AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

VivaTech Summit 2021: ಕೊರೊನಾ ನಿರ್ವಹಣೆಗೆ ಆವಿಷ್ಕಾರ, ನವೋದ್ಯಮಗಳ ಕೊಡುಗೆ ನೆನೆದ ಪ್ರಧಾನಿ ನರೇಂದ್ರ ಮೋದಿ

PM Narendra Modi: ಭಾರತವು ಆವಿಷ್ಕಾರ ಮತ್ತು ಹೂಡಿಕೆದಾರರಿಗೆ ಮಹತ್ವ ನೀಡುತ್ತದೆ. ಪ್ರತಿಭೆ, ಮಾರುಕಟ್ಟೆ, ಬಂಡವಾಳ ಮತ್ತು ಉದ್ಯಮ ಸ್ನೇಹಿ ಪರಿಸರ, ಮುಕ್ತ ಸಂಸ್ಕೃತಿಯನ್ನು ಗಮನಿಸಿ ಭಾರತದಲ್ಲಿ ಹೂಡಿಕೆ ಮಾಡಲು ಬರಬೇಕು ಎಂದು ಮೋದಿ ಆಹ್ವಾನಿಸಿದರು.

VivaTech Summit 2021: ಕೊರೊನಾ ನಿರ್ವಹಣೆಗೆ ಆವಿಷ್ಕಾರ, ನವೋದ್ಯಮಗಳ ಕೊಡುಗೆ ನೆನೆದ ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Jun 16, 2021 | 5:06 PM

Share

ದೆಹಲಿ: ವಿವಾ ವಿಶ್ವ ತಾಂತ್ರಿಕ ಸಮಾವೇಶದಲ್ಲಿ (VivaTech Summit 2021) ಪ್ರಧಾನಿ ನರೇಂದ್ರ ಮೋದಿ ಬುಧವಾರ ಮಾತನಾಡಿದರು. ಕೊರೊನಾ ಮಹಾಪಿಡುಗು ಜಗತ್ತನ್ನು ಆವರಿಸಿರುವ ಈ ಸಂದರ್ಭದಲ್ಲಿ ನಾನು ಆವಿಷ್ಕಾರದ ಬಗ್ಗೆ ಮಾತನಾಡುತ್ತಿದ್ದೇನೆ. ನನ್ನ ಹೇಳುವ ಆವಿಷ್ಕಾರ ಕೊರೊನಾ ಪಿಡುಗು ಕಾಣಿಸಿಕೊಳ್ಳುವ ಮೊದಲಿನ ದಿನಗಳಿಗೆ ಸಂಬಂಧಿಸಿದ್ದಾಗಿರುತ್ತದೆ ಎಂದು ಮೋದಿ ತಿಳಿಸಿದರು.

ಜನರನ್ನು ಪರಸ್ಪರ ಬೆಸೆಯಲು, ಸಾಂತ್ವನ ಹೇಳಲು ಮತ್ತು ಸಹಾಯಕ್ಕೆ ಧಾವಿಸಲು ಡಿಜಿಟಲ್ ತಂತ್ರಜ್ಞಾನವು ನಮಗೆ ನೆರವಾಯಿತು. ಡಿಜಿಟಲ್ ಮಾಧ್ಯಮದ ಮೂಲಕ ನಾವು ನಮ್ಮ ಪ್ರೀತಿಪಾತ್ರರೊಂದಿಗೆ ಮಾತನಾಡುತ್ತಿದ್ದೇವೆ, ಸಹಾಯ ಮಾಡುತ್ತಿದ್ದೇವೆ ಎಂದು ಹೇಳಿದರು.

ರೂಢಿಯಲ್ಲಿರುವ ತಂತ್ರಗಳು ವಿಫಲವಾದಾಗ ಆವಿಷ್ಕಾರಗಳು ನೆರವಿಗೆ ಬರುತ್ತವೆ. ಕೊವಿಡ್-19 ವ್ಯಾಪಿಸಿಕೊಂಡ ನಂತರ ಜಗತ್ತಿನ ಹಲವೆಡೆ ಇಂಥ ವಿದ್ಯಮಾನ ಗಮನಿಸುತ್ತಿದ್ದೇವೆ. ನಮ್ಮ ತಲೆಮಾರನ್ನು ವ್ಯಾಪಕವಾಗಿ ಕಲಕಿದ ಸಂದರ್ಭ ಇದು ಎಂದು ಮೋದಿ ನುಡಿದರು.

ಭಾರತವು ಆವಿಷ್ಕಾರ ಮತ್ತು ಹೂಡಿಕೆದಾರರಿಗೆ ಮಹತ್ವ ನೀಡುತ್ತದೆ. ಪ್ರತಿಭೆ, ಮಾರುಕಟ್ಟೆ, ಬಂಡವಾಳ ಮತ್ತು ಉದ್ಯಮ ಸ್ನೇಹಿ ಪರಿಸರ, ಮುಕ್ತ ಸಂಸ್ಕೃತಿಯನ್ನು ಗಮನಿಸಿ ಭಾರತದಲ್ಲಿ ಹೂಡಿಕೆ ಮಾಡಲು ಬರಬೇಕು ಎಂದು ವಿಶ್ವವನ್ನು ನಾನು ವಿನಂತಿಸುತ್ತೇನೆ ಎಂದು ಮೋದಿ ತಿಳಿಸಿದರು.

ಕೊರೊನಾ ಸೋಂಕಿನ 2ನೇ ಅಲೆಯು ವ್ಯಾಪಕವಾಗಿ ಹರಡಿಕೊಂಡಿರುವ ಈ ಹೊತ್ತಿನಲ್ಲಿ ನಮ್ಮ ಆವಿಷ್ಕಾರಗಳು ಈ ಬಿಕ್ಕಟ್ಟಿನ ಪರಿಣಾಮಗಳನ್ನು ಮಿತಗೊಳಿಸಲು ಹೇಗೆ ಸಹಕರಿಸಿದವು ಎಂಬುದರ ಬಗ್ಗೆ ನಾವೆಲ್ಲರೂ ಗಮನಹರಿಸಬೇಕಿದೆ. ನಮ್ಮ ನವೋದ್ಯಮಗಳು ಈ ನಿಟ್ಟಿನಲ್ಲಿ ಅಮೂಲ್ಯ ಕೊಡುಗೆ ನೀಡಿವೆ ಎಂದು ನುಡಿದರು.

ಈ ವೇದಿಕೆಯ ಫ್ರಾನ್ಸ್​ನ ತಾಂತ್ರಿಕ ದೃಷ್ಟಿಕೋನವನ್ನು ಪ್ರತಿಬಿಂಬಿಸುತ್ತದೆ. ಭಾರತ ಮತ್ತು ಫ್ರಾನ್ಸ್​ ದೇಶಗಳು ಹಲವು ವಿಷಯಗಳ ಬಗ್ಗೆ ನಿಕಟವಾಗಿ ಕೆಲಸ ಮಾಡುತ್ತಿವೆ. ಇವುಗಳಲ್ಲಿ ತಂತ್ರಜ್ಞಾನ ಮತ್ತು ಡಿಜಿಟಲ್ ಕ್ಷೇತ್ರಗಳು ಪರಸ್ಪರ ಸಹಕಾರವನ್ನು ಮುನ್ನಡೆಸುವ ಪ್ರಬಲ ಕ್ಷೇತ್ರಗಳಾಗಿ ಹೊರಹೊಮ್ಮುತ್ತಿವೆ. ಇದು ಈ ಕ್ಷಣದ ತುರ್ತು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಕಳೆದ ವರ್ಷ ಹಲವು ವಲಯಗಳಲ್ಲಿ ತೊಂದರೆ ಅನುಭವಿಸಿದೆವು. ಈಗಲೂ ಅಂಥದ್ದೇ ಪರಿಸ್ಥಿತಿ ಮುಂದುವರಿದಿದೆ. ತೊಂದರೆಗಳಿವೆ ಎಂಬ ಕಾರಣಕ್ಕೆ ನಾವು ಭರವಸೆ ಕಳೆದುಕೊಳ್ಳಬೇಕಿಲ್ಲ. ಆಗಿರುವ ತೊಂದರೆಯನ್ನು ಸರಿಪಡಿಸುವುದು ಮತ್ತು ಹೊಸ ಸವಾಲುಗಳಿಗೆ ಸನ್ನದ್ಧರಾಗುವುದು ಅತ್ಯಂತ ಮುಖ್ಯ ಎಂದು ಮೋದಿ ನುಡಿದರು. ಗಣಿ, ಬಾಹ್ಯಾಕಾಶ, ಬ್ಯಾಂಕಿಂಗ್, ಅಟಾಮಿಕ್ ಎನರ್ಜಿ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ನಾವು ದೊಡ್ಡಮಟ್ಟದ ಸುಧಾರಣೆಗಳನ್ನು ಮಾಡಿದ್ದೇವೆ. ಪಿಡುಗಿನ ನಡುವೆಯೂ ಭಾರತವು ಒಂದು ದೇಶವಾಗಿ ಹೊಸ ಸವಾಲುಗಳನ್ನು ಎದುರಿಸಿ, ಉತ್ತರ ಕಂಡುಕೊಂಡಿತು ಎಂದು ಮೋದಿ ವಿವರಿಸಿದರು.

(PM Narendra Modi Speaks in VivaTech Summit Lauds Innovation and Startups)

ಇದನ್ನೂ ಓದಿ: ಸಂಪುಟ ವಿಸ್ತರಣೆ ಗುಮಾನಿ ನಡುವೆ ವಾರದಲ್ಲಿ 5ನೇ ಬಾರಿ ಪ್ರಧಾನಿ ನರೇಂದ್ರ ಮೋದಿ ಸಭೆ; ಪ್ರಮುಖ ಸಚಿವರೊಂದಿಗೆ ಮಾತುಕತೆ

ಇದನ್ನೂ ಓದಿ: ಲಸಿಕೆ ಕೊರತೆ, ನಿಷ್ಕ್ರಿಯತೆ ಮುಚ್ಚಿ ಹಾಕಲು ಮೋದಿ ಸರ್ಕಾರ ಸುಳ್ಳು ಹೇಳುತ್ತಿದೆ; ರಾಹುಲ್ ಗಾಂಧಿ ಟ್ವೀಟ್

Published On - 4:38 pm, Wed, 16 June 21

Video: ವಿದ್ಯುತ್ ಶಾಕ್ ತಗುಲಿ ಬಿದ್ದ ಮರಿಯನ್ನು ರಕ್ಷಿಸಿದ ಕಾಡಾನೆ ಹಿಂಡು
Video: ವಿದ್ಯುತ್ ಶಾಕ್ ತಗುಲಿ ಬಿದ್ದ ಮರಿಯನ್ನು ರಕ್ಷಿಸಿದ ಕಾಡಾನೆ ಹಿಂಡು
ಮನೆಯಲ್ಲಿ ಅಡುಗೆ ಕೋಣೆ ಯಾವ ದಿಕ್ಕಿನಲ್ಲಿರಬೇಕು? ವಾಸ್ತು ವಿವರಣೆ ಇಲ್ಲಿದೆ
ಮನೆಯಲ್ಲಿ ಅಡುಗೆ ಕೋಣೆ ಯಾವ ದಿಕ್ಕಿನಲ್ಲಿರಬೇಕು? ವಾಸ್ತು ವಿವರಣೆ ಇಲ್ಲಿದೆ
ಸುಬ್ರಹ್ಮಣ್ಯನ ಲಹರಿಗಳಿರುವ ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸುಬ್ರಹ್ಮಣ್ಯನ ಲಹರಿಗಳಿರುವ ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ