AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

G7 Summit 2021: ಜಿ7 ಶೃಂಗಸಭೆಯಲ್ಲಿ ‘ಒಂದು ಭೂಮಿ, ಒಂದು ಆರೋಗ್ಯ’ ಮಂತ್ರ ಉಚ್ಛರಿಸಿದ ಪ್ರಧಾನಿ ನರೇಂದ್ರ ಮೋದಿ

PM Modi in G7 Summit: ಜರ್ಮನ್​ನ ಚಾನ್ಸೆಲರ್ ಮರ್ಕೆಲ್ ಪ್ರಧಾನಿ ಮೋದಿ ಹೇಳಿದ ‘ಒನ್ ಅರ್ಥ್, ಒನ್ ಹೆಲ್ತ್’ ಪರಿಕಲ್ಪನೆಯನ್ನು ಪ್ರತ್ಯೇಕವಾಗಿ ಉಲ್ಲೇಖಿಸಿ ತಮ್ಮ ಸಂಪೂರ್ಣ ಬೆಂಬಲವನ್ನು ತಿಳಿಸಿದರು.

G7 Summit 2021: ಜಿ7 ಶೃಂಗಸಭೆಯಲ್ಲಿ ‘ಒಂದು ಭೂಮಿ, ಒಂದು ಆರೋಗ್ಯ’ ಮಂತ್ರ ಉಚ್ಛರಿಸಿದ ಪ್ರಧಾನಿ ನರೇಂದ್ರ ಮೋದಿ
ನರೇಂದ್ರ ಮೋದಿ
TV9 Web
| Edited By: |

Updated on:Jun 12, 2021 | 11:14 PM

Share

ದೆಹಲಿ: ಕೊವಿಡ್-19 ಸಂಕಷ್ಟಕ್ಕೆ ವಿಶ್ವದ ಬಹುತೇಕ ರಾಷ್ಟ್ರಗಳು ಒಳಗಾಗಿರುವ ಈ ಸಂದರ್ಭದಲ್ಲಿ, ಜಿ7 ಶೃಂಗಸಭೆಯಲ್ಲಿ ಭಾಗವಹಿಸಿದ ಪ್ರಧಾನಿ ನರೇಂದ್ರ ಮೋದಿ ‘ಒನ್ ಅರ್ಥ್, ಒನ್ ಹೆಲ್ತ್’ ಎಂಬ ಪರಿಕಲ್ಪನೆಯನ್ನು ನೀಡಿದರು. ದಕ್ಷಿಣ ಆಫ್ರಿಕಾ, ದಕ್ಷಿಣ ಕೊರಿಯಾ ಮತ್ತು ಆಸ್ಟ್ರೇಲಿಯಾ ದೇಶಗಳೊಂದಿಗೆ ಭಾರತವೂ ಕೂಡ ಯುನೈಟೆಡ್ ಕಿಂಗ್ಡಮ್​ನಲ್ಲಿ ನಡೆಯುತ್ತಿರುವ ಜಿ7 ರಾಷ್ಟ್ರಗಳ ಶೃಂಗಸಭೆಯಲ್ಲಿ ಭಾಗವಹಿಸಲು ಆಹ್ವಾನ ಪಡೆದಿತ್ತು. ಪ್ರಧಾನಿ ಮೋದಿ ಕೂಡ ಈ ಶೃಂಗಸಭೆಯಲ್ಲಿ ವರ್ಚುವಲ್ ವಿಧಾನದ ಮೂಲಕ ಭಾಗವಹಿಸಿದರು.

ಜರ್ಮನ್​ನ ಚಾನ್ಸೆಲರ್ ಮರ್ಕೆಲ್ ಪ್ರಧಾನಿ ಮೋದಿ ಹೇಳಿದ ‘ಒನ್ ಅರ್ಥ್, ಒನ್ ಹೆಲ್ತ್’ ಪರಿಕಲ್ಪನೆಯನ್ನು ಪ್ರತ್ಯೇಕವಾಗಿ ಉಲ್ಲೇಖಿಸಿ ತಮ್ಮ ಸಂಪೂರ್ಣ ಬೆಂಬಲವನ್ನು ತಿಳಿಸಿದರು.

ಶೃಂಗಸಭೆಯಲ್ಲಿ ಭಾರತ, ದಕ್ಷಿಣ ಆಫ್ರಿಕಾ ವಿಶ್ವ ವ್ಯಾಪಾರ ಸಂಸ್ಥೆಗೆ (ಡಬ್ಲ್ಯುಟಿಒ) ಮಾಡಿದ್ದ ಕೊವಿಡ್ ಲಸಿಕೆಯ ಮೇಲಿನ ಕಾಪಿರೈಟ್ ತೆರೆಯುವಿಕೆಯ ಪ್ರಸ್ತಾಪವಾಯಿತು. ಈ ವೇಳೆ, ನರೇಂದ್ರ ಮೋದಿ ಜೊತೆಗಿನ ಮಾತುಕತೆಯನ್ನು ಉಲ್ಲೇಖಿಸಿದ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಕೂಡ ಕೊವಿಡ್-19 ವಿರುದ್ಧದ ಲಸಿಕೆಯ ಮೇಲಿನ ಕಾಪಿರೈಟ್ ತೆರೆಯುವಿಕೆ ವಿಚಾರಕ್ಕೆ ಬೆಂಬಲ ಸೂಚಿಸಿದರು.

ಫ್ರಾನ್ಸ್ ಪ್ರಧಾನಿ ಮಾಕ್ರೊನ್ ಇಮ್ಯಾನುಯೆಲ್ ಕೊವಿಡ್ ಲಸಿಕೆಗೆ ಬೇಕಾದ ಕಚ್ಚಾವಸ್ತುಗಳನ್ನು ಭಾರತದಂತಹ ದೇಶಗಳಿಗೆ ಹೆಚ್ಚು ಕಳಿಸಬೇಕು. ಇದರಿಂದ ಲಸಿಕೆ ಉತ್ಪಾದನೆ ಪ್ರಮಾಣ ಹೆಚ್ಚಲಿದೆ ಎಂದು ತಿಳಿಸಿದರು.

ಇಂಗ್ಲೆಂಡ್ ಆಹ್ವಾನದ ಮೇರೆಗೆ ವರ್ಚುವಲ್ ವಿಧಾನದ ಮೂಲಕ ಭಾಗಿ ಜಿ7 ರಾಷ್ಟ್ರಗಳ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಿದ್ದಾರೆ. ಇಂದು, ನಾಳೆ ನಡೆಯಲಿರುವ ಜಿ7 ರಾಷ್ಟ್ರಗಳ ಸಮಾವೇಶದಲ್ಲಿ ಮೋದಿ ಪಾಲ್ಗೊಂಡಿದ್ದಾರೆ. ಜಿ7 ರಾಷ್ಟ್ರಗಳಿಂದ 2003ರಿಂದ ಭಾರತಕ್ಕೆ ವಿಶೇಷ ಆಹ್ವಾನ ನೀಡಲಾಗುತ್ತಿದೆ. ಶೃಂಗಸಭೆಯಲ್ಲಿ ಈ ಹಿಂದೆ ಅಟಲ್ ಬಿಹಾರಿ ವಾಜಪೇಯಿ, ಡಾ. ಮನಮೋಹನ್ ಸಿಂಗ್ ಭಾಗಿಯಾಗಿದ್ದರು.

ಇದನ್ನೂ ಓದಿ: Carbis Bay Declaration: ಭವಿಷ್ಯದಲ್ಲಿ ಕಾಡಬಹುದಾದ ಸಾಂಕ್ರಾಮಿಕ ರೋಗಗಳ ವಿರುದ್ಧ ಜಿ7 ನಾಯಕರ ಅಸ್ತ್ರ ಸಿದ್ಧತೆ; ಮಹತ್ವಾಕಾಂಕ್ಷಿ ಘೋಷಣೆಗೆ ಸಹಿ

Cabinet Expansion: ಶೀಘ್ರದಲ್ಲೇ ವಿಸ್ತರಣೆಯಾಗಲಿದೆ ಕೇಂದ್ರ ಸಚಿವ ಸಂಪುಟ; ಪ್ರಧಾನಿ ಮೋದಿ-ಅಮಿತ್​ ಶಾ ಉನ್ನತ ಸಭೆ

Published On - 11:04 pm, Sat, 12 June 21

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ