ಝೆಲೆನ್ಸ್ಕಿ ಜತೆ ಮೋದಿ ಮಾತು; ಭಾರತದ ನಿರಂತರ ಮಾನವೀಯ ಸಹಾಯವನ್ನು ಶ್ಲಾಘಿಸಿದ ಉಕ್ರೇನ್ ಅಧ್ಯಕ್ಷ
ಭಾರತ-ಉಕ್ರೇನ್ ಬಾಂಧವ್ಯವನ್ನು ಬಲಪಡಿಸುವ ಕ್ರಮಗಳ ಕುರಿತು ಮೋದಿ ಮತ್ತು ಝೆಲೆನ್ಸ್ಕಿ ಚರ್ಚಿಸಿದರು. ಪ್ರಧಾನಿ ಮೋದಿಯವರು ಭಾರತದ ಜನಕೇಂದ್ರಿತ ವಿಧಾನವನ್ನು ಪುನರುಚ್ಚರಿಸಿದರು ಮತ್ತು ಸಂಘರ್ಷದ ಪರಿಹಾರಕ್ಕಾಗಿ ಮಾತುಕತೆ ಮತ್ತು ರಾಜತಾಂತ್ರಿಕತೆಗೆ ಕರೆ ನೀಡಿದರು” ಎಂದು ಸರ್ಕಾರ ಹೇಳಿದೆ.
ದೆಹಲಿ ಮಾರ್ಚ್ 20: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಬುಧವಾರ ರಷ್ಯಾದ ವ್ಲಾಡಿಮಿರ್ ಪುಟಿನ್ (Vladimir Putin) ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ ಗಂಟೆಗಳ ನಂತರ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ(Volodymyr Zelenskyy) ಅವರೊಂದಿಗೆ ಮಾತನಾಡಿದ್ದಾರೆ. ಝೆಲೆನ್ಸ್ಕಿಮತ್ತು ಮೋದಿ ವಿವಿಧ ಕ್ಷೇತ್ರಗಳಲ್ಲಿ ಭಾರತ-ಉಕ್ರೇನ್ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಮಾರ್ಗಗಳ ಕುರಿತು ಚರ್ಚಿಸಿದರು. ನಡೆಯುತ್ತಿರುವ ರಷ್ಯಾ-ಉಕ್ರೇನ್ ಸಂಘರ್ಷದ ಕುರಿತು ಚರ್ಚಿಸುತ್ತಿರುವಾಗ, ಪ್ರಧಾನಮಂತ್ರಿಯವರು ಭಾರತದ ಜನಕೇಂದ್ರಿತ ವಿಧಾನವನ್ನು ಪುನರುಚ್ಚರಿಸಿದ್ದು, ಮುಂದಿನ ಮಾರ್ಗವಾಗಿ ಮಾತುಕತೆ ಮತ್ತು ರಾಜತಾಂತ್ರಿಕ ರೀತಿಗೆ ಕರೆ ನೀಡಿದರು.
ಉಭಯ ರಾಷ್ಟ್ರಗಳ ನಡುವಿನ ಎಲ್ಲಾ ಸಮಸ್ಯೆಗಳ ಆರಂಭಿಕ ಮತ್ತು ಶಾಂತಿಯುತ ಪರಿಹಾರಕ್ಕಾಗಿ ಭಾರತವು ಎಲ್ಲಾ ಪ್ರಯತ್ನಗಳನ್ನು ಬೆಂಬಲಿಸುತ್ತದೆ. ಶಾಂತಿಯುತ ಪರಿಹಾರವನ್ನು ಬೆಂಬಲಿಸಲು ಭಾರತವು ತನ್ನ ವಿಧಾನದಲ್ಲಿ ಎಲ್ಲವನ್ನೂ ಮಾಡುವುದನ್ನು ಮುಂದುವರಿಸುತ್ತದೆ ಎಂದು ಮೋದಿ ಹೇಳಿದ್ದಾರೆ.
ಅಧ್ಯಕ್ಷ ಝೆಲೆನ್ಸ್ಕಿ ಅವರು ಉಕ್ರೇನ್ ಜನರಿಗೆ ಭಾರತದ ನಿರಂತರ ಮಾನವೀಯ ಸಹಾಯವನ್ನು ಶ್ಲಾಘಿಸಿದ್ದು, ಉಭಯ ನಾಯಕರು ಸಂಪರ್ಕದಲ್ಲಿರಲು ಒಪ್ಪಿಕೊಂಡರು. ಝೆಲೆನ್ಸ್ಕಿ ಅವರೊಂದಿಗಿನ ಮಾತುಕತೆ ವೇಳೆ ಉಕ್ರೇನ್ ಯುದ್ಧವನ್ನು ಕೊನೆಗೊಳಿಸಲು ‘ಸಂವಾದ ಮತ್ತು ರಾಜತಾಂತ್ರಿಕತೆ’ಗೆ ಪ್ರಧಾನಿ ಮೋದಿ ಕರೆ ನೀಡಿದರು.
ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾದ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ ಗಂಟೆಗಳ ನಂತರ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ಮಾತನಾಡಿದ್ದಾರೆ.
“ಭಾರತ-ಉಕ್ರೇನ್ ಪಾಲುದಾರಿಕೆಯನ್ನು ಬಲಪಡಿಸುವ ಕುರಿತು ಅಧ್ಯಕ್ಷ ಝೆಲೆನ್ಸ್ಕಿ ಅವರೊಂದಿಗೆ ಉತ್ತಮ ಸಂವಾದ ನಡೆಸಿದೆ. ಶಾಂತಿಗಾಗಿ ಎಲ್ಲಾ ಪ್ರಯತ್ನಗಳಿಗೆ ಮತ್ತು ನಡೆಯುತ್ತಿರುವ ಸಂಘರ್ಷಕ್ಕೆ ಅಂತ್ಯವನ್ನು ತರಲು ಭಾರತದ ನಿರಂತರ ಬೆಂಬಲವನ್ನು ತಿಳಿಸಿರುವೆ. ಭಾರತವು ನಮ್ಮ ಜನಕೇಂದ್ರಿತ ವಿಧಾನದಿಂದ ಮಾರ್ಗದರ್ಶಿಸಲ್ಪಟ್ಟ ಮಾನವೀಯ ನೆರವು ನೀಡುವುದನ್ನು ಮುಂದುವರಿಸುತ್ತದೆ.ಎಂದು ಪ್ರಧಾನ ಮಂತ್ರಿ ಸಾಮಾಜಿಕ ವೇದಿಕೆ X ನಲ್ಲಿ ಪೋಸ್ಟ್ ಮಾಡಿದ್ದಾರೆ.
ಮೋದಿ ಟ್ವೀಟ್
Had a good conversation with President @ZelenskyyUa on strengthening the India-Ukraine partnership. Conveyed India’s consistent support for all efforts for peace and bringing an early end to the ongoing conflict. India will continue to provide humanitarian assistance guided by…
— Narendra Modi (@narendramodi) March 20, 2024
“ಭಾರತ-ಉಕ್ರೇನ್ ಬಾಂಧವ್ಯವನ್ನು ಬಲಪಡಿಸುವ ಕ್ರಮಗಳ ಕುರಿತು ಇಬ್ಬರೂ ನಾಯಕರು ಚರ್ಚಿಸಿದರು. ಪ್ರಧಾನಿ ಮೋದಿಯವರು ಭಾರತದ ಜನಕೇಂದ್ರಿತ ವಿಧಾನವನ್ನು ಪುನರುಚ್ಚರಿಸಿದರು ಮತ್ತು ಸಂಘರ್ಷದ ಪರಿಹಾರಕ್ಕಾಗಿ ಮಾತುಕತೆ ಮತ್ತು ರಾಜತಾಂತ್ರಿಕತೆಗೆ ಕರೆ ನೀಡಿದರು” ಎಂದು ಸರ್ಕಾರ ಹೇಳಿದೆ.
ಪುಟಿನ್ ಅವರನ್ನು ಅಭಿನಂದಿಸಿದ ಮೋದಿ
ಪಿಎಂ ಮೋದಿ ಅವರು ಪುಟಿನ್ ಅವರಿಗೆ ಫೋನ್ ಕರೆ ಮಾಡಿ ರಷ್ಯಾದ ಅಧ್ಯಕ್ಷರಾಗಿ ಮರು ಆಯ್ಕೆಯಾಗಿದ್ದಕ್ಕೆ ಅಭಿನಂದನೆ ತಿಳಿಸಿದ್ದಾರೆ.
Spoke with President Putin and congratulated him on his re-election as the President of the Russian Federation. We agreed to work together to further deepen and expand India-Russia Special & Privileged Strategic Partnership in the years ahead. @KremlinRussia
— Narendra Modi (@narendramodi) March 20, 2024
“ಅಧ್ಯಕ್ಷ ಪುಟಿನ್ ಅವರೊಂದಿಗೆ ಮಾತನಾಡಿದ್ದು ರಷ್ಯಾದ ಒಕ್ಕೂಟದ ಅಧ್ಯಕ್ಷರಾಗಿ ಮರು ಆಯ್ಕೆಯಾಗಿದ್ದಕ್ಕಾಗಿ ಅವರನ್ನು ಅಭಿನಂದಿಸಿದ್ದೇನೆ. ಮುಂದಿನ ವರ್ಷಗಳಲ್ಲಿ ಭಾರತ-ರಷ್ಯಾ ವಿಶೇಷ ಮತ್ತು ವಿಶೇಷ ಕಾರ್ಯತಂತ್ರದ ಸಹಭಾಗಿತ್ವವನ್ನು ಇನ್ನಷ್ಟು ಗಟ್ಟಿಗೊಳಿಸ ಮತ್ತು ವಿಸ್ತರಿಸಲು ನಾವು ಒಟ್ಟಾಗಿ ಕೆಲಸ ಮಾಡಲು ಒಪ್ಪಿಕೊಂಡಿದ್ದೇವೆ ಎಂದು ಪ್ರಧಾನಿ ಮೋದಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಶಾಂತಿಬಯಸುವ ಭಾರತದ ಪಾತ್ರವನ್ನು ಒತ್ತಿಹೇಳುತ್ತಾ, ಇಬ್ಬರೂ ನಾಯಕರು ಬಿಕ್ಕಟ್ಟನ್ನು ಪರಿಹರಿಸುವಲ್ಲಿ ಭಾರತದ ಪಾಲ್ಗೊಳ್ಳುವಿಕೆಗೆ ತಮ್ಮ ಇಚ್ಛೆಯನ್ನು ವ್ಯಕ್ತಪಡಿಸಿದರು. ಭಾರತದ ಮುಂಬರುವ ಲೋಕಸಭಾ ಚುನಾವಣೆಯ ನಂತರ ತಮ್ಮ ದೇಶಗಳಿಗೆ ಭೇಟಿ ನೀಡುವಂತೆ ಅವರು ಪ್ರಧಾನಿ ಮೋದಿಯವರಿಗೆ ಆಹ್ವಾನ ನೀಡಿದರು ಎಂದು ಎನ್‌ಡಿಟಿವಿ ವರದಿ ಮಾಡಿದೆ.
ಇದನ್ನೂ ಓದಿ: ‘ಶಕ್ತಿ’ ಹೇಳಿಕೆ: ರಾಹುಲ್ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಬಿಜೆಪಿ
ರಷ್ಯಾ ಚುನಾವಣೆಯಲ್ಲಿ ಪುಟಿನ್ ಭರ್ಜರಿ ಗೆಲುವು ದಾಖಲಿಸಿದ್ದು, ಈಗಾಗಲೇ ಅಧಿಕಾರದ ಮೇಲೆ ಬಿಗಿ ಹಿಡಿತ ಸಾಧಿಸಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸಿದ ಇತರ ಮೂವರು ಅಭ್ಯರ್ಥಿಗಳು ಕ್ರಮವಾಗಿ- 4.31, 3.85 ಮತ್ತು 3.20 ರಷ್ಟು ಮತಗಳನ್ನು ಗೆದ್ದಿದ್ದಾರೆ.
ನಮ್ಮ ಮುಂದೆ ಹಲವು ಕಾರ್ಯಗಳಿವೆ. ಆದರೆ ನಾವು ಒಗ್ಗಟ್ಟಾಗಿದ್ದಾಗ ಯಾರು ನಮ್ಮನ್ನು ಬೆದರಿಸಲು ಬಯಸಿದರೂ, ನಮ್ಮನ್ನು ನಿಗ್ರಹಿಸಲು ಬಯಸಿದರೂ ಯಾರೂ ಇತಿಹಾಸದಲ್ಲಿ ಯಶಸ್ವಿಯಾಗಲಿಲ್ಲ. ಅವರ ಯಶಸ್ವಿಯಾಗಲಿಲ್ಲ ಮತ್ತು ಭವಿಷ್ಯದಲ್ಲಿ ಅವರು ಎಂದಿಗೂ ಯಶಸ್ವಿಯಾಗುವುದಿಲ್ಲ ಮಾಸ್ಕೋದಲ್ಲಿ ತಮ್ಮ ಬೆಂಬಲಿಗರನ್ನುದ್ದೇಶಿ ಮಾತನಾಡಿದ ಪುಟಿನ್ ಹೇಳಿದ್ದಾರೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 8:15 pm, Wed, 20 March 24