ದೆಹಲಿ ಅಕ್ಟೋಬರ್ 19: ಈಗ ನಡೆಯುತ್ತಿರುವ ಇಸ್ರೇಲ್-ಹಮಾಸ್ ಸಂಘರ್ಷದ (Israel-Hamas conflict) ಮಧ್ಯೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಗುರುವಾರ ಪ್ಯಾಲೆಸ್ತೀನ್ (Palestine) ಅಧ್ಯಕ್ಷ ಮಹಮೂದ್ ಅಬ್ಬಾಸ್ ಅವರೊಂದಿಗೆ ಮಾತನಾಡಿದ್ದು, ಗಾಜಾದ ಅಲ್-ಅಹ್ಲಿ ಆಸ್ಪತ್ರೆಯಲ್ಲಿ ನಾಗರಿಕ ಜೀವಗಳನ್ನು ಕಳೆದುಕೊಂಡಿರುವ ಬಗ್ಗೆ ಸಂತಾಪ ಸೂಚಿಸಿದ್ದಾರೆ. ಭಾರತವು ಪ್ಯಾಲೆಸ್ತೀನ್ ಜನರಿಗೆ ಮಾನವೀಯ ನೆರವು ಕಳುಹಿಸುತ್ತದೆ ಎಂದು ಭರವಸೆ ನೀಡಿದ ಪ್ರಧಾನಿ ಮೋದಿ, ಇಸ್ರೇಲ್-ಪ್ಯಾಲೆಸ್ತೀನ್ ವಿಷಯದಲ್ಲಿ ಭಾರತದ ದೀರ್ಘಕಾಲೀನ ತತ್ವಗಳ ನಿಲುವನ್ನು ಪುನರುಚ್ಚರಿಸಿದರು.
ಪ್ಯಾಲೆಸ್ತೀನ್ ಪ್ರಾಧಿಕಾರದ ಅಧ್ಯಕ್ಷ ಹೆಚ್.ಇ. ಮಹಮೂದ್ ಅಬ್ಬಾಸ್ ಅವರೊಂದಿಗೆ ಮಾತನಾಡಿದೆ. ಗಾಜಾದ ಅಲ್ ಅಹ್ಲಿ ಆಸ್ಪತ್ರೆಯಲ್ಲಿ ನಾಗರಿಕರು ಸಾವಿಗೀಡಾಗಿದ್ದು, ಅದಕ್ಕೆ ನನ್ನ ಸಂತಾಪವನ್ನು ತಿಳಿಸಿದ್ದೇನೆ. ನಾವು ಪ್ಯಾಲೆಸ್ತೀನಿಯನ್ ಜನರಿಗೆ ಮಾನವೀಯ ನೆರವು ಕಳುಹಿಸುವುದನ್ನು ಮುಂದುವರಿಸುತ್ತೇವೆ. ಭಯೋತ್ಪಾದನೆಯ ಆತಂಕದ ಬಗ್ಗೆಯೂ ಮಾತನಾಡಿದ್ದು, ಈ ಪ್ರದೇಶದಲ್ಲಿ ಹಿಂಸಾಚಾರ ಮತ್ತು ಹದಗೆಡುತ್ತಿರುವ ಭದ್ರತಾ ಪರಿಸ್ಥಿತಿ ಇಸ್ರೇಲ್-ಪ್ಯಾಲೆಸ್ತೀನ್ ವಿಷಯದಲ್ಲಿ ಭಾರತದ ದೀರ್ಘಕಾಲೀನ ತತ್ವದ ನಿಲುವನ್ನು ಪುನರುಚ್ಚರಿಸಿದೆ” ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
Spoke to the President of the Palestinian Authority H.E. Mahmoud Abbas. Conveyed my condolences at the loss of civilian lives at the Al Ahli Hospital in Gaza. We will continue to send humanitarian assistance for the Palestinian people. Shared our deep concern at the terrorism,…
— Narendra Modi (@narendramodi) October 19, 2023
ಅಕ್ಟೋಬರ್ 7 ರಂದು ಇಸ್ರೇಲ್ ಮೇಲೆ ಹಮಾಸ್ ಅನಿರೀಕ್ಷಿತ ಆಕ್ರಮಣದ ನಂತರ ಇಸ್ರೇಲ್-ಹಮಾಸ್ ಯುದ್ಧ ಭುಗಿಲೆದ್ದ ನಂತರ ಪ್ರಧಾನಿ ಮೋದಿ ಪ್ಯಾಲೆಸ್ತೀನ್ ಅಧಿಕಾರಿಗಳೊಂದಿಗೆ ಮಾತನಾಡಿದ್ದು ಇದೇ ಮೊದಲು.
ಪ್ರಧಾನಿ ಮೋದಿ ಅವರು ಇಸ್ರೇಲ್‌ಗೆ ಒಗ್ಗಟ್ಟು ವ್ಯಕ್ತಪಡಿಸಿದ್ದಾರೆ. ಇದಕ್ಕೂ ಮೊದಲು ಇಸ್ರೇಲ್ ಪ್ರಧಾನಿ ನೆತನ್ಯಾಹು ಅವರೊಂದಿಗೆ ಮಾತನಾಡಿದ್ದಾರೆ. ಗಾಜಾದ ಆಸ್ಪತ್ರೆಯೊಂದರ ಮೇಲೆ ನಡೆದ ದಾಳಿಯಲ್ಲಿ ಸಾವಿರಾರು ಮಂದಿ ಸಾವನ್ನಪ್ಪಿದ ವರದಿಯ ನಂತರ ನಡೆಯುತ್ತಿರುವ ಸಂಘರ್ಷದ ನಾಗರಿಕ ಸಾವುನೋವುಗಳ ಬಗ್ಗೆ ಪ್ರಧಾನಿ ಮೋದಿ ಬುಧವಾರ ಆಘಾತ ಮತ್ತು ಕಳವಳ ವ್ಯಕ್ತಪಡಿಸಿದರು.
ಇಸ್ರೇಲ್ ಮತ್ತು ಯುಎಸ್ ಭಯೋತ್ಪಾದಕ ಎಂದು ಬ್ರಾಂಡ್ ಮಾಡಿದ ಪ್ಯಾಲೆಸ್ತೀನಿಯದ ಇಸ್ಲಾಮಿಕ್ ಜಿಹಾದ್‌ನ ಮಿಸ್‌ಫೈರ್ ರಾಕೆಟ್‌ನಿಂದ ಈ ದಾಳಿ ನಡೆದಿದೆ ಎಂದು ಸಾಬೀತುಪಡಿಸಲು ಇಸ್ರೇಲಿ ರಕ್ಷಣಾ ಪಡೆಗಳು ವಿಶ್ಲೇಷಣಾ ವರದಿಯನ್ನು ಉಲ್ಲೇಖಿಸಿದ್ದರೂ ಯಾರೂ ದಾಳಿಯ ಜವಾಬ್ದಾರಿಯನ್ನು ತೆಗೆದುಕೊಂಡಿಲ್ಲ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 6:57 pm, Thu, 19 October 23