AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕ ಅಧ್ಯಕ್ಷ ಟ್ರಂಪ್ ಜೊತೆ ಪ್ರಧಾನಿ ಮೋದಿ ಫೋನ್ ಸಂಭಾಷಣೆ; ವ್ಯಾಪಾರ, ಅಂತಾರಾಷ್ಟ್ರೀಯ ವಿಚಾರಗಳ ಕುರಿತು ಚರ್ಚೆ

ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ದೂರವಾಣಿಯಲ್ಲಿ ಸಂಭಾಷಣೆ ನಡೆಸಿದ್ದು, ದ್ವಿಪಕ್ಷೀಯ ವ್ಯಾಪಾರ, ರಕ್ಷಣೆ ಹಾಗೂ ಪ್ರಸ್ತುತ ಜಾಗತಿಕ ಮತ್ತು ಪ್ರಾದೇಶಿಕ ವಿದ್ಯಮಾನಗಳ ಕುರಿತು ಸುದೀರ್ಘವಾಗಿ ಚರ್ಚಿಸಿದ್ದಾರೆ. ಟ್ರಂಪ್ ಅವರೊಂದಿಗಿನ ಸಂಭಾಷಣೆಯನ್ನು ಅತ್ಯಂತ ‘ಫಲಪ್ರದ’ ಎಂದು ಮೋದಿ ಬಣ್ಣಿಸಿದ್ದಾರೆ. ಭಾರತ ಮತ್ತು ಅಮೆರಿಕ ನಡುವೆ ವ್ಯಾಪಾರ, ರಕ್ಷಣೆ ಮತ್ತು ಉದಯೋನ್ಮುಖ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಸಹಕಾರ ಬಲಗೊಳ್ಳುತ್ತಿರುವ ಬೆನ್ನಲ್ಲೇ ಈ ಸಂಭಾಷಣೆ ನಡೆದಿದೆ.

ಅಮೆರಿಕ ಅಧ್ಯಕ್ಷ ಟ್ರಂಪ್ ಜೊತೆ ಪ್ರಧಾನಿ ಮೋದಿ ಫೋನ್ ಸಂಭಾಷಣೆ; ವ್ಯಾಪಾರ, ಅಂತಾರಾಷ್ಟ್ರೀಯ ವಿಚಾರಗಳ ಕುರಿತು ಚರ್ಚೆ
ಟ್ರಂಪ್ ಜೊತೆ ಪ್ರಧಾನಿ ಮೋದಿImage Credit source: PTI
ಸುಷ್ಮಾ ಚಕ್ರೆ
|

Updated on: Sep 30, 2026 | 9:23 PM

Share

ನವದೆಹಲಿ, ಸೆಪ್ಟೆಂಬರ್ 30: ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ದೂರವಾಣಿ ಮೂಲಕ ಮಹತ್ವದ ಮಾತುಕತೆ ನಡೆಸಿದ್ದಾರೆ. ಈ ವೇಳೆ ಉಭಯ ನಾಯಕರು ರಕ್ಷಣೆ, ವ್ಯಾಪಾರ, ಇಂಧನ ಮತ್ತು ನಿರ್ಣಾಯಕ ತಂತ್ರಜ್ಞಾನಗಳ ಕ್ಷೇತ್ರದಲ್ಲಿ ಭಾರತ ಮತ್ತು ಅಮೆರಿಕ ನಡುವಿನ ದ್ವಿಪಕ್ಷೀಯ ಸಹಕಾರವನ್ನು ಪರಾಮರ್ಶಿಸಿದರು. ಜೊತೆಗೆ, ಜಾಗತಿಕ ಶಾಂತಿ ಮತ್ತು ಭದ್ರತೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ಸಂಘರ್ಷಗಳ ಹಿನ್ನೆಲೆಯಲ್ಲಿ ಜಾಗತಿಕ ಶಾಂತಿಯನ್ನು ಉತ್ತೇಜಿಸುವ ಮಾರ್ಗಗಳ ಕುರಿತು ಚರ್ಚಿಸಿದರು.

ಪ್ರಧಾನಿ ಮೋದಿ ಟ್ವೀಟ್:

“ಅಮೆರಿಕದ ಅಧ್ಯಕ್ಷ ಟ್ರಂಪ್ ಅವರೊಂದಿಗೆ ಫಲಪ್ರದ ಮಾತುಕತೆ ನಡೆಯಿತು. ವ್ಯಾಪಾರ, ರಕ್ಷಣೆ, ಇಂಧನ, ನಿರ್ಣಾಯಕ ತಂತ್ರಜ್ಞಾನಗಳು ಮತ್ತು ಇತರ ಪ್ರಮುಖ ಕ್ಷೇತ್ರಗಳಲ್ಲಿನ ನಮ್ಮ ದ್ವಿಪಕ್ಷೀಯ ಸಹಕಾರವನ್ನು ಪರಾಮರ್ಶಿಸಿದ್ದೇವೆ. ನಮ್ಮ ‘ಸಮಗ್ರ ಜಾಗತಿಕ ಆಯಕಟ್ಟಿನ ಪಾಲುದಾರಿಕೆ’ಯನ್ನು ಮತ್ತಷ್ಟು ಮುನ್ನಡೆಸಲು ನಿಕಟ ಸಂಪರ್ಕದಲ್ಲಿರಲು ನಾವು ಒಪ್ಪಿಕೊಂಡಿದ್ದೇವೆ” ಎಂದು ಪ್ರಧಾನಿ ಮೋದಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ‘ಭಯೋತ್ಪಾದನೆ ನಿಯಂತ್ರಣವೇ ಭಾರತದ ಮುಖ್ಯ ಕಳಕಳಿ’; ಅಮೆರಿಕಕ್ಕೆ ಸಚಿವ ಎಸ್. ಜೈಶಂಕರ್ ಖಡಕ್ ಸಂದೇಶ

ಅಲ್ಲದೆ, ಜಾಗತಿಕವಾಗಿ ನಡೆಯುತ್ತಿರುವ ವಿವಿಧ ಸಂಘರ್ಷಗಳ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಶಾಂತಿ ಮತ್ತು ಭದ್ರತೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಯುತ್ತಿರುವ ಪ್ರಯತ್ನಗಳು ಸೇರಿದಂತೆ ಹಲವು ಪ್ರಾದೇಶಿಕ ವಿಚಾರಗಳ ಕುರಿತು ಉಭಯ ನಾಯಕರು ತಮ್ಮ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡಿದ್ದಾರೆ.

ಭಾರತ ಮತ್ತು ಅಮೆರಿಕ ನಡುವೆ ವ್ಯಾಪಾರ, ರಕ್ಷಣೆ ಮತ್ತು ಉದಯೋನ್ಮುಖ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಸಹಕಾರ ಬಲಗೊಳ್ಳುತ್ತಿರುವ ಬೆನ್ನಲ್ಲೇ ಈ ಸಂಭಾಷಣೆ ನಡೆದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More