No Money for Terror: ಭಯೋತ್ಪಾದನೆ ಬೇರು ಸಮೇತ ಕಿತ್ತು ಹಾಕದೆ ವಿರಮಿಸಲ್ಲ; ಪ್ರಧಾನಿ ಮೋದಿ

No Money for Terror; ಭಯೋತ್ಪಾದನೆಗೆ ನೀಡುವ ಹಣಕಾಸು ನೆರವಿಗೆ ತಡೆಯೊಡ್ಡಬೇಕು. ಅವರ ಹಣಕಾಸಿನ ಮೂಲಕ್ಕೆ ಅಡ್ಡಿ ಮಾಡಬೇಕು. ಭಯೋತ್ಪಾದನೆಯನ್ನು ಬೇರು ಸಮೇತ ಕಿತ್ತು ಹಾಕುವವರೆಗೂ ನಾವು ವಿರಮಿಸುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

No Money for Terror: ಭಯೋತ್ಪಾದನೆ ಬೇರು ಸಮೇತ ಕಿತ್ತು ಹಾಕದೆ ವಿರಮಿಸಲ್ಲ; ಪ್ರಧಾನಿ ಮೋದಿ
PM Narendra Modi to Inagurate two day national office bearers meet of BJP in New Delhi Today Image Credit source: ANI
Follow us
TV9 Web
| Updated By: Ganapathi Sharma

Updated on:Nov 18, 2022 | 11:17 AM

ನವದೆಹಲಿ: ಭಯೋತ್ಪಾದನೆಯಿಂದಾಗಿ (Terrorism) ನಾವು ಸಾವಿರಾರು ಅಮೂಲ್ಯ ಜೀವಗಳನ್ನು ಕಳೆದುಕೊಂಡಿದ್ದೇವೆ. ಭಯೋತ್ಪಾದನೆಯು ಇಡೀ ಮಾನವೀಯತೆಯ ಮೇಲೆ ಪರಿಣಾಮ ಬೀರಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದರು. ದೆಹಲಿಯ ತಾಜ್ ಪ್ಯಾಲೇಸ್​ ಹೊಟೇಲ್​ನಲ್ಲಿ ನಡೆಯುತ್ತಿರುವ ‘ಭಯೋತ್ಪಾದನೆಗೆ ಹಣಕಾಸು ಬೇಡ’ (NMFT) ಎಂಬ ವಿಷಯಾಧಾರಿತ ಮೂರನೇ ಜಾಗತಿಕ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು. ಕಳೆದ ಕೆಲವು ದಶಕಗಳಿಂದ ಭಯೋತ್ಪಾದನೆಯು ಹಲವು ಹೆಸರುಗಳಿಂದ ಜಗತ್ತಿನ ಹಲವೆಡೆ ವ್ಯಾಪಿಸಿದೆ. ಭಯೋತ್ಪಾದನೆಯನ್ನು ಸಮರ್ಥವಾಗಿ ಎದುರಿಸುತ್ತಿರುವ ದೇಶವೊಂದರ ಜತೆ ಸಂವಹನಕ್ಕೆ ನಿಮಗೆಲ್ಲ ಅವಕಾಶ ದೊರೆತಿದೆ ಎಂದು ಸಮ್ಮೇಳನದಲ್ಲಿ ಭಾಗವಹಿಸಿದ ಪ್ರತಿನಿಧಿಗಳನ್ನು ಉದ್ದೇಶಿಸಿ ಪ್ರಧಾನಿ ಹೇಳಿದರು.

ಭಯೋತ್ಪಾದನೆಗೆ ಹಣಕಾಸು ನೆರವು ಬೇಡ

ಭಯೋತ್ಪಾದನೆಗೆ ಹಣಕಾಸು ನೆರವು ನೀಡುವುದು ಎಲ್ಲ ಕ್ಷೇತ್ರಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರಲಿದೆ. ಒಬ್ಬ ಭಯೋತ್ಪಾದಕನನ್ನು ಶಸ್ತ್ರಾಸ್ತ್ರಗಳ ಮೂಲಕ ನಾಶಗೊಳಿಸಬಹುದು. ಆದರೆ, ಇದು ಕೇವಲ ತಾತ್ಕಾಲಿಕ ಕ್ರಮವಾಗಬಹುದಷ್ಟೆ. ಇದರಿಂದ ಭಯೋತ್ಪಾದನೆಯ ಸಂಪೂರ್ಣ ನಾಶ ಅಸಾಧ್ಯ. ಭಯೋತ್ಪಾದನೆಗೆ ನೀಡುವ ಹಣಕಾಸು ನೆರವಿಗೆ ತಡೆಯೊಡ್ಡಬೇಕು. ಅವರ ಹಣಕಾಸಿನ ಮೂಲಕ್ಕೆ ಅಡ್ಡಿ ಮಾಡಬೇಕು. ಅವರಿಗೆ ಹಣಕಾಸು ನೆರವು ನೀಡುವವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಮೋದಿ ಕರೆ ನೀಡಿದರು.

ಎಲ್ಲಾ ಭಯೋತ್ಪಾದಕ ದಾಳಿಗಳು ಸಮಾನ ಆಕ್ರೋಶಕ್ಕೆ ಅರ್ಹವಾಗಿವೆ. ಎಲ್ಲಿ ದಾಳಿ ನಡೆದಿದೆ, ಯಾರ ಮೇಲೆ ನಡೆದಿದೆ ಎಂಬುದು ಪ್ರಶ್ನೆಯಲ್ಲ. ಭಯೋತ್ಪಾದಕ ದಾಳಿಗಳ ವಿರುದ್ಧ ಇಡೀ ವಿಶ್ವ ಒಂದಾಗಿ ಹೋರಾಡಬೇಕಿದೆ. ಉಗ್ರರಿಂದ ನಡೆಯುವ ಒಂದೇ ಒಂದು ದಾಳಿಯನ್ನೂ ನಾವು ಹಲವಾರು ಎಂದೇ ಪರಿಗಣಿಸುತ್ತೇವೆ. ಒಂದೇ ಒಂದು ಜೀವ ಕಳೆದು ಹೋದರೂ ಅದರ ಬೆಲೆ ಅಮೂಲ್ಯ. ಹಾಗಾಗಿ ಭಯೋತ್ಪಾದನೆಯನ್ನು ಬೇರು ಸಮೇತ ಕಿತ್ತು ಹಾಕುವವರೆಗೂ ನಾವು ವಿರಮಿಸುವುದಿಲ್ಲ ಎಂದು ಮೋದಿ ಹೇಳಿದರು.

ಪಾಕಿಸ್ತಾನದ ವಿರುದ್ಧ ಮೋದಿ ವಾಗ್ದಾಳಿ

ಭಯೋತ್ಪಾದಕ ಸಂಘಟನೆಗಳು ಹಲವಾರು ಮೂಲಗಳಿಂದ ಹಣವನ್ನು ಪಡೆಯುತ್ತವೆ. ಈ ಪೈಕಿ ಪ್ರಮುಖವಾದದ್ದು ಕೆಲವು ದೇಶಗಳ ಬೆಂಬಲ. ಆ ದೇಶಗಳು ತಮ್ಮ ವಿದೇಶಾಂಗ ನೀತಿಯ ಭಾಗವಾಗಿ ಭಯೋತ್ಪಾದನೆಯನ್ನು ಬೆಂಬಲಿಸುತ್ತವೆ. ಭಯೋತ್ಪಾದಕರಿಗೆ ರಾಜಕೀಯ, ಸೈದ್ಧಾಂತಿಕ ಮತ್ತು ಆರ್ಥಿಕ ಬೆಂಬಲವನ್ನು ನೀಡುತ್ತವೆ ಎಂದು ಪರೋಕ್ಷವಾಗಿ ಪಾಕಿಸ್ತಾನದ ವಿರುದ್ಧ ವಾಗ್ದಾಳಿ ನಡೆಸಿದರು. ಉಗ್ರವಾದ ಮತ್ತು ತೀವ್ರವಾದದ ಸಮಸ್ಯೆಯನ್ನು ನಾವು ಜಂಟಿಯಾಗಿ ಆಮೂಲಾಗ್ರವಾಗಿ ಪರಿಹರಿಸಬೇಕಿದೆ. ಭಯೋತ್ಪಾದನೆಯನ್ನು ಬೆಂಬಲಿಸುವವರಿಗೆ ಯಾವ ದೇಶದಲ್ಲಿಯೂ ಜಾಗ ಇರಕೂಡದು ಎಂದು ಅವರು ಹೇಳಿದರು.

‘ಭಯೋತ್ಪಾದನೆಗೆ ಹಣಕಾಸು ಬೇಡ (No Money for Terror)’ ಜಾಗತಿಕ ಸಮ್ಮೇಳನ ಇಂದು (ನವೆಂಬರ್ 18) ಮತ್ತು ನಾಳೆ ನಡೆಯುತ್ತಿದೆ. 75 ದೇಶಗಳ ಪ್ರತಿನಿಧಿಗಳು ಭಯೋತ್ಪಾದನೆ ಮತ್ತು ಭಯೋತ್ಪಾದನೆಗೆ ಹಣಕಾಸು ನೆರವು ಸಂಬಂಧಿತ ವಿವಿಧ ವಿಷಯಗಳ ಕುರಿತು ಚರ್ಚಿಸಲಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:50 am, Fri, 18 November 22

ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು