AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿ 20 ಶೃಂಗಸಭೆಯಲ್ಲಿ ಜಾಗತಿಕ ನಾಯಕರಿಗೆ ಕರಕುಶಲ ವಸ್ತುಗಳನ್ನು ಉಡುಗೊರೆ ನೀಡಲಿದ್ದಾರೆ ಪ್ರಧಾನಿ ಮೋದಿ

ಉಡುಗೊರೆಗಳಲ್ಲಿ ಚಂಬಾ 'ರುಮಾಲು', ಕಾಂಗ್ರಾ ಚಿಕಣಿ ಚಿತ್ರಕಲೆಗಳು, ಕಿನ್ನೌರಿ ಶಾಲು, ಕುಲು ಶಾಲು ಮತ್ತು ಕನಾಲ್ ಹಿತ್ತಾಳೆ ಸೆಟ್ ಸೇರಿವೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಜಿ 20 ಶೃಂಗಸಭೆಯಲ್ಲಿ ಜಾಗತಿಕ ನಾಯಕರಿಗೆ ಕರಕುಶಲ ವಸ್ತುಗಳನ್ನು ಉಡುಗೊರೆ ನೀಡಲಿದ್ದಾರೆ ಪ್ರಧಾನಿ ಮೋದಿ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Nov 09, 2022 | 1:06 PM

Share

ನವೆಂಬರ್ 15 ಮತ್ತು 16 ರಂದು ಬಾಲಿಯಲ್ಲಿ ನಡೆಯಲಿರುವ ಜಿ 20 ಶೃಂಗಸಭೆಯಲ್ಲಿ (G20 summit) ಪ್ರಧಾನಿ ನರೇಂದ್ರ ಮೋದಿ (Narendra Modi )ಅವರು ಹಿಮಾಚಲ ಪ್ರದೇಶದ (Himachal Pradesh) ಹಲವಾರು ವಿಶಿಷ್ಟ ಕಲೆ ಮತ್ತು ಕರಕುಶಲ ವಸ್ತುಗಳನ್ನು ವಿವಿಧ ಜಾಗತಿಕ ನಾಯಕರಿಗೆ ಉಡುಗೊರೆಯಾಗಿ ನೀಡಲಿದ್ದಾರೆ. ಉಡುಗೊರೆಗಳಲ್ಲಿ ಚಂಬಾ ‘ರುಮಾಲು’, ಕಾಂಗ್ರಾ ಚಿಕಣಿ ಚಿತ್ರಕಲೆಗಳು, ಕಿನ್ನೌರಿ ಶಾಲು, ಕುಲು ಶಾಲು ಮತ್ತು ಕನಾಲ್ ಹಿತ್ತಾಳೆ ಸೆಟ್ ಸೇರಿವೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಹಿಮಾಚಲ ಪ್ರದೇಶದ ಕಲೆ ಮತ್ತು ಸಂಸ್ಕೃತಿಯನ್ನು ಜಾಗತಿಕ ಮಟ್ಟದಲ್ಲಿ ಜನಪ್ರಿಯಗೊಳಿಸುವ ನಿರೀಕ್ಷೆಯಿರುವ ಈ ಕ್ರಮವು ಮುಂಬರುವ ವಿಧಾನಸಭಾ ಚುನಾವಣೆಯನ್ನು ಮುಂದಿಟ್ಟುಕೊಂಡು ಮಾಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಹಿಮಾಚಲದಲ್ಲಿ ನವೆಂಬರ್ 12 ರಂದು ಚುನಾವಣೆ ನಡೆಯಲಿದ್ದು, ಡಿಸೆಂಬರ್ 8 ರಂದು ಮತ ಎಣಿಕೆ ನಡೆಯಲಿದೆ. ಒಂದು ದಿನದ ಹಿಂದೆ,  ಮೋದಿ ಅವರು ಜಿ 20 ಅಧ್ಯಕ್ಷ ಸ್ಥಾನಕ್ಕಾಗಿ ಭಾರತದ ಲೋಗೋ, ಥೀಮ್ ಮತ್ತು ವೆಬ್‌ಸೈಟ್ ಅನ್ನು ಅನಾವರಣಗೊಳಿಸಿದರು. ಮುಂದಿನ ವಾರ ಬಾಲಿಯಲ್ಲಿ ನಡೆಯಲಿರುವ G20 ಶೃಂಗಸಭೆಯ ನಂತರ ಭಾರತವು ಡಿಸೆಂಬರ್ 1 ರಂದು ವಿಶ್ವದ 20 ದೊಡ್ಡ ಆರ್ಥಿಕತೆಗಳ ಗುಂಪಿನ ಅಧ್ಯಕ್ಷತೆಯನ್ನು ವಹಿಸಿಕೊಳ್ಳಲಿದೆ.

G20 ಅಂತರರಾಷ್ಟ್ರೀಯ ಆರ್ಥಿಕ ಸಹಕಾರಕ್ಕಾಗಿ ಪ್ರಧಾನ ವೇದಿಕೆಯಾಗಿದೆ. ಇದು ಜಾಗತಿಕ GDP ಯ ಸುಮಾರು ಶೇ 85, ಜಾಗತಿಕ ವ್ಯಾಪಾರದ ಶೇ75 ಕ್ಕಿಂತ ಹೆಚ್ಚು ಮತ್ತು ವಿಶ್ವದ ಜನಸಂಖ್ಯೆಯ ಸುಮಾರು ಮೂರನೇ ಎರಡರಷ್ಟು ಪ್ರತಿನಿಧಿಸುತ್ತದೆ.

ಇದು ಅರ್ಜೆಂಟೀನಾ, ಆಸ್ಟ್ರೇಲಿಯಾ, ಬ್ರೆಜಿಲ್, ಕೆನಡಾ, ಚೀನಾ, ಫ್ರಾನ್ಸ್, ಜರ್ಮನಿ, ಭಾರತ, ಇಂಡೋನೇಷ್ಯಾ, ಇಟಲಿ, ಜಪಾನ್, ರಿಪಬ್ಲಿಕ್ ಆಫ್ ಕೊರಿಯಾ, ಮೆಕ್ಸಿಕೋ, ರಷ್ಯಾ, ಸೌದಿ ಅರೇಬಿಯಾ, ದಕ್ಷಿಣ ಆಫ್ರಿಕಾ, ಟರ್ಕಿ, ಯುಕೆ, ಯುಎಸ್ ಮತ್ತು ಯುರೋಪಿಯನ್ ಯೂನಿಯನ್ ಅನ್ನು ಒಳಗೊಂಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ