ದೆಹಲಿ, ನವೆಂಬರ್ 01: ಕಾಂಗ್ರೆಸ್ ನೀಡುವ ಭರವಸೆಗಳನ್ನು ಎಂದೂ ಈಡೇರಿಸಿಲ್ಲ. ಕಾಂಗ್ರೆಸ್ ಪಕ್ಷವು ಅವಾಸ್ತವಿಕ ಭರವಸೆಗಳನ್ನು ನೀಡುವುದು ಸುಲಭ ಆದರೆ ಅವುಗಳನ್ನು ಸರಿಯಾಗಿ ಜಾರಿಗೊಳಿಸುವುದು ಕಠಿಣ ಅಥವಾ ಅಸಾಧ್ಯ ಎಂಬುವುದನ್ನು ಅರಿತುಕೊಂಡಿದೆ ಎಂದು ಪ್ರಧಾನಿ ನರೆಂದ್ರ ಮೋದಿ (Narendra Modi) ವಾಗ್ದಾಳಿ ಮಾಡಿದ್ದಾರೆ. ಗ್ಯಾರಂಟಿ ಯೋಜನೆ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಲಹೆ ವಿಚಾರವಾಗಿ ಅವರು ಕಿಡಿಕಾರಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ವಾಸ್ತವಕ್ಕೆ ದೂರವಾದ ಭರವಸೆಗಳನ್ನು ನೀಡುವುದು ಸುಲಭ. ಆದರೆ ಅವುಗಳನ್ನು ಜಾರಿಗೊಳಿಸುವುದು ಕಷ್ಟ ಅಥವಾ ಅಸಾಧ್ಯ ಎಂಬ ಸತ್ಯ ಕಾಂಗ್ರೆಸ್‌ಗೆ ಅರ್ಥವಾಗುತ್ತಿದೆ. ಪ್ರಚಾರದ ಮೇಲೆ ಪ್ರಚಾರ ಮಾಡಿಯೂ ನಕಲಿ ಭರವಸೆಗಳನ್ನು ಈಡೇರಿಸಲು ಎಂದಿಗೂ ಸಾಧ್ಯವಿಲ್ಲ ಎಬುದು ಅವರಿಗೆ ಗೊತ್ತಿದೆ. ಹಾಗಾಗೇ ಈಗ, ಜನರ ಮುಂದೆ ಬೆತ್ತಲಾಗುತ್ತಿದ್ದಾರೆ ಎಂದು ವಾಗ್ದಾಳಿ ಮಾಡಿದ್ದಾರೆ.
In Karnataka, Congress is busier in intra-party politics and loot instead of even bothering to deliver on development. Not only that, they are also going to rollback existing schemes.
In Himachal Pradesh, salaries of Government workers is not paid on time. In Telangana, farmers…
— Narendra Modi (@narendramodi) November 1, 2024
ಕಾಂಗ್ರೆಸ್ ಭರವಸೆಗಳು ಈಡೇರಿಲ್ಲ, ಇದು ಜನರಿಗೆ ಮಾಡಿದ ಮಹಾ ಮೋಸ ಮಾಡಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಆಂತರಿಕ ರಾಜಕಾರಣದಲ್ಲಿ ನಿರತವಾಗಿದೆ. ಜೊತೆಗೆ ಅಭಿವೃದ್ಧಿಗೆ ಕಾಳಜಿ ತೋರಿಸುವ ಬದಲು ಲೂಟಿ ಮಾಡುತ್ತಿದೆ. ಅಷ್ಟೇ ಅಲ್ಲ, ಈಗಿರುವ ಯೋಜನೆಗಳನ್ನು ಹಿಂಪಡೆಯಲು ಹೊರಟಿದ್ದಾರೆ ಎಂದು ಹೇಳಿದ್ದಾರೆ.
ಹಿಮಾಚಲ ಪ್ರದೇಶದಲ್ಲಿ ಸರ್ಕಾರಿ ನೌಕರರಿಗೆ ಸರಿಯಾದ ಸಮಯಕ್ಕೆ ಸಂಬಳ ಸಿಗುತ್ತಿಲ್ಲ. ತೆಲಂಗಾಣದಲ್ಲಿ ರೈತರು ಸಾಲ ಮನ್ನಾಕ್ಕಾಗಿ ಕಾಯುತ್ತಿದ್ದಾರೆ. ಈ ಹಿಂದೆ, ಛತ್ತೀಸ್‌ಗಢ ಮತ್ತು ರಾಜಸ್ಥಾನದಲ್ಲಿ ಕೆಲವು ಕಾಂಗ್ರೆಸ್ ಭತ್ಯೆ ನೀಡಿವುದಾಗಿ ಭರವಸೆ ನೀಡಿತ್ತು. ಆದರೆ ಅದು ಐದು ವರ್ಷವಾದರೂ ಜಾರಿಯಾಗಿರಲಿಲ್ಲ. ಕಾಂಗ್ರೆಸ್ ಹೇಗೆ ಕೆಲಸ ಮಾಡುತ್ತದೆ ಎಂಬುದಕ್ಕೆ ಇಂತಹ ಹಲವಾರು ಉದಾಹರಣೆಗಳಿವೆ ಎಂದಿದ್ದಾರೆ.
ಇದನ್ನೂ ಓದಿ: ಒಂದು ರಾಷ್ಟ್ರ ಒಂದು ಚುನಾವಣೆ, ಶೀಘ್ರದಲ್ಲೇ ಏಕರೂಪ ನಾಗರಿಕ ಸಂಹಿತೆ; ಪ್ರಧಾನಿ ಮೋದಿ
ಕಾಂಗ್ರೆಸ್ ಪ್ರಾಯೋಜಿತ ನಕಲಿ ಭರವಸೆಗಳ ಸಂಸ್ಕೃತಿಯ ಕುರಿತು ದೇಶದ ಜನತೆ ಎಚ್ಚೆತ್ತುಕೊಳ್ಳಬೇಕಾಗಿದೆ! ಹರಿಯಾಣದ ಜನರು ಹೇಗೆ ಅವರ ಸುಳ್ಳುಗಳನ್ನು ತಿರಸ್ಕರಿಸಿ ಅಭಿವೃದ್ಧಿ ಆಧಾರಿತ, ಸ್ಥಿರ ಸರ್ಕಾರಕ್ಕೆ ಹೇಗೆ ಪ್ರಾತಿನಿಧ್ಯ ನೀಡಿದರು ಎಂಬುದನ್ನು ನಾವು ನೋಡಿದ್ದೇವೆ. ಕಾಂಗ್ರೆಸ್‌ಗೆ ನೀಡುವ ಮತವು ಅದಕ್ಷ ಆಡಳಿತಕ್ಕೆ, ಕಳಪೆ ಆರ್ಥಿಕತೆಗೆ, ಸರಿಸಾಟಿಯಿಲ್ಲದ ಲೂಟಿಗೆ ನೀಡುವ ಮತ ಎಂಬ ಪ್ರಜ್ಞೆ ಭಾರತದಾದ್ಯಂತ ಮೂಡುತ್ತಿದೆ.
ಭಾರತದ ಜನರು ಅಭಿವೃದ್ಧಿ ಮತ್ತು ಪ್ರಗತಿ ಬಯಸುತ್ತಾರೆಯೇ ವಿನಃ ಕಾಂಗ್ರೆಸ್ನ ಅದೇ ಹಳೆಯ ನಕಲಿ ಭರವಸೆಗಳನ್ನಲ್ಲ ಎಂದು ಹೇಳಿದ್ದಾರೆ.
ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಹಾರಾಷ್ಟ್ರದಲ್ಲಿ 5, 6, 10 ಅಥವಾ 20 ಭರವಸೆಗಳನ್ನು ಘೋಷಿಸಬಾರದು ಎಂದು ನಾನು ನಾಯಕರಿಗೆ ಹೇಳಿದ್ದೇನೆ. ಬಜೆಟ್ ಆಧಾರದ ಮೇಲೆ ಗ್ಯಾರಂಟಿ ಘೋಷಿಸಬೇಕು ಎಂದು ಸೂಚಿಸಿದ್ದೇನೆ. ಇಲ್ಲದಿದ್ದರೆ ದಿವಾಳಿಯಾಗಬೇಕಾಗುತ್ತದೆ. ರಸ್ತೆಗಳ ಅಭಿವೃದ್ಧಿಗೆ ಹಣವಿಲ್ಲದಿದ್ದರೆ ಎಲ್ಲರೂ ನಿಮ್ಮ ವಿರುದ್ಧ ತಿರುಗಿ ಬೀಳುತ್ತಾರೆ. ಈ ಸರ್ಕಾರ ವಿಫಲವಾದರೆ ಭವಿಷ್ಯದ ಪೀಳಿಗೆಗೆ ಕೆಟ್ಟ ಹೆಸರು ಬರುವುದಲ್ಲದೆ ಬೇರೇನೂ ಉಳಿಯುವುದಿಲ್ಲ. ಇದರಿಂದ 10 ವರ್ಷಗಳ ಕಾಲ ಕಳಂಕಿತರಾಗಿಯೇ ಇರಬೇಕಾಗುತ್ತದೆ ಎಂದು ಹೇಳಿದ್ದರು
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 7:00 pm, Fri, 1 November 24