ಬ್ರಿಟನ್ ಪ್ರಧಾನಿ ರಿಷಿ ಸುನಕ್ ಜತೆ ಮೋದಿ ಮಾತುಕತೆ: ದ್ವಿಪಕ್ಷೀಯ ಬಾಂಧವ್ಯ ವೃದ್ಧಿ, ಇಸ್ರೇಲ್-ಹಮಾಸ್ ಸಂಘರ್ಷ ಕುರಿತು ಚರ್ಚೆ

ವ್ಯಾಪಾರ, ಹೂಡಿಕೆ, ತಂತ್ರಜ್ಞಾನ, ಭದ್ರತೆ ಮತ್ತು ಆರೋಗ್ಯ ರಕ್ಷಣೆ ಸೇರಿದಂತೆ ಹಲವು ಕ್ಷೇತ್ರಗಳಿಗೆ ಸಂಬಂಧಿಸಿದ ವಿಷಯಗಳ ಕುರಿತು ಇಬ್ಬರೂ ದೂರವಾಣಿ ಮಾತುಕತೆ ವೇಳೆ ಚರ್ಚಿಸಿದ್ದಾರೆ. ಇದಲ್ಲದೆ, ಉಭಯ ನಾಯಕರು ಪಶ್ಚಿಮ ಏಷ್ಯಾದ ಪರಿಸ್ಥಿತಿ, ವಿಶೇಷವಾಗಿ ಇಸ್ರೇಲ್ ಮತ್ತು ಹಮಾಸ್ ನಡುವೆ ನಡೆಯುತ್ತಿರುವ ಸಂಘರ್ಷದ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡಿದ್ದಾರೆ.

ಬ್ರಿಟನ್ ಪ್ರಧಾನಿ ರಿಷಿ ಸುನಕ್ ಜತೆ ಮೋದಿ ಮಾತುಕತೆ: ದ್ವಿಪಕ್ಷೀಯ ಬಾಂಧವ್ಯ ವೃದ್ಧಿ, ಇಸ್ರೇಲ್-ಹಮಾಸ್ ಸಂಘರ್ಷ ಕುರಿತು ಚರ್ಚೆ
ಬ್ರಿಟನ್ ಪ್ರಧಾನಿ ರಿಷಿ ಸುನಕ್ & ಪ್ರಧಾನಿ ನರೇಂದ್ರ ಮೋದಿ
Follow us
Ganapathi Sharma
|

Updated on: Nov 04, 2023 | 10:52 AM

ನವದೆಹಲಿ, ನವೆಂಬರ್ 4: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಬ್ರಿಟನ್ ಪ್ರಧಾನಿ ರಿಷಿ ಸುನಕ್ (Rishi Sunak) ಶುಕ್ರವಾರ ಸಂಜೆ ದೂರವಾಣಿ ಮೂಲಕ ಸಂಭಾಷಣೆ ನಡೆಸಿದ್ದಾರೆ. ಈ ವೇಳೆ, ಉಭಯ ನಾಯಕರು ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷದ ಬಗ್ಗೆ ಚರ್ಚಿಸಿದ್ದಾರೆ. ಪ್ರಾದೇಶಿಕ ಶಾಂತಿ ಮತ್ತು ಸ್ಥಿರತೆಯನ್ನು ಸಾಧಿಸುವ ಅಗತ್ಯವನ್ನು ಒತ್ತಿ ಹೇಳಿದ್ದಾರೆ. ಅಧಿಕಾರಾವಧಿಯ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಕ್ಕಾಗಿ ಸುನಕ್ ಅವರನ್ನು ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ.

ಬ್ರಿಟನ್ ಪ್ರಧಾನಿಯೊಂದಿಗೆ ರಿಷಿ ಸುನಕ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದೆ. ದ್ವಿಪಕ್ಷೀಯ ಬಾಂಧವ್ಯವನ್ನು ಬಲಪಡಿಸುವ ಕುರಿತು ಚರ್ಚಿಸಲಾಗಿದೆ ಮತ್ತು ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡೆವು. ಭಯೋತ್ಪಾದನೆ ಮತ್ತು ಹಿಂಸಾಚಾರಕ್ಕೆ ಅವಕಾಶವಿಲ್ಲ ಎಂಬುದನ್ನು ನಾವು ಒತ್ತಿಹೇಳಿದ್ದೇವೆ. ನಾಗರಿಕರ ಸಾವು ಗಂಭೀರ ಕಳವಳಕಾರಿಯಾಗಿದೆ. ಪ್ರಾದೇಶಿಕ ಶಾಂತಿ, ಭದ್ರತೆ, ಸ್ಥಿರತೆ ಮತ್ತು ನಿರಂತರ ಮಾನವೀಯ ನೆರವಿಗಾಗಿ ಕೆಲಸ ಮಾಡಬೇಕಾಗಿದೆ’ ಎಂದು ಪ್ರಧಾನಿ ಮೋದಿ ಸಾಮಾಜಿಕ ಮಾಧ್ಯಮ ಎಕ್ಸ್​​ ಸಂದೇಶದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ನೇಪಾಳ ಭೂಕಂಪದಲ್ಲಿ ಮಡಿದವರಿಗಾಗಿ ಪ್ರಧಾನಿ ಸಂತಾಪ: ನೆರವಿಗೆ ಭಾರತ ಸಿದ್ಧ ಎಂದ ಮೋದಿ

ವ್ಯಾಪಾರ, ಹೂಡಿಕೆ, ತಂತ್ರಜ್ಞಾನ, ಭದ್ರತೆ ಮತ್ತು ಆರೋಗ್ಯ ರಕ್ಷಣೆ ಸೇರಿದಂತೆ ಹಲವು ಕ್ಷೇತ್ರಗಳಿಗೆ ಸಂಬಂಧಿಸಿದ ವಿಷಯಗಳ ಕುರಿತು ಇಬ್ಬರೂ ದೂರವಾಣಿ ಮಾತುಕತೆ ವೇಳೆ ಚರ್ಚಿಸಿದ್ದಾರೆ. ಭಾರತ ಮತ್ತು ಬ್ರಿಟನ್ ವ್ಯಾಪಾರ-ಸಂಬಂಧಿತ ಒಪ್ಪಂದದ ಪ್ರಗತಿಯ ಬಗ್ಗೆ ತೃಪ್ತಿ ವ್ಯಕ್ತಪಡಿಸಿವೆ. ಇದಲ್ಲದೆ, ಉಭಯ ನಾಯಕರು ಪಶ್ಚಿಮ ಏಷ್ಯಾದ ಪರಿಸ್ಥಿತಿ, ವಿಶೇಷವಾಗಿ ಇಸ್ರೇಲ್ ಮತ್ತು ಹಮಾಸ್ ನಡುವೆ ನಡೆಯುತ್ತಿರುವ ಸಂಘರ್ಷದ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡಿದ್ದಾರೆ.

ಭಯೋತ್ಪಾದನೆ, ಹದಗೆಡುತ್ತಿರುವ ಭದ್ರತಾ ಪರಿಸ್ಥಿತಿ ಮತ್ತು ಅಮಾಯಕರ ಜೀವಹಾನಿಯ ಬಗ್ಗೆ ಇಬ್ಬರೂ ನಾಯಕರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಪ್ರಾದೇಶಿಕ ಶಾಂತಿ, ಭದ್ರತೆ ಮತ್ತು ಸ್ಥಿರತೆಯ ಪ್ರಾಮುಖ್ಯತೆಯನ್ನು ಉಲ್ಲೇಖಿಸಿದ ಅವರು, ಪೀಡಿತ ಪ್ರದೇಶಗಳಲ್ಲಿ ನಿರಂತರ ಮಾನವೀಯ ನೆರವಿನ ಅಗತ್ಯವನ್ನು ಒತ್ತಿ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ