ವ್ಲಾಡಿಮಿರ್ ಪುಟಿನ್ ಜತೆ ಮೋದಿ ಮಾತು; ರಷ್ಯಾ-ಉಕ್ರೇನ್ ಯುದ್ಧದ ಬಗ್ಗೆ ಭಾರತದ ನಿಲುವು ಪುನರುಚ್ಚರಿಸಿದ ಪ್ರಧಾನಿ

| Updated By: ರಶ್ಮಿ ಕಲ್ಲಕಟ್ಟ

Updated on: Jul 01, 2022 | 5:36 PM

ವ್ಲಾಡಿಮಿರ್ ಪುಟಿನ್ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ ಪ್ರಧಾನಿ ಮೋದಿ ಉಕ್ರೇನ್ ಸಂಘರ್ಷದ ಬಗ್ಗೆ ಭಾರತದ ದೀರ್ಘಕಾಲದ ನಿಲುವನ್ನು ಪುನರುಚ್ಚರಿಸಿದ್ದು, ಮಾತುಕತೆ ಮತ್ತು ರಾಜತಾಂತ್ರಿಕತೆಗೆ ಒಲವು ತೋರಿದ್ದಾರೆ.

ವ್ಲಾಡಿಮಿರ್ ಪುಟಿನ್ ಜತೆ ಮೋದಿ ಮಾತು; ರಷ್ಯಾ-ಉಕ್ರೇನ್ ಯುದ್ಧದ ಬಗ್ಗೆ ಭಾರತದ ನಿಲುವು ಪುನರುಚ್ಚರಿಸಿದ ಪ್ರಧಾನಿ
ಪುಟಿನ್ - ಮೋದಿ (ಸಂಗ್ರಹ ಚಿತ್ರ)
Follow us on

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಈ ವೇಳೆ ಪ್ರಧಾನಿ ಮೋದಿ ಉಕ್ರೇನ್ ಸಂಘರ್ಷದ ಬಗ್ಗೆ ಭಾರತದ ದೀರ್ಘಕಾಲದ ನಿಲುವನ್ನು ಪುನರುಚ್ಚರಿಸಿದ್ದು, ಮಾತುಕತೆ ಮತ್ತು ರಾಜತಾಂತ್ರಿಕತೆಗೆ ಒಲವು ತೋರಿದ್ದಾರೆ. 2021 ರ ಡಿಸೆಂಬರ್‌ನಲ್ಲಿ ಅಧ್ಯಕ್ಷ ಪುಟಿನ್ ಅವರ ಭಾರತಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ತೆಗೆದುಕೊಂಡ ನಿರ್ಧಾರಗಳ ಅನುಷ್ಠಾನವನ್ನು ಉಭಯ ನಾಯಕರು ಪರಿಶೀಲಿಸಿದರು ಎಂದು ಪ್ರಧಾನ ಮಂತ್ರಿ ಕಚೇರಿಯ ಹೇಳಿಕೆ ತಿಳಿಸಿದೆ. ಕೃಷಿ ಸರಕುಗಳು, ರಸಗೊಬ್ಬರಗಳು ಮತ್ತು ಫಾರ್ಮಾ ಉತ್ಪನ್ನಗಳಲ್ಲಿ ದ್ವಿಪಕ್ಷೀಯ ವ್ಯಾಪಾರವನ್ನು ಹೇಗೆ ಮತ್ತಷ್ಟು ಉತ್ತೇಜಿಸಬಹುದು ಎಂಬುದರ ಕುರಿತು ಅವರು ವಿಚಾರಗಳನ್ನು ವಿನಿಮಯ ಮಾಡಿಕೊಂಡರು. ಅಂತರರಾಷ್ಟ್ರೀಯ ಇಂಧನ ಮತ್ತು ಆಹಾರ ಮಾರುಕಟ್ಟೆಯ ಸ್ಥಿತಿ ಸೇರಿದಂತೆ ಜಾಗತಿಕ ವಿಷಯಗಳ ಬಗ್ಗೆಯೂ  ಉಭಯ ನಾಯಕರು ಚರ್ಚಿಸಿದ್ದಾರೆ ಎಂದು ಹೇಳಿಕೆ ತಿಳಿಸಿದೆ.

“ಉಕ್ರೇನ್‌ನಲ್ಲಿ ನಡೆಯುತ್ತಿರುವ ಸಂಘರ್ಷ ಬಗ್ಗೆ ಮಾತನಾಡಿದಾಗ ಮಾತುಕತೆ ಮತ್ತು ರಾಜತಾಂತ್ರಿಕತೆಯ ಪರವಾಗಿ ಭಾರತದ ದೀರ್ಘಕಾಲದ ನಿಲುವನ್ನು ಪ್ರಧಾನಿ ಪುನರುಚ್ಚರಿಸಿದರು”.ಜಾಗತಿಕ ಮತ್ತು ದ್ವಿಪಕ್ಷೀಯ ವಿಷಯಗಳ ಬಗ್ಗೆ ನಿಯಮಿತವಾಗಿ ಸಮಾಲೋಚನೆ ನಡೆಸಲು ನಾಯಕರು ಒಪ್ಪಿಕೊಂಡರು ಎಂದು ಎಂದು ಪಿಎಂಒ ಹೇಳಿದೆ.

 

Published On - 5:16 pm, Fri, 1 July 22