ಅಮೃತ ಮಹೋತ್ಸವದ ಅಧಿವೇಶನ ಇದು, ಸಂಸತ್ತಿನ ಘನತೆ ಹೆಚ್ಚಿಸುವ ವರ್ತನೆ ಇರಲಿ: ನರೇಂದ್ರ ಮೋದಿ

‘ನಾವೀಗ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ ಸಂಭ್ರಮದಲ್ಲಿದ್ದೇವೆ. ದೇಶಕ್ಕೆ ಮಾರ್ಗದರ್ಶನ ನೀಡುವ ರೀತಿಯಲ್ಲಿ ಸಂಸತ್ತಿನ ಹಿರಿಮೆ ಹೆಚ್ಚಿಸಲು ಎಲ್ಲರೂ ಶ್ರಮಿಸಬೇಕು’ ಎಂದು ತಿಳಿಸಿದರು.

ಅಮೃತ ಮಹೋತ್ಸವದ ಅಧಿವೇಶನ ಇದು, ಸಂಸತ್ತಿನ ಘನತೆ ಹೆಚ್ಚಿಸುವ ವರ್ತನೆ ಇರಲಿ: ನರೇಂದ್ರ ಮೋದಿ
ಪ್ರಧಾನಮಂತ್ರಿ ನರೇಂದ್ರ ಮೋದಿ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jul 18, 2022 | 10:09 AM

ದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ (Monsoon Session) ಇಂದಿನಿಂದ (ಜುಲೈ 18) ಆರಂಭವಾಗಲಿದ್ದು, ಸಂಸತ್ ಭವನದ (Parliament) ಆವರಣದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ‘ಸಂಸತ್ತು ಎನ್ನುವುದು ಪವಿತ್ರ ಸ್ಥಳ. ಯಾವುದೇ ವಿಷಯವನ್ನು ಚರ್ಚಿಸೋಣ, ಇಲ್ಲಿ ಅತ್ಯುತ್ತಮ ವಿಚಾರಗಳು ಚರ್ಚೆಯಾಗಬೇಕು. ಚರ್ಚೆಗಳಲ್ಲಿ ವಿರೋಧ ಪಕ್ಷಗಳು ಸಹ ಸಕ್ರಿಯವಾಗಿ ಭಾಗಿಯಾಗಬೇಕು. ಅರ್ಥಪೂರ್ಣ ಸಂವಾದ ನಡೆಸೋಣ. ಬೇಕಿದ್ದ ವಾದ-ವಿವಾದಗಳು ನಡೆಯಲಿ’ ಎಂದು ಸಲಹೆ ಮಾಡಿದರು.

ಈ ಬಾರಿಯ ಅಧಿವೇಶನವು ಹಲವು ಕಾರಣಗಳಿಂದ ಮಹತ್ವ ಪಡೆದುಕೊಂಡಿದೆ ಎಂದ ಮೋದಿ, ಇದೇ ಅಧಿವೇಶನದಲ್ಲಿ ರಾಷ್ಟ್ರಪತಿ, ಉಪರಾಷ್ಟ್ರಪತಿ ಚುನಾವಣೆ ನಡೆಯಲಿದೆ. ನಾವೀಗ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ ಸಂಭ್ರಮದಲ್ಲಿದ್ದೇವೆ. ದೇಶಕ್ಕೆ ಮಾರ್ಗದರ್ಶನ ನೀಡುವ ರೀತಿಯಲ್ಲಿ ಸಂಸತ್ತಿನ ಹಿರಿಮೆ ಹೆಚ್ಚಿಸಲು ಎಲ್ಲರೂ ಶ್ರಮಿಸಬೇಕು’ ಎಂದು ತಿಳಿಸಿದರು.

ದೇಶದ ಸ್ವಾತಂತ್ರ್ಯ ಹೋರಾಟವನ್ನು ಮತ್ತು ಅಭಿವೃದ್ಧಿಯನ್ನು ನೆನಪಿಸಿಕೊಳ್ಳುವ ಕಾಲಘಟ್ಟ ಇದು. ನಾವು ಈ ಹಂತಕ್ಕೆ ಹೇಗೆ ಬಂದೆವು ಎಂದು ಯೋಚಿಸಬೇಕು. ದೇಶಕ್ಕೆ ಸಂಸತ್ತು ಮಾರ್ಗದರ್ಶನ ಮಾಡಬೇಕು. ದೇಶವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು, ಹೊಸ ಉತ್ಸಾಹ ತುಂಬಲು ಸಂಸತ್ತು ಶ್ರಮಿಸಬೇಕು ಎಂದು ಸಲಹೆ ಮಾಡಿದರು. ಸ್ವಾತಂತ್ರ್ಯಕ್ಕಾಗಿ ಹೋರಾಡಿದವರ ತ್ಯಾಗ ಮತ್ತು ಬಲಿದಾನಗಳನ್ನು ನಾವೆಲ್ಲರೂ ನೆನಪಿನಲ್ಲಿ ಇಟ್ಟುಕೊಳ್ಳೋಣ. ಅವರ ಆಶಯಗಳಿಗೆ ದಕ್ಕೆಯಾಗದಂತೆ ವರ್ತಿಸೋಣ ಎಂದು ಕರೆ ನೀಡಿದರು.

ಸದನವನ್ನು ಸಂವಾದದ ಸತ್ಸಂಗದ ಕ್ಷೇತ್ರ, ತೀರ್ಥಕ್ಷೇತ್ರ ಎಂದುಕೊಳ್ಳಬೇಕು. ಯಾವುದೇ ವಿಷಯಗಳ ಬಗ್ಗೆ ಉತ್ತಮ ವಿಶ್ಲೇಷಣೆಗಳು ನಡೆಯಬೇಕು. ನೀತಿ ಮತ್ತು ನಿರ್ಣಯಗಳ ಬಗ್ಗೆ ನಿಮ್ಮ ಆಲೋಚನೆ ಹಂಚಿಕೊಳ್ಳಿ. ಸಕಾರಾತ್ಮಕ ಚಿಂತನೆಗೆ ಆದ್ಯತೆ ಇರಲಿ ಎಂದು ಸಲಹೆ ಮಾಡಿದರು.

Published On - 10:08 am, Mon, 18 July 22

Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ