Narendra Modi: ಉತ್ತರ ಪ್ರದೇಶದಲ್ಲಿ 80,000 ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

ಪ್ರಧಾನ ಮಂತ್ರಿ ಮೋದಿ ಲಕ್ನೋದ ಇಂದಿರಾ ಗಾಂಧಿ ಪ್ರತಿಷ್ಠಾನದಲ್ಲಿ ಉತ್ತರ ಪ್ರದೇಶದ ಹೂಡಿಕೆದಾರರ ಶೃಂಗಸಭೆಯ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುತ್ತಾರೆ. 80,000 ಕೋಟಿ ರೂ.ಗಿಂತ ಹೆಚ್ಚಿನ ಮೊತ್ತದ 1,406 ಯೋಜನೆಗಳಿಗೆ ಮೋದಿ ಚಾಲನೆ ನೀಡಲಿದ್ದಾರೆ.

Narendra Modi: ಉತ್ತರ ಪ್ರದೇಶದಲ್ಲಿ 80,000 ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ
ನರೇಂದ್ರ ಮೋದಿ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Jun 03, 2022 | 1:25 PM

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಅವರು ಇಂದು ಉತ್ತರ ಪ್ರದೇಶದ ಲಕ್ನೋದಲ್ಲಿ ಸುಮಾರು 80,000 ಕೋಟಿ ರೂ. ಮೌಲ್ಯದ 1,406 ಯೋಜನೆಗಳಿಗೆ ಮೂರನೇ ಶಿಲಾನ್ಯಾಸ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಈ ವೇಳೆ ಕಾನ್ಪುರದ ಪರೌಂಖ್ ಗ್ರಾಮದಲ್ಲಿ ಸಾರ್ವಜನಿಕ ಸಮಾರಂಭವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ. ಇಂದು ಬೆಳಿಗ್ಗೆ 11.30ರ ಸುಮಾರಿಗೆ ಪ್ರಧಾನ ಮಂತ್ರಿ ಮೋದಿ ಲಕ್ನೋದ ಇಂದಿರಾ ಗಾಂಧಿ ಪ್ರತಿಷ್ಠಾನವನ್ನು ತಲುಪುತ್ತಾರೆ. ಅಲ್ಲಿ ಅವರು ಉತ್ತರ ಪ್ರದೇಶದ ಹೂಡಿಕೆದಾರರ ಶೃಂಗಸಭೆಯ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುತ್ತಾರೆ. 80,000 ಕೋಟಿ ರೂ.ಗಿಂತ ಹೆಚ್ಚಿನ ಮೊತ್ತದ 1,406 ಯೋಜನೆಗಳಿಗೆ ಪ್ರಧಾನಮಂತ್ರಿಯವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಪ್ರಧಾನಮಂತ್ರಿ ಕಚೇರಿ (PMO) ತಿಳಿಸಿದೆ.

ಈ 80,000 ಕೋಟಿ ರೂ. ಮೌಲ್ಯದ ಯೋಜನೆಗಳು ಕೃಷಿ ಮತ್ತು ಸಂಬಂಧಿತ, ಐಟಿ ಮತ್ತು ಎಲೆಕ್ಟ್ರಾನಿಕ್ಸ್, ಎಂಎಸ್‌ಎಂಇ, ಉತ್ಪಾದನೆ, ನವೀಕರಿಸಬಹುದಾದ ಇಂಧನ, ಫಾರ್ಮಾ, ಪ್ರವಾಸೋದ್ಯಮ, ರಕ್ಷಣೆ ಮತ್ತು ಏರೋಸ್ಪೇಸ್ ಮತ್ತು ಕೈಮಗ್ಗ ಮತ್ತು ಜವಳಿ ಮುಂತಾದ ವೈವಿಧ್ಯಮಯ ವಲಯಗಳನ್ನು ಒಳಗೊಂಡಿದೆ ಎಂದು ಹೇಳಿಕೆ ತಿಳಿಸಿದೆ.

ಅದಾನಿ ಗ್ರೂಪ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಗೌತಮ್ ಅದಾನಿ, ಆದಿತ್ಯ ಬಿರ್ಲಾ ಗ್ರೂಪ್ ಚೇರ್ಮನ್ ಕುಮಾರ್ ಮಂಗಳಂ ಬಿರ್ಲಾ ಮತ್ತು ಹಿರಾನಂದಾನಿ ಗ್ರೂಪ್ ಅಧ್ಯಕ್ಷ ನಿರಂಜನ್ ಹಿರಾನಂದಾನಿ ಈ ಕಾರ್ಯಕ್ರಮದಲ್ಲಿ ಮಾತನಾಡಲಿದ್ದಾರೆ. ಈ ಕಾರ್ಯಕ್ರಮ ಯೋಗಿ ಆದಿತ್ಯನಾಥ್ 2.0 ಸರ್ಕಾರದ ಉದ್ಯಮ ಮತ್ತು ಮೂಲಸೌಕರ್ಯ ಅಭಿವೃದ್ಧಿ ವಲಯದಲ್ಲಿ ಮೊದಲ ಪ್ರಮುಖ ಕಾರ್ಯಕ್ರಮವಾಗಿದೆ. 2018ರ ಫೆಬ್ರವರಿ 21 ಮತ್ತು 22ರಂದು ಉತ್ತರ ಪ್ರದೇಶದ ಹೂಡಿಕೆದಾರರ ಮೊದಲ ಶೃಂಗಸಭೆಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದರು. ಉತ್ತರ ಪ್ರದೇಶ ಸರ್ಕಾರವು 4.64 ಲಕ್ಷ ಕೋಟಿ ರೂ. ಮೌಲ್ಯದ ಹೂಡಿಕೆಗೆ ಒಪ್ಪಂದ ಮಾಡಿಕೊಂಡಿದೆ ಎಂದು ಹೇಳಿಕೊಂಡಿತ್ತು.

ಇದನ್ನೂ ಓದಿ: ಕಾಶ್ಮೀರಿ ಪಂಡಿತರು ಪಲಾಯನ ಮಾಡುತ್ತಿದ್ದಾರೆ, ಶಾಂತಿ ನೆಲೆಸಲು ಕ್ರಮಕೈಗೊಳ್ಳಿ: ಮೋದಿಗೆ ರಾಹುಲ್ ಗಾಂಧಿ ಒತ್ತಾಯ

ಇಂದು ಮಧ್ಯಾಹ್ನ 1.45ರ ಸುಮಾರಿಗೆ ಪ್ರಧಾನಿ ಮೋದಿ ಕಾನ್ಪುರದ ಪರೌಂಖ್ ಗ್ರಾಮವನ್ನು ತಲುಪುತ್ತಾರೆ. ಅಲ್ಲಿ ಅವರು ರಾಷ್ಟ್ರಪತಿ ಕೋವಿಂದ್ ಅವರೊಂದಿಗೆ ಪತ್ರಿ ಮಾತಾ ಮಂದಿರಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ಡಾ. ಬಿ.ಆರ್. ಅಂಬೇಡ್ಕರ್ ಭವನ ಹಾಗೂ ಮಿಲನ್ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ. ಪರೌಂಖ್ ಗ್ರಾಮದಲ್ಲಿ ಮೋದಿ ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬಳಿಕ ಇಂದು ಮಧ್ಯಾಹ್ನ 2.30ಕ್ಕೆ ಪರೌಂಖ್ ಗ್ರಾಮದಲ್ಲಿ ಸಾರ್ವಜನಿಕ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:17 am, Fri, 3 June 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ