AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ. 25ರಂದು ಅಯೋಧ್ಯೆಯ ರಾಮ ಮಂದಿರದಲ್ಲಿ ಧ್ವಜಾರೋಹಣ ಮಾಡಲಿದ್ದಾರೆ ಪ್ರಧಾನಿ ಮೋದಿ

ನವೆಂಬರ್ 25ರಂದು ಪ್ರಧಾನಿ ನರೇಂದ್ರ ಮೋದಿ ಅಯೋಧ್ಯೆ ರಾಮ ಮಂದಿರದಲ್ಲಿ ಧ್ವಜಾರೋಹಣ ಮಾಡಲಿದ್ದಾರೆ. ಇದು ರಾಮಮಂದಿರದ ನಿರ್ಮಾಣ ಪೂರ್ಣಗೊಳ್ಳುವುದರ ಸಂಕೇತವಾಗಿದೆ. ರಾಮ ಮಂದಿರ ಸಂಕೀರ್ಣದ ನಿರ್ಮಾಣ ಪೂರ್ಣಗೊಂಡ ಸಂಕೇತವಾಗಿ ನವೆಂಬರ್ 25ರಂದು ಅಯೋಧ್ಯೆಯ ರಾಮ ಮಂದಿರದಲ್ಲಿ ದೇವಾಲಯ ಧ್ವಜಾರೋಹಣ ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಲಾಗಿದೆ.

ನ. 25ರಂದು ಅಯೋಧ್ಯೆಯ ರಾಮ ಮಂದಿರದಲ್ಲಿ ಧ್ವಜಾರೋಹಣ ಮಾಡಲಿದ್ದಾರೆ ಪ್ರಧಾನಿ ಮೋದಿ
Pm Narendra Modi
ಸುಷ್ಮಾ ಚಕ್ರೆ
|

Updated on: Oct 10, 2025 | 8:47 PM

Share

ನವದೆಹಲಿ, ಅಕ್ಟೋಬರ್ 10: ನವೆಂಬರ್ 25ರಂದು ಅಯೋಧ್ಯೆಯ (Ayodhya) ಮುಖ್ಯ ದೇವಾಲಯದ ಮೇಲೆ ಧ್ವಜಾರೋಹಣ ಮಾಡಲು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರನ್ನು ಔಪಚಾರಿಕವಾಗಿ ಆಹ್ವಾನಿಸಿದೆ. ಈ ಸಮಾರಂಭವು ರಾಮ ಮಂದಿರದ ಸಾಂಕೇತಿಕ ಪೂರ್ಣಗೊಳಿಸುವಿಕೆಯನ್ನು ಸಂಕೇತಿಸುತ್ತಿದೆ.

ರಾಮ ಮಂದಿರ ನಿರ್ಮಾಣ ಸಮಿತಿಯ ಅಧ್ಯಕ್ಷ ನೃಪೇಂದ್ರ ಮಿಶ್ರಾ ಈ ಬಗ್ಗೆ ಮಾಹಿತಿ ನೀಡಿದ್ದು, ಪ್ರಧಾನ ಮಂತ್ರಿ ಮೋದಿಯವರು ನವೆಂಬರ್ 25ರಂದು ಅಯೋಧ್ಯೆಗೆ ಆಗಮಿಸಲು ಒಪ್ಪಿಕೊಂಡಿದ್ದಾರೆ. ಆ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲು ಈಗಾಗಲೇ ಸಿದ್ಧತೆಗಳು ನಡೆಯುತ್ತಿವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ ಆದಿತ್ಯನಾಥ್

ಭಾರತ ಮತ್ತು ಪ್ರಪಂಚದಾದ್ಯಂತದ ಭಕ್ತರಿಗೆ ರಾಮ ಮಂದಿರ ಸಂಕೀರ್ಣ ಪೂರ್ಣಗೊಂಡಿರುವುದನ್ನು ಸೂಚಿಸಲು ಪ್ರಧಾನಿ ಮೋದಿ ಹಿಂದೂ ಸಂಪ್ರದಾಯದಲ್ಲಿ ಪವಿತ್ರ ಸಂಕೇತವಾದ ದೇವಾಲಯದ ಧ್ವಜಾರೋಹಣ ಮಾಡಲಿದ್ದಾರೆ. ಇದು ರಾಮಮಂದಿರ ಭಕ್ತರ ದರ್ಶನಕ್ಕೆ ಮುಕ್ತವಾಗಿದೆ ಎಂಬುದನ್ನು ಸೂಚಿಸುತ್ತದೆ.

ಇದನ್ನೂ ಓದಿ: Ayodhya Ram Mandir: ಅಯೋಧ್ಯೆಯ ರಾಮ ಮಂದಿರದಲ್ಲಿ ಟೈಟಾನಿಯಂ ಬಳಕೆ, ಇದರ ವೈಶಿಷ್ಟ್ಯವೇನು?

2022ರಲ್ಲಿ ರಾಮ ಮಂದಿರದ ನೆಲ ಮಹಡಿ ಪೂರ್ಣಗೊಂಡಿತ್ತು. ಈಗಾಗಲೇ ಗರ್ಭಗುಡಿಯಲ್ಲಿ ರಾಮ ಪರಿವಾರದ ದೇವತೆಗಳನ್ನು ಸ್ಥಾಪಿಸಲಾಗಿದೆ. ಎರಡನೇ ಮಹಡಿಯನ್ನು ಬಹು ಭಾಷೆಗಳಲ್ಲಿ ರಾಮಾಯಣ ಗ್ರಂಥಗಳನ್ನು ಸಂರಕ್ಷಿಸಲು ಆಧ್ಯಾತ್ಮಿಕ ಆರ್ಕೈವ್ ಆಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಈ ದೊಡ್ಡ ಸಂಕೀರ್ಣದೊಳಗೆ 14 ಸಣ್ಣ ದೇವಾಲಯಗಳಿವೆ. ಅವೆಲ್ಲವೂ ಪೂರ್ಣಗೊಂಡಿವೆ. ಅವು ಶೀಘ್ರದಲ್ಲೇ ಸಾರ್ವಜನಿಕರಿಗೆ ಮುಕ್ತವಾಗುತ್ತವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್