ ನೀಡಿದರು ಎಂಬುದನ್ನು ನಾವು ನೋಡಿದ್ದೇವೆ. ಕಾಂಗ್ರೆಸ್‌ಗೆ ನೀಡುವ ಮತವು ಅದಕ್ಷ ಆಡಳಿತಕ್ಕೆ, ಕಳಪೆ ಆರ್ಥಿಕತೆಗೆ, ಸರಿಸಾಟಿಯಿಲ್ಲದ ಲೂಟಿಗೆ ನೀಡುವ ಮತ ಎಂಬ ಪ್ರಜ್ಞೆ ಭಾರತದಾದ್ಯಂತ ಮೂಡುತ್ತಿದೆ. ಭಾರತದ ಜನರು ಅಭಿವೃದ್ಧಿ ಮತ್ತು ಪ್ರಗತಿ ಬಯಸುತ್ತಾರೆಯೇ ವಿನಃ ಕಾಂಗ್ರೆಸ್​ನ ಅದೇ ಹಳೆಯ ನಕಲಿ ಭರವಸೆಗಳನ್ನಲ್ಲ ಎಂದು ಹೇಳಿದ್ದಾರೆ.

ಗ್ಯಾರಂಟಿ ಬಗ್ಗೆ ಖರ್ಗೆ ಹೇಳಿದ್ದೇನು?

ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಹಾರಾಷ್ಟ್ರದಲ್ಲಿ 5, 6, 10 ಅಥವಾ 20 ಭರವಸೆಗಳನ್ನು ಘೋಷಿಸಬಾರದು ಎಂದು ನಾನು ನಾಯಕರಿಗೆ ಹೇಳಿದ್ದೇನೆ. ಬಜೆಟ್ ಆಧಾರದ ಮೇಲೆ ಗ್ಯಾರಂಟಿ ಘೋಷಿಸಬೇಕು ಎಂದು ಸೂಚಿಸಿದ್ದೇನೆ. ಇಲ್ಲದಿದ್ದರೆ ದಿವಾಳಿಯಾಗಬೇಕಾಗುತ್ತದೆ. ರಸ್ತೆಗಳ ಅಭಿವೃದ್ಧಿಗೆ ಹಣವಿಲ್ಲದಿದ್ದರೆ ಎಲ್ಲರೂ ನಿಮ್ಮ ವಿರುದ್ಧ ತಿರುಗಿ ಬೀಳುತ್ತಾರೆ. ಈ ಸರ್ಕಾರ ವಿಫಲವಾದರೆ ಭವಿಷ್ಯದ ಪೀಳಿಗೆಗೆ ಕೆಟ್ಟ ಹೆಸರು ಬರುವುದಲ್ಲದೆ ಬೇರೇನೂ ಉಳಿಯುವುದಿಲ್ಲ. ಇದರಿಂದ 10 ವರ್ಷಗಳ ಕಾಲ ಕಳಂಕಿತರಾಗಿಯೇ ಇರಬೇಕಾಗುತ್ತದೆ ಎಂದು ಹೇಳಿದ್ದರು

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:00 pm, Fri, 1 November 24

Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್
ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್
ಬಿಎಂಟಿಸಿ ಟಿಕೆಟ್ ದರ ಹೆಚ್ಚಿರುವ ಬೆನ್ನಲ್ಲೇ ಮೆಟ್ರೋ ಪ್ರಯಾಣ ದರ ಏರಿಕೆ!
ಬಿಎಂಟಿಸಿ ಟಿಕೆಟ್ ದರ ಹೆಚ್ಚಿರುವ ಬೆನ್ನಲ್ಲೇ ಮೆಟ್ರೋ ಪ್ರಯಾಣ ದರ ಏರಿಕೆ!
ಜನಪ್ರತಿನಿಧಿಗಳು ಎಲೆಕ್ಟ್ರಾನಿಕ್ ಮಾಧ್ಯಮಗಳ ನ್ಯೂಸ್ ವೀಕ್ಷಿಸುವುದಿಲ್ಲವೇ?
ಜನಪ್ರತಿನಿಧಿಗಳು ಎಲೆಕ್ಟ್ರಾನಿಕ್ ಮಾಧ್ಯಮಗಳ ನ್ಯೂಸ್ ವೀಕ್ಷಿಸುವುದಿಲ್ಲವೇ?