Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರಿಟನ್‌ನ ನೂತನ ಪ್ರಧಾನಿ ಕೀರ್ ಸ್ಟಾರ್ಮರ್​​​ಗೆ ಕರೆ ಮಾಡಿ ಭಾರತಕ್ಕೆ ಭೇಟಿ ನೀಡುವಂತೆ ಆಹ್ವಾನಿಸಿದ ಮೋದಿ

ಪ್ರಧಾನಿ ನರೇಂದ್ರ ಮೋದಿ ಮತ್ತು ಯುಕೆ ಪ್ರಧಾನಿ ಸ್ಟಾರ್ಮರ್, ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಹಕಾರವನ್ನು ಹೆಚ್ಚಿಸುವ ಮಹತ್ವವನ್ನು ಒತ್ತಿ ಹೇಳಿದರು.  ಬ್ರಿಟನ್ ನ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಅಭಿವೃದ್ಧಿಯಲ್ಲಿ ಭಾರತೀಯ ಸಮುದಾಯದ ಸಕಾರಾತ್ಮಕ ಕೊಡುಗೆಗಳನ್ನು ಶ್ಲಾಘಿಸಿದ ಅವರು, ಜನರು-ಜನರ ನಡುವಿನ ನಿಕಟ ಸಂಬಂಧಗಳನ್ನು ಉತ್ತೇಜಿಸಲು ಅವರು ಒಪ್ಪಿಕೊಂಡರು ಎಂದು ಪಿಎಂಒ ಕಚೇರಿಯ ಹೇಳಿಕೆ ತಿಳಿಸಿದೆ.

ಬ್ರಿಟನ್‌ನ ನೂತನ ಪ್ರಧಾನಿ ಕೀರ್ ಸ್ಟಾರ್ಮರ್​​​ಗೆ ಕರೆ ಮಾಡಿ ಭಾರತಕ್ಕೆ ಭೇಟಿ ನೀಡುವಂತೆ ಆಹ್ವಾನಿಸಿದ ಮೋದಿ
ನರೇಂದ್ರ ಮೋದಿ
Follow us
ರಶ್ಮಿ ಕಲ್ಲಕಟ್ಟ
|

Updated on: Jul 06, 2024 | 4:10 PM

ದೆಹಲಿ ಜುಲೈ 06: ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು (ಶನಿವಾರ) ಯುಕೆ ಪ್ರಧಾನಿ (UK PM) ಕೀರ್ ಸ್ಟಾರ್ಮರ್ (Keir Starmer) ಅವರಿಗೆ ಕರೆ ಮಾಡಿ ಮಾತನಾಡಿದ್ದಾರೆ. ಬ್ರಿಟನ್ ಸಂಸತ್ ಚುನಾವಣೆಯಲ್ಲಿ ಸ್ಟಾರ್ಮರ್ ಅವರ ಗೆಲುವು ಮತ್ತು ಯುಕೆ ಪ್ರಧಾನಿಯಾಗಿ ನೇಮಕವಾದುದಕ್ಕೆ ಮೋದಿ ಅವರನ್ನು ಅಭಿನಂದಿಸಿದರು. ಪ್ರಧಾನಮಂತ್ರಿಗಳ ಕಚೇರಿ (PMO) ಪ್ರಕಾರ ಭಾರತಕ್ಕೆ ಆರಂಭಿಕ ಭೇಟಿಗಾಗಿ ಸ್ಟಾರ್ಮರ್‌ಗೆ ಮೋದಿ ಆಹ್ವಾನವನ್ನೂ ನೀಡಿದ್ದಾರೆ.

ಪಿಎಂ ನರೇಂದ್ರ ಮೋದಿ ಮತ್ತು ಯುಕೆ ಪಿಎಂ ಕೀರ್ ಸ್ಟಾರ್ಮರ್ ಅವರು ಭಾರತ ಮತ್ತು ಯುಕೆ ನಡುವಿನ ಐತಿಹಾಸಿಕ ಬಾಂಧವ್ಯವನ್ನು ನೆನಪಿಸಿಕೊಂಡಿದ್ದು ಉಭಯ ರಾಷ್ಟ್ರಗಳ ನಡುವಿನ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಇನ್ನಷ್ಟು ಗಟ್ಟಿಗೊಳಿಸುವ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ ಎಂದು ಹೇಳಿಕೆ ತಿಳಿಸಿದೆ.

ಉಭಯ ನಾಯಕರು ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಹಕಾರವನ್ನು ಹೆಚ್ಚಿಸುವ ಮಹತ್ವವನ್ನು ಒತ್ತಿ ಹೇಳಿದರು.  ಬ್ರಿಟನ್ ನ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಅಭಿವೃದ್ಧಿಯಲ್ಲಿ ಭಾರತೀಯ ಸಮುದಾಯದ ಸಕಾರಾತ್ಮಕ ಕೊಡುಗೆಗಳನ್ನು ಶ್ಲಾಘಿಸಿದ ಅವರು, ಜನರು-ಜನರ ನಡುವಿನ ನಿಕಟ ಸಂಬಂಧಗಳನ್ನು ಉತ್ತೇಜಿಸಲು ಅವರು ಒಪ್ಪಿಕೊಂಡರು ಎಂದು ಪಿಎಂಒ ಕಚೇರಿಯ ಹೇಳಿಕೆ ತಿಳಿಸಿದೆ.

ಶುಕ್ರವಾರ ಎಕ್ಸ್ ಪೋಸ್ಟ್ ಮೂಲಕ ಸ್ಟಾರ್ಮರ್ ಗೆಲುವಿಗೆ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಬ್ರಿಟನ್ ನ ನಿರ್ಗಮಿತ ಪ್ರಧಾನಿ ರಿಷಿ ಸುನಕ್ ಅವರನ್ನುದ್ದೇಶಿಸಿ ಯುಕೆಯಲ್ಲಿ ನಿಮ್ಮ ಶ್ಲಾಘನೀಯ ನಾಯಕತ್ವಕ್ಕಾಗಿ ಮತ್ತು ನಿಮ್ಮ ಅಧಿಕಾರಾವಧಿಯಲ್ಲಿ ಭಾರತ ಮತ್ತು ಯುಕೆ ನಡುವಿನ ಬಾಂಧವ್ಯವನ್ನು ಗಾಢಗೊಳಿಸಲು ನಿಮ್ಮ ಸಕ್ರಿಯ ಕೊಡುಗೆಗಾಗಿ ಧನ್ಯವಾದಗಳು. ಭವಿಷ್ಯಕ್ಕಾಗಿ ನಿಮಗೆ ಮತ್ತು ನಿಮ್ಮ ಕುಟುಂಬಕ್ಕೆ ಶುಭಾಶಯಗಳು ಎಂದು ಮೋದಿ ಹೇಳಿದ್ದಾರೆ.

ಇದನ್ನೂ ಓದಿ: ಕೀರ್ ಸ್ಟಾರ್ಮರ್‌ ಗೆಲುವಿಗೆ ನರೇಂದ್ರ ಮೋದಿ ಅಭಿನಂದನೆ; ರಿಷಿ ಸುನಕ್‌ಗೆ ಥ್ಯಾಂಕ್ಸ್​ ಎಂದ ಪ್ರಧಾನಿ

ರಾಜಕೀಯ ರಂಗದಲ್ಲಿ ಗಮನಾರ್ಹ ಬದಲಾವಣೆಯಲ್ಲಿ, ಲೇಬರ್ ಪಾರ್ಟಿ, ಹೌಸ್ ಆಫ್ ಕಾಮನ್ಸ್‌ನಲ್ಲಿ 650 ಸ್ಥಾನಗಳಲ್ಲಿ 412 ಸ್ಥಾನಗಳನ್ನು ಪಡೆದುಕೊಂಡಿತು, ಟೋನಿ ಬ್ಲೇರ್ ಅವರ 1997 ವಿಜಯದ ನಂತರ ಅವರ ಅತ್ಯುತ್ತಮ ಪ್ರದರ್ಶನವನ್ನು ಗುರುತಿಸಿತು. ಕನ್ಸರ್ವೇಟಿವ್‌ಗಳು ಕೇವಲ 121 ಸ್ಥಾನಗಳನ್ನು ಗೆದ್ದಿದ್ದು, ರಿಷಿ ಸುನಕ್ ಅಧಿಕಾರ ಕಳೆದುಕೊಂಡಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಾರಿನಿಂದ ಗುದ್ದಿ ಕೊಲ್ಲಲು ಯತ್ನ: ಬಚಾವಾದ ಬಗ್ಗೆ ಮುರಳಿ ಪ್ರಸಾದ್ ಮಾತು
ಕಾರಿನಿಂದ ಗುದ್ದಿ ಕೊಲ್ಲಲು ಯತ್ನ: ಬಚಾವಾದ ಬಗ್ಗೆ ಮುರಳಿ ಪ್ರಸಾದ್ ಮಾತು
ಸ್ಪೈಸ್‌ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ
ಸ್ಪೈಸ್‌ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ
ಬೆಂಗಳೂರಿನಲ್ಲಿ ಶ್ವಾನದ ಮೇಲೆ ಅತ್ಯಾಚಾರವೆಸಗಿ ವಿಕೃತಿ
ಬೆಂಗಳೂರಿನಲ್ಲಿ ಶ್ವಾನದ ಮೇಲೆ ಅತ್ಯಾಚಾರವೆಸಗಿ ವಿಕೃತಿ
ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಪ್ರದೀಪ್​ ಈಶ್ವರ್
ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಪ್ರದೀಪ್​ ಈಶ್ವರ್
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಆಮಿರ್- ರಣ್​ಬೀರ್ ನಡುವೆ ಬಿರುಕು ಮೂಡಿಸಿದ ರಿಷಭ್ ಪಂತ್
ಆಮಿರ್- ರಣ್​ಬೀರ್ ನಡುವೆ ಬಿರುಕು ಮೂಡಿಸಿದ ರಿಷಭ್ ಪಂತ್
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
‘ಅಪ್ಪು’ ಮರು ಬಿಡುಗಡೆ: ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ
‘ಅಪ್ಪು’ ಮರು ಬಿಡುಗಡೆ: ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ