Tomorrow National Doctor’s Day: ಪ್ರಧಾನ ಮಂತ್ರಿ ನರೇಂದ್ರ ಮೋದಿ ವೈದ್ಯರನ್ನು ಉದ್ದೇಶಿಸಿ ಮಾತಾಡಲಿದ್ದಾರೆ

ಕೋವಿಡ್-19 ಪಿಡುಗು ಅಪ್ಪಳಿಸಿದಾಗಿನಿಂದ ಅದರ ವಿರುದ್ಧ ನಡೆಯುತ್ತಿರುವ ಹೋರಾಟದ ಮುಂಚೂಣಿಯಲ್ಲಿದ್ದಕೊಂಡು ಸಮುದಾಯ ಆರೋಗ್ಯ ಕಾರ್ಯಕರ್ತರು ನಿರ್ವಹಿಸುತ್ತಿರುವ ಪಾತ್ರವನ್ನು ಪ್ರಧಾನ ಮಂತ್ರಿಗಳು ಶ್ಲಾಘಿಸಿದ್ದಾರೆ.

Tomorrow National Doctor's Day: ಪ್ರಧಾನ ಮಂತ್ರಿ ನರೇಂದ್ರ ಮೋದಿ ವೈದ್ಯರನ್ನು ಉದ್ದೇಶಿಸಿ ಮಾತಾಡಲಿದ್ದಾರೆ
ಪ್ರಧಾನಿ ನರೇಂದ್ರ ಮೋದಿ
Follow us
ಅರುಣ್​ ಕುಮಾರ್​ ಬೆಳ್ಳಿ
|

Updated on: Jun 30, 2021 | 6:25 PM

ನವದೆಹಲಿ: ರಾಷ್ಟ್ರೀಯ ವೈದ್ಯರ ದಿನವಾಗಿರುವ ಗುರುವಾರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ವೈದ್ಯ ಸಮುದಾಯವನ್ನು ಉದ್ದೇಶಿಸಿ ಮಾತಾಡಲಿದ್ದಾರೆ. ಕೊವಿಡ್-19 ಪಿಡುಗಿನ ಎರಡನೇ ಅಲೆ ಹೊಡೆತದಿಂದ ಈಗಷ್ಟೇ ಚೇತರಿಸಿಕೊಂಡು ಮೂರನೇ ಅಲೆಯನ್ನು ಎದುರಿಸಲು ಭಾರತ ವೈದ್ಯಕೀಯ ಲೋಕ ಸನ್ನದ್ಧರಾಗುತ್ತಿರುವ ಹಿನ್ನೆಲೆಯಲ್ಲಿ ಅವರು ಮನುಕುಲಕ್ಕೆ ನಿಸ್ವಾರ್ಥ ಮನೋಭಾವದಿಂದ ಒದಗಿಸುತ್ತಿರವ ಸೇವೆ ಬಗ್ಗೆ ಪ್ರಧಾನ ಮಂತ್ರಿಗಳು ಮಾತಾಡಲಿರುವುದು ಈ ವೃತ್ತಿಯಲ್ಲಿರುವವರ ಆತ್ಮಸ್ಥೈರ್ಯವನ್ನು ಹೆಚ್ಚಿಸಲಿದೆ. ಬುಧವಾರ ಈ ಕುರಿತು ಟ್ವೀಟ್​ ಮಾಡಿರುವ ಪ್ರಧಾನಿಗಳು, ‘ಕೊವಿಡ್-19 ಪಿಡುಗಿನ ವಿರುದ್ಧ ಜಾರಿಯಲ್ಲಿರುವ ಯುದ್ಧದಲ್ಲಿ ವೈದ್ಯರು ನಡೆಸುತ್ತಿರುವ ಪ್ರಯತ್ನಗಳ ಬಗ್ಗೆ ಭಾರತ ಹೆಮ್ಮೆಪಡುತ್ತದೆ. ಜುಲೈ 1 ರಾಷ್ಟ್ರೀಯ ವೈದ್ಯರ ದಿನವೆಂದು ಆಚರಿಸಲ್ಪಡುತ್ತದೆ. ನಾಳೆ ಮಧ್ಯಾಹ್ನ 3 ಗಂಟೆಗೆ @IMAIndiaOrg ಆಯೋಜಿಸುತ್ತಿರುವ ಕಾರ್ಯಕ್ರಮವೊಂದರಲ್ಲಿ ನಾನು ವೈದ್ಯರ ಸಮುದಾಯವನ್ನು ಉದ್ದೇಶಿಸಿ ಮಾತಾಡಲಿದ್ದೇನೆ,’ಎಂದು ಹೇಳಿದ್ದಾರೆ.

ಪ್ರಧಾನಿಗಳೇ ಹೇಳಿದ ಹಾಗೆ ಸದರಿ ಕಾರ್ಯಕ್ರಮವನ್ನು ಭಾರತೀಯ ವೈದ್ಯಕೀಯ ಸಂಸ್ಥೆ (ಐಎಮ್​ಎ) ಆಯೋಜಿಸಲಿದೆ.

ಕೋವಿಡ್-19 ಪಿಡುಗು ಅಪ್ಪಳಿಸಿದಾಗಿನಿಂದ ಅದರ ವಿರುದ್ಧ ನಡೆಯುತ್ತಿರುವ ಹೋರಾಟದ ಮುಂಚೂಣಿಯಲ್ಲಿದ್ದಕೊಂಡು ಸಮುದಾಯ ಆರೋಗ್ಯ ಕಾರ್ಯಕರ್ತರು ನಿರ್ವಹಿಸುತ್ತಿರುವ ಪಾತ್ರವನ್ನು ಪ್ರಧಾನ ಮಂತ್ರಿಗಳು ಶ್ಲಾಘಿಸಿದ್ದಾರೆ. ಹಾಗೆಯೇ, ಭಾರತದ ಅಭಿವೃದ್ಧಿ ಹೊಂದುತ್ತಿರುವ ಎಕಾನಮಿ ಮತ್ತು ಅದರ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಅಕ್ಷರಶಃ ಸ್ಥಗಿತಗೊಳಿಸಿರುವ ಕೋವಿಡ್-19 ಪಿಡುಗಿನ ಎರಡು ಅಲೆಗಳ ವಿರುದ್ಧ ಜೀವದ ಹಂಗು ತೊರೆದು ಎಡೆಬಿಡದೆ ಹೋರಾಡುತ್ತಿರುವ ಈ ಸಮುದಾಯಕ್ಕೆ ಪ್ರಧಾನಿಗಳು ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

ರವಿವಾರ ತಮ್ಮ ಮಾಸಿಕ ‘ಮನ್​ ಕೀ ಬಾತ್’ ಬಾನುಲಿ ಕಾರ್ಯಕ್ರಮದಲ್ಲೂ ಪ್ರಧಾನ ಮಂತ್ರಿಗಳು ವೈದ್ಯರ ಬಗ್ಗೆ ಮಾತಾಡಿ ರಾಷ್ಟ್ರ ನಿರ್ಮಾಣ ಕೆಲಸದಲ್ಲಿ ಅವರು ನೀಡುತ್ತಿರವ ಕಾಣಿಕೆಯನ್ನು ಶ್ಲಾಘಿಸಿದರು.

‘ಕೆಲ ದಿನಗಳ ನಂತರ ಅಂದರೆ ಜುಲೈ 1ರಂದು ನಾವು ರಾಷ್ಟ್ರೀಯ ವೈದ್ಯರ ದಿನವನ್ನು ಆಚರಿಸಲಿದ್ದೇವೆ. ಈ ದಿನವನ್ನು ಶ್ರೇಷ್ಠ ವೈದ್ಯ ಮತ್ತು ದೇಶ ಕಂಡ ಅತ್ಯುತ್ತಮ ಮುತ್ಸದ್ದಿ ಡಾ ಬಿಸಿ ರಾಯ್ ಅವರ ಜನ್ಮ ಶತಮಾನೋತ್ಸವಕ್ಕೆ ಸಮರ್ಪಿಸಲಾಗಿದೆ. ಕೊರೋನಾ ಪಿಡುಗಿನ ಸಮಯದಲ್ಲಿ ವೈದ್ಯರು ನೀಡುತ್ತಿರುವ ಕಾಣಿಕೆಗೆ ನಾವು ಕೃತಜ್ಞತೆಯುಳ್ಳವರಾಗಿದ್ದೇವೆ. ವೈದ್ಯರು ತಮ್ಮ ಜೀವದ ಹಂಗು ತೊರೆದು ನಮ್ಮ ಸೇವೆ ಮಾಡುತ್ತಿದ್ದಾರೆ. ಹಾಗಾಗೇ ರಾಷ್ಟ್ರೀಯ ವೈದ್ಯರ ದಿನ ಮತ್ತಷ್ಟು ವಿಶೇಷ ಮತ್ತು ಮಹತ್ವಪೂರ್ಣವೆನಿಸಕೊಳ್ಳುತ್ತದೆ, ಎಂದು ಪ್ರಧಾನಿಗಳು ‘ಮನ್​ ಕೀ ಬಾತ್​’ನಲ್ಲಿ ಹೇಳಿದ್ದರು.

ಪ್ರಖ್ಯಾತ ವೈದ್ಯ ಮತ್ತು ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬಿಧನ್ ಚಂದ್ರ ರಾಯ್ ಅವರ ಗೌರವಾರ್ಥ ರಾಷ್ಟ್ರೀಯ ವೈದ್ಯರ ದಿನವನ್ನು ಆಚರಿಸಲಾಗುತ್ತದೆ. ಅವರ ಜನ್ಮ ವಾರ್ಷಿಕೋತ್ಸವ ಮತ್ತು ಪುಣ್ಯತಿಥಿ ಜುಲೈ ಒಂದರಂದೇ ಬರುತ್ತವೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ 14 ವರ್ಷಗಳ ಕಾಲ ಸೇವೆ ಸಲ್ಲಿಸಿದ ಬಿಸಿ ರಾಯ್ ಅವರನ್ನು ವೈದ್ಯನಾಗಿ, ಶಿಕ್ಷಣ ತಜ್ಞ, ದಾನಿ ಮತ್ತು ಸಮಾಜ ಸೇವಕನಾಗಿಯೂ ನೆನಪಿಸಿಕೊಳ್ಳಲಾಗುತ್ತದೆ.

1928 ರಲ್ಲಿ ಭಾರತೀಯ ವೈದ್ಯಕೀಯ ಸಂಸ್ಥೆಯನ್ನು ಹುಟ್ಟು ಹಾಕಿದ ಅವರು ನಂತರದ ದಿನಗಳಲ್ಲಿ ಭಾರತದ ವೈದ್ಯಕೀಯ ಪರಿಷತ್, ಭಾರತೀಯ ಮಾನಸಿಕ ಆರೋಗ್ಯ ಕೇಂದ್ರ, ಸಾಂಕ್ರಾಮಿಕ ರೋಗಗಳ ಆಸ್ಪತ್ರೆ ಮತ್ತು ಕೊಲ್ಕಾತ್ತಾದ ಪ್ರಪ್ರಥಮ ಸ್ನಾತಕೋತ್ತರ ಮೆಡಿಕಲ್​ ಕಾಲೇಜು ಮೊದಲಾದವುಗಳನ್ನು ಸ್ಥಾಪಿಸಿದರು. ಅವರನ್ನು ಭಾರತ ರತ್ನ ಪುರಸ್ಕಾರದಿಂದ ಸನ್ಮಾನಿಸಲಾಗಿದೆ.

ಇದನ್ನೂ ಓದಿ: PM Narendra Modi ಕೊವಿಡ್-19 ಮುಂಚೂಣಿ ಕಾರ್ಯಕರ್ತರ ಸಮಗ್ರ ತರಬೇತಿ ಕಾರ್ಯಕ್ರಮಕ್ಕೆ ನರೇಂದ್ರ ಮೋದಿ ಚಾಲನೆ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್