Vande Bharat Express: ಭೋಪಾಲ್-ನವದೆಹಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಇಂದು ಮೋದಿ ಚಾಲನೆ

ಪ್ರಧಾನಮಂತ್ರಿಗಳ ಕಚೇರಿ (PMO) ಪ್ರಕಾರ, ಬೆಳಿಗ್ಗೆ 10 ಗಂಟೆಗೆ, ಪ್ರಧಾನ ಮಂತ್ರಿ ಮೋದಿ ಅವರು ಕಂಬೈನ್ಡ್ ಕಮಾಂಡರ್ಸ್ ಕಾನ್ಫರೆನ್ಸ್-2023 ನಲ್ಲಿ ಭಾಗವಹಿಸುತ್ತಾರೆ. ನಂತರ ಸಂಜೆ 3:15ಕ್ಕೆ ಅವರು ವಂದೇ ಭಾರತ್ ಎಕ್ಸ್‌ಪ್ರೆಸ್ ಗೆ ಚಾಲನೆ ನೀಡಲಿದ್ದಾರೆ

Vande Bharat Express: ಭೋಪಾಲ್-ನವದೆಹಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಇಂದು ಮೋದಿ ಚಾಲನೆ
ನರೇಂದ್ರ ಮೋದಿ
Follow us
ರಶ್ಮಿ ಕಲ್ಲಕಟ್ಟ
|

Updated on: Apr 01, 2023 | 8:00 AM

ರಾಣಿ ಕಮಲಾಪತಿ ನಿಲ್ದಾಣದಲ್ಲಿ ಭೋಪಾಲ್-ನವದೆಹಲಿ ವಂದೇ ಭಾರತ್ ಎಕ್ಸ್‌ಪ್ರೆಸ್ (Vande Bharat Express) ರೈಲಿಗೆ ಚಾಲನೆ ನೀಡಲು ಮತ್ತು ಸಂಯೋಜಿತ ಕಮಾಂಡರ್‌ಗಳ ಸಮ್ಮೇಳನದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ(Narendra Modi) ಇಂದು( ಏಪ್ರಿಲ್ 1 ರಂದು) ಭೋಪಾಲ್‌ಗೆ (Bhopal) ಭೇಟಿ ನೀಡಲಿದ್ದಾರೆ. ಪ್ರಧಾನಮಂತ್ರಿಗಳ ಕಚೇರಿ (PMO) ಪ್ರಕಾರ, ಬೆಳಿಗ್ಗೆ 10 ಗಂಟೆಗೆ, ಪ್ರಧಾನ ಮಂತ್ರಿ ಮೋದಿ ಅವರು ಕಂಬೈನ್ಡ್ ಕಮಾಂಡರ್ಸ್ ಕಾನ್ಫರೆನ್ಸ್-2023 ನಲ್ಲಿ ಭಾಗವಹಿಸುತ್ತಾರೆ. ನಂತರ ಸಂಜೆ 3:15ಕ್ಕೆ ಅವರು ವಂದೇ ಭಾರತ್ ಎಕ್ಸ್‌ಪ್ರೆಸ್ ಗೆ ಚಾಲನೆ ನೀಡಲಿದ್ದಾರೆ.

ಹನ್ನೊಂದನೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು

ವಂದೇ ಭಾರತ್ ಎಕ್ಸ್‌ಪ್ರೆಸ್ ದೇಶದಲ್ಲಿ ಪ್ರಯಾಣಿಕರ ಪ್ರಯಾಣದ ಅನುಭವವನ್ನು ಮರು ವ್ಯಾಖ್ಯಾನಿಸಿದೆ. ರಾಣಿ ಕಮಲಾಪತಿ ರೈಲು ನಿಲ್ದಾಣ, ಭೋಪಾಲ್ ಮತ್ತು ನವದೆಹಲಿ ರೈಲು ನಿಲ್ದಾಣಗಳ ನಡುವೆ ಪರಿಚಯಿಸಲಾಗುತ್ತಿರುವ ಹೊಸ ರೈಲು ದೇಶದ ಹನ್ನೊಂದನೇ ವಂದೇ ಭಾರತ್ ರೈಲು ಆಗಲಿದೆ. ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಸ್ಥಳೀಯವಾಗಿ ವಿನ್ಯಾಸಗೊಳಿಸಲಾದ ರೈಲು ಸೆಟ್ ಅತ್ಯಾಧುನಿಕ ಪ್ರಯಾಣಿಕ ಸೌಕರ್ಯಗಳನ್ನು ಹೊಂದಿದೆ. ಇದು ರೈಲು ಬಳಕೆದಾರರಿಗೆ ವೇಗವಾದ, ಆರಾಮದಾಯಕ ಮತ್ತು ಅನುಕೂಲಕರ ಪ್ರಯಾಣದ ಅನುಭವವನ್ನು ನೀಡುತ್ತದೆ. ಮಾತ್ರವಲ್ಲದೆ ಪ್ರವಾಸೋದ್ಯಮವನ್ನು ಉತ್ತೇಜಿಸುತ್ತದೆ. ಇದು ಪ್ರಸ್ತುತ ಪ್ರದೇಶದಲ್ಲಿ ಆರ್ಥಿಕ ಅಭಿವೃದ್ಧಿಯನ್ನು ಉತ್ತೇಜಿಸುತ್ತದೆ.

ವಂದೇ ಭಾರತ್ ಎಕ್ಸ್‌ಪ್ರೆಸ್ ಬಗ್ಗೆ

ವಂದೇ ಭಾರತ್ ಎಕ್ಸ್‌ಪ್ರೆಸ್ ಉನ್ನತ-ಕಾರ್ಯನಿರ್ವಹಣೆಯ, ಎಲೆಕ್ಟ್ರಿಕ್ ಮಲ್ಟಿಪಲ್-ಯುನಿಟ್ ರೈಲು ಆಗಿದ್ದು, ಇದನ್ನು ಭಾರತೀಯ ರೈಲ್ವೇಗಳು ನಿರ್ವಹಿಸುತ್ತವೆ. ಇದನ್ನು RDSO ವಿನ್ಯಾಸಗೊಳಿಸಿದೆ.ಚೆನ್ನೈನಲ್ಲಿರುವ ಸರ್ಕಾರಿ ಸ್ವಾಮ್ಯದ ಇಂಟೆಗ್ರಲ್ ಕೋಚ್ ಫ್ಯಾಕ್ಟರಿ (ICF) ಯಲ್ಲಿ ಇಗು ತಯಾರಿಸಲ್ಪಟ್ಟಿದೆ. ಇದನ್ನು ಸೆಮಿ-ಹೈ-ಸ್ಪೀಡ್ ರೈಲು ಎಂದು ಪರಿಗಣಿಸಲಾಗಿದ್ದು ಇದು ಭಾರತದಲ್ಲಿ ಎರಡನೇ ಅತಿ ವೇಗದ ರೈಲು ಆಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು