ಪ್ಯಾಲೆಸ್ತೀನ್ ಅಧ್ಯಕ್ಷರೊಂದಿಗೆ ಮೋದಿ ಮಾತು; ಗಾಜಾ ಆಸ್ಪತ್ರೆ ದಾಳಿಯಲ್ಲಿ ಸಾವಿಗೀಡಾದವರಿಗೆ ಸಂತಾಪ

ಪ್ಯಾಲೆಸ್ತೀನ್ ಪ್ರಾಧಿಕಾರದ ಅಧ್ಯಕ್ಷ ಹೆಚ್.ಇ. ಮಹಮೂದ್ ಅಬ್ಬಾಸ್ ಅವರೊಂದಿಗೆ ಮಾತನಾಡಿದೆ. ಗಾಜಾದ ಅಲ್ ಅಹ್ಲಿ ಆಸ್ಪತ್ರೆಯಲ್ಲಿ ನಾಗರಿಕರು  ಸಾವಿಗೀಡಾಗಿದ್ದು, ಅದಕ್ಕೆ ನನ್ನ ಸಂತಾಪವನ್ನು ತಿಳಿಸಿದ್ದೇನೆ. ನಾವು ಪ್ಯಾಲೆಸ್ತೀನಿಯನ್ ಜನರಿಗೆ ಮಾನವೀಯ ನೆರವು ಕಳುಹಿಸುವುದನ್ನು ಮುಂದುವರಿಸುತ್ತೇವೆ ಎಂದು ಹೇಳಿರುವುದಾಗಿ ಮೋದಿ ಟ್ವೀಟ್ ಮಾಡಿದ್ದಾರೆ.

ಪ್ಯಾಲೆಸ್ತೀನ್ ಅಧ್ಯಕ್ಷರೊಂದಿಗೆ ಮೋದಿ ಮಾತು; ಗಾಜಾ ಆಸ್ಪತ್ರೆ ದಾಳಿಯಲ್ಲಿ ಸಾವಿಗೀಡಾದವರಿಗೆ ಸಂತಾಪ
ನರೇಂದ್ರ ಮೋದಿ
Follow us
ರಶ್ಮಿ ಕಲ್ಲಕಟ್ಟ
|

Updated on:Oct 19, 2023 | 7:18 PM

ದೆಹಲಿ ಅಕ್ಟೋಬರ್ 19: ಈಗ ನಡೆಯುತ್ತಿರುವ ಇಸ್ರೇಲ್-ಹಮಾಸ್ ಸಂಘರ್ಷದ (Israel-Hamas conflict) ಮಧ್ಯೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಗುರುವಾರ ಪ್ಯಾಲೆಸ್ತೀನ್ (Palestine) ಅಧ್ಯಕ್ಷ ಮಹಮೂದ್ ಅಬ್ಬಾಸ್ ಅವರೊಂದಿಗೆ ಮಾತನಾಡಿದ್ದು, ಗಾಜಾದ ಅಲ್-ಅಹ್ಲಿ ಆಸ್ಪತ್ರೆಯಲ್ಲಿ ನಾಗರಿಕ ಜೀವಗಳನ್ನು ಕಳೆದುಕೊಂಡಿರುವ ಬಗ್ಗೆ ಸಂತಾಪ ಸೂಚಿಸಿದ್ದಾರೆ. ಭಾರತವು ಪ್ಯಾಲೆಸ್ತೀನ್ ಜನರಿಗೆ ಮಾನವೀಯ ನೆರವು ಕಳುಹಿಸುತ್ತದೆ ಎಂದು ಭರವಸೆ ನೀಡಿದ ಪ್ರಧಾನಿ ಮೋದಿ, ಇಸ್ರೇಲ್-ಪ್ಯಾಲೆಸ್ತೀನ್ ವಿಷಯದಲ್ಲಿ ಭಾರತದ ದೀರ್ಘಕಾಲೀನ ತತ್ವಗಳ ನಿಲುವನ್ನು ಪುನರುಚ್ಚರಿಸಿದರು.

ಪ್ಯಾಲೆಸ್ತೀನ್ ಪ್ರಾಧಿಕಾರದ ಅಧ್ಯಕ್ಷ ಹೆಚ್.ಇ. ಮಹಮೂದ್ ಅಬ್ಬಾಸ್ ಅವರೊಂದಿಗೆ ಮಾತನಾಡಿದೆ. ಗಾಜಾದ ಅಲ್ ಅಹ್ಲಿ ಆಸ್ಪತ್ರೆಯಲ್ಲಿ ನಾಗರಿಕರು  ಸಾವಿಗೀಡಾಗಿದ್ದು, ಅದಕ್ಕೆ ನನ್ನ ಸಂತಾಪವನ್ನು ತಿಳಿಸಿದ್ದೇನೆ. ನಾವು ಪ್ಯಾಲೆಸ್ತೀನಿಯನ್ ಜನರಿಗೆ ಮಾನವೀಯ ನೆರವು ಕಳುಹಿಸುವುದನ್ನು ಮುಂದುವರಿಸುತ್ತೇವೆ. ಭಯೋತ್ಪಾದನೆಯ ಆತಂಕದ ಬಗ್ಗೆಯೂ ಮಾತನಾಡಿದ್ದು, ಈ ಪ್ರದೇಶದಲ್ಲಿ ಹಿಂಸಾಚಾರ ಮತ್ತು ಹದಗೆಡುತ್ತಿರುವ ಭದ್ರತಾ ಪರಿಸ್ಥಿತಿ ಇಸ್ರೇಲ್-ಪ್ಯಾಲೆಸ್ತೀನ್ ವಿಷಯದಲ್ಲಿ ಭಾರತದ ದೀರ್ಘಕಾಲೀನ ತತ್ವದ ನಿಲುವನ್ನು ಪುನರುಚ್ಚರಿಸಿದೆ” ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಅಕ್ಟೋಬರ್ 7 ರಂದು ಇಸ್ರೇಲ್ ಮೇಲೆ ಹಮಾಸ್ ಅನಿರೀಕ್ಷಿತ ಆಕ್ರಮಣದ ನಂತರ ಇಸ್ರೇಲ್-ಹಮಾಸ್ ಯುದ್ಧ ಭುಗಿಲೆದ್ದ ನಂತರ ಪ್ರಧಾನಿ ಮೋದಿ ಪ್ಯಾಲೆಸ್ತೀನ್ ಅಧಿಕಾರಿಗಳೊಂದಿಗೆ ಮಾತನಾಡಿದ್ದು ಇದೇ ಮೊದಲು.

ಪ್ರಧಾನಿ ಮೋದಿ ಅವರು ಇಸ್ರೇಲ್‌ಗೆ ಒಗ್ಗಟ್ಟು ವ್ಯಕ್ತಪಡಿಸಿದ್ದಾರೆ. ಇದಕ್ಕೂ ಮೊದಲು ಇಸ್ರೇಲ್ ಪ್ರಧಾನಿ ನೆತನ್ಯಾಹು ಅವರೊಂದಿಗೆ ಮಾತನಾಡಿದ್ದಾರೆ. ಗಾಜಾದ ಆಸ್ಪತ್ರೆಯೊಂದರ ಮೇಲೆ ನಡೆದ ದಾಳಿಯಲ್ಲಿ ಸಾವಿರಾರು ಮಂದಿ ಸಾವನ್ನಪ್ಪಿದ ವರದಿಯ ನಂತರ ನಡೆಯುತ್ತಿರುವ ಸಂಘರ್ಷದ ನಾಗರಿಕ ಸಾವುನೋವುಗಳ ಬಗ್ಗೆ ಪ್ರಧಾನಿ ಮೋದಿ ಬುಧವಾರ ಆಘಾತ ಮತ್ತು ಕಳವಳ ವ್ಯಕ್ತಪಡಿಸಿದರು.

ಇಸ್ರೇಲ್ ಮತ್ತು ಯುಎಸ್ ಭಯೋತ್ಪಾದಕ ಎಂದು ಬ್ರಾಂಡ್ ಮಾಡಿದ ಪ್ಯಾಲೆಸ್ತೀನಿಯದ ಇಸ್ಲಾಮಿಕ್ ಜಿಹಾದ್‌ನ ಮಿಸ್‌ಫೈರ್ ರಾಕೆಟ್‌ನಿಂದ ಈ ದಾಳಿ ನಡೆದಿದೆ ಎಂದು ಸಾಬೀತುಪಡಿಸಲು ಇಸ್ರೇಲಿ ರಕ್ಷಣಾ ಪಡೆಗಳು ವಿಶ್ಲೇಷಣಾ ವರದಿಯನ್ನು ಉಲ್ಲೇಖಿಸಿದ್ದರೂ ಯಾರೂ ದಾಳಿಯ ಜವಾಬ್ದಾರಿಯನ್ನು ತೆಗೆದುಕೊಂಡಿಲ್ಲ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:57 pm, Thu, 19 October 23

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್