
ನವದೆಹಲಿ, ಸೆಪ್ಟೆಂಬರ್ 30: ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ದೂರವಾಣಿ ಮೂಲಕ ಮಹತ್ವದ ಮಾತುಕತೆ ನಡೆಸಿದ್ದಾರೆ. ಈ ವೇಳೆ ಉಭಯ ನಾಯಕರು ರಕ್ಷಣೆ, ವ್ಯಾಪಾರ, ಇಂಧನ ಮತ್ತು ನಿರ್ಣಾಯಕ ತಂತ್ರಜ್ಞಾನಗಳ ಕ್ಷೇತ್ರದಲ್ಲಿ ಭಾರತ ಮತ್ತು ಅಮೆರಿಕ ನಡುವಿನ ದ್ವಿಪಕ್ಷೀಯ ಸಹಕಾರವನ್ನು ಪರಾಮರ್ಶಿಸಿದರು. ಜೊತೆಗೆ, ಜಾಗತಿಕ ಶಾಂತಿ ಮತ್ತು ಭದ್ರತೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ಸಂಘರ್ಷಗಳ ಹಿನ್ನೆಲೆಯಲ್ಲಿ ಜಾಗತಿಕ ಶಾಂತಿಯನ್ನು ಉತ್ತೇಜಿಸುವ ಮಾರ್ಗಗಳ ಕುರಿತು ಚರ್ಚಿಸಿದರು.
ಪ್ರಧಾನಿ ಮೋದಿ ಟ್ವೀಟ್:
“ಅಮೆರಿಕದ ಅಧ್ಯಕ್ಷ ಟ್ರಂಪ್ ಅವರೊಂದಿಗೆ ಫಲಪ್ರದ ಮಾತುಕತೆ ನಡೆಯಿತು. ವ್ಯಾಪಾರ, ರಕ್ಷಣೆ, ಇಂಧನ, ನಿರ್ಣಾಯಕ ತಂತ್ರಜ್ಞಾನಗಳು ಮತ್ತು ಇತರ ಪ್ರಮುಖ ಕ್ಷೇತ್ರಗಳಲ್ಲಿನ ನಮ್ಮ ದ್ವಿಪಕ್ಷೀಯ ಸಹಕಾರವನ್ನು ಪರಾಮರ್ಶಿಸಿದ್ದೇವೆ. ನಮ್ಮ ‘ಸಮಗ್ರ ಜಾಗತಿಕ ಆಯಕಟ್ಟಿನ ಪಾಲುದಾರಿಕೆ’ಯನ್ನು ಮತ್ತಷ್ಟು ಮುನ್ನಡೆಸಲು ನಿಕಟ ಸಂಪರ್ಕದಲ್ಲಿರಲು ನಾವು ಒಪ್ಪಿಕೊಂಡಿದ್ದೇವೆ” ಎಂದು ಪ್ರಧಾನಿ ಮೋದಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.
ಇದನ್ನೂ ಓದಿ: ‘ಭಯೋತ್ಪಾದನೆ ನಿಯಂತ್ರಣವೇ ಭಾರತದ ಮುಖ್ಯ ಕಳಕಳಿ’; ಅಮೆರಿಕಕ್ಕೆ ಸಚಿವ ಎಸ್. ಜೈಶಂಕರ್ ಖಡಕ್ ಸಂದೇಶ
ಅಲ್ಲದೆ, ಜಾಗತಿಕವಾಗಿ ನಡೆಯುತ್ತಿರುವ ವಿವಿಧ ಸಂಘರ್ಷಗಳ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಶಾಂತಿ ಮತ್ತು ಭದ್ರತೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಯುತ್ತಿರುವ ಪ್ರಯತ್ನಗಳು ಸೇರಿದಂತೆ ಹಲವು ಪ್ರಾದೇಶಿಕ ವಿಚಾರಗಳ ಕುರಿತು ಉಭಯ ನಾಯಕರು ತಮ್ಮ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡಿದ್ದಾರೆ.
Had a productive conversation with President Trump. We reviewed our bilateral cooperation in trade, defence, energy, critical technologies and other areas. We agreed to maintain close engagement to take our Comprehensive Global Strategic Partnership forward.
We also exchanged…
— Narendra Modi (@narendramodi) September 30, 2026
ಭಾರತ ಮತ್ತು ಅಮೆರಿಕ ನಡುವೆ ವ್ಯಾಪಾರ, ರಕ್ಷಣೆ ಮತ್ತು ಉದಯೋನ್ಮುಖ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಸಹಕಾರ ಬಲಗೊಳ್ಳುತ್ತಿರುವ ಬೆನ್ನಲ್ಲೇ ಈ ಸಂಭಾಷಣೆ ನಡೆದಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ