ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಇಂದು (ಸೋಮವಾರ) ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಭಾರತೀಯ ಜನತಾ ಪಕ್ಷ (BJP)ದ 2 ದಿನಗಳ ರಾಷ್ಟ್ರೀಯ ಪದಾಧಿಕಾರಿಗಳ ಸಭೆಯನ್ನು ಉದ್ಘಾಟಿಸಿ ಮಾತನಾಡಲಿದ್ದಾರೆ. ಗುಜರಾತ್ ಚುನಾವಣೆಯ (Gujarat Assembly Election) ಹಿನ್ನೆಲೆಯಲ್ಲಿ ಸದ್ಯಕ್ಕೆ ಗಾಂಧಿನಗರದಲ್ಲಿರುವ ಪ್ರಧಾನಿ ಮೋದಿ ಅಹಮದಾಬಾದ್‌ನಲ್ಲಿ ಮತ ಚಲಾಯಿಸಿದ್ದಾರೆ. ಇಂದು ಮಧ್ಯಾಹ್ನ ಅವರು ದೆಹಲಿಗೆ ತೆರಳಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಇಂದು ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಬಿಜೆಪಿಯ ಎರಡು ದಿನಗಳ ರಾಷ್ಟ್ರೀಯ ಪದಾಧಿಕಾರಿಗಳ ಸಭೆಯನ್ನು ಉದ್ಘಾಟಿಸಲಿದ್ದಾರೆ. ಪ್ರಧಾನಿ ಮೋದಿ ತಮ್ಮ ಪಕ್ಷದ ಪದಾಧಿಕಾರಿಗಳಿಗೆ ಮಾರ್ಗದರ್ಶನ ನೀಡಲಿದ್ದಾರೆ. ರಾಷ್ಟ್ರೀಯ ಪದಾಧಿಕಾರಿಗಳ ಸಭೆಯು ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಪಕ್ಷದ ಎಲ್ಲಾ ರಾಷ್ಟ್ರೀಯ ಪದಾಧಿಕಾರಿಗಳು, ಎಲ್ಲಾ ರಾಜ್ಯಗಳ ಉಸ್ತುವಾರಿಗಳು ಮತ್ತು ಸಹ-ಪ್ರಭಾರಿಗಳು, ವಿವಿಧ ಮೋರ್ಚಾಗಳ ಉಸ್ತುವಾರಿಗಳು, ರಾಜ್ಯಾಧ್ಯಕ್ಷರು ಮತ್ತು ರಾಜ್ಯ ಸಂಘಟನೆಗಳ ಪ್ರಧಾನ ಕಾರ್ಯದರ್ಶಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಹೇಳಿಕೆಯಲ್ಲಿ ತಿಳಿಸಿದೆ.
ಇದನ್ನೂ ಓದಿ: Gujarat Elections: ಅಹಮದಾಬಾದ್ನ ಮತಗಟ್ಟೆಯಲ್ಲಿ ಮತ ಚಲಾಯಿಸಿದ ಪ್ರಧಾನಿ; ಮೋದಿಗೆ ರಸ್ತೆಯುದ್ದಕ್ಕೂ ಭರ್ಜರಿ ಸ್ವಾಗತ
ಈ ಸಭೆಯಲ್ಲಿ ಮುಂದಿನ ವರ್ಷ ಕೆಲವು ರಾಜ್ಯಗಳಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯ ಸಿದ್ಧತೆಗಳನ್ನು ಪರಿಶೀಲಿಸುವುದರೊಂದಿಗೆ ಪಕ್ಷದ ಭವಿಷ್ಯದ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲಾಗುವುದು. ಕರ್ನಾಟಕ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢದ ಜೊತೆಗೆ ಮೂರು ಈಶಾನ್ಯ ರಾಜ್ಯಗಳಾದ ತ್ರಿಪುರ, ನಾಗಾಲ್ಯಾಂಡ್ ಮತ್ತು ಮೇಘಾಲಯ ಮುಂದಿನ ವರ್ಷ ಚುನಾವಣೆ ನಡೆಯಲಿದೆ.