PM Modi: ಆಂಧ್ರಪ್ರದೇಶ, ಒಡಿಶಾ ಮುಖ್ಯಮಂತ್ರಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ಮೋದಿ ಭಾಗಿ

ಇತ್ತೀಚೆಗೆ ಮುಕ್ತಾಯಗೊಂಡ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಒಡಿಶಾದಲ್ಲಿ ಬಿಜೆಪಿಯ ನವೀನ್ ಪಟ್ನಾಯಕ್ ಅವರ 24 ವರ್ಷಗಳ ಆಳ್ವಿಕೆಯನ್ನು ಕೊನೆಗೊಳಿಸಿತು. ಆಂಧ್ರಪ್ರದೇಶದಲ್ಲಿ ಎನ್​ಡಿಎ ಭಾಗವಾಗಿ ಟಿಡಿಪಿ ಬಹುಮತವನ್ನು ಗಳಿಸಿತು.

PM Modi: ಆಂಧ್ರಪ್ರದೇಶ, ಒಡಿಶಾ ಮುಖ್ಯಮಂತ್ರಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ಮೋದಿ ಭಾಗಿ
ಪ್ರಧಾನಿ ಮೋದಿ
Follow us
|

Updated on: Jun 10, 2024 | 10:42 PM

ನವದೆಹಲಿ: ಈಗಾಗಲೇ ನರೇಂದ್ರ ಮೋದಿ (Narendra Modi) ಅವರು ಪ್ರಧಾನಿಯಾಗಿ 3ನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ್ದಾರೆ. ಜೂನ್ 12ರಂದು ಆಂಧ್ರಪ್ರದೇಶ ಮತ್ತು ಒಡಿಶಾದಲ್ಲಿ ಮುಖ್ಯಮಂತ್ರಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ. ಆಂಧ್ರಪ್ರದೇಶದಲ್ಲಿ ಮಾಜಿ ಸಿಎಂ ಮತ್ತು ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು (Chandrababu Naidu) ಆಂಧ್ರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಒಡಿಶಾ ಸಿಎಂ ಹೆಸರನ್ನು ಬಿಜೆಪಿ ಇನ್ನೂ ಘೋಷಿಸಿಲ್ಲ.

ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ಜೂನ್ 12ರಂದು ಸಂಜೆ 4.55ಕ್ಕೆ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತೆಲುಗು ದೇಶಂ ಪಕ್ಷದ ನಾಯಕ ಕೆ. ರಘು ರಾಮ ಕೃಷ್ಣರಾಜು ತಿಳಿಸಿದ್ದಾರೆ. ಬಿಜೆಪಿಯ ಒಡಿಶಾ ಮುಖ್ಯಸ್ಥ ಮನಮೋಹನ್ ಸಮಾಲ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯ ಹೆಸರಿಗೆ ಸಂಬಂಧಿಸಿದಂತೆ ನಾಳೆ ಬಿಜೆಪಿ ಶಾಸಕಾಂಗ ಸಭೆ ನಡೆಯಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Modi Cabinet Meeting: ನೂತನ ಸಚಿವರ ಜೊತೆ ಪಿಎಂ ನರೇಂದ್ರ ಮೋದಿ ಮೊದಲ ಸಂಪುಟ ಸಭೆ

ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆ ಫಲಿತಾಂಶ:

ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭಾ ಚುನಾವಣೆಯಲ್ಲಿ ಟಿಡಿಪಿ ಸ್ಪರ್ಧಿಸಿದ್ದ 144 ಸ್ಥಾನಗಳ ಪೈಕಿ 135 ಸ್ಥಾನಗಳನ್ನು ಗೆದ್ದುಕೊಂಡಿದೆ. ಅದರ ಮಿತ್ರಪಕ್ಷವಾದ ಜನಸೇನಾ ಪಕ್ಷವು ಸ್ಪರ್ಧಿಸಿದ ಎಲ್ಲಾ 21 ಸ್ಥಾನಗಳನ್ನು ಗೆದ್ದುಕೊಂಡಿತು ಮತ್ತು ಬಿಜೆಪಿ 10ರಲ್ಲಿ 8 ಸ್ಥಾನಗಳನ್ನು ಗೆದ್ದಿತು. ಆಡಳಿತ ಪಕ್ಷವಾದ YSRCP 11 ಸ್ಥಾನಗಳಿಗೆ ಇಳಿದಿದೆ. ಕಳೆದ ಚುನಾವಣೆಯಲ್ಲಿ 151 ಸ್ಥಾನಗಳೊಂದಿಗೆ ಬಹುಮತ ಪಡೆದಿದ್ದ ಜಗನ್ ಮೋಹನ್ ರೆಡ್ಡಿ ಅವರ ವೈಎಸ್‌ಆರ್‌ಸಿಪಿ 140 ಸ್ಥಾನಗಳನ್ನು ಕಳೆದುಕೊಳ್ಳುವ ಮೂಲಕ ಎನ್‌ಡಿಎ ಪ್ರಾಬಲ್ಯ ಸಾಧಿಸಿತು.

ಇದನ್ನೂ ಓದಿ: ಮೋದಿ ಸರ್ಕಾರದ ವಿರುದ್ಧ ಮಿತ್ರಪಕ್ಷದ ಅಸಮಾಧಾನ; ಸಂಪುಟ ಸಚಿವ ಸ್ಥಾನ ಬೇಕಿತ್ತು ಎಂದ ಶಿಂಧೆ ಬಣ

ಮತ್ತೊಂದೆಡೆ ಬಿಜೆಪಿ ಒಡಿಶಾದಲ್ಲಿ ಬಿಜು ಜನತಾ ದಳವನ್ನು ಸೋಲಿಸಿ ನವೀನ್ ಪಟ್ನಾಯಕ್ ಅವರ 24 ವರ್ಷಗಳ ಆಡಳಿತವನ್ನು ಕೊನೆಗೊಳಿಸಿತು. 147 ಸ್ಥಾನಗಳ ರಾಜ್ಯ ವಿಧಾನಸಭೆಯಲ್ಲಿ 78 ಸ್ಥಾನಗಳನ್ನು ಗೆದ್ದಿದೆ. ಬಿಜೆಡಿ 51 ಸ್ಥಾನಗಳಿಗೆ ಕುಸಿದರೆ, ಕಾಂಗ್ರೆಸ್ ಪಕ್ಷ 14 ಸ್ಥಾನಗಳನ್ನು ಗೆದ್ದಿದೆ. ನವೀನ್ ಪಟ್ನಾಯಕ್ ಅವರು ಮಾರ್ಚ್ 2000ರಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು. ಅಂದಿನಿಂದ, ಅವರು ಎಲ್ಲಾ 5 ವಿಧಾನಸಭಾ ಚುನಾವಣೆಗಳಲ್ಲಿ ಗೆದ್ದು ಸ್ಥಾನವನ್ನು ಗೆದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು