AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮ ಏಷ್ಯಾ ಸಂಘರ್ಷದ ಕುರಿತು ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಜೊತೆ ಪ್ರಧಾನಿ ಮೋದಿ ಮಾತುಕತೆ

ಪ್ರಧಾನಿ ನರೇಂದ್ರ ಮೋದಿ ಪಶ್ಚಿಮ ಏಷ್ಯಾದ ಸಂಘರ್ಷದ ಕುರಿತು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ಮಾತನಾಡಿದ್ದಾರೆ. ಈ ಉದ್ವಿಗ್ನತೆಯನ್ನು ಶಮನಗೊಳಿಸುವ, ಮಾತುಕತೆ ಮತ್ತು ರಾಜತಾಂತ್ರಿಕತೆಯ ತುರ್ತು ಅಗತ್ಯವನ್ನು ಮೋದಿ ಒತ್ತಿ ಹೇಳಿದ್ದಾರೆ.ಪಶ್ಚಿಮ ಏಷ್ಯಾ ಪ್ರದೇಶದ ಶಾಂತಿ ಮತ್ತು ಸ್ಥಿರತೆಯನ್ನು ಮುನ್ನಡೆಸಲು ನಿಕಟ ಸಮನ್ವಯವನ್ನು ಮುಂದುವರಿಸಲು ಇಬ್ಬರೂ ನಾಯಕರು ಒಗ್ಗಟ್ಟಾಗಿರುವುದಾಗಿ ಅವರು ಹೇಳಿದರು.

ಪಶ್ಚಿಮ ಏಷ್ಯಾ ಸಂಘರ್ಷದ ಕುರಿತು ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಜೊತೆ ಪ್ರಧಾನಿ ಮೋದಿ ಮಾತುಕತೆ
Pm Modi With Macron
ಸುಷ್ಮಾ ಚಕ್ರೆ
|

Updated on: Mar 19, 2026 | 6:15 PM

Share

ನವದೆಹಲಿ, ಮಾರ್ಚ್ 19: ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ಮಾತುಕತೆ ನಡೆಸಿದ್ದು, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಉಲ್ಬಣವನ್ನು ಶಮನಗೊಳಿಸುವಲ್ಲಿ ಸಂವಾದ ಮತ್ತು ರಾಜತಾಂತ್ರಿಕತೆಯ ತುರ್ತು ಅವಶ್ಯಕತೆಯಿದೆ ಎಂದು ಹೇಳಿದ್ದಾರೆ. ಈ ಪ್ರದೇಶದ ಶಾಂತಿ ಮತ್ತು ಸ್ಥಿರತೆಗಾಗಿ ಮ್ಯಾಕ್ರನ್ ಜೊತೆ ಸಮನ್ವಯವನ್ನು ಸಾಧಿಸಲು ಸಿದ್ಧ ಎಂದು ಮೋದಿ ಹೇಳಿದ್ದಾರೆ.

“ನನ್ನ ಆತ್ಮೀಯ ಸ್ನೇಹಿತರಾದ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ಪಶ್ಚಿಮ ಏಷ್ಯಾದ ಪರಿಸ್ಥಿತಿ ಮತ್ತು ಉದ್ವಿಗ್ನತೆಯನ್ನು ಶಮನಗೊಳಿಸುವ ತುರ್ತು ಅಗತ್ಯದ ಕುರಿತು ಹಾಗೂ ಸಂವಾದ, ರಾಜತಾಂತ್ರಿಕತೆಯ ಮೂಲಕ ಪರಿಹಾರ ಕಂಡುಕೊಳ್ಳುವ ಕುರಿತು ಮಾತನಾಡಿದ್ದೇನೆ” ಎಂದು ಪ್ರಧಾನಿ ಮೋದಿ ಎಕ್ಸ್​​ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ಸರಿಯಾಗೇ ಮಾಡುತ್ತಿದೆ; ಮೋದಿ ಸರ್ಕಾರವನ್ನು ಸಮರ್ಥಿಸಿಕೊಂಡ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ!

ಇದಕ್ಕೂ ಮೊದಲು, ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಬಗ್ಗೆ ಚರ್ಚಿಸಲು ಪ್ರಧಾನಿ ಮೋದಿ ಒಮಾನ್‌ನ ಸುಲ್ತಾನ್ ಹೈತಮ್ ಬಿನ್ ತಾರಿಕ್ ಮತ್ತು ಮಲೇಷ್ಯಾದ ಪ್ರಧಾನಿ ಅನ್ವರ್ ಇಬ್ರಾಹಿಂ ಅವರೊಂದಿಗೆ ಮಾತನಾಡಿದ್ದರು. ಪಶ್ಚಿಮ ಏಷ್ಯಾದಲ್ಲಿ ಸಂಘರ್ಷದ ಉಲ್ಬಣವನ್ನು ಕಡಿಮೆ ಮಾಡಲು, ಶಾಂತಿ ಮತ್ತು ಸ್ಥಿರತೆಯನ್ನು ಪುನಃಸ್ಥಾಪಿಸುವ ಬಗ್ಗೆ ಅವರು ಚರ್ಚಿಸಿದ್ದರು.

“ನನ್ನ ಸಹೋದರ ಸುಲ್ತಾನ್ ಹೈತಮ್ ಬಿನ್ ತಾರಿಕ್ ಅವರೊಂದಿಗೆ ಫಲಪ್ರದ ಸಂಭಾಷಣೆ ನಡೆಸಿದೆ. ಹಾಗೇ, ಒಮಾನ್ ಜನರಿಗೆ ಈದ್ ಶುಭಾಶಯಗಳನ್ನು ತಿಳಿಸಿದೆ. ಉದ್ವಿಗ್ನತೆಯನ್ನು ಶಮನಗೊಳಿಸಲು ಮತ್ತು ಶಾಂತಿ, ಸ್ಥಿರತೆಯನ್ನು ಪುನಃಸ್ಥಾಪಿಸಲು ಸಂವಾದ ಮತ್ತು ರಾಜತಾಂತ್ರಿಕತೆಗೆ ಆದ್ಯತೆ ನೀಡುವ ಅಗತ್ಯವನ್ನು ನಾವು ಒಪ್ಪಿಕೊಂಡಿದ್ದೇವೆ” ಎಂದು ಮೋದಿ ಎಕ್ಸ್​ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More