Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇರಾನ್ ಅಧ್ಯಕ್ಷರ ಜತೆ ಪ್ರಧಾನಿ ಮೋದಿ ದೂರವಾಣಿ ಮಾತುಕತೆ: ಇಸ್ರೇಲ್ – ಹಮಾಸ್ ಸಂಘರ್ಷದ ಬಗ್ಗೆ ಚರ್ಚೆ

ದ್ವಿಪಕ್ಷೀಯ ಸಹಕಾರದಲ್ಲಿನ ಪ್ರಗತಿಯನ್ನು ಇಬ್ಬರೂ ನಾಯಕರು ಪರಿಶೀಲಿಸಿದರು. ಪ್ರಾದೇಶಿಕ ಸಂಪರ್ಕವನ್ನು ಸುಧಾರಿಸಲು ಇರಾನ್‌ನ ಚಬಹಾರ್ ಬಂದರಿಗೆ ನೀಡಲಾದ ಗಮನ ಮತ್ತು ಆದ್ಯತೆಯನ್ನು ಅವರು ಸ್ವಾಗತಿಸಿದರು. ಪ್ರಾದೇಶಿಕ ಶಾಂತಿ, ಭದ್ರತೆ ಮತ್ತು ಸ್ಥಿರತೆಗೆ ಸಂಬಂಧಿಸಿ ಸದಾ ಸಂಪರ್ಕದಲ್ಲಿರಲು ಎರಡೂ ಕಡೆಯವರು ಒಪ್ಪಿಕೊಂಡರು ಎಂದು ಪಿಎಂಒ ಪ್ರಕಟಣೆ ತಿಳಿಸಿದೆ.

ಇರಾನ್ ಅಧ್ಯಕ್ಷರ ಜತೆ ಪ್ರಧಾನಿ ಮೋದಿ ದೂರವಾಣಿ ಮಾತುಕತೆ: ಇಸ್ರೇಲ್ - ಹಮಾಸ್ ಸಂಘರ್ಷದ ಬಗ್ಗೆ ಚರ್ಚೆ
ಪ್ರಧಾನಮಂತ್ರಿ ನರೇಂದ್ರ ಮೋದಿ & ಇರಾನ್ ಅಧ್ಯಕ್ಷ ಡಾ. ಸೆಯ್ಯದ್ ಇಬ್ರಾಹಿಂ ರೈಸಿ
Follow us
Ganapathi Sharma
|

Updated on: Nov 06, 2023 | 7:46 PM

ನವದೆಹಲಿ, ನವೆಂಬರ್ 6: ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರು ಸೋಮವಾರ ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್ (Iran) ಅಧ್ಯಕ್ಷ ಡಾ. ಸೆಯ್ಯದ್ ಇಬ್ರಾಹಿಂ ರೈಸಿ (Dr. Seyyed Ebrahim Raisi) ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದರು. ಉಭಯ ನಾಯಕರು ಪಶ್ಚಿಮ ಏಷ್ಯಾ ಪ್ರದೇಶದಲ್ಲಿನ ಉದ್ವಿಗ್ನ ಪರಿಸ್ಥಿತಿ ಮತ್ತು ಇಸ್ರೇಲ್ – ಹಮಾಸ್ ನಡುವಣ ಸಂಘರ್ಷದ (Israel Hamas Conflict) ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು ಎಂದು ಪ್ರಧಾನಮಂತ್ರಿಗಳ ಕಾರ್ಯಾಲಯ ತಿಳಿಸಿದೆ.

ಭಯೋತ್ಪಾದಕ ಕೃತ್ಯಗಳು, ಹಿಂಸಾಚಾರ ಮತ್ತು ನಾಗರಿಕರ ಜೀವಹಾನಿಯ ಬಗ್ಗೆ ಪ್ರಧಾನಿ ಮೋದಿ ಅವರು ಇರಾನ್​ ಅಧ್ಯಕ್ಷರ ಜತೆ ತೀವ್ರ ಕಳವಳ ವ್ಯಕ್ತಪಡಿಸಿದರು. ಇಸ್ರೇಲ್ – ಪ್ಯಾಲೆಸ್ತೀನ್ ವಿಷಯದಲ್ಲಿ ಭಾರತದ ದೀರ್ಘಕಾಲದ ಮತ್ತು ಸ್ಥಿರವಾದ ನಿಲುವನ್ನು ಅವರು ಪುನರುಚ್ಚರಿಸಿದರು ಎಂದು ಪಿಎಂಒ ಪ್ರಕಟಣೆ ತಿಳಿಸಿದೆ.

ಇರಾನ್​ ಅಧ್ಯಕ್ಷ ರೈಸಿ ಅವರು ಮೋದಿ ಜತೆ ಪರಿಸ್ಥಿತಿಯ ಕುರಿತು ಪರಾಮರ್ಶಿಸಿದ ವಿಚಾರಗಳನ್ನು ಹಂಚಿಕೊಂಡರು.

ಸಂಘರ್ಷ ಉಲ್ಬಣಗೊಳ್ಳುವುದನ್ನು ತಡೆಯಬೇಕಾದ ಅಗತ್ಯತೆ, ನಿರಂತರ ಮಾನವೀಯ ನೆರವು, ಶಾಂತಿ ಮತ್ತು ಸ್ಥಿರತೆಯ ಮರುಸ್ಥಾಪನೆಯನ್ನು ಖಾತ್ರಿಪಡಿಸುವ ಅಗತ್ಯವನ್ನು ಉಭಯ ನಾಯಕರು ಒತ್ತಿ ಹೇಳಿದರು.

ಇದನ್ನೂ ಓದಿ: ಪ್ಯಾರಿಸ್ ವಿಮಾನ ನಿಲ್ದಾಣದಲ್ಲಿ ಸಾಮೂಹಿಕ ನಮಾಜ್: ವಿವಾದಕ್ಕೆ ಕಾರಣವಾದ ಜೋರ್ಡಾನ್ ಪ್ರಯಾಣಿಕರ ನಡೆ

ದ್ವಿಪಕ್ಷೀಯ ಸಹಕಾರದಲ್ಲಿನ ಪ್ರಗತಿಯನ್ನು ಇಬ್ಬರೂ ನಾಯಕರು ಪರಿಶೀಲಿಸಿದರು. ಪ್ರಾದೇಶಿಕ ಸಂಪರ್ಕವನ್ನು ಸುಧಾರಿಸಲು ಇರಾನ್‌ನ ಚಬಹಾರ್ ಬಂದರಿಗೆ ನೀಡಲಾದ ಗಮನ ಮತ್ತು ಆದ್ಯತೆಯನ್ನು ಅವರು ಸ್ವಾಗತಿಸಿದರು.

ಪ್ರಾದೇಶಿಕ ಶಾಂತಿ, ಭದ್ರತೆ ಮತ್ತು ಸ್ಥಿರತೆಗೆ ಸಂಬಂಧಿಸಿ ಸದಾ ಸಂಪರ್ಕದಲ್ಲಿರಲು ಎರಡೂ ಕಡೆಯವರು ಒಪ್ಪಿಕೊಂಡರು ಎಂದು ಪಿಎಂಒ ಪ್ರಕಟಣೆ ತಿಳಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ