PM Modi: ವಿಶ್ವ ಆರ್ಥಿಕ ವೇದಿಕೆ ದಾವೋಸ್​ ಅಜೆಂಡಾ ಉದ್ದೇಶಿಸಿ ಇಂದು ಸಂಜೆ ಪ್ರಧಾನಿ ಮೋದಿಯವರಿಂದ ಭಾಷಣ

ಈ ವಿಶ್ವ ಆರ್ಥಿಕ ವೇದಿಕೆ ದಾವೋಸ್​ ಅಜೆಂಡಾ ಕಾರ್ಯಕ್ರಮದಲ್ಲಿ ಉದ್ಯಮ ಕ್ಷೇತ್ರದ ಪ್ರಮುಖರು, ವಿಶ್ವ ಸಂಸ್ಥೆ ಪ್ರಮುಖರು, ಅಂತಾರಾಷ್ಟ್ರೀಯ ಸಂಸ್ಥೆಗಳು, ನಾಗರಿಕ ಸಮಾಜದ ನಾಯಕರೂ ಕೂಡ ಪಾಲ್ಗೊಳ್ಳಲಿದ್ದಾರೆ.

PM Modi: ವಿಶ್ವ ಆರ್ಥಿಕ ವೇದಿಕೆ ದಾವೋಸ್​ ಅಜೆಂಡಾ ಉದ್ದೇಶಿಸಿ ಇಂದು ಸಂಜೆ ಪ್ರಧಾನಿ ಮೋದಿಯವರಿಂದ ಭಾಷಣ
ಪ್ರಧಾನಿ ಮೋದಿ
Follow us
| Edited By: Lakshmi Hegde

Updated on:Jan 17, 2022 | 10:09 AM

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಸಂಜೆ 8.30ಕ್ಕೆ, ವಿಶ್ವ ಆರ್ಥಿಕ ವೇದಿಕೆ(World Economic Forum)ಯ ದಾವೋಸ್​ ಅಜೆಂಡಾವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಇಂದಿನಿಂದ (ಜ.17) ಜನವರಿ 21ರವರೆಗೆ ಈ ಕಾರ್ಯಕ್ರಮ ನಡೆಯಲಿದ್ದು, ಕೊರೊನಾ ವೈರಸ್​ ಹಿನ್ನೆಲೆಯಲ್ಲಿ ವರ್ಚ್ಯುವಲ್​ ಆಗಿ ಹಮ್ಮಿಕೊಳ್ಳಲಾಗಿದೆ. ಈ ಸಭೆಯಲ್ಲಿ ಜಪಾನ್​ ಪ್ರಧಾನಿ  ಕಿಶಿಡಾ ಫ್ಯೂಮಿಯೊ, ಆಸ್ಟ್ರೇಲಿಯಾದ ಪ್ರಧಾನಿ ಸ್ಕಾಟ್ ಮಾರಿಸನ್, ಇಂಡೋನೇಷಿಯಾದ ಅಧ್ಯಕ್ಷ ಜೋಕೊ ವಿಡೋಡೊ, ಇಸ್ರೇಲಿ ಪ್ರಧಾನಿ ನಫ್ತಾಲಿ ಬೆನೆಟ್, ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್, ಯುರೋಪಿಯನ್ ಯೂನಿಯನ್​ ಆಯೋಗದ ಮುಖ್ಯಸ್ಥ ಉರ್ಸುವಾ ವಾನ್ ಡೆರ್ ಲೇಯೆನ್ ಇತರರು ಪಾಲ್ಗೊಂಡು ಭಾಷಣ ಮಾಡಲಿದ್ದಾರೆ. ತಾವು ದಾವೋಸ್​ ಅಜೆಂಡಾ ಉದ್ದೇಶಿಸಿ ಮಾತನಾಡಲಿರುವ ಬಗ್ಗೆ ಪ್ರಧಾನಿ ಮೋದಿ ಟ್ವೀಟ್ ಮಾಡಲಿದ್ದಾರೆ.

ಈ ವಿಶ್ವ ಆರ್ಥಿಕ ವೇದಿಕೆ ದಾವೋಸ್​ ಅಜೆಂಡಾ ಕಾರ್ಯಕ್ರಮದಲ್ಲಿ ಉದ್ಯಮ ಕ್ಷೇತ್ರದ ಪ್ರಮುಖರು, ವಿಶ್ವ ಸಂಸ್ಥೆ ಪ್ರಮುಖರು, ಅಂತಾರಾಷ್ಟ್ರೀಯ ಸಂಸ್ಥೆಗಳು, ನಾಗರಿಕ ಸಮಾಜದ ನಾಯಕರೂ ಕೂಡ ಪಾಲ್ಗೊಳ್ಳಲಿದ್ದಾರೆ. ಜಗತ್ತು ಪ್ರಸ್ತುತವಾಗಿ ಎದುರಿಸುತ್ತಿರುವ ಕಠಿಣ ಸವಾಲುಗಳು ಮತ್ತು ಅದನ್ನು ಎದುರಿಸುವುದು ಹೇಗೆ ಎಂಬ ಬಗ್ಗೆ ಈ ಅಜೆಂಡಾದಲ್ಲಿ ಸವಿಸ್ತಾರವಾಗಿ ಚರ್ಚೆ ನಡೆಯಲಿದೆ. ಇದು 2022ರ ಮೊದಲ, ವಿಶ್ವ ನಾಯಕರ ಸಭೆಯಾಗಿದೆ. ಇಲ್ಲಿ ಪ್ರಮುಖ ನಾಯಕು 2022ರ ಬಗ್ಗೆ ತಮ್ಮ ದೃಷ್ಟಿಕೋನವನ್ನು ಪ್ರಸ್ತುತಪಡಿಸಲಿದ್ದು, ವಿಶ್ವದ ಸ್ಥಿತಿ (State of the World) ಇದರ ಪ್ರಮುಖ ಥೀಮ್ ಆಗಿದೆ. ಜಿನಿವಾ ಮೂಲದ ಈ ವಿಶ್ವ ಆರ್ಥಿಕ ವೇದಿಕೆ ಕಳೆದ 50ವರ್ಷಗಳಿಂದಲೂ ದಾವೋಸ್​ನ ಸ್ವಿಸ್​ ಸ್ಕಿ ರೆಸಾರ್ಟ್​​ನಲ್ಲಿ ತನ್ನ ವಾರ್ಷಿಕ ಸಭೆ ನಡೆಸುತ್ತಿದೆ. ಆದರೆ ಕೊವಿಡ್​ 19 ಕಾರಣದಿಂದ 2021ರಲ್ಲಿ ಇದು ನಡೆದಿರಲಿಲ್ಲ. ಈಗಲೂ ಕೂಡ ಕೊರೊನಾ ಕಾರಣಕ್ಕೆ ವರ್ಚ್ಯುವಲ್​ ಆಗಿಯೇ ಆಯೋಜಿಸಲಾಗಿದೆ. ಇಂದು ಮೊದಲ ದಿನ ಭಾರತದ ಪ್ರಧಾನಿ ಮತ್ತು ಚೀನಾ ಅಧ್ಯಕ್ಷ ಭಾಷಣ ಮಾಡಲಿದ್ದಾರೆ.

ಇದನ್ನೂ ಓದಿ: ಮೂರು ನಾಯಿಗಳು ಮತ್ತು ನಾಗರ ಹಾವಿನ ನಡುವೆ ಕಾಳಗ, ಮೈ ಜುಮ್​ ಎನ್ನಿಸುವ ದೃಶ್ಯ

Published On - 9:55 am, Mon, 17 January 22

ತಾಜಾ ಸುದ್ದಿ
ತಾವು ನೋಡಿದ ಕನ್ನಡ ಸಿನಿಮಾಗಳನ್ನು ಹೆಸರಿಸಿದ ಮಾಜಿ ಕ್ರಿಕೆಟಿಗ ಮುರಳೀಧರನ್
ತಾವು ನೋಡಿದ ಕನ್ನಡ ಸಿನಿಮಾಗಳನ್ನು ಹೆಸರಿಸಿದ ಮಾಜಿ ಕ್ರಿಕೆಟಿಗ ಮುರಳೀಧರನ್
ಎಸ್​ಪಿ ರೋಡ್​ನಲ್ಲಿ ರಸ್ತೆ ಗುಂಡಿ ವೀಕ್ಷಿಸಿದ ಡಿಸಿಎಂ ಡಿಕೆ ಶಿವಕುಮಾರ್​
ಎಸ್​ಪಿ ರೋಡ್​ನಲ್ಲಿ ರಸ್ತೆ ಗುಂಡಿ ವೀಕ್ಷಿಸಿದ ಡಿಸಿಎಂ ಡಿಕೆ ಶಿವಕುಮಾರ್​
ನನ್ನ ಬಯೋಪಿಕ್ ನಿರ್ಮಾಣವಾಗೋದು ಇಷ್ಟವಿರಲಿಲ್ಲ: ಮುತ್ತಯ್ಯ ಮುರಳೀಧರನ್
ನನ್ನ ಬಯೋಪಿಕ್ ನಿರ್ಮಾಣವಾಗೋದು ಇಷ್ಟವಿರಲಿಲ್ಲ: ಮುತ್ತಯ್ಯ ಮುರಳೀಧರನ್
ಬಿಗ್​ ಬಾಸ್​ ಮನೆಯಲ್ಲಿ ಗಮನ ಸೆಳೆಯುತ್ತಿದೆ ಮೈಕೆಲ್​ ಮಾತನಾಡುವ ಕನ್ನಡ
ಬಿಗ್​ ಬಾಸ್​ ಮನೆಯಲ್ಲಿ ಗಮನ ಸೆಳೆಯುತ್ತಿದೆ ಮೈಕೆಲ್​ ಮಾತನಾಡುವ ಕನ್ನಡ
ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಒಂದಾಗಿ ಹೋರಾಟ: ಹೆಚ್ ಡಿ ದೇವೇಗೌಡ
ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಒಂದಾಗಿ ಹೋರಾಟ: ಹೆಚ್ ಡಿ ದೇವೇಗೌಡ
ಉಡುಪಿ: ಭಜನೆ ಹಾಡಿಗೆ ಹೆಜ್ಜೆ ಹಾಕಿದ ಗೋವು; ವಿಡಿಯೋ ವೈರಲ್​
ಉಡುಪಿ: ಭಜನೆ ಹಾಡಿಗೆ ಹೆಜ್ಜೆ ಹಾಕಿದ ಗೋವು; ವಿಡಿಯೋ ವೈರಲ್​
ಕನಕದಾಸ ಜಯಂತಿಯಲ್ಲಿ ಜನರೊಂದಿಗೆ ಡೊಳ್ಳು ಬಾರಿಸಿ ಕುಣಿದ ಸಚಿವ ಸಂತೋಷ್ ಲಾಡ್ 
ಕನಕದಾಸ ಜಯಂತಿಯಲ್ಲಿ ಜನರೊಂದಿಗೆ ಡೊಳ್ಳು ಬಾರಿಸಿ ಕುಣಿದ ಸಚಿವ ಸಂತೋಷ್ ಲಾಡ್ 
ಕಾಂಗ್ರೆಸ್ ಅಧಿಕಾರದಲ್ಲಿ ಕಾನೂನು ವ್ಯವಸ್ಥೆ ಕುಲಗೆಟ್ಟು ಹೋಗಿದೆ: ಹೆಚ್​ಡಿಕೆ
ಕಾಂಗ್ರೆಸ್ ಅಧಿಕಾರದಲ್ಲಿ ಕಾನೂನು ವ್ಯವಸ್ಥೆ ಕುಲಗೆಟ್ಟು ಹೋಗಿದೆ: ಹೆಚ್​ಡಿಕೆ
ಟಿವಿ9 ಡಿಜಿಟಲ್​ ವರದಿ ಫಲಶ್ರುತಿ: ಕಲಬುರಗಿ ಸರ್ಕಾರಿ ಶಾಲೆಯಲ್ಲೇ ಊಟ ಸಿದ್ಧ
ಟಿವಿ9 ಡಿಜಿಟಲ್​ ವರದಿ ಫಲಶ್ರುತಿ: ಕಲಬುರಗಿ ಸರ್ಕಾರಿ ಶಾಲೆಯಲ್ಲೇ ಊಟ ಸಿದ್ಧ
ಅಯೋಧ್ಯೆಯಲ್ಲಿ ಮಹಾಮೃತ್ಯುಂಜಯ ಹೋಮ ಮಾಡಿದ ಕರ್ನಾಟಕ ತಂಡ
ಅಯೋಧ್ಯೆಯಲ್ಲಿ ಮಹಾಮೃತ್ಯುಂಜಯ ಹೋಮ ಮಾಡಿದ ಕರ್ನಾಟಕ ತಂಡ