Kargil Vijay Diwas: ಲಡಾಖ್‌ನಲ್ಲಿ ಕಾರ್ಗಿಲ್ ವಿಜಯ ದಿವಸದ 25ನೇ ವಾರ್ಷಿಕೋತ್ಸವದಲ್ಲಿ ಪ್ರಧಾನಿ ಮೋದಿ ಭಾಗಿ

1999ರಲ್ಲಿ ಭಾರತವು ಪಾಕಿಸ್ತಾನವನ್ನು ಸೋಲಿಸಿದ ಕಾರ್ಗಿಲ್ ಯುದ್ಧದ 25ನೇ ವಾರ್ಷಿಕೋತ್ಸವವನ್ನು ಈ ವರ್ಷ ಆಚರಿಸಲಾಗುತ್ತಿದೆ. ಪ್ರಧಾನಮಂತ್ರಿ ಮೋದಿ ಅವರು ದ್ರಾಸ್‌ನಲ್ಲಿ ನಡೆಯಲಿರುವ 'ರಜತ್ ಜಯಂತಿ' ಆಚರಣೆಯಲ್ಲಿ ಭಾಗವಹಿಸಲಿದ್ದಾರೆ. ಕಾರ್ಗಿಲ್ ವಿಜಯ್ ದಿವಸದ 25ನೇ ವಾರ್ಷಿಕೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಜುಲೈ 26ರಂದು ದ್ರಾಸ್‌ಗೆ ಭೇಟಿ ನೀಡಲಿದ್ದಾರೆ.

Kargil Vijay Diwas: ಲಡಾಖ್‌ನಲ್ಲಿ ಕಾರ್ಗಿಲ್ ವಿಜಯ ದಿವಸದ 25ನೇ ವಾರ್ಷಿಕೋತ್ಸವದಲ್ಲಿ ಪ್ರಧಾನಿ ಮೋದಿ ಭಾಗಿ
ಪ್ರಧಾನಿ ನರೇಂದ್ರ ಮೋದಿ Image Credit source: PTI
Follow us
ಸುಷ್ಮಾ ಚಕ್ರೆ
|

Updated on: Jul 22, 2024 | 11:11 AM

ನವದೆಹಲಿ: ಕಾರ್ಗಿಲ್ ವಿಜಯ್ ದಿವಸ್‌ನ 25ನೇ ವಾರ್ಷಿಕೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಜುಲೈ 26ರಂದು ಲಡಾಖ್‌ನ ದ್ರಾಸ್‌ಗೆ ಭೇಟಿ ನೀಡಲಿದ್ದಾರೆ. ಇದಕ್ಕೂ ಮುನ್ನ ಭಾನುವಾರ ಲಡಾಖ್‌ನ ಲೆಫ್ಟಿನೆಂಟ್ ಗವರ್ನರ್ ಬ್ರಿಗ್ (ನಿವೃತ್ತ) ಬಿ.ಡಿ ಮಿಶ್ರಾ ಭಾನುವಾರ ಸೆಕ್ರೆಟರಿಯೇಟ್‌ನಲ್ಲಿ ಸಭೆ ನಡೆಸಿದರು. ದ್ರಾಸ್‌ನಲ್ಲಿರುವ ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಪ್ರಧಾನಿ ಭೇಟಿಯ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಎಲ್ಲ ಅಗತ್ಯ ವ್ಯವಸ್ಥೆಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸುವಂತೆ ಎಲ್‌ಜಿ ಮಿಶ್ರಾ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

“ದ್ರಾಸ್ ಬ್ರಿಗೇಡ್ ಹೆಲಿಪ್ಯಾಡ್‌ನಲ್ಲಿ ಪ್ರಧಾನಮಂತ್ರಿಯವರ ಸ್ವಾಗತದ ವ್ಯವಸ್ಥೆಗಳ ಬಗ್ಗೆ 8 ಪರ್ವತ ವಿಭಾಗದ GOCಯಿಂದ HLG ವಿಚಾರಿಸಿದೆ. ಅವರು ಎಲ್ಲಾ ಅಗತ್ಯ ವ್ಯವಸ್ಥೆಗಳನ್ನು ಸಕಾಲಿಕವಾಗಿ ಪೂರ್ಣಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಜುಲೈ 24ರಂದು ದ್ರಾಸ್‌ನಲ್ಲಿರುವ ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಪ್ರಧಾನಿ ಭೇಟಿಯ ವ್ಯವಸ್ಥೆಗಳನ್ನು ಪರಿಶೀಲಿಸುವುದಾಗಿ ಲಡಾಖ್ ಎಲ್‌ಜಿ ಹೇಳಿದರು. 2022ರಲ್ಲಿ ಪ್ರಧಾನಿ ಮೋದಿ ಅವರು ಕಾರ್ಗಿಲ್‌ನಲ್ಲಿ ಸೈನಿಕರೊಂದಿಗೆ ದೀಪಾವಳಿಯನ್ನು ಆಚರಿಸಿದ್ದರು ಮತ್ತು ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಪುಷ್ಪಗುಚ್ಛವನ್ನು ಅರ್ಪಿಸಿದ್ದರು.

ಇದನ್ನೂ ಓದಿ: ಮೊಮ್ಮಗನನ್ನು ಥಳಿಸಿದ್ದಕ್ಕೆ ಮಗನ ಮೇಲೆ ಗುಂಡು ಹಾರಿಸಿದ ಸಿಆರ್​ಪಿಎಫ್​ನ ನಿವೃತ್ತ ಯೋಧ

ಭಾರತದಲ್ಲಿ ವಾರ್ಷಿಕವಾಗಿ ಜುಲೈ 26ರಂದು ಕಾರ್ಗಿಲ್ ವಿಜಯ್ ದಿವಸ್ ಆಚರಿಸಲಾಗುತ್ತದೆ. 1999ರಲ್ಲಿ ಆಪರೇಷನ್ ವಿಜಯ್ ವಿಜಯವನ್ನು ಈ ದಿನ ನೆನಪಿಸುತ್ತದೆ. ಈ ಘಟನೆಯು ಭಾರತ ಮತ್ತು ಪಾಕಿಸ್ತಾನದ ನಡುವಿನ ಕಾರ್ಗಿಲ್ ಯುದ್ಧದ ಮುಕ್ತಾಯವನ್ನು ಸೂಚಿಸುತ್ತದೆ. 1999ರ ಮೇಯಲ್ಲಿ ಕಾರ್ಗಿಲ್ ಯುದ್ಧ ಪ್ರಾರಂಭವಾಯಿತು. ಜಮ್ಮು ಮತ್ತು ಕಾಶ್ಮೀರದ ಕಾರ್ಗಿಲ್ ಸೆಕ್ಟರ್‌ನಲ್ಲಿ ಪಾಕಿಸ್ತಾನಿ ಸೈನಿಕರು ಮತ್ತು ಭಯೋತ್ಪಾದಕರು ಒಳನುಸುಳಿದ್ದರು.

ಈ ದಿನವು ರಾಷ್ಟ್ರದ ರಕ್ಷಣೆಯಲ್ಲಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ಸೈನಿಕರ ಧೈರ್ಯವನ್ನು ಗೌರವಿಸುತ್ತದೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ ನಿರ್ಣಯ ಮತ್ತು ಶಕ್ತಿಯನ್ನು ಆಚರಿಸುತ್ತದೆ. ಕಾರ್ಗಿಲ್ ವಿಜಯ್ ದಿವಸ್ ಅವರ ತ್ಯಾಗಕ್ಕೆ ಗೌರವ ನೀಡುವ ದಿನವಾಗಿದೆ. ಈ ಬಾರಿ ಕಾರ್ಗಿಲ್ ವಿಜಯ್ ದಿವಸ್‌ನ 25ನೇ ವಾರ್ಷಿಕೋತ್ಸವವನ್ನು ಜುಲೈ 26 ರಂದು ದೇಶದಾದ್ಯಂತ ಆಚರಿಸಲಾಗುತ್ತದೆ.

ಇದನ್ನೂ ಓದಿ: ಛತ್ತೀಸ್​ಗಢದಲ್ಲಿ ನಕ್ಸಲರಿಂದ ಐಇಡಿ ಸ್ಫೋಟ, ಇಬ್ಬರು ಯೋಧರು ಹುತಾತ್ಮ

ಎಲ್‌ಜಿ ಮಿಶ್ರಾ ಅವರು ಜೂನ್ 24 ರಂದು ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ವ್ಯವಸ್ಥೆಗಳನ್ನು ಪರಿಶೀಲಿಸಲಿದ್ದಾರೆ. ಜುಲೈ 26 ರಂದು ಬೆಳಿಗ್ಗೆ ಪಿಎಂ ನರೇಂದ್ರ ಮೋದಿ ದ್ರಾಸ್ ಬ್ರಿಗೇಡ್ ಹೆಲಿಪ್ಯಾಡ್‌ಗೆ ಬಂದಿಳಿಯಲಿದ್ದು, ಸೇನಾ ಅಧಿಕಾರಿಗಳು ಅವರನ್ನು ಬರಮಾಡಿಕೊಳ್ಳಲಿದ್ದಾರೆ. ನಂತರ ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ತೆರಳುವ ಮುನ್ನ ಗ್ರೀನ್ ರೂಂನಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ.

ಪ್ರಧಾನಮಂತ್ರಿಯವರು ಪುಷ್ಪಾರ್ಚನೆ ಸಮಾರಂಭದಲ್ಲಿ ಭಾಗವಹಿಸಲಿದ್ದು, ಅಲ್ಲಿಂದ ಅವರು ‘ಶಹೀದ್ ಮಾರ್ಗ’ಕ್ಕೆ ಭೇಟಿ ನೀಡಲಿದ್ದಾರೆ ಎಂದು ಮೇಜರ್ ಜನರಲ್ ಮಲಿಕ್ ತಿಳಿಸಿದ್ದಾರೆ. ಪ್ರಧಾನಮಂತ್ರಿ ಮೋದಿಯವರು ಕಾರ್ಗಿಲ್ ಯುದ್ಧದ ಬಗ್ಗೆ ವಿವರಿಸುತ್ತಾರೆ ಮತ್ತು ನಂತರ ಗುಂಪು ಛಾಯಾಚಿತ್ರವನ್ನು ತೆಗೆದುಕೊಳ್ಳುತ್ತಾರೆ. ಅಲ್ಲಿಂದ ಅವರು ವೀರ ನಾರಿಯರ (ಯುದ್ಧದಲ್ಲಿ ಮಡಿದ ಯೋಧರ ಪತ್ನಿಯರು) ಜೊತೆ ಸಂವಾದ ನಡೆಸಲಿದ್ದಾರೆ ಮತ್ತು ವೀರ್ ಭೂಮಿಗೆ ಭೇಟಿ ನೀಡಲಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ