PM Modi chairs National Conference: ಮುಖ್ಯ ಕಾರ್ಯದರ್ಶಿಗಳ ಸಮಾವೇಶದಲ್ಲಿ ಭಾಗವಹಿಸಲಿರುವ ಪ್ರಧಾನಿ ಮೋದಿ

ಕೇಂದ್ರ ಸರ್ಕಾರದ ಪ್ರತಿನಿಧಿಗಳು, ಮುಖ್ಯ ಕಾರ್ಯದರ್ಶಿಗಳು ಮತ್ತು ಎಲ್ಲಾ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ ಹಿರಿಯ ಅಧಿಕಾರಿಗಳು ಮತ್ತು ಡೊಮೇನ್ ತಜ್ಞರನ್ನು ಒಳಗೊಂಡ 200 ಕ್ಕೂ ಹೆಚ್ಚು ಅಧಿಕಾರಿಗಳು ಸಮಾವೇಶದಲ್ಲಿ ಭಾಗವಹಿಸಿದ್ದಾರೆ ಎಂದು ಪ್ರಧಾನಮಂತ್ರಿ ಕಾರ್ಯಾಲಯ ತಿಳಿಸಿದೆ.

PM Modi chairs National Conference: ಮುಖ್ಯ ಕಾರ್ಯದರ್ಶಿಗಳ ಸಮಾವೇಶದಲ್ಲಿ ಭಾಗವಹಿಸಲಿರುವ ಪ್ರಧಾನಿ ಮೋದಿ
ನರೇಂದ್ರ ಮೋದಿ
Follow us
TV9 Web
| Updated By: Ganapathi Sharma

Updated on: Jan 07, 2023 | 6:57 AM

ನವದೆಹಲಿ: ರಾಜ್ಯ ಸರ್ಕಾರಗಳು ಮತ್ತು ಕೇಂದ್ರ ಸರ್ಕಾರಗಳ ನಡುವಣ ಸಹಭಾಗಿತ್ವವವನ್ನು ವೃದ್ಧಿಸುವ ದೃಷ್ಟಿಯಿಂದ ಮಖ್ಯವೆನಿಸಿರುವ ಮುಖ್ಯ ಕಾರ್ಯದರ್ಶಿಗಳ ಸಮಾವೇಶದ ಅಧ್ಯಕ್ಷತೆಯನ್ನು ಇಂದೂ ಸಹ ಪ್ರಧಾನಿ ನರೇಂದ್ರ ಮೋದಿ (Narendra Modi) ವಹಿಸಲಿದ್ದಾರೆ. ದೆಹಲಿಯಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ಶುಕ್ರವಾರ ಸಹ ಪ್ರಧಾನಿ ಭಾಗವಹಿಸಿದ್ದಾರೆ. ಇದು ಮುಖ್ಯ ಕಾರ್ಯದರ್ಶಿಗಳ ಎರಡನೇ ಸಮಾವೇಶವಾಗಿದ್ದು, ಈ ಹಿಂದೆ 2022ರ ಜೂನ್​ನಲ್ಲಿ ಧರ್ಮಶಾಲಾದಲ್ಲಿ ಮೊದಲ ಸಮಾವೇಶ ನಡೆದಿತ್ತು. ರಾಷ್ಟ್ರ ರಾಜಧಾನಿಯಲ್ಲಿ ಜನವರಿ 5ರಿಂದ ಆರಂಭಗೊಂಡಿರುವ ಸಮಾವೇಶದ ಮುಖ್ಯ ಅಜೆಂಡಾ, ರಾಜ್ಯಗಳ ಸಹಭಾಗಿತ್ವದೊಂದಿಗೆ ಸುಸ್ಥಿರ ಆರ್ಥಿಕ ಬೆಳವಣಿಗೆ ಸಾಧಿಸುವ ಬಗ್ಗೆ ಸ್ಪಷ್ಟ ರೂಪುರೇಷೆ ಹೊಂದುವುದಾಗಿದೆ.

ಕೇಂದ್ರ ಸರ್ಕಾರದ ಪ್ರತಿನಿಧಿಗಳು, ಮುಖ್ಯ ಕಾರ್ಯದರ್ಶಿಗಳು ಮತ್ತು ಎಲ್ಲಾ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ ಹಿರಿಯ ಅಧಿಕಾರಿಗಳು ಮತ್ತು ಡೊಮೇನ್ ತಜ್ಞರನ್ನು ಒಳಗೊಂಡ 200 ಕ್ಕೂ ಹೆಚ್ಚು ಅಧಿಕಾರಿಗಳು ಸಮಾವೇಶದಲ್ಲಿ ಭಾಗವಹಿಸಿದ್ದಾರೆ ಎಂದು ಪ್ರಧಾನಮಂತ್ರಿ ಕಾರ್ಯಾಲಯ ತಿಳಿಸಿದೆ.

ಪರಸ್ಪರ ನಂಬಿಕೆಯ ಆಧಾರದ ಮೇಲೆ ಬೆಳವಣಿಗೆ ಸಾಧಿಸುವುದು, ಉದ್ಯೋಗ ಸೃಷ್ಟಿ ಮತ್ತು ಅಂತರ್ಗತ ಮಾನವ ಅಭಿವೃದ್ಧಿಯ ಜತೆಗೆ ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಭಾರತವನ್ನು ರೂಪಿಸಲು ಈ ಸಮ್ಮೇಳನವು ಅಡಿಪಾಯ ಹಾಕಲಿದೆ ಎಂದು ಪಿಎಂ ಹೇಳಿದೆ.

ಸಮನ್ವಯತೆಯೇ ಪ್ರಗತಿಗೆ ಆಧಾರ ಸ್ತಂಭ

ಈ ಮಹತ್ವದ ಸಮಾವೇಶದ ಮೂಲಕ ಸಹಕಾರಿ ಒಕ್ಕೂಟ, ಕೇಂದ್ರ ಸಚಿವಾಲಯಗಳು ಮತ್ತು ರಾಜ್ಯದ ಅನೇಕ ಇಲಾಖೆಗಳು ಸಮನ್ವಯವಾಗಿ ಕೆಲಸ ಮಾಡುತ್ತಿದೆ. ಇದು ನವ ಭಾರತದ ಅಭಿವೃದ್ಧಿ ಮತ್ತು ಪ್ರಗತಿಗೆ ಅಗತ್ಯವಾದ ಆಧಾರಸ್ತಂಭವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದರು.

ಮತ್ತಷ್ಟು ಓದಿ: ವಿಮಾನದಲ್ಲಿ ಮೂತ್ರ ವಿಸರ್ಜನೆ ಪ್ರಕರಣ: ಆರೋಪಿ ಹಾಗೂ ಮಹಿಳೆಯ ನಡುವೆ ನಡೆದ ವಾಟ್ಸ್​ಆ್ಯಪ್ ಸಂಭಾಷಣೆಯಲ್ಲಿ ಏನಿದೆ?

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟಾಗಿ ಕೆಲಸ ಮಾಡುತ್ತಿರುವುದಕ್ಕೆ ಈ ಸಮಾವೇಶ ಒಂದು ಉತ್ತಮ ಉದಾಹರಣೆಯಾಗಿದೆ. ಸರ್ಕಾರದ ಕಾರ್ಯಕ್ರಮಗಳು ಮತ್ತು ಯೋಜನೆಗಳ ಒಮ್ಮುಖದ ಮೂಲಕ ದೇಶದಾದ್ಯಂತ ಅತ್ಯಂತ ಹಿಂದುಳಿದ ಜಿಲ್ಲೆಗಳ ಅಭಿವೃದ್ಧಿ ಮಾಡಲು ಕಾರ್ಯನಿರ್ವಹಿಸಬೇಕಿದೆ ಎಂದು ಪ್ರಧಾನಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜನವರಿ 13 ರಿಂದ 19ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 13 ರಿಂದ 19ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ದೃಷ್ಟಿ ಗಣಪತಿ ಕುರಿತಾಗಿ ಶಾಸ್ತ್ರಗಳಲ್ಲಿ ಉಲ್ಲೇಖವಿದೆಯೇ? ಇಲ್ಲಿದೆ ಉತ್ತರ
ದೃಷ್ಟಿ ಗಣಪತಿ ಕುರಿತಾಗಿ ಶಾಸ್ತ್ರಗಳಲ್ಲಿ ಉಲ್ಲೇಖವಿದೆಯೇ? ಇಲ್ಲಿದೆ ಉತ್ತರ
Daily Horoscope: ರವಿವಾರದಂದು ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
Daily Horoscope: ರವಿವಾರದಂದು ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ