ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ಸತತ ಮೂರನೇ ಅವಧಿಗೆ ಕೇಂದ್ರದಲ್ಲಿ ಸರ್ಕಾರ ರಚಿಸಲಿದೆ. ಶುಕ್ರವಾರ ನಡೆದ ಸಭೆಯಲ್ಲಿ, ಹೊಸದಾಗಿ ಆಯ್ಕೆಯಾದ ಸಂಸದರು ಸರ್ವಾನುಮತದಿಂದ ಮೋದಿಯನ್ನು ತಮ್ಮ ನಾಯಕನನ್ನಾಗಿ ಆಯ್ಕೆ ಮಾಡಿದರು. ಇದೀಗ ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು (Narendra Modi) ಪ್ರಮಾಣ ವಚನ ಸ್ವೀಕರಿಸಿದರು. ದೆಹಲಿಯಲ್ಲಿರುವ ರಾಷ್ಟ್ರಪತಿ ಭವನದಲ್ಲಿ ನರೇಂದ್ರ ಮೋದಿ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ಪ್ರಮಾಣವಚನ ಬೋಧಿಸಿದ್ದು,. ಮೋದಿ ಅವರು ಈಶ್ವರನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ನರೇಂದ್ರ ಮೋದಿ ಅವರ ಜತೆಗೆ ಹಲವು ಸಂಸದರು ಕೂಡ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ದೇಶದಲ್ಲಿ 10 ವರ್ಷಗಳ ಬಳಿಕ ಸಮ್ಮಿಶ್ರ ಸರ್ಕಾರ ರಚನೆಯಾಗಿದ್ದು, ಟಿಡಿಪಿ, ಜೆಡಿಯು, ಜೆಡಿಎಸ್ ಹಾಗೂ ಎಲ್‌ಜೆಪಿ ಸಂಸದರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಕೇಂದ್ರ ಸಂಪುಟ ಸಚಿವರಾಗಿ ಜೆಡಿಯುನಾಯಕ ರಾಜೀವ್ ರಂಜನ್ (ಲಾಲನ್) ಸಿಂಗ್ ಪ್ರಮಾಣ ವಚನ ಸ್ವೀಕರಿಸಿದರು.
#WATCH | JDU leader Rajiv Ranjan (Lalan) Singh takes oath as a Union Cabinet Minister in the Prime Minister Narendra Modi-led NDA government pic.twitter.com/yjIQaY5Mdr
— ANI (@ANI) June 9, 2024
ಹಿಂದೂಸ್ತಾನಿ ಅವಾಮ್ ಮೋರ್ಚಾ (ಜಾತ್ಯತೀತ) ಸಂಸ್ಥಾಪಕ ಜಿತನ್ ರಾಮ್ ಮಾಂಝಿ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಕೇಂದ್ರ ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
#WATCH | Hindustani Awam Morcha (Secular) founder Jitan Ram Manjhi takes oath as a Union Cabinet Minister in the Prime Minister Narendra Modi-led NDA government pic.twitter.com/kpKLLf00pJ
— ANI (@ANI) June 9, 2024
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಬಿಜೆಪಿ ನಾಯಕ ಧರ್ಮೇಂದ್ರ ಪ್ರಧಾನ್ ಅವರು ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
#WATCH | BJP leader Dharmendra Pradesh sworn in as Union Minister in the Prime Minister Narendra Modi-led NDA government pic.twitter.com/mn4qGONaVY
— ANI (@ANI) June 9, 2024
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಬಿಜೆಪಿ ನಾಯಕ ಪಿಯೂಷ್ ವೇದಪ್ರಕಾಶ್ ಗೋಯಲ್ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
#WATCH | BJP leader Piyush Vedprakash Goyal sworn in as Union Minister in the Prime Minister Narendra Modi-led NDA government pic.twitter.com/EEmBTpymXq
— ANI (@ANI) June 9, 2024
ಕರ್ನಾಟಕದ ಮಂಡ್ಯದಿಂದ ಗೆದ್ದು ಸಂಸತ್ ಪ್ರವೇಶಿಸಿರುವ ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಎಂಟು ಜನ ಬಿಜೆಪಿ ನಾಯಕರು ಪ್ರಮಾಣ ಸ್ವೀಕರಿಸಿದ ನಂತರ ಎನ್ ಡಿಎ ಒಕ್ಕೂಟದ ಮಿತ್ರಪಕ್ಷಗಳಲ್ಲಿ ಮೊದಲಿಗರಾಗಿ ಕುಮಾರಸ್ವಾಮಿ ಅವರು ಪ್ರಮಾಣ ಸ್ವೀಕರಿಸಿದರು. ಸಾಂಪ್ರದಾಯಿಕ ಬಿಳಿ ಅಂಗಿ ಪಂಚೆ ಧರಿಸಿದ್ದ ಎಚ್ಡಿಕೆ ದೇವರ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸಿದರು.
#WATCH | JD(S) leader HD Kumaraswamy sworn in as Union Minister in the Prime Minister Narendra Modi-led NDA government pic.twitter.com/N5zBWhppLz
— ANI (@ANI) June 9, 2024
ಶಿವರಾಜ್ ಸಿಂಗ್ ಚೌಹಾಣ್ ಅವರು ಸಹ ಇಂದು ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.
#WATCH | BJP leader Shivraj Singh Chouhan sworn in as Union Minister in the Prime Minister Narendra Modi-led NDA government pic.twitter.com/wQj0fPe0Yy
— ANI (@ANI) June 9, 2024
ಅಚ್ಚರಿ ಎಂಬಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಅಚ್ಚರಿ ಎಂಬಂತೆ ಮೋದಿ ಸಂಪುಟ ಸೇರಿದ್ದಾರೆ. ಇಂದು ಮೋದಿ ಜೊತೆಗೆ ಕ್ಯಾಬಿನೆಟ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.
BJP leader JP Nadda takes oath as a Union Cabinet minister in the Prime Minister Narendra Modi-led NDA government at Rashtrapati Bhavan in Delhi pic.twitter.com/jtu0vQEDUO
— ANI (@ANI) June 9, 2024
ಮೋದಿ ಸಂಪುಟದ ಕ್ಯಾಬಿನೆಟ್ ಸಚಿವರಾಗಿ ನಿತಿನ್ ಗಡ್ಕರಿ ಅವರು ಪ್ರಮಾಣವಚನ ಸ್ವೀಕರಿಸಿದರು.
#WATCH | BJP leader Nitin Gadkari takes oath as a Union Cabinet Minister in the Prime Minister Narendra Modi-led NDA government pic.twitter.com/yehjO8ffjD
— ANI (@ANI) June 9, 2024
ಇನ್ನು ಕ್ಯಾಬಿನೆಟ್ ಸಚಿವರಾಗಿ ರಾಜನಾಥ್ ಸಿಂಗ್ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮತ್ತೋರ್ವ ಬಿಜೆಪಿ ಹಿರಿಯ ಸಂಸದ ಅಮಿತ್ ಶಾ ಅವರು ಸಹ ಈಶ್ವರನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಕಳೆದ ಬಾರಿ ಶಾ ಕೇಂದ್ರ ಗೃಹ ಸಚಿವರಾಗಿದ್ದರು, ಈ ಬಾರಿಯೂ ಸಹ ಅವರು ಮತ್ತೊಮ್ಮೆ ಗೃಹ ಖಾತೆ ವಹಿಸಿಕೊಳ್ಳುವ ಸಾಧ್ಯೆತಗಳಿವೆ.
#WATCH | BJP leader Amit Shah takes oath as a Union Cabinet minister in the PM Narendra Modi-led NDA government pic.twitter.com/UnNXKeJdCY
— ANI (@ANI) June 9, 2024
ಇನ್ನು ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕರಿಸಿದ ಬಳಿಕ ಕ್ಯಾಬಿನೆಟ್ ಮಂತ್ರಿಯಾಗಿ ರಾಜನಾಥ್ ಸಿಂಗ್ ಅವರು ಪ್ರಮಾಣ ವಚನ ಸ್ವೀಕರಿಸಿದರು. ಈಶ್ವರನ ಹೆಸರಿನಲ್ಲಿ ರಾಜನಾಥ್ ಸಿಂಗ್ ಅವರು ಪ್ರಮಾಣವಚನ ಸ್ವೀಕರಿಸಿದರು.
#WATCH | Delhi: Rajnath Singh takes oath as a Cabinet Minister in Prime Minister Narendra Modi's cabinet. pic.twitter.com/VFJzzzddgu
— ANI (@ANI) June 9, 2024
ನರೇಂದ್ರ ಮೋದಿ ಅವರು ಇಂದು (ಜೂನ್ 07) ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದರು,. ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆಯುತ್ತಿರುವ ಸಮಾರಂಭದಲ್ಲಿ ಮೋದಿ ಈಶ್ವರನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಇಂದು ಸಂಜೆ 7.15ಕ್ಕೆ 3ನೇ ಬಾರಿಗೆ ಪ್ರಧಾನಿಯಾಗಿ ಮೋದಿ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇನ್ನು ಈ ಪದಗ್ರಹಣ ಕಾರ್ಯಕ್ರಮಕ್ಕೆ ದೇಶ-ವಿದೇಶದ ಪ್ರಮುಖ ನಾಯಕರು ಬಾಗಿಯಾಗಲಿದ್ದಾರೆ. ಅದರಲ್ಲೂ ಮುಖ್ಯವಾಗಿ ಈ ಬಾರಿ ತೃತೀಯಲಿಂಗಿ ಸಮುದಾಯದವರಿಗೆ ಆಹ್ವಾನ ನೀಡಲಾಗಿದೆ. ದೇಶದ ವಿವಿಧ ಭಾಗಗಳ ತೃತೀಯಲಿಂಗಿ ಸಮುದಾಯದವರಿಗೆ ಆಹ್ವಾನ ನೀಡಿರುವುದು ವಿಶೇಷವಾಗಿದೆ.
ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿರುವ ಜಗತ್ ಪ್ರಕಾಶ್ ನಡ್ಡಾ (ಜೆಪಿ ನಡ್ಡಾ) ಕೂಡ ನರೇಂದ್ರ ಮೋದಿ ಸರ್ಕಾರದಲ್ಲಿ (Narendra Modi 3.0 Cabinet) ಸಚಿವರಾಗಿ ಇಂದು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಪ್ರಧಾನ ಮಂತ್ರಿಯಾಗಿ ಅಧಿಕಾರ ಸ್ವೀಕರಿಸುವ ನರೇಂದ್ರ ಮೋದಿ ಜೊತೆಗೆ ಕೆಲವು ಸಚಿವರು ಮಾತ್ರ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಅವರಲ್ಲಿ ಜೆಪಿ ನಡ್ಡಾ (JP Nadda) ಕೂಡ ಒಬ್ಬರು ಎನ್ನಲಾಗುತ್ತಿದೆ.
ಮೋದಿ ಸಂಪುಟದಲ್ಲಿ ಸಚಿವರಾಗಿ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಇಂದು ಪ್ರಮಾಣವಚನ ಸ್ವೀಕಾರ ಸಾಧ್ಯತೆ#NarendraModi #ModiCabinet #JPNaddahttps://t.co/IVc58x7O9A
— TV9 Kannada (@tv9kannada) June 9, 2024
ಕೆಲವೇ ಕ್ಷಣಗಳಲ್ಲಿ ಮೂರನೇ ಬಾರಿಗೆ ಪ್ರಧಾನಿಯಾಗಿ ಮೋದಿ ಪದಗ್ರಹಣ ಮಾಡಲಿದ್ದಾರೆ. ಇನ್ನು ಯಾರ್ಯಾರು ಸಚಿವರಾಗುತ್ತಾರೆ ಎನ್ನುವುದೇ ಕುತೂಹಲ. ಇದೀಗ ಬಂದ ಮಾಹಿತಿ ಪ್ರಕಾರ, 63 ಸಂಸದರು ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇನ್ನು ಉತ್ತರ ಪ್ರದೇಶ, ಬಿಹಾರದಿಂದ ತಲಾ 8 ಸಂಸದರಿಗೆ ಮಂತ್ರಿಗಿರಿ ದೊರಕಿದೆ. ಮಹಾರಾಷ್ಟ್ರದಿಂದ 6 ಸಂಸದರಿಗೆ ಕೇಂದ್ರ ಸಚಿವ ಸ್ಥಾನ. ಗುಜರಾತ್ ಐವರು, ಆಂಧ್ರ ಪ್ರದೇಶದಲ್ಲಿ ಮೂವರಿಗೆ ಮಂತ್ರಿಗಿರಿ. ಪಶ್ಚಿಮ ಬಂಗಾಳ, ತೆಲಂಗಾಣದಲ್ಲಿ ತಲಾ ಇಬ್ಬರಿಗೆ ಸಚಿವ ಸ್ಥಾನ. ಕೇರಳದಲ್ಲಿ ಗೆದ್ದ ಓರ್ವ ಬಿಜೆಪಿ ಸಂಸದನಿಗೆ ಸಚಿವ ಸ್ಥಾನ ಒಲಿದಿದೆ. ಇನ್ನು ಕರ್ನಾಟಕ್ಕೆ ಐದು ಸಚಿವ ಸ್ಥಾನ ಸಿಕ್ಕಿವೆ.
ಇಂದು ಸಂಜೆ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಸುಮಾರು 65 ಸಚಿವರು ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ. ಈ ಬಾರಿ ಸ್ಮೃತಿ ಇರಾನಿ, ಅನುರಾಗ್ ಠಾಕೂರ್‌ಗೆ ಸಚಿವ ಸ್ಥಾನ ಕೈತಪ್ಪಿದೆ ಎನ್ನಲಾಗಿದ್ದು, ಉಳಿದಂತೆ ಹಿಂದಿನ ಸಂಪುಟದಲ್ಲಿದ್ದ ಎಲ್ಲರಿಗೂ ಸಚಿವ ಸ್ಥಾನ ಫಿಕ್ಸ್ ಎನ್ನಲಾಗಿದೆ. ಅಲ್ಲದೇ ಮೈತ್ರಿ ಪಕ್ಷಗಳಲ್ಲಿ ಬಹುತೇಕ ಹೊಸಬರಿಗೆ ಸಚಿವ ಸ್ಥಾನ ಸಿಗುವ ನಿರೀಕ್ಷೆಗಳಿವೆ.
ಮೋದಿ ಸಂಪುಟದಲ್ಲಿ ತುಮಕೂರು ಸಂಸದ ವಿ ಸೋಮಣ್ಣ ಅವರಿಗೆ ಸಚಿವ ಸ್ಥಾನ ಸಿಗುವುದು ಫಿಕ್ಸ್ ಆಗಿದೆ. ಈ ಹಿನ್ನೆಲೆಯಲ್ಲಿ ಪ್ರಮಾಣವಚನಕ್ಕೆ ಪತ್ನಿ ಜೊತೆಗೆ ನವದೆಹಲಿಗೆ ತೆರಳಿದ್ದಾರೆ. ಇನ್ನು ಸಚಿವ ಸ್ಥಾನ ಖಚಿತವಾಗುತ್ತಿದ್ದಂತೆಯೇ ಸೋಮಣ್ಣ ಅವರು ದೆಹಲಿಯಲ್ಲಿ ಬಿಎಸ್ ಯಡಿಯೂರಪ್ಪ ಭೇಟಿಗೆ ತೆರಳಿದ್ದಾರೆ. ಸದ್ಯ ಯಡಿಯೂರಪ್ಪ ಸಹ ದೆಹಲಿಯಲ್ಲಿ ತಮ್ಮ ಪುತ್ರ ವಿಜಯೇಂದ್ರ ನಿವಾಸದಕ್ಕಿ ತಂಗಿದ್ದಾರೆ.
ಈ ಬಾರಿ ಮೋದಿ ಸಂಪುಟದಲ್ಲಿ ಕರ್ನಾಟಕದಿಂದ ಐವರು ಸಚಿವರಾಗುವ ಸಾಧ್ಯೆತಗಳಿವೆ. ಮೂವರಿಗೆ ಕ್ಯಾಬಿನೆಟ್ ದರ್ಜೆ ಸಿಕ್ಕರೆ, ಇನ್ನುಳಿದಂತೆ ಇಬ್ಬರಿಗೆ ರಾಜ್ಯ ದರ್ಜೆ ಖಾತೆ ಸಿಗುವ ಸಾಧ್ಯತೆಗಳಿವೆ. ನಿರ್ಮಲಾ ಸೀತಾರಾಮನ್(ಕರ್ನಾಟ ರಾಜ್ಯಸಭಾ ಸದಸ್ಯೆ), ಪ್ರಹ್ಲಾದ್ ಜೋಶಿ, ಎಚ್.ಡಿ.ಕುಮಾರಸ್ವಾಮಿಗೆ ಅವರಿಗೆ ಕ್ಯಾಬಿನೆಟ್ ದರ್ಜೆ ಸಚಿವ ಸ್ಥಾನ ದೊರೆಯುವ ಸಾಧ್ಯೆತೆಗಳಿವೆ, ಇನ್ನು ರಾಜ್ಯ ದರ್ಜೆ ಸಚಿವರಾಗಿ ಶೋಭಾ ಕರಂದ್ಲಾಜೆ ಮತ್ತು ತುಮಕೂರು ಸಂಸದ ಸೋಮಣ್ಣಗೆ ಅವಕಾಶ ಸಿಗುವ ನಿರೀಕ್ಷೆಗಳಿವೆ.
ಮಮತಾ ಬ್ಯಾನರ್ಜಿ ಸೇರಿದಂತೆ ಇಂಡಿಯಾ ಕೂಟದ ಹಲವು ನಾಯಕರು ಪ್ರಧಾನಿ ನರೇಂದ್ರ ಮೋದಿಯವರು ಮೂರನೇ ಬಾರಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಮಾರಂಭಕ್ಕೆ ಗೈರಾಗುತ್ತೇವೆ ಎಂದು ಹೇಳಿರುವ ಬೆನ್ನಲೇ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಈ ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ವರದಿ ಆಗಿದೆ. ಇಂಡಿಯಾ ಮೈತ್ರಿಕೂಟದ ನಾಯಕರ ಜೊತೆ ಚರ್ಚಿಸಿದ ನಂತರ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾಗಿ ಮಲ್ಲಿಕಾರ್ಜುನ ಖರ್ಗೆ ಅವರು ಈ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಮೋದಿ ತಮ್ಮ ನಿವಾಸದಲ್ಲಿ ಸಂಭವನೀಯ ಸಚಿವರಿಗೆ ಆಯೋಜಿಸಿದ್ದ ಚಹಾಕೂಟದಲ್ಲಿ ಕೆಲ ಸಲಹೆ-ಸೂಚನೆಗಳನ್ನು ನೀಡಿದ್ದಾರೆ. 100 ದಿನಗಳ ಕಾರ್ಯಸೂಚಿಯ ಕ್ರಿಯಾ ಯೋಜನೆಯನ್ನು ಅನುಷ್ಠಾನಗೊಳಿಸಬೇಕು. ಬಾಕಿ ಇರುವ ಯೋಜನೆಗಳು, ನಿಮಗೆ ಯಾವುದೇ ಇಲಾಖೆ ಸಿಕ್ಕರೂ ಆದಷ್ಟು ಬೇಗ ಪೂರ್ಣಗೊಳಿಸಬೇಕು. ಐದು ವರ್ಷಗಳ ರೋಡ್ ಮ್ಯಾಪ್ ಕೂಡ ತಯಾರಿಸಬೇಕು. 2047 ರಲ್ಲಿ ಭಾರತವನ್ನು ಅಭಿವೃದ್ಧಿ ಹೊಂದಿದ ಭಾರತವನ್ನಾಗಿ ಮಾಡುವುದು ನಮ್ಮ ಸರ್ಕಾರದ ಗುರಿಯಾಗಿದೆ. ಜನರು ಎನ್‌ಡಿಎಯನ್ನು ನಂಬಿದ್ದಾರೆ ಅದನ್ನು ಬಲಪಡಿಸುವ ಅಗತ್ಯವಿದೆ ಎಂದು ಕಿವಿಮಾತು ಹೇಳಿದ್ದಾರೆ ಎಂದು ತಿಳಿದುಬಂದಿದೆ.
3ನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಇಂದು ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಅದರಕ್ಕೂ ಮೊದಲು ಮೋದಿ ತಮ್ಮ ಜೊತೆ ಕ್ಯಾಬಿನೆಟ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿರುವ ಸಂಭವನೀಯ ಸಚಿವರಿಗೆ ಚಹಾಕೂಟ ಏರ್ಪಡಿಸಿದ್ದರು. ಅಮಿತ್ ಶಾ, ರಾಜನಾಥ್ ಸಿಂಗ್ ಸೇರಿದಂತೆ ಸಂಭವನೀಯ ಸಚಿವರುಗಳು ಪ್ರಧಾನಿ ನಿವಾಸದಲ್ಲಿ ಆಯೋಜಿಲಾಗಿದ್ದ ಚಹಾಕೂಟದಲ್ಲಿ ಭಾಗಿಯಾಗಿದ್ದರು. ಇನ್ನು ಇದೀಗ ಚಹಾಕೂಟ ಮುಕ್ತಾಯವಾಗಿದ್ದು, ಇದರಲ್ಲಿ ಭಾಗಿಯಾದವರು ಇಂದು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.
#WATCH | Delhi: NDA leaders attended the tea meeting at 7 LKM, the residence of PM-designate Narendra Modi.
PM-Designate Modi will take the Prime Minister’s oath for the third consecutive term today at 7.15 pm. pic.twitter.com/6RWS8xZBxD
— ANI (@ANI) June 9, 2024
ಶ್ರೀಲಂಕಾ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲು ದೆಹಲಿಗೆ ಆಗಮಿಸಿದ್ದಾರೆ. ಇಂದು ಸಂಜೆ 7.15ಕ್ಕೆ ಸತತ ಮೂರನೇ ಅವಧಿಗೆ ಮೋದಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
#WATCH | Sri Lankan President Ranil Wickremesinghe arrives in Delhi to attend Prime Minister Designate Narendra Modi’s swearing-in ceremony today.
PM-Designate Modi will take the Prime Minister’s oath for the third consecutive term today at 7.15 pm. pic.twitter.com/IXGDdpnD2g
— ANI (@ANI) June 9, 2024
ಹಿರಿಯ ನಾಯಕರಾದ ಅಮಿತ್ ಶಾ, ರಾಜನಾಥ್ ಸಿಂಗ್,ಗಡ್ಕರಿ, ನಿರ್ಮಲಾ ಸೀತಾರಾಮನ್, ಅಶ್ವಿನಿ ವೈಷ್ಣವ್, ಪಿಯೂಶ್ ಗೊಯಲ್, ಮನ್ಸುಖ್ ಮಾಂಡವೀಯಾ. ಅರ್ಜುನ್ ಮೇಘವಾಲ್, ಶಿವರಾಜ್ ಸಿಂಗ್ ಚೌಹಾಣ್, ಅಣ್ಣಾಮಲೈ, ಸುರೇಶ್ ಗೋಪಿ, ಮನೋಹರ್ ಲಾಲ್ ಖಟ್ಟರ್ಗೆ ಕೇಂದ್ರ ಸಂಪುಟದಲ್ಲಿ ಸ್ಥಾನ ಸಾಧ್ಯತೆ ಇದೆ. ಕೇಂದ್ರ ಸಚಿವ ಸಂಪುಟದಲ್ಲಿ ಬಿಜೆಪಿಯಿಂದ ಸುಮಾರು ಮೂರು ಡಜನ್ ಹೆಸರುಗಳು ಇವೆ. ಹೀಗಾಗಿ ಯಾರೆಲ್ಲ ಮೋದಿ ಸಂಪುಟ ಸೇರಲಿದ್ದಾರೆ ಎನ್ನುವ ಕುತೂಹಲ ಮೂಡಿಸಿದೆ.
ಕರ್ನಾಟಕದ ಮೂವರಿಗೆ ಕೇಂದ್ರ ಸಚಿವ ಸ್ಥಾನ: ಆ ಮೂವರು ಯಾರ್ಯಾರು? ಇಲ್ಲಿದೆ ವಿವರ
#Modi #ministers @narendramodi @HDKumarasw30951 @JoshiPralhad @ShobhaBJP #modifailsinindia #karnataka https://t.co/oOUTNZr8nh— TV9 Kannada (@tv9kannada) June 9, 2024
ದೆಹಲಿಯ ನರೇಂದ್ರ ಮೋದಿ ನಿವಾಸದಲ್ಲಿ ನಡೆದ ಚಹಾಕೂಟದಲ್ಲಿ ಬಿಜೆಪಿ ನಾಯಕರಾದ ಅಮಿತ್ ಶಾ, ನಡ್ಡಾ. ಶಿವರಾಜ್ಸಿಂಗ್ ಚೌಹಾಣ್, ಬಿ.ಎಲ್.ವರ್ಮಾ, ಪಂಕಜ್ ಚೌಧರಿ, ಅನ್ನಪೂರ್ಣ ದೇವಿ, ಅರ್ಜುನ್ ರಾಮ್ ಮೇಘವಾಲ್, ಕಿರಣ್ ರಿಜಿಜು ಜ್ಯೋತಿರಾದಿತ್ಯ ಸಿಂಧಿಯಾ, ಮನೋಹರ್ ಲಾಲ್ ಖಟ್ಟರ್, ರಕ್ಷಾ ಖಡ್ಸೆ, ನಿತ್ಯಾನಂದ ರೈ, ಹರ್ಷ್ ಮಲ್ಹೋತ್ರಾ, ಭಗೀರಥ ಚೌಧರಿ, ತೆಲಂಗಾಣ ಬಿಜೆಪಿ ಅಧ್ಯಕ್ಷ ಕಿಶನ್ ರೆಡ್ಡಿ, ಸಂಸದ ಬಂಡಿ ಸಂಜಯ್, ಪಿಯೂಶ್ ಗೋಯಲ್, ಆರ್ಎಲ್ಡಿ ಅಧ್ಯಕ್ಷ ಜಯಂತ್ ಚೌಧರಿ, ಜೆಡಿಎಸ್ ಸಂಸದ ಹೆಚ್.ಡಿ.ಕುಮಾರಸ್ವಾಮಿ, ಹೆಚ್ಎಎಂ ಅಧ್ಯಕ್ಷ ಜಿತನ್ ಮಾಂಜಿ ಸೇರಿದಂತೆ ಹಲವು ಸಂಸದರು ಹಾಜರಾಗಿದ್ದಾರೆ.
Delhi: BJP leaders Amit Shah, JP Nadda, BL Verma, Pankaj Chaudhary, Shivraj Singh Chouhan, Annapurna Devi, Arjun Ram Meghwal arrive at 7, LKM, the residence of Prime Minister-designate Narendra Modi to attend the tea meeting here.
PM-Designate Modi will take the Prime…
— ANI (@ANI) June 9, 2024
Published On - 12:10 pm, Sun, 9 June 24