Rozgar Mela 2023: 71 ಸಾವಿರ ಹೊಸ ಉದ್ಯೋಗಿಗಳಿಗೆ ನೇಮಕಾತಿ ಪತ್ರ ವಿತರಿಸಲಿದ್ದಾರೆ ಮೋದಿ

ಹೊಸದಾಗಿ ನೇಮಕಗೊಂಡ ನೌಕರರು ಕೇಂದ್ರ ಸರ್ಕಾರದಲ್ಲಿ ರೈಲು ಮ್ಯಾನೇಜರ್, ಸ್ಟೇಷನ್ ಮಾಸ್ಟರ್, ಇನ್ಸ್‌ಪೆಕ್ಟರ್, ಸಬ್-ಇನ್‌ಸ್ಪೆಕ್ಟರ್, ಕಾನ್‌ಸ್ಟೆಬಲ್, ಶಿಕ್ಷಕರು, ಗ್ರಂಥಪಾಲಕರು ಮತ್ತು ನರ್ಸ್ ಸೇರಿದಂತೆ ವಿವಿಧ ಹುದ್ದೆಗಳಲ್ಲಿರಲಿದ್ದಾರೆ.

ನರೇಂದ್ರ ಮೋದಿ
Follow us
ರಶ್ಮಿ ಕಲ್ಲಕಟ್ಟ
|

Updated on: Apr 13, 2023 | 7:00 AM

ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು(ಏಪ್ರಿಲ್ 13ರಂದು) ವಿಡಿಯೊ ಕಾನ್ಫರೆನ್ಸಿಂಗ್ ಮೂಲಕ ಹೊಸದಾಗಿ ನೇಮಕಗೊಂಡ ಸುಮಾರು 71,000 ಉದ್ಯೋಗಿಗಳಿಗೆ ನೇಮಕಾತಿ ಪತ್ರಗಳನ್ನು(Appointment letters) ವಿತರಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿಯವರು ಹೊಸತಾಗಿ ನೇಮಕಗೊಂಡವರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಕಾರ್ಯಕ್ರಮವು ‘ರೋಜ್‌ಗಾರ್ ಮೇಳ’ (Rozgar Mela) ಉಪಕ್ರಮದ ಭಾಗವಾಗಿದೆ, ಇದು ಸುಮಾರು 10 ಲಕ್ಷ ಜನರಿಗೆ ಉದ್ಯೋಗವನ್ನು ಒದಗಿಸುವ ಗುರಿಯನ್ನು ಹೊಂದಿದೆ. ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡುವ ಪ್ರಧಾನಮಂತ್ರಿಯವರ ಬದ್ಧತೆಯನ್ನು ಈ ಉಪಕ್ರಮದ ಮೂಲಕ ಈಡೇರಿಸಲಾಗುತ್ತಿದೆ ಎಂದು ಪ್ರಧಾನಿ ಕಚೇರಿಯ ಹೇಳಿಕೆ ತಿಳಿಸಿದೆ.

‘ರೋಜ್‌ಗಾರ್ ಮೇಳ’ ಅಭಿಯಾನವು ಮತ್ತಷ್ಟು ಉದ್ಯೋಗಾವಕಾಶಗಳನ್ನು ಸೃಷ್ಟಿಸುವಲ್ಲಿ ವೇಗವರ್ಧಕವಾಗಿ ಕಾರ್ಯನಿರ್ವಹಿಸುತ್ತದೆ ಇದು ರಾಷ್ಟ್ರೀಯ ಅಭಿವೃದ್ಧಿಯಲ್ಲಿ ಭಾಗವಹಿಸಲು ಯುವಕರನ್ನು ಸಶಕ್ತಗೊಳಿಸುತ್ತದೆ.

ಹೊಸದಾಗಿ ನೇಮಕಗೊಂಡ ನೌಕರರು ಕೇಂದ್ರ ಸರ್ಕಾರದಲ್ಲಿ ರೈಲು ಮ್ಯಾನೇಜರ್, ಸ್ಟೇಷನ್ ಮಾಸ್ಟರ್, ಇನ್ಸ್‌ಪೆಕ್ಟರ್, ಸಬ್-ಇನ್‌ಸ್ಪೆಕ್ಟರ್, ಕಾನ್‌ಸ್ಟೆಬಲ್, ಶಿಕ್ಷಕರು, ಗ್ರಂಥಪಾಲಕರು ಮತ್ತು ನರ್ಸ್ ಸೇರಿದಂತೆ ವಿವಿಧ ಹುದ್ದೆಗಳಲ್ಲಿರಲಿದ್ದಾರೆ.

ಇದನ್ನೂ ಓದಿ: ಏಪ್ರಿಲ್ 14ರಂದು ಅಸ್ಸಾಂಗೆ ಪ್ರಧಾನಿ ಮೋದಿ ಭೇಟಿ, ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

ಹೊಸತಾಗಿ ನೇಮಕಗೊಂಡವರು ಸರ್ಕಾರಿ ಇಲಾಖೆಗಳಲ್ಲಿ ಅವರ ಪಾತ್ರಗಳಿಗೆ ತರಬೇತಿ ನೀಡಲು ವಿನ್ಯಾಸಗೊಳಿಸಲಾದ ಆನ್‌ಲೈನ್ ಓರಿಯಂಟೇಶನ್ ಕಾರ್ಯಕ್ರಮವಾದ ‘ಕರ್ಮಯೋಗಿ ಪ್ರಾರಂಭ’ಕ್ಕೆ ಪ್ರವೇಶವನ್ನು ಹೊಂದಿರುತ್ತಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ